ಕಾರವಾರ: ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಹವಾಲ ಹಣ ಸಾಗಟ ಮಾಡುತ್ತಿದ್ದ ಆರೋಪಿಯನ್ನು ಕಾರವಾರ ರೈಲ್ವೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ದಾಳಿ ನಡೆಸಿರೋ ಪೊಲೀಸರು, ಮುಂಬೈನಿಂದ ಮಂಗಳೂರಿಗೆ ಹವಾಲ ಹಣ ಸಾಗಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ ಚೇನ್ ಸಿಂಗ್ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ ಎರಡು ಕೋಟಿ ಹಣ ವಶಕ್ಕೆ ಪಡೆದಿದ್ದಾರೆ. ಕಾರವಾರ ಗ್ರಾಮೀಣ ಠಾಣೆಗೆ ಆರೋಪಿಯನ್ನು ರೈಲ್ವೇ ಪೊಲೀಸರು...
Top Stories
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
Tag: crime news
ಕೌಟುಂಬಿಕ ಕಲಹ ಹಿನ್ನೆಲೆ, ಕಲ್ಲಿನಿಂದ ಜಜ್ಜಿ ಅಣ್ಣ ತಂಗಿಯ ಬರ್ಬರ ಹತ್ಯೆ..!
ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ಕಲ್ಲಿನಿಂದ ಜಜ್ಜಿ ಅಣ್ಣ ಹಾಗೂ ತಂಗಿಯ ಬರ್ಭರ ಹತ್ಯೆ ಮಾಡಿರೊ ಘಟನೆ, ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ರಾಜಶ್ರೀ ಶಂಕರಗೌಡ ಬಿರಾದಾರ್ (40), ನಾನಾಗೌಡ ಯರಗಲ್ (45) ಕೊಲೆಗೀಡಾದ ಅಣ್ಣ ಹಾಗೂ ತಂಗಿಯಾಗಿದ್ದಾರೆ. ರಾಜಶ್ರೀ ಪತಿ ಶಂಕರಗೌಡ ಹಾಗೂ ಇತರರು ಕೊಲೆ ಮಾಡಿರೋ ಆರೋಪ ಕೇಳಿಬಂದಿದೆ. ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದ ಹೊರ ಭಾಗದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ತಾಲೂಕಿನ ಮಳಗಿಯ ಪಂಚವಟಿಯಲ್ಲಿ ಮೇ. 20 ರಂದು ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ, ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇದ್ರೊಂದಿಗೆ ನಿಟ್ಟುಸಿರು ಬಿಟ್ಟಿದ್ದಾರೆ ಖಾಕಿಗಳು. ಶಿರಸಿಯ ನಿವಾಸಿಗಳಾದ ಸಲೀಂ(25) ಅಬ್ದುಲ್ ಸತ್ತಾರ ಅಬ್ದುಲ್ ಗಫಾರ್ ಮುಲ್ಲಾ(28) ಹಾಗೂ ಇರ್ಫಾನ್ ಮಕಬೂಲ್ ಶೇಖ್ (21) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಂದಹಾಗೆ, ಮೇ 20 ರ ರಾತ್ರಿ ಮಳಗಿ ಸಮೀಪದ ಪಂಚವಟಿಯಲ್ಲಿರುವ ಹಜರತ ಅಲಿ ಯಲಿವಾಳ್ ಎಂಬುವವರ ಅಂಗಡಿಯ ಮೇಲ್ಚಾವಣಿ ತೆಗೆದು...
ಶಿರಸಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಲಕ್ಷ ಲಕ್ಷ ನಗದು ವಶ..?
ಶಿರಸಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಅಡ್ಡೆಯ ಮೇಲೆ ದಾಳಿ ನಡೆಸಿರೋ ಪೊಲೀಸರು ಬುಕ್ಕಿ ಸೇರಿ,15 ಕ್ಕೂ ಹೆಚ್ಚು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಉತ್ತರ ಕನ್ನಡ ಎಸ್ಪಿ, ಡಾ.ಸುಮನಾ ಪೆನ್ನೇಕರ್ ರಚಿಸಿರೋ ವಿಶೇಷ ಪೊಲೀಸ್ ಟೀಂ ಕಾರ್ಯಾಚರಣೆ ನಡೆಸಿದ್ದು, ಮಟ್ಕಾ ಆಡಿಸುತ್ತಿದ್ದ ದಂಧೆಕೋರರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆನೆ, ಮಟ್ಕಾ ದಂಧೆಯಲ್ಲಿಬಕೈ ಬದಲಾಯಿಸುತ್ತ ಅಂದಾಜು 3-4 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶಿರಸಿ ನಗರ ಹಾಗೂ...
ಶಿಗ್ಗಾವಿಯಲ್ಲಿ ಮುಂಡಗೋಡಿನ ಟಿಪ್ಪರ್ ಮಾಲೀಕ ಮರ್ಡರ್..! ಸಿಎಂ ತವರು ಕ್ಷೇತ್ರದಲ್ಲಿ ಏನಿದೇಲ್ಲ..?
ಸಿಎಂ ಬಸವರಾಜ್ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾವಿ ಕ್ರೈಮುಗಳ ಸಿಟಿಯಾಯ್ತಾ..? ಇಂತಹದ್ದೊಂದು ಅನುಮಾನ ಇಡೀ ಕ್ಷೇತ್ರದ ಪ್ರಜ್ಞಾವಂತರನ್ನ ಬೆಂಬಿಡದೇ ಕಾಡ್ತಿದೆ. ಇಲ್ಲಿ ಕೊಲೆ ಅನ್ನೋದು ಕಾರಣಗಳೇ ಇಲ್ಲದೇ ನಡೆದು ಹೋಗ್ತಿವೆ. ನಿನ್ನೆ ಸಂಜೆ ನಡೆದದ್ದೂ ಇದೆ. ಸರಗೊಲು ಆಡುತ್ತಿದ್ದಾಗ ಕೋಲು ಬಡಿಸಿಕೊಂಡ ಟಿಪ್ಪರ್ ಮಾಲೀಕನೊಬ್ಬ ಪ್ರಶ್ನೆ ಮಾಡಿದ್ದಕ್ಕೆ ಅನಾಮತ್ತಾಗಿ ಮರ್ಡರ್ ಆಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಉಮೇಶ್ ಶಿವಜೋಗಿಮಠ್ (45) ಎಂಬುವವನನ್ನು ಬರೋಬ್ಬರಿ ಏಳು ಜನರ ತಂಡ ಮನಬಂದಂತೆ ಥಳಿಸಿ ಕೊಂದು ಹಾಕಿದ್ದಾರೆ...
ಮುಂಡಗೋಡ ತಾಲೂಕಿನ ಮೂರು ಕಡೆ ಮಟ್ಕಾ ಅಡ್ಡೆಗಳ ಮೇಲೆ ಪೊಲೀಸರ ದಾಳಿ, 7 ಜನರ ವಿರುದ್ಧ ಕೇಸ್..!
ಮುಂಡಗೋಡ ಪೊಲೀಸರು ನಿನ್ನೆಯಿಂದ ಭರ್ಜರಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ಬಲೆ ಬೀಸಿರೋ ಮುಂಡಗೋಡ ಪಿಎಸ್ಐ ಬಸವರಾಜು ಮಬನೂರು ಮತ್ತವರ ತಂಡ ಮೂರು ಕಡೆ ಪ್ರತ್ಯೇಕ ದಾಳಿ ನಡೆಸಿ ಹಲವು ದಂಧೆಕೋರರ ಹೆಡೆಮುರಿ ಕಟ್ಟಿದ್ದಾರೆ. 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದ್ರೊಂದಿಗೆ ಮೂರೂ ಕೇಸುಗಳಲ್ಲಿ ಒಟ್ಟೂ 10 ಸಾವಿರಕ್ಕೂ ಹೆಚ್ಚು ನಗದು ವಶಪಡಿಸಿಕೊಂಡಿದ್ದಾರೆ. ದಾಳಿ ನಂಬರ್-1 ಮುಂಡಗೋಡ ತಾಲೂಕಿನ ಕಾತೂರಿನ ಬಸ್ ನಿಲ್ದಾಣದ ಪಕ್ಕದಲ್ಲಿ ನಿಂತು ಮಟ್ಕಾ ಆಡಿಸುತ್ತಿದ್ದ, ನಾಗರಾಜ ಅಡಿವೆಪ್ಪ ಆಡಿನವರ ಎಂಬುವವನ...
ಮುಂಡಗೋಡಿನ ಆನಂದ್ ಕಡಗಿ ಕಣ್ಮರೆ, ಅಷ್ಟಕ್ಕೂ CCTV ದೃಷ್ಯದಲ್ಲಿ ಕಂಡದ್ದು ಏನು..?
ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ. ರವಿವಾರ ದಿ.29 ರಂದು ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿರೋ ಆನಂದ್, ಹಸಿರು ಬಣ್ಣದ ಸಿಮೆಂಟ್ ಕಂಪನಿ ಹೆಸರಿರೋ ಟೀಶರ್ಟ್, ಹಾಗೇ ಖಾಕಿ ಬಣ್ಣದ ತ್ರಿಪೋರ್ಥ್ ತೊಟ್ಟು ಉಟ್ಟುಡುಗೆಯಲ್ಲೇ ನಾಪತ್ತೆಯಾಗಿದ್ದಾರೆ. ಮೊಬೈಲ್, ಪರ್ಸ್ ಏನು ಅಂದ್ರೆ ಏನೂ ತೆಗೆದುಕೊಂಡು ಹೋಗಿಲ್ಲ. ಹೀಗಾಗಿ, ಕುಟುಂಬದವರು ಆತಂಕಗೊಂಡಿದ್ದಾರೆ. ಸಿಸಿಟಿವಿಯಲ್ಲಿ..! ಅಸಲು, ಆನಂದ್ ಕಡಗಿ ರವಿವಾರ ಬೆಳಿಗ್ಗೆ ಮಕ್ಕಳನ್ನು ಸಲೂನ್ ಶಾಪ್ ಗೆ ಕರೆದುಕೊಂಡು ಹೋಗಿ ಬಂದಿದ್ದರು. ತಾವೂ ಕೂಡ ಕಟ್ಟಿಂಗ್...
ಕೊಪ್ಪ ಗ್ರಾಮದಲ್ಲಿ ಕಳೆನಾಶಕ ಸೇವಿಸಿ ಯುವಕ ಆತ್ಮಹತ್ಯೆ, ಕಾರಣವಾದ್ರೂ ಏನು..?
ಮುಂಡಗೋಡ: ತಾಲೂಕಿನ ಕೊಪ್ಪದಲ್ಲಿ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕೊಪ್ಪ ಗ್ರಾಮದ ಚನ್ನಪ್ಪ ಬಸಪ್ಪ ಶ್ಯಾಬಾಳ್ (30) ಎಂಬುವವನೇ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವ. ನಿನ್ನೆ ಬಾನುವಾರ ಬೆಳಿಗ್ಗೆ ತನ್ನ ಗದ್ದೆಯಲ್ಲೇ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಹೀಗಾಗಿ, ತಕ್ಷಣವೇ ಆತನನ್ನು ತಾಲೂಕಾಸ್ಪತ್ರೆಗ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ ಪಟ್ಟಿದ್ದಾನೆ...
ಟಿಬೇಟಿಯನ್ ಕಾಲೋನಿಗೆ ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನ ಸಮೇತ ಓರ್ವ ಪೊಲೀಸರ ವಶಕ್ಕೆ..?
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಸಾಗಾಣಿಕೆ ಮಾಡಲಾಗುತ್ತಿದ್ದ ಅಕ್ರಮ ಗೋ ಮಾಂಸದ ವಾಹನವನ್ನು ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕಲಘಟಗಿ ಕಡೆಯಿಂದ ಸಾಗಿಸಲಾಗುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗೂ ಹೆಚ್ಚು ತೂಗುವ ಗೋಮಾಂಸವನ್ನು ವಾಹನ ಸಮೇತ ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಅನ್ನೊ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಬರಬೇಕಿದೆ.
ಕಾತೂರು ಬಳಿ ಶವ ಸಿಕ್ಕ ಕೇಸ್: ಟ್ರಾಕ್ಟರ್ ಮೇಲಿಂದ ಬಿದ್ದು ಸಾವು ಕಂಡನಾ ನಾಗನೂರಿನ ಶಂಭಣ್ಣ..?
ಮುಂಡಗೋಡ ತಾಲೂಕಿನ ನಾಗನೂರಿನಲ್ಲಿ ವ್ಯಕ್ತಿಯೋರ್ವನ ಶವ ಸಿಕ್ಕಿದೆ. ಕಾತೂರಿನಿಂದ ನಾಗನೂರಿಗೆ ತೆರಳುವ ಮಾರ್ಗದಲ್ಲಿ ಕಾತೂರಿನಿಂದ ಹೆಚ್ಚೂ ಕಡಿಮೆ 200 ಮೀಟರ್ ಅಂತರದಲ್ಲಿ ರಕ್ತಸಿಕ್ತವಾಗಿದ್ದ ಶವ ಸಿಕ್ಕಿದ್ದು ಬಹುತೇಕ ಆ ಭಾಗದಲ್ಲಿ ಭಯದ ಹಲವು ಅನುಮಾನಗಳನ್ನು ಹುಟ್ಟು ಹಾಕಿತ್ತು. ಆದ್ರೀಗ ಅದೊಂದು ಆಕಸ್ಮಿಕ ಅಪಘಾತ ಅನ್ನೋ ಮಾತುಗಳು ಕೇಳಿ ಬರ್ತಿವೆ. ಮರ್ಡರ್ ಅನಕೊಂಡಿದ್ರು..! ಶವ ಸಿಕ್ಕ ಸ್ಥಿತಿ ನೋಡಿದ್ರೆ, ಇದೊಂದು ಕೊಲೆನಾ ಅನ್ನೊ ಅನುಮಾನಕ್ಕೆ ತಂದು ನಿಲ್ಲಿಸತ್ತು. ಆದ್ರೆ ಮತ್ತೊಂದು ಮಗ್ಗಲಿನಲ್ಲಿ ನೋಡಿದ್ರೆ ಇದೊಂದು ಆಕಸ್ಮಿಕ ಅಪಘಾತದ...