Home Police news

Tag: Police news

Post
ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?

ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?

ಮುಂಡಗೋಡ: ಮಳಗಿ ಧರ್ಮಾ ಜಲಾಶಯದ ಒಡಲಿನಲ್ಲಿ ಕ್ರೌರ್ಯಗಳೂ ನಡಿತಿವೆಯಾ..? ನಿಜಕ್ಕೂ ಆ ಒಂದು ಸಾವು, ಸಾವಿನಾಚೆಗಿನ ಬಿಡಿಸಲಾಗದ ಸತ್ಯಗಳು ಎಂತವರನ್ನೂ ಒಂದುಕ್ಷಣ ತಲ್ಲಣಗೊಳಿಸ್ತಿವೆ. ಭಟ್ಕಳದಿಂದ ಶಿರಸಿ ಮಾರಿ ಜಾತ್ರೆಗೆ ಬಂದಿದ್ದ ಯುವಕ ನೀರುಪಾಲಾಗಿದ್ದರ ಹಿಂದೆ, ಬರೀ ಅನುಮಾನಗಳೇ ಹಾಸು ಹೊಕ್ಕಾಗಿವೆ. ಮಗನನ್ನ ಕಳೆದುಕೊಂಡ ಕುಟುಂಬವೀಗ ಅಕ್ಷರಶಃ ಅನಾಥವಾಗಿದೆ. ಅವತ್ತು ಮಾ.22 ಭಟ್ಕಳದ ಶಿರಾಲಿ ಮೂಲದ ವಿನಾಯಕ ಜನ್ನು ಎನ್ನುವ ಯುವಕ ಮಾರ್ಚ್ 22ರಂದು ಇದೇ ಮಳಗಿಯ ಧರ್ಮಾ ಜಲಾಶಯದಲ್ಲಿ ಹೆಣವಾಗಿ ಸಿಕ್ಕಿದ್ದ. ತನ್ನ ಗೆಳೆಯರೊಂದಿಗೆ ಶಿರಸಿ ಜಾತ್ರೆಗೆ...

Post
ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಭಾರೀ ಮನಕಲುಕುವ ಘಟನೆ ನಡೆದಿದೆ. ಹರಿದು ಬಿದ್ದಿದ್ದ ವಿದ್ಯುತ್ ತಂತಿ ಹಿಡಿದ ಪರಿಣಾಮ 13 ವರ್ಷದ ಬಾಲಕನೋರ್ವ ಸ್ಥಳದಲ್ಲೇ‌ ಮೃತಪಟ್ಟಿದ್ದಾನೆ. ಮತ್ತೊರ್ವ ಸಹೋದರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಷ್ಪಕ್ ಮೊಹ್ಮದ್ ಷರೀಪ್ ಚಪಾತಿ (13) ಎಂಬ ಬಾಲಕನೇ ಸಾವನ್ನಪ್ಪಿದ ದುರ್ದೈವಿಯಾಗಿದ್ದಾ‌ನೆ. ಬೇಲಿಯ ಮೇಲೆ ವಿದ್ಯುತ್ ಲೈನ್ ಹರಿದು ಬಿದ್ದಿದೆ. ಇದೇ ವೇಳೆ ಅಷ್ಪಕ್ ಹಾಗೂ ಆತನ ಮತ್ತೊರ್ವ ಸಹೋದರ ಮಹ್ಮದ್ ಜಾಫರ್ ಚಪಾತಿ ಎನ್ನುವ ಬಾಲಕ ಅದೇ‌ ಮಾರ್ಗವಾಗಿ ಮನೆಗೆ ತೆರಳುತ್ತಿದ್ದಾಗ ಬಾಲಕ...

Post
ಹನುಮಾಪುರದಲ್ಲಿ ಜಲಮಿಷನ್ ಕಾಮಗಾರಿ ಪೈಪು ಮೈಮೇಲೆ ಬಿದ್ದು ಕಾರ್ಮಿಕನ ದಾರುಣ ಸಾವು..!

ಹನುಮಾಪುರದಲ್ಲಿ ಜಲಮಿಷನ್ ಕಾಮಗಾರಿ ಪೈಪು ಮೈಮೇಲೆ ಬಿದ್ದು ಕಾರ್ಮಿಕನ ದಾರುಣ ಸಾವು..!

ಮುಂಡಗೋಡ: ತಾಲೂಕಿನ ಹನುಮಾಪುರದ ಬಳಿ ಭಾರೀ ದುರಂತವೊಂದು ಸಂಭವಿಸಿದೆ‌. ಜಲಮಿಷನ್ ಯೋಜನೆಯ ಕಾಮಗಾರಿ ವೇಳೆ ಬೃಹತ್ ಪೈಪು ಮೈಮೇಲೆ ಬಿದ್ದು ಬಿಹಾರ ಮೂಲದ ಕಾರ್ಮಿಕ ಮೃತಪಟ್ಟಿದ್ದಾನೆ. ಮೂಲತಃ ಬಿಹಾರದವನಾದ ರಾಜು ಯಾದವ್ (35) ಮೃತಪಟ್ಟ ದುರ್ಧೈವಿಯಾಗಿದ್ದು, ಇಂದು ಕಾರ್ಯನಿರ್ವಹಿಸುವ ವೇಳೆ ಆಕಸ್ಮಿಕವಾಗಿ ಬೃಹತ್ ಪೈಪ್ ಆಯತಪ್ಪಿ ಕಾರ್ಮಿಕನ ಮೈಮೇಲೆ ಬಿದ್ದಿದೆ. ಹೀಗಾಗಿ, ಕಾರ್ಮಿಕನ ದೇಹ ಚಿದ್ರಗೊಂಡಿದೆ. ಸದ್ಯ ಮುಂಡಗೋಡ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.

Post
ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!

ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಕಾತೂರು ಹಾಗೂ ಹಿರೇಹಳ್ಳಿ ಮದ್ಯದ ಬ್ರಿಡ್ಜ್ ಬಳಿ ಪೈಪು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರೀ ಚಾಲಕನಿಗೆ ಗಂಭೀರ ಗಾಯವಾಗಿದ್ದು ತಾಲುಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಪೈಪು ತುಂಬಿದ ಲಾರಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿ ನುಜ್ಜು ಗುಜ್ಜಾಗಿದೆ. ಅಲ್ದೇ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೂ ಡಿಕ್ಕಿಯಾಗಿ ಡಿಕ್ಕಿಯ ರಭಸಕ್ಕೆ ಮರ ತುಂಡಾಗಿದೆ. ಸಧ್ಯ ಚಾಲಕ...

Post
ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ನಂದಿಕಟ್ಟಾದ ವ್ಯಕ್ತಿ ಸಾವು..!

ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ನಂದಿಕಟ್ಟಾದ ವ್ಯಕ್ತಿ ಸಾವು..!

ಮುಂಡಗೋಡ: ತಾಲೂಕಿನ ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ‌ ಬೈಕ್ ಸವಾರ ಗಂಭೀರ ಗಾಯಗೊಂಡು ಶಿರಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಈ ಸುದ್ದಿಯ ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ..https://youtu.be/TklQgUwYU58 ನಂದಿಕಟ್ಟಾ ಗ್ರಾಮದ ಅಮ್ಜದ್ ಖಾನ್ ಕಲಘಟಗಿ ಎಂಬುವವನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ಬೆಳಿಗ್ಗೆ ನಂದಿಕಟ್ಟಾ ಗ್ರಾಮದಿಂದ ಶಿರಸಿ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ‌. ತೀವ್ರವಾಗಿ...

Post
ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಗೆ ಗುದ್ದಿದ ಲಾರಿ, ಎರಡು ಟ್ರಾಕ್ಟರ್ ನುಜ್ಜು,ಗುಜ್ಜು..!

ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಗೆ ಗುದ್ದಿದ ಲಾರಿ, ಎರಡು ಟ್ರಾಕ್ಟರ್ ನುಜ್ಜು,ಗುಜ್ಜು..!

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಎರಡು ಟ್ರಾಕ್ಟರ್‌‌ಗಳಿಗೆ ಲಾರಿ ಡಿಕ್ಕಿಯಾಗಿ ಭಾರೀ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎರಡೂ ಟ್ರಾಕ್ಟರ್‌ಗಳು ಸಂಪೂರ್ಣ ಜಖಂ ಆಗಿವೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಹುಂಡೇಕಾರ್ ಭಟ್ಟಿ ಬಳಿಯ ರಾಜ್ಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಲಾರಿ ಹಾಗೂ ಟ್ರಾಕ್ಟರ್ ಡ್ರೈವರ್‌ಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ‌. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..!

ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..!

ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..! ಮುಂಡಗೋಡ: ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾದ ಘಟನೆ ನಡೆದಿದೆ. ಆಕಸ್ಮಿವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಗದ್ದೆಗೂ ಹರಡುವ ಸಾಧ್ಯತೆ ಇದ್ದ ಕಾರಣಕ್ಕೆ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ರು‌. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದ್ದು ರೈತನ ಬದುಕು ಮೂರಾಬಟ್ಟೆಯಾಗಿದೆ‌ ಹೀಗಾಗಿ ರೈತನಿಗೆ ಪರಿಹಾರ...

Post
ಬಾಚಣಕಿ ಡ್ಯಾಂ ನಲ್ಲಿ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಶೋಧ..! ಹಾಗಾದ್ರೆ ಆತ ಏನಾದ..?

ಬಾಚಣಕಿ ಡ್ಯಾಂ ನಲ್ಲಿ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಶೋಧ..! ಹಾಗಾದ್ರೆ ಆತ ಏನಾದ..?

ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ನಿನ್ನೆ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಇಂದೂ ಕೂಡ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಇದುವರೆಗೂ ವಿದ್ಯಾರ್ಥಿ ಪತ್ತೆಯಾಗಿಲ್ಲ. ನಿನ್ನೆ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿರೊ ವಿದ್ಯಾರ್ಥಿಯ ಪಾದರಕ್ಷೆಗಳು ಜಲಾಶಯದ ದಡದಲ್ಲಿ ದೊರೆತಿದ್ದವು. ಹೀಗಾಗಿ, ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ವಿದ್ಯಾರ್ಥಿಯ ಶವಕ್ಕಾಗಿ...

Post
ಅಯ್ಯೋ ದೇವ್ರೇ, ಬಾಚಣಕಿ ಡ್ಯಾಂನಲ್ಲಿ ಹೆಣವಾದ್ರಾ ಪ್ರೇಮಿಗಳು..? ಆತ್ಮಹತ್ಯೆನಾ..?

ಅಯ್ಯೋ ದೇವ್ರೇ, ಬಾಚಣಕಿ ಡ್ಯಾಂನಲ್ಲಿ ಹೆಣವಾದ್ರಾ ಪ್ರೇಮಿಗಳು..? ಆತ್ಮಹತ್ಯೆನಾ..?

ಮುಂಡಗೋಡ: ಬಾಚಣಕಿ ಜಲಾಶಯದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ್ರಾ..? ಸಧ್ಯದ ಮಾಹಿತಿ ಪ್ರಕಾರ ಹೌದು ಅಂತಿವೆ ಮೂಲಗಳು‌. ಕಾಲೇಜು ಯೂನಿಫಾರ್ಮಿನಲ್ಲೇ ಯುವಕ ಹಾಗೂ ಯುವತಿ ಬಾಚಣಕಿ ಜಲಾಶಯದಲ್ಲಿ ದಾರುಣ ಸಾವು ಕಂಡಿರೋ ಘಟನೆ ನಡೆದಿದೆ. ಕಾಲೇಜಿನಿಂದ ನೇರವಾಗಿ ಬಾಚಣಕಿ ಜಲಾಶಯಕ್ಕೆ ಬಂದಿರೋ ಯುವಕ ಯುವತಿ ಜಲಾಶಯದಲ್ಲಿ ನೀರು ಪಾಲಾಗಿದ್ದಾರೆ ಎನ್ನಲಾಗ್ತಿದೆ. ಯುವತಿ ಶವ ಹೊರ ತೆಗೆಯಲಾಗಿದ್ದು, ಮೃತ ಯುವತಿ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ತನುಜಾ ಅಂತಾ ತಿಳಿದು ಬಂದಿದೆ. ಆದ್ರೆ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ....

Post
ಮುಂಡಗೋಡಿನಲ್ಲಿ ಮೊಬೈಲ್ ಎಗರಿಸಿದ್ದವನಿಗೆ ಬಿತ್ತು ಬಿಸಿ ಬಿಸಿ ಗೂಸಾ..!

ಮುಂಡಗೋಡಿನಲ್ಲಿ ಮೊಬೈಲ್ ಎಗರಿಸಿದ್ದವನಿಗೆ ಬಿತ್ತು ಬಿಸಿ ಬಿಸಿ ಗೂಸಾ..!

ಮುಂಡಗೋಡ; ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ್ದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ. ಪಟ್ಟಣದ ಮೊಬೈಲ್ ಶಾಪ್ ಒಂದರಲ್ಲಿ ಮೊಬೈಲ್ ಖರೀಧಿಸುತ್ತಿದ್ದಾಗ, ಹಿಂದಿನಿಂದ ಬಂದ ವ್ಯಕ್ತಿ ಮೊಬೈಲ್ ಎಗರಿಸಿಕೊಂಡು ಹೋಗಿದ್ದಾನೆ. ನಂತರ ಮೊಬೈಲ್ ಕಳೆದುಕೊಂಡ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗಾಗಿ ತಡಕಾಡಿದ್ದಾರೆ. ನಂತ್ರ ಶಿವಾಜಿ ಸರ್ಕಲ್ ನಲ್ಲಿ ಅಚಾನಕ್ಕಾಗಿ ಮೊಬೈಲ್ ಕಳ್ಳ ತಗಲಾಕ್ಕೊಂಡಿದ್ದಾನೆ. ಹೀಗಾಗಿ, ಮೊಬೈಲ್ ಕಳೆದುಕೊಂಡಿದ್ದ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗೆ ಗೂಸಾ ನೀಡಿದ್ದಾರೆ. ನಂತರ ಪೊಲೀಸ್ ಠಾಣೆಗೆ ಮೊಬೈಲ್ ಕಳ್ಳನನ್ನು ಕರೆದುಕೊಂಡು ಹೋಗಿದ್ದಾರೆ...

error: Content is protected !!