ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಭಾರೀ ಮನಕಲುಕುವ ಘಟನೆ ನಡೆದಿದೆ. ಹರಿದು ಬಿದ್ದಿದ್ದ ವಿದ್ಯುತ್ ತಂತಿ ಹಿಡಿದ ಪರಿಣಾಮ 13 ವರ್ಷದ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊರ್ವ ಸಹೋದರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಷ್ಪಕ್ ಮೊಹ್ಮದ್ ಷರೀಪ್ ಚಪಾತಿ (13) ಎಂಬ ಬಾಲಕನೇ ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ. ಬೇಲಿಯ ಮೇಲೆ ವಿದ್ಯುತ್ ಲೈನ್ ಹರಿದು ಬಿದ್ದಿದೆ. ಇದೇ ವೇಳೆ ಅಷ್ಪಕ್ ಹಾಗೂ ಆತನ ಮತ್ತೊರ್ವ ಸಹೋದರ ಮಹ್ಮದ್ ಜಾಫರ್ ಚಪಾತಿ ಎನ್ನುವ ಬಾಲಕ ಅದೇ ಮಾರ್ಗವಾಗಿ ಮನೆಗೆ ತೆರಳುತ್ತಿದ್ದಾಗ ಬಾಲಕ...
Top Stories
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
Tag: crime news
ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಕಾತೂರು ಹಾಗೂ ಹಿರೇಹಳ್ಳಿ ಮದ್ಯದ ಬ್ರಿಡ್ಜ್ ಬಳಿ ಪೈಪು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರೀ ಚಾಲಕನಿಗೆ ಗಂಭೀರ ಗಾಯವಾಗಿದ್ದು ತಾಲುಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಪೈಪು ತುಂಬಿದ ಲಾರಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿ ನುಜ್ಜು ಗುಜ್ಜಾಗಿದೆ. ಅಲ್ದೇ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೂ ಡಿಕ್ಕಿಯಾಗಿ ಡಿಕ್ಕಿಯ ರಭಸಕ್ಕೆ ಮರ ತುಂಡಾಗಿದೆ. ಸಧ್ಯ ಚಾಲಕ...
ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಕೇಸ್, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿಗಳು..!
ಅಂಕೋಲಾ: ಉದ್ಯಮಿ ಆರ್.ಎನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಅಂತಾ ಸಾಬೀತಾಗಿದೆ. ಬನ್ನಂಜೆ ರಾಜಾ ವಿರುದ್ಧದ ಆರೋಪಗಳೆಲ್ಲವೂ ಸಾಬೀತಾಗಿದ್ಧು, ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ಶಿಕ್ಷೆ ತೀರ್ಪು..! ಇನ್ನು, ಏಪ್ರಿಲ್ 4ರವರೆಗೆ ಶಿಕ್ಷೆಯ ತೀರ್ಪು ಕಾಯ್ದಿರಿಸಿದ ಬೆಳಗಾವಿ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ.ಜೋಶಿ, ಪ್ರಕರಣದ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಿದೆ. ಆರನೇ ಆರೋಪಿ...
ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ನಂದಿಕಟ್ಟಾದ ವ್ಯಕ್ತಿ ಸಾವು..!
ಮುಂಡಗೋಡ: ತಾಲೂಕಿನ ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಶಿರಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಈ ಸುದ್ದಿಯ ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ..https://youtu.be/TklQgUwYU58 ನಂದಿಕಟ್ಟಾ ಗ್ರಾಮದ ಅಮ್ಜದ್ ಖಾನ್ ಕಲಘಟಗಿ ಎಂಬುವವನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ಬೆಳಿಗ್ಗೆ ನಂದಿಕಟ್ಟಾ ಗ್ರಾಮದಿಂದ ಶಿರಸಿ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಸ್ಕೂಟಿ ಸ್ಕಿಡ್ ಆಗಿ ಬಿದ್ದ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಬೈಕ್ ಅಪಘಾತವಾಗಿದೆ. ಸ್ಕೂಟಿ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇಂದೂರು ಗ್ರಾಮದ ರಾಹುಲ್ ಎಂಬುವವನೇ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾನೆ. ಸ್ಕೂಟಿಯಿಂದ ಬರುವಾಗ ಏಕಾಏಕಿ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಘಟನೆ ನಡೆದಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಡಗೋಡ ತಹಶೀಲ್ದಾರ್ ಬಂಧನವಾಗ್ತಾರಾ..? ಅಷ್ಟಕ್ಕೂ ಪೊಲೀಸ್ರು ತಹಶೀಲ್ದಾರ್ ಮನೆ ಮುಂದೆ ಠಿಕಾಣಿ ಹೂಡಿದ್ಯಾಕೆ..?
ಮುಂಡಗೋಡಿನ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಸಂಕಷ್ಟಕ್ಕೆ ಸಿಲುಕಿದ್ರಾ..? ನಕಲಿ ಜಾತಿ ಪ್ರಮಾಣ ಪತ್ರ ನೀಡಿ ತಹಸೀಲ್ದಾರ್ ಪದವಿ ಗಿಟ್ಟಿಸಿಕೊಂಡಿರೋ ಆರೋಪಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಂಧನಕ್ಕೆ..? ಕಲಬುರ್ಗಿಯಿಂದ ಪೊಲೀಸ್ ಅಧಿಕಾರಿಗಳು ಮದ್ಯರಾತ್ರಿಯೇ ಮುಂಡಗೋಡಿಗೆ ಬಂದಿಳಿದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಪೊಲೀಸ್ ಅಧಿಕಾರಿಗಳು ಬಂದು ಬಾಗಿಲು ಬಡಿದ್ರೂ ತಹಶೀಲ್ದಾರ್ ಸಾಹೇಬ್ರು ಮಾತ್ರ ಬಾಗಿಲು ತೆರೆಯುತ್ತಿಲ್ಲವಂತೆ. ಹೀಗಾಗಿ, ಪೊಲೀಸ್ ಅಧಿಕಾರಿಗಳು ಬೆಳಗಿನ ಮೂರು ಗಂಟೆಯಿಂದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ಸರ್ಕಾರಿ ನಿವಾಸದ ಎದುರು ಬೀಡು ಬಿಟ್ಟಿದ್ದಾರೆ. ಏನದು...
ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಗೆ ಗುದ್ದಿದ ಲಾರಿ, ಎರಡು ಟ್ರಾಕ್ಟರ್ ನುಜ್ಜು,ಗುಜ್ಜು..!
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಎರಡು ಟ್ರಾಕ್ಟರ್‌ಗಳಿಗೆ ಲಾರಿ ಡಿಕ್ಕಿಯಾಗಿ ಭಾರೀ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎರಡೂ ಟ್ರಾಕ್ಟರ್‌ಗಳು ಸಂಪೂರ್ಣ ಜಖಂ ಆಗಿವೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಹುಂಡೇಕಾರ್ ಭಟ್ಟಿ ಬಳಿಯ ರಾಜ್ಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಲಾರಿ ಹಾಗೂ ಟ್ರಾಕ್ಟರ್ ಡ್ರೈವರ್‌ಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಅಪಘಾತ, ಸ್ಕೂಟಿ ಸವಾರನಿಗೆ ಗಂಭೀರ ಗಾಯ.!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಮತ್ತು ಸ್ಕೂಟಿ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಗೊಂಡವನು ಮುಂಡಗೋಡ ತಾಲೂಕಿನ ಕಾತೂರು ಗ್ರಾಮದವನು ಅಂತಾ ತಿಳಿದು ಬಂದಿದೆ. ಕಲಘಟಗಿ ಕಡೆಯಿಂದ ಮುಂಡಗೋಡ ಕಡೆಗೆ ಹೊರಟಿದ್ದ ಟಾಟಾ ಎಸ್ ವಾಹನಕ್ಕೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೊರಟಿದ್ದ ಸ್ಕೂಟಿ ಡಿಕ್ಕಿಯಾಗಿದೆ. ಸದ್ಯ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ...
ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ, ಕಾತೂರಿನಲ್ಲಿ ಸಿಡಿದೆದ್ದ ಮಹಿಳೆಯರು, ಅಬಕಾರಿಗಳೇ ಎಲ್ಲಿದ್ದಿರಿ..?
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಹಿಳೆಯರು ಸಿಡಿದೆದ್ದಿದ್ದಾರೆ. ತಾಲೂಕಿನಲ್ಲಿ ಅಕ್ರಮವಾಗಿ ಹಳ್ಳಿ ಹಳ್ಳಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರೋ ದಂಧೆಗೆ ಕಡಿವಾಣ ಹಾಕಿ ನಮ್ಮನ್ನ ರಕ್ಷಿಸಿ ಅಂತಾ ಅಧಿಕಾರಿಗಳಿಗೆ, ಸರ್ಕಾರಕ್ಕೆ ಹಿಡಿಶಾಪ ಹಾಕ್ತಿದಾರೆ. ಕಿರಾಣಿ ಅಂಗಡಿಯಲ್ಲೂ ಮದ್ಯ..? ನಿಜ, ಮುಂಡಗೋಡ ತಾಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅದೇಷ್ಟರ ಮಟ್ಟಿಗೆ ತನ್ನ ಕಬಂದಬಾಹು ಚಾಚಿಕೊಂಡಿದೆ ಅಂದ್ರೆ, ತಾಲೂಕಿನ ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲೂ ಮದ್ಯ ಸಿಗತ್ತೆ. ಅಧಿಕೃತವಾಗಿ ಮಾರಾಟ ಮಾಡೋ ಕೆಲವೇ ಕೆಲವು ಅಂಗಡಿಗಳು ತಮ್ಮ ವೈನ್ ಶಾಪ್ ಗಳಲ್ಲಿ ಕುಳಿತು ಅಧಿಕೃತವಾಗಿ...
ಇಂದೂರಿನಲ್ಲಿ ಆಕಸ್ಮಿಕ ಬೆಂಕಿಗೆ ಭಸ್ಮವಾದ ಮೇವಿನ ಬಣಿವೆಗಳು..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದ ಪ್ರೌಢಶಾಲೆಯ ಬಳಿ ಮೇವಿನ ಬಣಿವೆಗೆ ಬೆಂಕಿ ತಗುಲಿದೆ. ಮದ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು. ಇಂದೂರು ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ರಾಯ್ಕರ್ ರವರಿಗೆ ಸೇರಿದ ಮೇವಿನ ಬಣವಿ ಇದಾಗಿದ್ದು, ಜಾನುವಾರುಗಳ ಪಾಲನೆಯಲ್ಲಿ ತೊಡಗಿರುವ ನಿವೃತ್ತ ಶಿಕ್ಷಕರಿಗೆ ಭಾರೀ ನಷ್ಟವಾಗಿದೆ. ಮದ್ಯಾಹ್ನದ ಸಮಯದಲ್ಲಿ ಬೆಂಕಿಯು ಕೆನ್ನಾಲಿಗೆ ಚಾಚಿದ್ದು, ಅಕ್ಕಪಕ್ಕದ ಮನೆಗಳಿಗೂ ಹರಡುವ ಸಾಧ್ಯತೆ ಇತ್ತು, ಆದ್ರೆ ಅದೃಷ್ಟವಶಾತ್ ಬೆಂಕಿ ಹತೋಟಿಗೆ...