ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.
Top Stories
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
Tag: Publicfirstnewz
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!
ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...
ಯಲ್ಲಾಪುರ ರಸ್ತೆಯ ಗುಂಜಾವತಿ ಬಳಿ ಕಾರು ಅಪಘಾತ, ಮದುವೆಗೆಂದು ಬಂದಿದ್ದ ಮಹಾರಾಷ್ಟ್ರದ ಕುಟುಂಬಕ್ಕೆ ಆಘಾತ..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ, ಗುಂಜಾವತಿ ನಡುವೆ ಕಾರು ಅಪಘಾತವಾಗಿದೆ. ಮದುವೆಗೆಂದು ಬಂದಿದ್ದ ಮಹಾರಾಷ್ಟ್ರ ಮೂಲದ ಕುಟುಂಬದ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಕಾರಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮಹಾರಾಷ್ಟ್ರ ಮೂಲದ ಕುಟುಂಬ ಇಂದು ಮುಂಡಗೋಡ ತಾಲೂಕಿನಲ್ಲಿ ಮದುವೆ ಇದ್ದ ಕಾರಣ, ಮದುವೆಗೆಂದು ಆಗಮಿಸಿತ್ತು. ಮದುವೆ ಮುಗಿಸಿಕೊಂಡು ಹೊರಡುವಾಗ ಬಡ್ಡಿಗೇರಿ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದೆ. ಹೀಗಾಗಿ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಆದ್ರೂ ಅದೃಷ್ಟವಶಾತ್ ಕಾರಲ್ಲಿದ್ದವರಿಗೆ...
ಶಿಗ್ಗಾವಿ ಕ್ಷೇತ್ರ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಲವು ಪ್ರಮುಖರು..!
ಶಿಗ್ಗಾವಿ: ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಮುಖ ಮುಖಂಡ ಶಿವಾನಂದ ರಾಮಗೇರಿ , ಎಮ್ ಎನ್ ಹೊನಕೇರಿ, ಶಿವು ಅಂಗಡಿ, ಕಾಳಪ್ಪ ಬಂಡಿ, ಶಿವಯೋಗಿ ಮುಕ್ಕಣ್ಣವರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸೀರಖಾನ್ ಪಠಾಣ, ಕೆಪಿಸಿಸಿ ಸದಸ್ಯರಾದ ಸೋಮಣ್ಣ ಬೇವಿನಮರದ ಹಾಗೂ ಯುವ ನಾಯಕರಾದ ರಾಜು ಕುನ್ನೂರ ಅವರ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸವಣೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಮ್ ಜೆ ಮುಲ್ಲಾ, ಸವಣೂರ ತಾಲೂಕ ಕುರುಬ ಸಮಾಜದ...
ಯಲ್ಲಾಪುರ ಕ್ಷೇತ್ರದಲ್ಲಿ ಗಾಂಧಿಗಿರಿ ಹಾಗೂ ದಾದಾಗಿರಿ ನಡುವೆ ಚುನಾವಣೆ: ನಿಮಗೆ ಗಾಂಧಿಗಿರಿ ಬೇಕಾ..? ಗುಂಡಾಗಿರಿ ಬೇಕಾ..? ಸಂತೋಷ ಲಾಡ್ ಪ್ರಶ್ನೆ
ಮುಂಡಗೋಡ: ಯಲ್ಲಾಪುರ ಕ್ಷೇತ್ರದಲ್ಲಿ ನಿಮಗೆ ಗಾಂಧಿಗಿರಿ ಬೇಕಾ..? ದಾದಾಗಿರಿ ಬೇಕಾ..? ಅಂತಾ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಸಂತೋಷ ಲಾಡ್ ಪ್ರಶ್ನಿಸಿದ್ರು, ಈ ಕ್ಷೇತ್ರದಲ್ಲಿ ಒಂದು ಕಡೆ ದುಡ್ಡು, ಮತ್ತೊಂದು ಕಡೆ ಧರ್ಮದ ಚುನಾವಣೆ ನಡೆಯುತ್ತಿದೆ ಪ್ರತಿಯೊಬ್ಬರೂ ಆ ದುಡ್ಡನ್ನು ಸೋಲಿಸಲು ಸಾಲ ಮಾಡಿಯಾದರೂ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ ಅವರನ್ನು ಗೆಲ್ಲಿಸಬೇಕು ಅಂತಾ ಸಂತೋಷ ಲಾಡ್ ಕರೆ ನೀಡಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ಅವರು ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಾಂಧಿಗಿರಿ ಬೇಕಾದರೆ...
ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!
ಮೇ 4 ರಂದು ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಅಂತಾ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮೇ ನಾಲ್ಕರಂದು ಮದ್ಯಾನ 2.30 ಗೆ ಹೆಲಿಕಾಪ್ಟರ್ ಮೂಲಕ ಮುಂಡಗೋಡಿಗೆ ಆಗಮಿಸಲಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಲ್ಲಾಪುರ ಕ್ಷೇತ್ರ ಸದ್ಯ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದು, ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ತೊಡೆತಟ್ಟಿರೋ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ....
ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!
ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ....
ರೈತರ ಜಮೀನಿಗೆ ತೆರಳುವ ರಸ್ತೆ ಅತಿಕ್ರಮಣ, ತೆರವುಗೊಳಿಸದೇ ಇದ್ರೆ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಅನ್ನದಾತರು..!
ಶಿಗ್ಗಾವಿಯಲ್ಲಿ ರಾಜಕೀಯ ಪ್ರಭಾವಿಗಳ ಕಾರಸ್ಥಾನದಿಂದ ರೈತರು ಕಂಗಾಲಾಗಿದ್ದಾರೆ. ನೂರಾರು ವರ್ಷಗಳಿಂದಲೂ ಇದ್ದ ಸಾರ್ವಜನಿಕ ರಸ್ತೆಯನ್ನು ಒತ್ತು ವರಿ ಮಾಡಿಕೊಂಡಿರೋ ಪ್ರಭಾವಿಗಳು ರೈತರಿಗೆ ಜೀವ ಹಿಂಡ್ತಿದಾರೆ ಅಂತಾ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕಾರಣಕ್ಕಾಗೇ ಚುನಾವಣೆ ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಈ ಕುರಿತು ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆಯ ಮನವಿ ಅರ್ಪಿಸಿದ್ದಾರೆ. ಮನವಿಯಲ್ಲೇನಿದೆ..? ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಚಾಕಾಪೂರ-ಕುರ್ಷಾಪುರ ಗ್ರಾಮದ ಪೈಕಿ, ಬಿಸನಳ್ಳಿ ಹೊಟ್ಟಾರ ಕಲ್ಯಾಣ ಗ್ರಾಮಗಳಿಂದ ಹೋಗಿ ಬರಲು 1834 ನೇ ರಿಂದಲೂ ಸಾರ್ವಜನಿಕ...
ಪತಿ ಮೃತಪಟ್ಟ ತಿಂಗಳೊಳಗೇ ದಿ. ಧ್ರುವ ನಾರಾಯಣ್ ಪತ್ನಿಯೂ ವಿಧಿವಶ..! ಎಂಥಾ ಆಘಾತ..!!
ಮೈಸೂರು:ಪತಿ ಸಾವಿನ ಬೆನ್ನಲ್ಲೇ ದಿವಂಗತ ಆರ್.ಧ್ರುವ ನಾರಾಯಣ್ ಪತ್ನಿ ವೀಣಾ(58) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಧ್ರುವನಾರಾಯಣ್ ಇಂದು ವಿಧಿವಶರಾಗಿದ್ದಾರೆ. ಪತಿ ಧ್ರುವನಾರಾಯಣ್ ಸಾವಿನಿಂದ ಕುಗ್ಗಿದ್ದ ವೀಣಾ, ಪತಿ ಮೃತಪಟ್ಟು ತಿಂಗಳಿಗೂ ಮುನ್ನವೇ ನಿಧನರಾಗಿದ್ದಾರೆ. ಕಳೆದ ಮಾರ್ಚ್ 11ರಂದು ಹೃದಯಾಘಾತದಿಂದ ಧ್ರುವನಾರಾಯಣ್ ನಿಧನರಾಗಿದ್ದರು. ಇನ್ನು, ಪುತ್ರ ದರ್ಶನ್ ಧ್ರುವಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ, ಚುನಾವಣಾ ಚಟುವಟಿಕೆಗಳಲ್ಲಿ ನಿರತರಾಗಿದ್ದ ದರ್ಶನ್ ರಿಗೆ ತಾಯಿ ಸಾವಿನಿಂದ ಆಘಾತವಾಗಿದೆ.
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಳೆದು ತಂದಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ ಗಾಂಜಾ ಹಾಗೂ ಸ್ಕೂಟಿ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಮುಂಡಗೋಡ ಯಲ್ಲಾಪುರ ರಸ್ತೆಯ ಬ್ಲ್ಯೂ ಹಿಲ್ ಹೊಟೇಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್...