ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕನ ಲವ್ ಕಹಾನಿ ಮತ್ತೆ ರಿಯಲ್ ಲೈಫ್ ಗೆ ಬಂದು ನಿಂತಿದೆ. ಟಿಕ್ ಟಾಕ್ ನಲ್ಲಿ ಶುರುವಾಗಿದ್ದ ಪ್ರೀತಿ ಮದುವೆಯ ಮೂರು ಗಂಟಿನೊಂದಿಗೆ ಬಾಂಧವ್ಯ ಬೆಸೆದುಕೊಂಡು ಅದೇನೋ ಮನಸ್ತಾಪಗಳು ತಪ್ಪು ಕಲ್ಪನೆಗಳಿಂದ ದೂರವಾಗಿದ್ದ ಒಂದೂವರೇ ವರ್ಷದ ಪ್ರೇಮ್ ಕಹಾನಿ ಮತ್ತದೇ ಹಳೆಯ ಪ್ರೀತಿಯ ಬಂಧನದಲ್ಲಿ ಬೆಸೆದುಕೊಂಡಿದೆ. ಹಾಗಂತ ಮೊನ್ನೆಯಷ್ಟೇ ನೊಂದು ಮನದಾಳ ಬಿಚ್ಚಿಟ್ಟಿದ್ದ ಮಹಿಳೆ ಈಗ ತನ್ನ ಲೈಫು ಸರಿಯಾಯ್ತು ಕಣ್ರಿ ಅಂತಾ ಖುಶಿಯಿಂದಲೇ ಹೇಳಿಕೊಂಡಿದ್ದಾಳೆ. ತಪ್ಪು ಕಲ್ಪನೆಗಳಾಗಿತ್ತು..! ನನ್ನ ಪತಿ...
Top Stories
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
Tag: mundgod news
ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!
ಇದು ಮುಂಡಗೋಡ ಮಟ್ಟಿಗೆ ಬಹುದೊಡ್ಡ ಬ್ರೇಕಿಂಗ್ ನ್ಯೂಸ್. ಯಸ್, ಉತ್ತರ ಕನ್ನಡದ ಖಡಕ್ ಎಸ್ಪಿ ಸುಮನಾ ಫನ್ನೇಕರ್ ಮೇಡಂ ಈಗಷ್ಟೇ ತಮ್ಮ ಅಸಲೀ ಆಟಗಳನ್ನು ಶುರು ಮಾಡಿ ಆಯ್ತು. ಇನ್ನೇನಿದ್ರು ಜಿಲ್ಲೆಯಲ್ಲಿ ಅಕ್ರಮಗಳಿಗೆ ಜಾಗವಿಲ್ಲ ಅನ್ನೋದು ಪಕ್ಕಾ. ಅದ್ರ ಭಾಗವಾಗೇ ನಿನ್ನೆ ತಡರಾತ್ರಿ ಮುಂಡಗೋಡಿನಲ್ಲಿ ಅದೊಂದು ಸ್ಪೇಷಲ್ ಟೀಂ ಬೃಹತ್ ಕಾರ್ಯಾಚರಣೆ ಮಾಡಿ ನಾಲ್ವರನ್ನ ಅನಾಮತ್ತಾಗಿ ವಶಕ್ಕೆ ಪಡೆದುಕೊಂಡು ಹೋಗಿದೆ. ಅಸಲು, ಈ ಕಾರ್ಯಚರಣೆ ಖುದ್ದು ಮುಂಡಗೋಡ ಪೊಲೀಸರಿಗೂ ಬೆವರು ಇಳಿಸಿದೆ. ಯಾಕಂದ್ರೆ ಅಲ್ಲೇನಾಗ್ತಿದೆ ಅನ್ನೋ ಸಣ್ಣದೊಂದು...
ಮುಂಡಗೋಡ ಕಾಂಗ್ರೆಸ್ ಅದಃ ಪತನಕ್ಕೆ ಕಾರಣವಾಗತ್ತಾ ಅದೊಂದು ಮಾತು, ಅದೊಂದು ನಿರ್ಧಾರ..? ಪ್ರಶಾಂತಣ್ಣ ಏನಿದೇಲ್ಲ..?
“ನಾನ್ ಇನ್ವೇಸ್ಟ್ ಮಾಡುವವನು, ನಾನೇನ್ ಹೇಳ್ತಿನೋ ಅದನ್ನ ಕೇಳಕೊಂಡು ಬೆಪ್ಪಗೆ ಇರಬೇಕು ಅಷ್ಟೆ” ಇದು ಕಾಂಗ್ರೆಸ್ ಯುವ ಮುಖಂಡ ಪ್ರಶಾಂತ್ ದೇಶಪಾಂಡೆ ಸಾಹೇಬ್ರ ಪಾಲಿಟಿಕಲ್ ಸ್ಟೈಲ್ ಅಂತೆ. ಹಾಗಂತ, ಮುಂಡಗೋಡಿನ ಕೆಲವು ಕಾಂಗ್ರೆಸ್ ಮುಖಂಡರಿಗೆ ಖಡಕ್ಕಾಗಿ ಹೇಳಿಬಿಟ್ಟಿದ್ರಂತೆ… ಹೀಗಾಗಿನೇ, ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನೋದು ಅಧಃ ಪತನವಾಗ್ತಿದೆ ಅಂತಿದಾರೆ ಖುದ್ದು ಅದೇ ಪಕ್ಷದ ಕಾರ್ಯಕರ್ತರು. ಈ ಮಾತನ್ನ ನಾವಿಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಇಡೀ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಅನಾಯಾಸವಾಗಿ ಬಂದೊದಗಿತ್ತು ಪ್ರಶಾಂತಣ್ಣಂಗೆ, ಇಡೀ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಅಕ್ರಮ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ..!
ಮುಂಡಗೋಡ: ಪಟ್ಟಣದ ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ಜೊಂಡಲಗಟ್ಟಿಯ ಮಾಧುರಾವ್ ಶಂಕರ್ ರಾವ್ ಭೋಸ್ಲೆ (26) ಎಂಬುವವನೇ ಆರೋಪಿಯಾಗಿದ್ದಾನೆ. ಈತ ಇಂದು ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ದಾಳಿ ಮಾಡಿದೆ. ಸುಮಾರು 4 ಸಾವಿರ...
“ಟಿಕ್ ಟಾಕ್” ನಲ್ಲೇ ರೀಲು ಬಿಟ್ಟ ನಂದಿಕಟ್ಟಾ ಹುಡುಗ, ಬೆಂಗಳೂರಿನಿಂದ್ಲೇ “ಲವ್ ಯೂ” ಅಂದ್ಲು ಹುಡುಗಿ..! ಮುಂದೆ ಆಗಿದ್ದೇನು..?
ಅದು ಅಪ್ಪಟ ಒಂದೂವರೇ ವರ್ಷದ ಪ್ರೇಮ್ ಕಹಾನಿ. ಆಕೆ ದೂರದ ಬೆಂಗಳೂರಿನವಳು, ಈತ ಮುಂಡಗೋಡ ತಾಲೂಕಿನ ನಂದಿಕಟ್ಟಾದವನು. ಟಿಕ್ ಟಾಕ್ ನಲ್ಲೇ ಶುರುವಾದ ಪ್ರೇಮ ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿ, ಪ್ರೇಮದ ಹೆಸರಲ್ಲಿ ಕೊನೆಗೆ ಮದುವೆಯ ಮೂರು ಗಂಟು ಬೀಳುವಂತೆ ಮಾಡಿತ್ತು. ಆದ್ರೀಗ ಆ ಸಂಬಂಧ ಅಕ್ಷರಶಃ ಮೂರಾಬಟ್ಟೆಯಾಗಿದೆ. ಹಾಗಂತ, ಆ ಮಹಿಳೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ತನ್ನ ನೂತನ ಪತಿಯ ವಿರುದ್ಧ ಕೇಸು ದಾಖಲಿಸಿದ್ದಾಳೆ. ಅದ್ರ ಜೊತೆ ನಂಗೆ ನನ್ನ ಪತಿಯನ್ನ ಹುಡುಕಿ ಕೊಡಿ...
ಹುನಗುಂದ ಗ್ರಾಮದಲ್ಲಿ ಸರಾಯಿ ನಿಷೇಧ, ಗ್ರಾಮಸ್ಥರ ತೀರ್ಮಾನ, ಸರಾಯಿ ಮಾರಿದ್ರೆ 50 ಸಾವಿರ ದಂಡ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಗ್ರಾಮವನ್ನು ಸರಾಯಿ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲಾಗಿದ್ದು, ಗ್ರಾಮದಲ್ಲಿ ಸರಾಯಿ ನಿಷೇಧ ಮಾಡಲಾಗಿದೆ. ಈ ಮೂಲಕ ಅದೇಷ್ಟೋ ಬಡ ಮಹಿಳೆಯರ ಬಹುದಿನದ ಆಸೆ ನೆರವೇರಿದಂತಾಗಿದೆ. ಗ್ರಾಮದಲ್ಲಿ ಇಂದು ಸಭೆ ಸೇರಿದ್ದ ಗ್ರಾಮಸ್ಥರು, ಮುಖಂಡರು ಈ ಬಗ್ಗೆ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಇಂದಿನಿಂದ ಗ್ರಾಮದಲ್ಲಿ ಸರಾಯಿ ನಿಷೇಧಿಸಿ ಠರಾವು ಬರೆದಿದ್ದಾರೆ. ಒಂದುವೇಳೆ ಗ್ರಾಮದಲ್ಲಿ ಸರಾಯಿ ಮಾರಾಟ ಮಾಡಿದ್ರೆ 50 ಸಾವಿರ ದಂಡ ವಿಧಿಸುವ ನಿರ್ಣಯ ಕೈಗೊಂಡಿದ್ದಾರೆ.
ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!
ಮುಂಡಗೋಡ: ತಾಲೂಕಿನ ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ, ಏ.29 ರಂದು ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅರಶಿಣಗೇರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ಅರಶಿಣಗೇರಿಯ ಉಮೇಶ್ ಶೇಖಪ್ಪಾ ಲಮಾಣಿ(55) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಏ.29 ರಂದು ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು.
ವಿ.ಎಸ್.ಪಾಟೀಲ್ “ಹಸ್ತ”ಲಾಘವಕ್ಕೆ ವೇದಿಕೆ ಸಜ್ಜು, ಅಷ್ಟಕ್ಕೂ “ಕೈ”ಮುಂದೆ ಪಾಟೀಲರ ಕಂಡೀಶನ್ಸ್ ಏನು..?
ಯಲ್ಲಾಪುರ ಕ್ಷೇತ್ರದಲ್ಲಿ ಸದ್ಯ ವಿಲಿ ವಿಲ ಒದ್ದಾಡುತ್ತಿರೋ ಕೈ ಪಾಳಯಕ್ಕೆ ಆಕ್ಸಿಜನ್ ಒದಗಿಸಬಲ್ಲ ವಿದ್ಯಮಾನಗಳು ಒಳಗೊಳಗೆ ಜಾರಿಯಲ್ಲಿವೆ. ಬಿಜೆಪಿಯ ಮಾಜಿ ಶಾಸಕ ಹಾಲಿ ವಾಯುವ್ಯ KSRTC ಅಧ್ಯಕ್ಷ ವಿ.ಎಸ್ ಪಾಟೀಲ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸ್ ಆಗಿರೋ ಎಲ್ಲಾ ಲಕ್ಷಣಗಳು ಕಾಣ್ತಿವೆ. ಆದ್ರೆ, ಚಾಣಾಕ್ಷ ವಿ.ಎಸ್. ಪಾಟೀಲ್ ಸುಮ್ಮ ಸುಮ್ಮನೇ ಕಾಂಗ್ರೆಸ್ ಸೇರ್ತಿಲ್ಲ, ಬದಲಾಗಿ ಅದಕ್ಕೊಂದು ಬಲಿಷ್ಟ “ಕಣ” ಕಾರ್ಯತಂತ್ರ ರೂಪಿಸಿಕೊಂಡೇ ಕೈ ಪಡೆಗೆ ಎಂಟ್ರಿ ಕೊಡುವ ಎಲ್ಲಾ ಸಾಧ್ಯತೆಗಳೂ ದಟ್ಟವಾಗಿದೆ. ಪ್ರಶಾಂತ್ ಯಡವಟ್ಟು..? ನಿಜ, ಸದ್ಯ...
ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರು ಗಂಭೀರ..!
ಮುಂಡಗೋಡ: ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಸಮೀಪ ಬೀರವಳ್ಳಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಉಮೇಶ್ ಶೇಖಪ್ಪಾ ಲಮಾಣಿ ಗಂಭೀರ ಗಾಯಗೊಂಡಿದ್ದಾನೆ. ಇನ್ನುಳಿದಂತೆ ಶಿಗ್ಗಾವಿ ತಾಲೂಕಿನ ಕಮಲಾನಗರ ತಾಂಡಾದ ಇಬ್ಬರು ಮಹಿಳೆಯರು ಸೇರಿ ಮೂವರು ಗಾಯಗೊಂಡಿದ್ದಾರೆ. ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮದಿಂದ ಕಮಲಾನಗರಕ್ಕೆ ಬೈಕ್...
ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದ ಲಾರಿ, ಕ್ರೇನ್ ಮೂಲಕ ಹೊರತೆಗೆದ ಸಿಬ್ಬಂದಿಗಳು..!
ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಇಂದು ಬೆಳಿಗ್ಗೆ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಮ್ಮಾಜಿ ಕೆರೆಯಲ್ಲಿ ಧುಮುಕಿತ್ತು. ಹೀಗಾಗಿ, ಲಾರಿಯಲ್ಲಿದ್ದವರನ್ನು ಸಾರ್ವಜನಿಕರು ರಕ್ಷಣೆ ಮಾಡಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಸದ್ಯ ಕೆರೆಯಲ್ಲಿ ಪಲ್ಟಿಯಾಗಿ ಅರ್ದಮರ್ದ ಮುಳುಗಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಈ ವೇಳೆ ಯಲ್ಲಾಪುರ ಮುಂಡಗೋಡ ರಸ್ತೆಯಲ್ಲಿ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು.