ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಡ್ಯಾಂ ನಲ್ಲಿ ಈಜಲು ನೀರಿಗೆ ಇಳಿದಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಪುಟ್ಟ ಮಗನ ಕಣ್ಣೇದುರೇ ತಂದೆ ನೀರಲ್ಲಿ ಮುಳುಗಿ ಸಾವು ಕಂಡಿದ್ದು ಧಾರುಣವಾಗಿದೆ. ಲಕ್ಷ್ಮಣ ಭೀಮಣ್ಣ ಬೋವಿ (42) ಈಜಲು ಹೋಗಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇವನು ಮದ್ಯಾನ ನ್ಯಾಸರ್ಗಿ ಡ್ಯಾಂ ನಲ್ಲಿ ಸ್ನಾನ ಮಾಡಲೆಂದು, ಮಗನ ಬಳಿ ಬಟ್ಟೆ ಕೊಟ್ಟು ನೀರಿಗೆ ಇಳಿದಿದ್ದ ಎನ್ನಲಾಗಿದೆ. ಈ ವೇಳೆ ನೀರಲ್ಲಿ ಈಜಾಡುತ್ತಿರುವಾಗಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ತಂದೆ ನೀರಲ್ಲಿ ಕಣ್ಮರೆಯಾಗುತ್ತಲೇ ಆತಂಕಗೊಂಡ ಮಗ ಸ್ಥಳೀಯರಿಗೆ...
Top Stories
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
Tag: crime news
ರಾಣೆಬೆನ್ನೂರಿನ ಪಿಎಸ್ಐ ಮತ್ತವನ ಚಾಲಕ ಲೋಕಾ ಬಲೆಗೆ, ಅದೇಷ್ಟು ಲಂಚ ಪಡೀತಿದ್ರು ಗೊತ್ತಾ..?
ರಾಣೆಬೆನ್ನೂರಿನ ಶಹರ ಠಾಣೆಯ ಪಿಎಸ್ಐ ಹಾಗೂ ಆತನ ವಾಹನ ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅನಾಮತ್ತಾಗಿ 40 ಸಾವಿರ ಲಂಚ ಸ್ವೀಕರಿಸೋವಾಗ ತಗಲಾಕ್ಕೊಂಡಿದ್ದಾರೆ. ರಾಣೆಬೆನ್ನೂರು ಶಹರ ಠಾಣೆ ಪಿಎಸ್ಐ ಸುನೀಲ ತೇಲಿ ಮತ್ತು ಈತನ ವಾಹನದ ಚಾಲಕ ಸಚಿನ್ ಲೋಕಾಯುಕ್ತ ಬಲೆಗೆ ಬಿದ್ದ ಖತರ್ನಾಕ ಲಂಚ ಬಾಕ ಆರೋಪಿಗಳು. ಇವರೀರ್ವರೂ ಫಿರೋಜ್ ಎಂಬುವವರ ಮನೆ ಬಾಡಿಗೆ ವಸೂಲಿ ಮಾಡಿಸಿಕೊಡುವ ವಿಚಾರಕ್ಕೆ ಬರೋಬ್ಬರಿ 50ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹೀಗಾಗಿ, ಅದರಲ್ಲಿ 40 ಸಾವಿರ ರೂ....
ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಗಡಿಭಾಗ ಹಾಗೂ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಚಿಗಳ್ಳಿಯ ಯುವಕನೋರ್ವ ಸ್ಥಳದಲ್ಲೇ ಮೃತಟ್ಟಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಯಲ್ಲಪ್ಪ ಕಡೆಮನಿ(40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಇವತ್ತು ತನ್ನ ಅಳಿಯನೊಂದಿಗೆ ಬೈಕ್ ಏರಿ ಹಾನಗಲ್ ಗೆ ಹೋಗಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಡಿಕ್ಕಿಯ...
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!
ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ ಸಚಿವೆ...
ದಾವಣಗೇರೆಯಲ್ಲಿ ಕೊಲೆಮಾಡಿ ಶಿಗ್ಗಾವಿಯಲ್ಲಿ ಸರೆಂಡರ್ ಆದ ಶಿವಮೊಗ್ಗದ ಆರೋಪಿಗಳು..!
ಶಿಗ್ಗಾವಿ: ದಾವಣಗೇರೆ ಜಿಲ್ಲೆಯಲ್ಲಿ ಮರ್ಡರ್ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳು ಶಿಗ್ಗಾವಿ ಪೊಲೀಸರಿಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆ ಚೀಲೂರು ಸಮೀಪದ ಗೋವಿನ ಕೋವಿ ಬಳಿ ನಿನ್ನೆ ಸಂಜೆ ಆಂಜನೇಯ ಎಂಬಾತನ ಹತ್ಯೆಯಾಗಿತ್ತು. ಅಂದಹಾಗೆ, ಹಂದಿ ಅಣ್ಣಿ ಕೊಲೆ ಆರೋಪಿಗಳಾದ ಆಂಜನೇಯ ಹಾಗೂ ಮಧು ಎಂಬುವರ ಮೇಲೆ ನಿನ್ನೆ ಸಂಜೆ ಹಲ್ಲೆ ನಡೆದಿತ್ತು. ಈ ವೇಳೆ ಆಂಜನೇಯ ಎಂಬುವವರ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮಧು ಎಂಬುವವ ಗಂಭೀರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಂಜನೇಯನನ್ನು ಕೊಲೆ ಮಾಡಿದ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿ ಸೇರಿದಂತೆ ಅರ್ಧ ಕೇಜಿಯಷ್ಟು ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಶಿವಮೊಗ್ಗ ಜಿಲ್ಲೆ ಸಾಗರದ ಮಹಮದ್ ಫಾರುಕ್ ತಂದೆ ನಜೀರ್ ಅಹಮ್ಮದ್ ಅರಮನಿಕೆರಿ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ಅರ್ದ ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...
ಪಾಳಾ ಸಮೀಪ ಕಾರು ದುರಂತ ಕೇಸ್: ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ.. ಗಾಯಗೊಂಡಿದ್ದ ಶಂಕರಯ್ಯಾ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮುಂಡಗೋಡ ತಾಲೂಕಿನ ಪಾಳಾ ಸಮೀಪ ಬುಧವಾರ ರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಈಗಷ್ಟೇ ಮೃತಪಟ್ಟಿದ್ದಾನೆ. ಈ ಮೂಲಕ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಂಕರಯ್ಯ ಮಲ್ಲಯ್ಯ ಹಿರೇಮಠ್, ಮೃತಪಟ್ಟ ಮತ್ತೋರ್ವ ಯುವಕನಾಗಿದ್ದು, ನಿನ್ನೆ ರಾತ್ರಿ ಪಾಳಾ ಜಾತ್ರೆ ಮುಗಿಸಿ ಮುಂಡಗೋಡಿಗೆ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಐ20 ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮುಂಡಗೋಡಿನ ಇಬ್ಬರು ಸಹೋದರರು ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕರ್ ಹಿರೇಮಠನನ್ನು ಹುಬ್ಬಳ್ಳಿಯ ಕಿಮ್ಸ್...
ಪಾಳಾ ಬಳಿ ಭೀಕರ ಅಪಘಾತ, ಮುಂಡಗೋಡಿನ ಇಬ್ಬರು ಸ್ಥಳದಲ್ಲೇ ಸಾವು..! ಮತ್ತಿಬ್ಬರಿಗೆ ಗಾಯ
ಮುಂಡಗೋಡ ತಾಲೂಕಿನ ಪಾಳಾ ಸಮೀಪ ಭೀಕರ ಅಪಘಾತವಾಗಿದೆ. ಐ20 ಕಾರ್ ಪಲ್ಟಿಯಾದ ಪರಿಣಾಮ ಇಬ್ಬರು ಮುಂಡಗೋಡಿನ ಯುವಕರು ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಾಯವಾಗಿದೆ. ಮುಂಡಗೋಡಿನ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ ಮೃತ ದುರ್ದೈವಿಗಳು. ಪಾಳಾದಿಂದ ಮುಂಡಗೋಡಿಗೆ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಿಬೇಟಿಯನ್ ಕಾಲೋನಿಯಲ್ಲಿ ಜೇನು ನೋಣಗಳ ದಾಳಿ, 100 ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಜೇನು ನೋಣಗಳು..!
ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂ.1 ರಲ್ಲಿ ಜೇನು ದಾಳಿಯಾಗಿದೆ. ದಲಿತ ಸಂಘರ್ಷ ಸಮಿತಿಯ ಕಾರ್ಯಕ್ರಮಕ್ಕೆ ಬಂದಿದ್ದವರ ಮೇಲೆ ಜೇನುನೋಣಗಳ ದಾಳಿಯಾಗಿದೆ. ಪರಿಣಾಮ ಸುಮಾರು 100 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅದಹಾಗೆ, ಇಂದು ತಾಲೂಕಿನ ಟಿಬೇಟಿಯನ್ ಕಾಲೋನಿ ನಂಬರ್ 1 ರಲ್ಲಿ ದಲಿತ ಸಂಘಟನೆಗಳ ನೇತೃತ್ವದಲ್ಲಿ ಅಹಿಂದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ರು. ಈ ವೇಳೆ ಅದು ಹೇಗೋ ಗೊತ್ತಿಲ್ಲ, ಜೇನು ನೋಣಗಳು ದಾಳಿಮಾಡಿವೆ...
ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!
ಮುಂಡಗೋಡ ತಾಲೂಕಿನ ಹುನಗುಂದ ಅಗಡಿ ರಸ್ತೆಯ, ಸರ್ಕಾರಿ ಪ್ರೌಢಶಾಲೆಯ ಬಳಿ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಹುನಗುಂದ ಗ್ರಾಮದ ರಾಚಯ್ಯ ಬಸಯ್ಯ ಬೆಂಡಿಗೇರಿ(45), ಎಂಬುವವನೇ ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ ಪೆಟ್ಟಾಗಿದೆ. ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ ಮಾಡಿದ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದ್ದಾರೆ. 108 ಅಂಬ್ಯುಲೆನ್ಸ್ ನಲ್ಲಿ ತಂತ್ರಜ್ಞ ಧನರಾಜ್ ಬೆಳೂರು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾಮಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...