ವಾಷಿಂಗ್ಟನ್: ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಅಲ್ ಖೈದಾ ಸಂಘಟನೆಯ ನಾಯಕ ಅಮ್ಮಾನ್ ಅಲ್ ಜವಾಹಿರಿಯನ್ನು ಅಮೆರಿಕದ ವಾಯುಪಡೆ ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಹತ್ಯೆಗೈದಿದೆ. ಈ ಕುರಿತು ಟ್ವಿಟರ್‌ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಅಮೇರಿಕಾ ಏರ್ ಸ್ಟೈಕ್ ನಡೆಸಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ಅಮೇರಿಕಾ ಸೇನೆಯಿಂದ ವಾಯುದಾಳಿ ನಡೆಸಲಾಗಿದೆ ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ...