ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ನಡೆಯಬೇಕಿದ್ದ, ಅವಿಶ್ವಾಸ ಗೊತ್ತುವಳಿ ಮಂಡನಾ ಸಭೆ ರದ್ದಾಗಿದೆ. ಅಧ್ಯಕ್ಷೆ ನೇತ್ರಾವತಿ ಬಿಸವಣ್ಣವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇವತ್ತಿಗೆ ಹತ್ತು ದಿನವಾದ ಹಿನ್ನೆಲೆ ರಾಜೀನಾಮೆ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿರಸಿ ಉಪ ವಿಭಾಗಾಧಿಕಾರಿ ದೇವರಾಜು, ಚೌಡಳ್ಳಿ ಗ್ರಾಪಂ ಸದಸ್ಯರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ. ಅಧ್ಯಕ್ಷರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಈಗಾಗಲೇ ರಾಜೀನಾಮೆ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಅವಿಶ್ವಾಸ ನಿರ್ಣಯದ ಸಭೆ ನಡೆಸುವ ಅವಶ್ಯಕತೆ ಇಲ್ಲ. ಹೀಗಾಗಿ, ಸಭೆಯನ್ನು ರದ್ದುಗೊಳಿಸಲಾಗಿದೆ...