Home #mundgodnews

Tag: #mundgodnews

Post
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್

 ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....

Post
ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!

ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!

ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ. ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ...

Post
ದಲೈ ಲಾಮಾರ ಹುಟ್ಟು ಹಬ್ಬ, ಟಿಬೇಟಿಯನ್  ಕಾಲೋನಿಗಳಲ್ಲಿ ಸಂಭ್ರಮವೋ ಸಂಭ್ರಮ..!

ದಲೈ ಲಾಮಾರ ಹುಟ್ಟು ಹಬ್ಬ, ಟಿಬೇಟಿಯನ್ ಕಾಲೋನಿಗಳಲ್ಲಿ ಸಂಭ್ರಮವೋ ಸಂಭ್ರಮ..!

 ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ಟಿಬೇಟಿಯನ್ ಧರ್ಮಗುರು ದಲೈ ಲಾಮಾರವರ 88 ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಲಾಯಿತು. ಇಲ್ಲಿನ ಕ್ಯಾಂಪ್ ನಂಬರ್ ಒಂದರ ಬೌದ್ದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಅಂದಹಾಗೆ, ಇಲ್ಲಿನ ಟಿಬೇಟಿಯನ್ ಕಾಲೋನಿಯಲ್ಲಿ ಟಿಬೇಟಿಗರು ದಲೈ ಲಾಮಾರ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರತೀ ಮನೆ ಮನೆಗಳಲ್ಲೂ ದಲೈ ಲಾಮಾರವರ ಹುಟ್ಟುಹಬ್ಬದ ವಿಶೇಷ ಸಂಭ್ರಮಗಳು ನಡೆಯುತ್ತಿವೆ. ದೀರ್ಘಾಯುಷ್ಯ ಕೋರಿ ಪ್ರಾರ್ಥನೆಗಳು ನಡೆಯುತ್ತಿವೆ. ಅಲ್ಲದೇ, ಹಲವು ಸಾಮಾಜಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.

Post
ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

  ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ‌....

Post
ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?

ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?

ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟ‌ನೆಯ ಪ್ರಮುಖ ಆರೋಪಿಯಾಗಿದ್ದಾ‌ನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು‌. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ...

Post
ಚುನಾವಣೆಗೆ “ಕಣಕಹಳೆ” ಮೊಳಗಿಸಿದ್ರಾ ಹೆಬ್ಬಾರ್..? “ಸಾಂತ್ವನ”ದ ಸಚಿವ ಮತದಾರನ ಮನೆ ಮಾತಾಗಿದ್ದಾದ್ರೂ ಹೇಗೆ..?

ಚುನಾವಣೆಗೆ “ಕಣಕಹಳೆ” ಮೊಳಗಿಸಿದ್ರಾ ಹೆಬ್ಬಾರ್..? “ಸಾಂತ್ವನ”ದ ಸಚಿವ ಮತದಾರನ ಮನೆ ಮಾತಾಗಿದ್ದಾದ್ರೂ ಹೇಗೆ..?

ಸಚಿವ ಶಿವರಾಮ್ ಹೆಬ್ಬಾರ್ ಮತ್ತೆ ಮೈ ಕೊಡವಿ ಎದ್ದಿದ್ದಾರೆ. ಚುನಾವಣೆ ವರ್ಷದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ನಿನ್ನೆಯಿಂದಲೇ “ಪವರ್ ಫುಲ್” ರಣಕಹಳೆ ಮೊಳಗಿಸಿದ್ದಾರೆ. ಕ್ಷೇತ್ರದ ಪ್ರತೀ ಭಾಗದಲ್ಲಿ ಖುದ್ದು ಬೂತ್ ಮಟ್ಟದ ಕಾರ್ಯಕರ್ತರ ಮೈದಡವಿ ಮಾತಾಡಿಸುತ್ತಿದ್ದಾರೆ. ಈ ಮೂಲಕ ಕ್ಷೇತ್ರದ ತುಂಬ ಮತ್ತೊಮ್ಮೆ ತಮ್ಮದೇ ಆದ ಕಾರ್ಯಪಡೆ ರಚಿಸಿ ಹುರುಪು ತುಂಬಿಸುತ್ತಿದ್ದಾರೆ. ಮಳಗಿ ಭಾಗ..! ನಿನ್ನೆ ಮಂಗಳವಾರದಿಂದಲೇ ಸಚಿವ ಹೆಬ್ಬಾರ್, ಮಳಗಿ ಭಾಗದಿಂದ ತಮ್ಮ ಗೆಲುವಿನ ಕೇಕೆ ಹಾಕಲು ಬೇಕಾದ ರಹದಾರಿಗೆ ಹಸಿರು ನಿಶಾನೆ ತೋರಿದ್ದಾರೆ. ಅಂದಹಾಗೆ...

Post
ಮುಂಡಗೋಡ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಶಿರಸಿಗೆ ಎತ್ತಂಗಡಿ..!

ಮುಂಡಗೋಡ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಶಿರಸಿಗೆ ಎತ್ತಂಗಡಿ..!

ಮುಂಡಗೋಡ: ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಎತ್ತಂಗಡಿಯಾಗಿದ್ದಾರೆ. ಶಿರಸಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಮದ್ಯಾಹ್ನವೇ ಸರ್ಕಾದಿಂದ ಆದೇಶ ಹೊರಬಿದ್ದಿದ್ದು ರಾಜ್ಯದಲ್ಲಿ ಒಟ್ಟೂ ಐವರು ತಹಶೀಲ್ದಾರರಿಗೆ ವರ್ಗಾವಣೆಯಾಗಿದೆ‌. ಈ ಮೂಲಕ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಹುದ್ದೆ ಪಡೆದುಕೊಂಡಿರೋ ಆರೋಪಕ್ಕೆ ಗುರಿಯಾಗಿದ್ದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ವರ್ಗಾವಣೆಗೆ ಆಗ್ರಹಿಸಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ದಲಿತಪರ ಸಂಘಟನೆಗಳು ತಹಶೀಲ್ದಾರ್ ಕಾರ್ಯಾಲಯದ ಎದುರು ಉಪವಾಸ ಧರಣಿ ಸತ್ಯಾಗ್ರಹ ನಡೆಸಿದ್ದವು. ಇದನ್ನೇಲ್ಲ‌ ಮನಗಂಡ ಸರ್ಕಾರ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರನ್ನು...

Post
ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!

ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!

ಮುಂಡಗೋಡ: ತಾಲೂಕಿನಲ್ಲಿ ಇಂದು 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ‌ ಅಂತಾ ಅರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸಾಲಗಾಂವ ಗ್ರಾಮ ಒಂಚಾಯತಿ ವ್ಯಾಪ್ತಿ ಒಂದರಲ್ಲೇ ಬರೋಬ್ಬರಿ 10 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಇನ್ನುಳಿದಂತೆ, ಮುಂಡಗೋಡ ಪಟ್ಟಣದಲ್ಲಿ-2, ಟಿಬೇಟಿಯನ್ ಕ್ಯಾಂಪ್ STS ಶಾಲೆಯ 5 ವಿದ್ಯಾರ್ಥಿಗಳು ಸೇರಿದಂತೆ- 6, ಕಾತೂರ- 1, ಇಂದೂರ- 2, ಪಾಳಾ- 1, ಕಲಕೇರಿ – 1, ಸಾಲಗಾಂವ್- 10 ರಾಮಾಪುರ 1 ಪ್ರಕರಣ ದೃಢಪಟ್ಟಿದೆ.

error: Content is protected !!