ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು, ಮುಂಡಗೋಡ ತಾಲೂಕಿನ ಇಂದೂರಿನ ಚಾಲಕನಿಗೆ ಗಂಭೀರ ಗಾಯ..!

ಮುಂಡಗೋಡ ಟಿಬೇಟಿಯನ್ ಕಾಲೋನಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕಾರ್, ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಗಂಭೀರ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಮುಂಡಗೋಡ ತಾಲೂಕಿನ ಇಂದೂರು ಗ್ರಾಮದ ಅನಿಲ್ ವಡ್ಡರ್ ಎಂಬುವವನೇ ಗಾಯಗೊಂಡಿರೋ ಚಾಲಕ ಅಂತಾ ತಿಳಿದು ಬಂದಿದೆ. ಬೈಕ್ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಗಾಯಗೊಂಡ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಿಲಾಗಿದೆ.