Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ.

ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ.

ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

error: Content is protected !!