Death News; ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ ವ್ಯಕ್ತಿಯೊಬ್ಬ 20 ದಿನದ ನಂತ್ರ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಕೊಪ್ಪ ಇಂದಿರಾನಗರದ ನಾಗಯ್ಯ ಈರಯ್ಯ ಹಿರೇಮಠ (42), ಎಂಬಾತನೇ ಸದ್ಯ ವಿಷಸೇವಿಸಿ ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಜುಲೈ 4 ರಂದು ಮನೆಯಲ್ಲೇ ಕಳೆನಾಶಕ ಸೇವಿಸಿದ್ದ, ಹೀಗಾಗಿ ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನಂತರ ಕೆಲ ದಿನಗಳ ಹಿಂದೆ ಮನೆಗೆ ಕರೆ ತರಲಾಗಿತ್ತು.
ಮನೆಗೆ ಬಂದ ಕೆಲವೇ ದಿನಗಳಲ್ಲಿ ವ್ಯಕ್ತಿಗೆ ಮತ್ತೆ ವಿಷದ ಪ್ರಭಾವ ಹೆಚ್ಚಾಗಿ, ಇಂದು ಅಂದ್ರೆ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.