PSI Commit Suicide;
ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಪೊಲೀಸ್ ಅಧಿಕಾರಿಯೊಬ್ಬರು ಇಂದು ನೇಣಿಗೆ ಕೊರಳೊಡ್ಡಿದ್ದಾರೆ. ಸದ್ಯ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಖೀರಪ್ಪ ಘಟಕಾಂಬಳೆ(50) ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಮೂಲತಃ ಹಳಿಯಾಳದವರಾಗಿದ್ದ ಅವ್ರು, ಶಿರಸಿ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. PSI ಖೀರಪ್ಪ ಘಟಕಾಂಬಳೆ, ಶಿರಸಿಯಲ್ಲೇ ಸೆಟ್ಲ್ ಆಗಿದ್ದರು. ಆದ್ರೆ, ಕಳೆದ ಎರಡ್ಮೂರು ತಿಂಗಳ ಹಿಂದೆಯಷ್ಟೇ PSI ಆಗಿ ಬಡ್ತಿ ಪಡೆದಿದ್ದ ಅವ್ರು, ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೇವೆಗೆ ತೆರಳಿದ್ದರು.
ಅದ್ಯಾವ ಕಾರಣಕ್ಕೋ ಏನೋ ಇಂದು ತಮ್ಮ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸುದ್ದಿಗಳನ್ನೂ ಓದಿ👇
ಕಾರವಾರದಲ್ಲಿ ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ, ಕಾರಲ್ಲಿ ಕೂತಿದ್ದ ಮಹಿಳೆ ಸಾ*ವು..!
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!