Student Suicide; ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರಥಮ ವರ್ಷದ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡುವ ಮೊದಲು ಆಕೆ ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ, ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಸ್ನೇಹಾ ಅವರ ತಂದೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್‌ಐ ಸಂತೋಷಕುಮಾ‌ರ್ ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!