Sirsi Crime News; ಶಿರಸಿ; ಗ್ರಾಮೀಣ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ,30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.
1996 ರಲ್ಲಿ, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಶಿರಸಿ- ಕುಮಟಾ ರಸ್ತೆ ಕಸಗೆ ಹತ್ತಿರ, ಪಾದಾಚಾರಿ ಕೋಖಂಡದ ಲೀಲಾವತಿ ಗಣಪತಿ ಹೆಗಡೆ ಎಂಬುವ ಮಹಿಳೆಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿ ಹೊಡೆದು ಬೈಕ್ ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದ. ಆರೋಪಿತನು 1996 ರಿಂದಲೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು.
ಇದನ್ನೂ ಓದಿ? ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ..!
ಉತ್ತರ ಕನ್ನಡ ಎಸ್ಪಿ ಎಂ ನಾರಾಯಣ್ ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಜಿ ಹಾಗೂ ಎಮ್ ಜಗದೀಶ್ ಮತ್ತು ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಹಾಗೂ ಶಿರಸಿ ಗ್ರಾಮೀಣ ಠಾಣೆಯ ಪಿ ಐ ಮಂಜುನಾಥ್ ಎಮ್, ಪಿಎಸ್ಐ ಸಂತೋಷಕುಮಾರ್ ಹಾಗೂ ಅಶೋಕ್ ರಾಠೋಡ್ ರವರ ಮಾರ್ಗದರ್ಶನದಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ತಂಡವು ಕೇರಳದ ಎರನಾಕೂಲಮ್ ಜಿಲ್ಲೆಯ ಚೆನ್ನಯಪಿಲಿಲ್, ಪುಲಿಣ್ತಾನಮ್ ನಲ್ಲಿ ಆರೋಪಿತನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರಪಡಿಸಿದ್ದಾರೆ.
ನ್ಯಾಯಾಲಯವು ಆರೋಪಿಗೆ 26/06/2025 ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
