ಮುಂಡಗೋಡ: ಪಟ್ಟಣದ ಜ್ಯೋತಿ (ಕ್ರಿಶ್ಚಿಯನ್) ಆಸ್ಪತ್ರೆಯಲ್ಲಿ ಮೂರು ದಿನದ ಹಸುಗೂಸನ್ನು ಬಿಟ್ಟು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಹಾಕಲಾಗಿರೋ ವಿಶೇಷ ತೊಟ್ಟಿಲಿನಲ್ಲಿ ಮುದ್ದು ಕಂದಮ್ಮನನ್ನು ಹೆತ್ತವರೇ ಬಿಟ್ಟು ಹೋಗಿದ್ದಾರೆ. ಸದ್ಯ ಆ ಹಸುಗೂಸು ಸಂಬಂಧಪಟ್ಟ ಅಧಿಕಾರಿಗಳ ಆರೈಕೆಯಲ್ಲಿದೆ. ಬೆಳ್ಳಂ ಬೆಳಿಗ್ಗೆ..! ಅಂದಹಾಗೆ, ಆಸ್ಪತ್ರೆಯಲ್ಲಿ ಮಕ್ಕಳನ್ನು ಹೆತ್ತು, ಸಾಕಲು ಆಗದವರಿಗಾಗಿ ತೊಟ್ಟಿಲೊಂದನ್ನು ಕಟ್ಟಿಡಲಾಗಿದೆ. ಕಂದಮ್ಮಗಳನ್ನು ಸಾಕಲು ಆಗದವರು, ಆ ತೊಟ್ಟಿಲಿನಲ್ಲಿ ಇಟ್ಟು ಹೋಗಬಹುದಾಗಿದೆ. ಹಾಗಂತ ನಾಮಫಲಕವನ್ನೂ ಹಾಕಲಾಗಿದೆ. ಹೀಗಾಗಿ, ಅದ್ಯಾರೋ ಹೆತ್ತವರು ಪುಟ್ಟ ಹಸುಗೂಸನ್ನು ಶುಕ್ರವಾರ ಬೆಳ್ಳಂ ಬೆಳಿಗ್ಗೆ ತೊಟ್ಟಿಲಲ್ಲಿ ಹಾಕಿ...
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಮುಂಡಗೋಡ ಠಾಣೆಯಲ್ಲಿ “ಮಂತ್ಲಿ” ಬಾಬತ್ತಿಗಾಗಿ ಬರಗೆಟ್ಟವನ ಕಳ್ಳಾಟಗಳು ಒಂದಾ..? ಎರಡಾ..? ಪಿಐ ಬರಮಪ್ಪ ಸಾಹೇಬ್ರೆ ಕೊಂಚ ಗಮನಿಸಿ..!
ಮುಂಡಗೋಡ ಪೊಲೀಸ್ ಠಾಣೆಗೆ ನೂತನ ಪಿಐ ಆಗಿ ಬರಮಪ್ಪ ಲೋಕಾಪುರ ಅಧಿಕಾರ ಸ್ವೀಕರಿಸಿದ್ದಾರೆ. ಜೊತೆಗೆ ತಮ್ಮ ಹೊಸ ಠಾಣೆಯ ಜವಾಬ್ದಾರಿ ಹೊತ್ತಿದ್ದಾರೆ. ಇದ್ರೊಂದಿಗೆ ಮುಂಡಗೋಡಿಗರು ಮತ್ತೊಮ್ಮೆ ಮೂಟೆ ಮೂಟೆಗಳಷ್ಟು ಭರವಸೆ ಹೊತ್ತು, ಬೆರಗುಗಣ್ಣಿನಿಂದ ಹೊಸ ಅಧಿಕಾರಿಯತ್ತ ನೋಡುತ್ತಿದ್ದಾರೆ. ಯಾಕಂದ್ರೆ, ಇತ್ತಿತ್ತಲಾಗಿ ನಮ್ಮ ಮುಂಡಗೋಡ ಪೊಲೀಸ್ ಠಾಣೆ ಅನ್ನೋದು ಅದ್ಯಾರ್ಯಾರದ್ದೋ “ರಾಜೀ” ಲೆಕ್ಕಗಳ ಅಡ್ಡೆಯಾದಂತಾಗಿತ್ತು. ಹಾಗಂತ, ನಾವು ಹೇಳ್ತಿಲ್ಲ, ಅದನ್ನೇಲ್ಲ ಕಣ್ಣಾರೆ ಕಂಡಿದ್ದ ಸಾರ್ವಜನಿಕರ ಬಹುದೊಡ್ಡ ಆರೋಪವಾಗಿತ್ತು. ಹಾಗಿದ್ರೆ ಅದೀಗ, ಬದಲಾಗತ್ತಾ..? ಬದಲಾಗಬೇಕಾದ್ರೆ ಸದ್ಯ ಮುಂಡಗೋಡ ಠಾಣೆಯಲ್ಲಿ ಏನೇನು...
ಮುಂಡಗೋಡ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ್ ಅಧಿಕಾರ ಸ್ವೀಕಾರ..!
ಮುಂಡಗೋಡ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಮಂಗಳವಾರ ರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿ ಸಿಪಿಐ ಆಗಿದ್ದ ಸಿದ್ದಪ್ಪ ಸಿಮಾನಿಯವರಿಗೆ ಸರ್ಕಾರ ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಲೋಕಾಪುರ್ ರವರನ್ನು ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್, ಕ್ರೈಂ ಪಿಎಸ್ಐ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.
ಹಳೂರಿನಲ್ಲಿ ಬೆಂಕಿ ಅವಘಡದಿಂದ 7 ಹಸುಗಳನ್ನು ಕಳೆದುಕೊಂಡಿದ್ದ ಮಾಲೀಕರಿಗೆ ಪರಿಹಾರದ ಚೆಕ್ ವಿತರಣೆ..!
ಮುಂಡಗೋಡ ಪಟ್ಟಣದ ಹಳೂರು ಓಣಿಯಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ನೊಂದವರಿಗೆ ಪರಿಹಾರ ವಿತರಿಸಲಾಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಬರೋಬ್ಬರಿ 7 ಜಾನುವಾರುಗಳು ಸಜೀವ ದಹನಗೊಂಡ ಹಿನ್ನೆಲೆಯಲ್ಲಿ, ಹಸುಗಳ ಮಾಲೀಕರಿಗೆ ಶಾಸಕ ಶಿವರಾಮ್ ಹೆಬ್ಬಾರ್ ಚೆಕ್ ವಿತರಿಸಿದ್ರು. ಅಂದಹಾಗೆ, ಬುಧವಾರ ಬೆಳಿಗ್ಗೆ ಹಳೂರಿನ ಹಸುಗಳ ಮಾಲೀಕ ಮಂಜುನಾಥ್ ಶೇಟ್ ಮನೆಗೆ ತೆರಳಿದ ಶಾಸಕರು, ಕೆ.ಡಿ.ಸಿ.ಸಿ ಬ್ಯಾಂಕ್ ನ ರೈತ ಕಲ್ಯಾಣ ನಿಧಿಯಿಂದ 1 ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್ ಅನ್ನು ಹಸ್ತಾಂತರಿಸಿದರು.
ಮುಂಡಗೋಡ ಸಿಪಿಐ ಸಿದ್ದಪ್ಪ ಸಿಮಾನಿ ಎತ್ತಂಗಡಿ..! ಹೊಸ ಸಿಪಿಐ ಯಾರು ಗೊತ್ತಾ..?
ಮುಂಡಗೋಡ ಪೊಲೀಸ್ ಠಾಣೆಯ ಸಿಪಿಐ ಸಿದ್ದಪ್ಪ ಸಿಮಾನಿ ಎತ್ತಂಗಡಿಯಾಗಿದ್ದಾರೆ. ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಆಗಮಿಸುತ್ತಿದ್ದಾರೆ. ಹಾಗಂತ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ.
ಮುಂಡಗೋಡ ಲೊಯೋಲಾ ಶಾಲೆಯಲ್ಲಿ ಪಾಲಕ ಸಂತ ಇಗ್ನಾಶಿಯಸ್ ರವರ ಸಂಭ್ರಮದ ಮಹೋತ್ಸವ..!
ಮುಂಡಗೋಡ: ಲೊಯೋಲ ಶಿಕ್ಷಣ ಸಂಸ್ಥೆಯ ಲೊಯೋಲ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಸಂತ ಇಗ್ನಾಶಿಯವರ ಮಹೋತ್ಸವ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಜಕಣಾಚಾರಿ ಮಾತನಾಡುತ್ತ, ಈ ಶಿಕ್ಷಣ ಸಂಸ್ಥೆ ಮುಂಡಗೋಡ ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದೆ. ಇಂಥಾ ಶಾಲೆಯಲ್ಲಿ ಓದಿದ ನೀವು ಧನ್ಯರು .ಸಾಧನೆ ಮಾಡಲು ನನಗೆ ಈ ಶಾಲೆಯ ವೇದಿಕೆ ಅವಕಾಶ ಕಲ್ಪಿಸಿಕೊಟ್ಟಿದೆ ಎಂಬುದರ ಬಗ್ಗೆ ಪ್ರೌಢಿಮೆ ಇರಬೇಕು ಎಂದರು. ಲಯೋಲದ ಶಿಸ್ತು -ಶಿಕ್ಷಣ- ಸಂಸ್ಕಾರ ವನ್ನು ಕಾರ್ಯಕ್ರಮದ...
ಉಗ್ನಿಕೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ..!
ಮುಂಡಗೋಡ ತಾಲೂಕಿನ ಉಗ್ನಿಕೇರಿಯ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಯಾವುದೋ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಾಮು ಮಾಕು ಕೊಕರೆ (23) ಎಂಬುವ ಯುವಕನೇ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದು, ವಿಷ ಸೇವಿಸಿ ನರಳುತ್ತಿದ್ದ ವೇಳೆ ತಕ್ಷಣವೇ ಕುಟುಂಬಸ್ಥರು 108 ಅಂಬ್ಯಲೆನ್ಸ್ ಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಸ್ಥಳಕ್ಕೆ ಆಗಮಿಸಿದ ಅಂಬ್ಯಲೆನ್ಸ್ ಸಿಬ್ಬಂದಿ ಧನರಾಜ್ ಹಾಗೂ ಚಾಲಕ ವಿಜಯ್ ಪಾಟೀಲ್ ಯುವಕನಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ...
ಮುಂಡಗೋಡ ಗೊಟಗೋಡಿಕೊಪ್ಪದಲ್ಲಿ ಹಾಡಹಗಲೇ ತಾಯಿ ಮಗಳ ಮೇಲೆ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ..!
ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪದಲ್ಲಿ ತಾಯಿ ಮಗಳ ಮೇಲೆ ಹಾಡಹಗಲೇ ಮಾರಣಾಂತಿಕ ಹಲ್ಲೆಯಾಗಿದೆ. ಖುದ್ದು ಅಳಿಯನೇ ಅತ್ತೆ ಹಾಗೂ ಹೆಂಡತಿಯ ಮೇಲೆ ಕುಡುಗೋಲಿನಿಂದ ಮಾರಣಾಂತಿಕವಾಗಿ ಎರ್ರಾಬಿರ್ರಿ ಕೊಚ್ಚಿದ್ದಾನೆ ಅನ್ನೋ ಅರೋಪ ಕೇಳಿ ಬಂದಿದೆ, ಅಕ್ಷರಶಃ ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿ ಮಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಟಗೋಡಿಕೊಪ್ಪದ ಹೊನ್ನಮ್ಮ ಬಸವರಾಜ್ ಚಿನ್ನಳ್ಳಿ ಹಾಗೂ ಮಗಳು ಅನ್ನಪೂರ್ಣ ಎಂಬುವವರೇ ಕುಡುಗೋಲಿನಿಂದ ಹಲ್ಲೆಗೆ ಒಳಗಾದವರಾಗಿದ್ದಾರೆ. ಘಟನೆ ಏನು..? ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪದಲ್ಲಿ ಅನ್ನಪೂರ್ಣ ಎಂಬುವ ಯುವತಿಯನ್ನು ಅದೇ ಗ್ರಾಮದ ನಾಗರಾಜ್...
ಮುಂಡಗೋಡ ಹಳೂರಿನಲ್ಲಿ ಭಾರೀ ಬೆಂಕಿ ಅನಾಹುತ, ಏಳು ಆಕಳುಗಳು ಸಜೀವ ದಹನ..!
ಮುಂಡಗೋಡ ಪಟ್ಟಣದ ಹಳೂರಿನಲ್ಲಿ ಭಾರೀ ಬೆಂಕಿ ಅನಾಹುತವಾಗಿದೆ. ದನದ ಕೊಟ್ಟಿಗೆಗೆ ಬೆಂಕಿ ತಗುಲಿ ಬರೋಬ್ಬರಿ 7 ಆಕಳುಗಳು ಸಜೀವ ದಹನವಾಗಿ ಸುಟ್ಟು ಕರಕಲಾಗಿವೆ. ಆದ್ರೆ, ಬೆಂಕಿ ತಗುಲಿದ್ದು ಹೇಗೆ ಅಂತಾ ಇನ್ನು ಖಚಿತತೆ ಸಿಕ್ಕಿಲ್ಲ. ಹಳೂರಿನ ಮಂಜುನಾಥ್ ನಾಗೇಶ್ ಶೇಟ್ ಎಂಬುವವರಿಗೆ ಸೇರಿದ, ದನದ ಕೊಟ್ಟಿಗೆಯಲ್ಲಿ ದುರಂತ ಸಂಭವಿಸಿದೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಇಡೀ ದನದ ಕೊಟ್ಟಿಗೆ ಆಕಳುಗಳ ಸಮೇತವಾಗಿಯೇ ಸುಟ್ಟು ಕರಕಲಾಗಿದೆ. ದುರಂತ ಅಂದ್ರೆ ಘಟನೆ ನಡೆದಾಗ ರಾತ್ರಿ ಯಾರಿಗೂ ಗಮನಕ್ಕೆ ಬಂದಿಲ್ಲ, ಬೆಳಿಗ್ಗೆಯಷ್ಟೇ ಘಟನೆ...
ಕಾತೂರು ಬಳಿ ಮಿನಿ ಲಾರಿ ಪಲ್ಟಿ, ಲಾರಿಯಡಿ ಸಿಲುಕಿಕೊಂಡ ಚಾಲಕನ ಹೊರತೆಗೆಯಲು ಹರಸಾಹಸ, ಇಬ್ಬರಿಗೆ ಗಾಯ..!
ಮುಂಡಗೋಡ ತಾಲೂಕಿನ ಕಾತೂರು ಬಳಿಮಿನಿ ಲಾರಿ ಪಲ್ಟಿಯಾದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಲಾರಿಯಡಿ ಚಾಲಕ ಸಿಲುಕಿಕೊಂಡಿದ್ದು ಚಾಲಕನ ರಕ್ಷಣಾ ಕಾರ್ಯ ನಡಿತಿದೆ. ಜಿಯೋ ಟವರ್ ಕೆಲಸ ಮಾಡಲು ಮುಂಡಗೋಡಿಗೆ ಬಂದಿದ್ದ ಕೃಷ್ಣ ಸಿಂಗನಳ್ಳಿ ಹಾಗೂ ಚಾಲಕ ಶಶಿ, ಶಿರಸಿ ಕಡೆಗೆ ಹೋಗುತ್ತಿದ್ದಾಗ ಮಳೆಯಾದ ಹಿನ್ನೆಲೆಯಲ್ಲಿ ರಸ್ತೆ ಬದಿ ಮಿನಿ ಲಾರಿ ಪಲ್ಟಿಯಾಗಿದೆ. ಇನ್ನು ಘಟನೆಯಲ್ಲಿ ಚಾಲಕ ಲಾರಿಯಡಿಯಲ್ಲೇ ಸಿಲುಕಿಕೊಂಡಿದ್ದು, ನರಳುತ್ತಿದ್ದಾನೆ. ಹೀಗಾಗಿ, ಚಾಲಕನನ್ನು ಹೊರತೆಗೆಯಲು ಸಾರ್ವಜನಿಕರು ಪರದಾಡುತ್ತಿದ್ದಾರೆ. ಕಟ್ಟರ್ ಸಹಾಯದಿಂದ ಚಾಲಕನನ್ನು ಹೊರತೆಗೆಯುವ...








