Home ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್

Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಗಡಿಭಾಗ ಹಾಗೂ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಚಿಗಳ್ಳಿಯ ಯುವಕನೋರ್ವ ಸ್ಥಳದಲ್ಲೇ ಮೃತಟ್ಟಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಯಲ್ಲಪ್ಪ ಕಡೆಮನಿ(40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಇವತ್ತು ತನ್ನ ಅಳಿಯನೊಂದಿಗೆ ಬೈಕ್ ಏರಿ ಹಾನಗಲ್ ಗೆ ಹೋಗಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಹಾನಗಲ್ ತಾಲೂಕಿ‌ನ ಗಾಜೀಪುರ ಬಳಿ ಬೈಕ್ ಗಳ‌ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಡಿಕ್ಕಿಯ...

Post
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!

ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!

ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ‌‌ ಸಚಿವೆ...

Post
ದಾವಣಗೇರೆಯಲ್ಲಿ ಕೊಲೆ‌ಮಾಡಿ ಶಿಗ್ಗಾವಿಯಲ್ಲಿ ಸರೆಂಡರ್ ಆದ ಶಿವಮೊಗ್ಗದ ಆರೋಪಿಗಳು..!

ದಾವಣಗೇರೆಯಲ್ಲಿ ಕೊಲೆ‌ಮಾಡಿ ಶಿಗ್ಗಾವಿಯಲ್ಲಿ ಸರೆಂಡರ್ ಆದ ಶಿವಮೊಗ್ಗದ ಆರೋಪಿಗಳು..!

ಶಿಗ್ಗಾವಿ: ದಾವಣಗೇರೆ ಜಿಲ್ಲೆಯಲ್ಲಿ ಮರ್ಡರ್ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳು ಶಿಗ್ಗಾವಿ ಪೊಲೀಸರಿಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆ ಚೀಲೂರು ಸಮೀಪದ ಗೋವಿನ ಕೋವಿ ಬಳಿ ನಿ‌ನ್ನೆ ಸಂಜೆ ಆಂಜನೇಯ ಎಂಬಾತನ ಹತ್ಯೆಯಾಗಿತ್ತು. ಅಂದಹಾಗೆ, ಹಂದಿ ಅಣ್ಣಿ ಕೊಲೆ ಆರೋಪಿಗಳಾದ ಆಂಜನೇಯ ಹಾಗೂ ಮಧು ಎಂಬುವರ ಮೇಲೆ ನಿನ್ನೆ ಸಂಜೆ ಹಲ್ಲೆ ನಡೆದಿತ್ತು. ಈ ವೇಳೆ ಆಂಜನೇಯ ಎಂಬುವವರ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮಧು ಎಂಬುವವ ಗಂಭೀರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಂಜನೇಯನನ್ನು ಕೊಲೆ ಮಾಡಿದ...

Post
ಮುಂಡಗೋಡ ಅರಣ್ಯದಲ್ಲಿ ಗಾಯಗೊಂಡಿದ್ದ ಆನೆ ಕಲಘಟಗಿ ಕಾಡಲ್ಲಿ ಸಾವು..!

ಮುಂಡಗೋಡ ಅರಣ್ಯದಲ್ಲಿ ಗಾಯಗೊಂಡಿದ್ದ ಆನೆ ಕಲಘಟಗಿ ಕಾಡಲ್ಲಿ ಸಾವು..!

ಮುಂಡಗೋಡ: ಕಳೆದ ಹಲವು ದಿನಗಳಿಂದ ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯದಿಂದ ಬಳಲುತ್ತಿದ್ದ 4 ವರ್ಷದ ಗಂಡು ಆನೆ ಮೃತಪಟ್ಟಿದೆ. ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಪಂ ವ್ಯಾಪ್ತಿಯ ಮಸಳಿಕಟ್ಟಿ ಅರಣ್ಯ ಪ್ರದೇಶದಲ್ಲಿ ಗಂಡು ಆನೆ ಸಾವನ್ನಪ್ಪಿದೆ. ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡಲು ಪ್ರಯತ್ನಿಸಲಾಗಿತ್ತು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಕಲಘಟಗಿ ತಾಲೂಕಿನ ಅರಣ್ಯಕ್ಕೆ ಬಂದಿತ್ತು. ಸೊಂಡಿಲು ಬಳಿ ಗಾಯಗೊಂಡಿದ್ದ ಆನೆಗೆ ಆಹಾರ ಸೇವಿಸಲು ಕಷ್ಟಪಡುತ್ತಿತ್ತು. ಇದನ್ನು ಗಮನಿಸಿದ‌ ಅರಣ್ಯ ಸಿಬ್ಬಂದಿ ಕಳೆದ ಮೂರು...

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಗಾಂಜಾ ಸಾಗಾಟ ‌ಮಾಡುತ್ತಿದ್ದ ಓರ್ವ ಆರೋಪಿ ಸೇರಿದಂತೆ ಅರ್ಧ ಕೇಜಿಯಷ್ಟು ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ‌ ಮಾಡಿರೋ ಮುಂಡಗೋಡ ಪೊಲೀಸರು, ಶಿವಮೊಗ್ಗ ಜಿಲ್ಲೆ ಸಾಗರದ ಮಹಮದ್ ಫಾರುಕ್ ತಂದೆ ನಜೀರ್ ಅಹಮ್ಮದ್ ಅರಮನಿಕೆರಿ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ಅರ್ದ ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...

Post
ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ..!

ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ..!

ಬೆಂಗಳೂರು : 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಈ ಬಗ್ಗೆ ಹೈಕೋರ್ಟ್ ಇಂದು ತುರ್ತು ವಿಚಾರಣೆ ನಡೆಸಿತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಈ ವಿಚಾರಣೆಯನ್ನು ಮಾ.14 ಕ್ಕೆ ಮುಂದೂಡಿ ಆದೇಶಿಸಿದೆ. ಈ ನಡುವೆ ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುವುದು ಎಂದು...

Post
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ವಿಧಿವಶ..!

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ವಿಧಿವಶ..!

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರುವೆಳೆದಿರೋ ಆರ್. ದ್ರುವನಾರಾಯಣ್ ಕಾಂಗ್ರೆಸ್ ಶಾಸಕರಾಗಿ ಸಂತೇಮರಳ್ಳಿ ಕ್ಷೇತ್ರದಿಂದ ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದರು. ಚಾಮರಾಜನಗರ ಮಾಜಿ ಸಂಸದರಾಗಿದ್ದ ಆರ್.ಧ್ರುವನಾರಾಯಣ್, ಚಾಮರಾಜನಗರ ಜಿಲ್ಲೆ, ಹೆಗ್ಗವಾಡಿಯಲ್ಲಿ 31 ಜುಲೈ 1961ರಲ್ಲಿ ಜನಿಸಿದ್ದರು. ಅವ್ರುಗೆ 61 ವರ್ಷ ವಯಸ್ಸಾಗಿತ್ತು. ಬೆಂಗಳೂರು ಕೃಷಿ ವಿಜ್ಞಾ‌ನ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ. (ಕೃಷಿ), ಎಂ.ಎಸ್ಸಿ. (ಕೃಷಿ) ಪದವಿ ಪಡೆದಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದ್ರುವನಾರಾಯಣ ನಿಧನಕ್ಕೆ ರಾಜ್ಯ ಹಾಗೂ ರಾಷ್ಟ್ರದ ಹಲವು...

Post
ಮುಂಡಗೋಡಿಗೆ ಕರಾಳ ದಿನವಾಯ್ತು ಗುರುವಾರ, ಮಡಿದ ಮೂವರೂ ಯುವಕರಿಗೆ ಸ್ನೇಹಿತರ ಅಶ್ರುತರ್ಪಣ..!

ಮುಂಡಗೋಡಿಗೆ ಕರಾಳ ದಿನವಾಯ್ತು ಗುರುವಾರ, ಮಡಿದ ಮೂವರೂ ಯುವಕರಿಗೆ ಸ್ನೇಹಿತರ ಅಶ್ರುತರ್ಪಣ..!

 ನಿಜಕ್ಕೂ ಮುಂಡಗೋಡಿಗರ ಪಾಲಿಗೆ ಇವತ್ತು ಕರಾಳ ದಿನ. ಆಡಾಡುತ್ತಲೇ ಮನೆ ಮಕ್ಕಳನ್ನು ಕಳೆದುಕೊಂಡ ಕೆಟ್ಟ ದಿನ. ಬಹುಶಃ ಇವತ್ತು ಮುಂಡಗೋಡಿನಲ್ಲಿ ಯಾರೊಬ್ಬರ ಮುಖದಲ್ಲಿ ನಗು ಅಪರೂಪವಾಗಿತ್ತು. ಬರೀ ಆತಂಕ, ನಮ್ಮವರನ್ನು ಕಳೆದುಕೊಂಡ ನೋವಿನ ಛಾಯೆ ತುಂಬಿತ್ತು. ಆ ನೋವಿನಲ್ಲೇ ಇಲ್ಲಿನ ಶಿವಾಜಿ ಸರ್ಕಲ್ ನಲ್ಲಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ, ಮೂವರೂ ಯುವಕರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು. ಜಾತ್ರೆಗೆ ಹೋಗಿದ್ದವರು‌‌..! ಜಾತ್ರೆಗೆ ಹೋಗಿದ್ದ ಆ ಐದು ಸ್ನೇಹಿತರು ಅದ್ಯಾವ ಗಳಿಗೆಯಲ್ಲಿ ಮನೆಯಿಂದ ಹೊರಗೆ ಹೆಜ್ಜೆ ಹಾಕಿದ್ದರೋ ಗೊತ್ತಿಲ್ಲ....

Post
ಪಾಳಾ ಸಮೀಪ ಕಾರು ದುರಂತ ಕೇಸ್: ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ.. ಗಾಯಗೊಂಡಿದ್ದ ಶಂಕರಯ್ಯಾ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!

ಪಾಳಾ ಸಮೀಪ ಕಾರು ದುರಂತ ಕೇಸ್: ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ.. ಗಾಯಗೊಂಡಿದ್ದ ಶಂಕರಯ್ಯಾ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!

ಮುಂಡಗೋಡ ತಾಲೂಕಿನ ಪಾಳಾ ಸಮೀಪ ಬುಧವಾರ ರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಈಗಷ್ಟೇ ಮೃತಪಟ್ಟಿದ್ದಾನೆ. ಈ ಮೂಲಕ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಂಕರಯ್ಯ ಮಲ್ಲಯ್ಯ ಹಿರೇಮಠ್, ಮೃತಪಟ್ಟ ಮತ್ತೋರ್ವ ಯುವಕನಾಗಿದ್ದು, ನಿನ್ನೆ ರಾತ್ರಿ ಪಾಳಾ ಜಾತ್ರೆ ಮುಗಿಸಿ ಮುಂಡಗೋಡಿಗೆ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಐ20 ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮುಂಡಗೋಡಿನ ಇಬ್ಬರು ಸಹೋದರರು ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕರ್ ಹಿರೇಮಠನನ್ನು ಹುಬ್ಬಳ್ಳಿಯ ಕಿಮ್ಸ್...

Post
ಶಂಕ್ರಯ್ಯ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾನೆ, ದಯವಿಟ್ಟು ತಪ್ಪು ಮಾಹಿತಿಯ ಸ್ಟೇಟಸ್ ಬೇಡ ಗೆಳೆಯರೆ, ಎಲ್ಲರೂ ಆತನಿಗಾಗಿ ಪ್ರಾರ್ಥಿಸೋಣ..!

ಶಂಕ್ರಯ್ಯ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾನೆ, ದಯವಿಟ್ಟು ತಪ್ಪು ಮಾಹಿತಿಯ ಸ್ಟೇಟಸ್ ಬೇಡ ಗೆಳೆಯರೆ, ಎಲ್ಲರೂ ಆತನಿಗಾಗಿ ಪ್ರಾರ್ಥಿಸೋಣ..!

ಮುಂಡಗೋಡಿನ ಪಾಳಾ ಸಮೀಪ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರೋ ಯುವಕ ಶಂಕರಯ್ಯನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಆದ್ರೆ, ಇನ್ನೇನೂ ಬೇರೆಯ ರೀತಿಯ ಅನಾಹುತ ಸಂಭವಿಸಿಲ್ಲ. ತಜ್ಞ ವೈದ್ಯರು ನಿರಂತರವಾಗಿ ಶಂಕರಯ್ಯನಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಅಂತಾ ಕಿಮ್ಸ್ ನ ವೈದ್ಯರಿಂದ ಮಾಹಿತಿ ಲಭ್ಯವಾಗಿದೆ. ಆತ ಬದುಕಿದ್ದಾನೆ. ಹೀಗಾಗಿ, ತಪ್ಪು ಮಾಹಿತಿ ಹರಡಬೇಡಿ ಅಂತಾ ಕುಟುಂಬಸ್ಥರು ಮನವಿ ಮಾಡಿದ್ದಾರೆ..     ಬದುಕಿ ಬಾ ತಮ್ಮಾ..! ಅಷ್ಟಕ್ಕೂ, ನಿನ್ನೆ ನಡೆದ ಭೀಕರ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರೋ ಶಂಕ್ರಯ್ಯ ಮಲ್ಲಯ್ಯ...