Home ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್

Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಪಾಳಾ ಬಳಿ ಭೀಕರ ಅಪಘಾತ, ಮುಂಡಗೋಡಿನ ಇಬ್ಬರು ಸ್ಥಳದಲ್ಲೇ ಸಾವು..! ಮತ್ತಿಬ್ಬರಿಗೆ ಗಾಯ

ಪಾಳಾ ಬಳಿ ಭೀಕರ ಅಪಘಾತ, ಮುಂಡಗೋಡಿನ ಇಬ್ಬರು ಸ್ಥಳದಲ್ಲೇ ಸಾವು..! ಮತ್ತಿಬ್ಬರಿಗೆ ಗಾಯ

ಮುಂಡಗೋಡ ತಾಲೂಕಿನ ಪಾಳಾ ಸಮೀಪ ಭೀಕರ ಅಪಘಾತವಾಗಿದೆ‌. ಐ20 ಕಾರ್ ಪಲ್ಟಿಯಾದ ಪರಿಣಾಮ ಇಬ್ಬರು ಮುಂಡಗೋಡಿನ ಯುವಕರು ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಾಯವಾಗಿದೆ. ಮುಂಡಗೋಡಿನ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ ಮೃತ ದುರ್ದೈವಿಗಳು. ಪಾಳಾದಿಂದ ಮುಂಡಗೋಡಿಗೆ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

Post
ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!

ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!

ಶಿಗ್ಗಾವಿ: ಪುರಸಭೆ, ವಾರ್ಡ್‌ ನಂ.21 ರ ಜನ ರೋಸಿ ಹೋಗಿದ್ದಾರೆ. ಇಲ್ಲಿ ಆಡಳಿತ ವ್ಯವಸ್ಥೆ ಅನ್ನೋದು ಇದೆಯೊ ಇಲ್ಲವೋ ಅಂತಾ ನಿತ್ಯವೂ ಹಿಡಿಶಾಪ ಹಾಕ್ತಿದಾರೆ. ಯಾಕಂದ್ರೆ, ಈ ವಾರ್ಡಿನ ರಸ್ತೆಗಳು ಇವತ್ತು ನಡೆದಾಡಲೂ ಆಗದ ಸ್ಥಿತಿಯಲ್ಲಿವೆ. ಚರಂಡಿ ವ್ಯವಸ್ಥೆ ಅನ್ನೋದು ಗಬ್ಬೇದ್ದು ಹೋಗಿದೆ. ಈ ಕಾರಣಕ್ಕಾಗಿ ಈ ವಾರ್ಡಿನ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ಹೀಗಾಗಿನೇ ಇಲ್ಲಿನ ಜನ ನಮ್ಮ ಕಡೆ ಗಮನವಹಿಸಿ ಅಂತಾ ಪುರಸಭೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಂದಹಾಗೆ, ಇದು ಸಿಎಂ ತವರುಕ್ಷೇತ್ರ..!...

Post
ಮುಂಡಗೋಡ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಕಾರ್ಮಿಕರಿಂದ ಅಧಿಕಾರಿಗಳ ತರಾಟೆ, ಕಿಟ್ ಗಾಗಿ ಎಡತಾಕಿಸೋದು ಸರಿನಾ..?

ಮುಂಡಗೋಡ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಕಾರ್ಮಿಕರಿಂದ ಅಧಿಕಾರಿಗಳ ತರಾಟೆ, ಕಿಟ್ ಗಾಗಿ ಎಡತಾಕಿಸೋದು ಸರಿನಾ..?

 ಮುಂಡಗೋಡ: ಪಟ್ಟಣದಲ್ಲಿ ಇರೋ ಕಾರ್ಮಿಕ ಇಲಾಖೆಯ ಕಛೇರಿಯಲ್ಲಿನ ಅಧಿಕಾರಿಗಳ ಮೇಲೆ ನೂರಾರು ಕಾರ್ಮಿಕರು ಆಕ್ರೋಶಗೊಂಡಿದ್ದಾರೆ. ಕಾರ್ಪೆಂಟರ್ ಕೆಲಸದವರು, ಗಾರೆ ಕೆಲಸದವರು ಸೇರಿದಂತೆ ಹಲವರು ಕಾರ್ಮಿಕ ಇಲಾಖೆಯ ತಾಲೂಕಾ ಕಚೇರಿಯ ಅಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ಜಾಡಿಸಿದ್ರು. ಅಸಮರ್ಪಕ ಕಿಟ್ ಹಂಚಿಕೆ..! ಇನ್ನು, ಕಾರ್ಮಿಕರ ಆರೋಪದಂತೆ, ಈ ತಾಲುಕಾ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಿಟ್ ನೀಡುವಲ್ಲಿ ಬೇಜವಾಬ್ದಾರಿ ತೋರುತ್ತಿದ್ದಾರಂತೆ. ಅರ್ಹರಿಗೆ ಸಿಗಬೇಕಾದ ಕಾರ್ಪೆಂಟರ್ ಕಿಟ್, ಗಾರೆ ಕೆಲಸದ ಕಿಟ್ ಗಳನ್ನು ಸಮರ್ಪಕವಾಗಿ ಹಂಚಿಕೆ‌ ಮಾಡುತ್ತಿಲ್ಲವಂತೆ. ತಿಂಗಳುಟ್ಟಲೇ ಅಲೆದಾಡಿಸಿ ಕಾರ್ಮಿಕರ...

Post
ಶಿಗ್ಗಾವಿ ಕುಸ್ತಿ ಹಬ್ಬದಲ್ಲಿ 800 ಪೈಲ್ವಾನರ, 5 ದಿನಗಳ ಕಾದಾಟಕ್ಕೆ ವಿದ್ಯುಕ್ತ ತೆರೆ..!

ಶಿಗ್ಗಾವಿ ಕುಸ್ತಿ ಹಬ್ಬದಲ್ಲಿ 800 ಪೈಲ್ವಾನರ, 5 ದಿನಗಳ ಕಾದಾಟಕ್ಕೆ ವಿದ್ಯುಕ್ತ ತೆರೆ..!

ಶಿಗ್ಗಾವಿ: ಅದೊಂದು ಅಪ್ಪಟ ದೇಸೀ ಗ್ರಾಮೀಣ ಕ್ರೀಡೆ.. ಅಲ್ಲಿನ ಅಖಾಡದಲ್ಲಿ ಧೂಳೆಬ್ಬಿಸುವ ಕುಸ್ತಿ ಕಲಿಗಳು ತೊಡೆ ತಟ್ಟಿ ನಿಂತಿದ್ರು. ನೀನಾ..? ನಾನಾ..? ಅಂತಾ ಕಣದಲ್ಲಿ ಕೇಕೆ ಹಾಕಿದ್ರು. ಇದು, ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಕಳೆದ ಐದು ದಿನಗಳಿಂದ ನಡೆದ ಕುಸ್ತಿ ಹಬ್ಬದ ರಣರೋಚಕ ದೃಷ್ಯಗಳು. ಹಾವೇರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ವತಿಯಿಂದ ಶಿಗ್ಗಾವಿಯಲ್ಲಿ ಏರ್ಪಡಿಸಿದ್ದ ಕರ್ನಾಟಕ ಕುಸ್ತಿ ಹಬ್ಬ 2022-23 ಸಮಾರೋಪ ಸಮಾರಂಭ ರವಿವಾರ ನಡೆಯಿತು. ವಿವಿಧ ರಾಜ್ಯಗಳ...

Post
ಇಂದೂರು ಗ್ರಾ.ಪಂಚಾಯತಿಯಲ್ಲಿ ಪಿಡಿಓ ಮೇಡಂ ಕಚೇರಿಗೆ ಬರೋ ಟೈಮಿಂಗ್ ಎಷ್ಟು..? ಸೂಚನಾ ಫಲಕವನ್ನಾದ್ರೂ ಹಾಕಿ‌ ಮೇಡಂ..!

ಇಂದೂರು ಗ್ರಾ.ಪಂಚಾಯತಿಯಲ್ಲಿ ಪಿಡಿಓ ಮೇಡಂ ಕಚೇರಿಗೆ ಬರೋ ಟೈಮಿಂಗ್ ಎಷ್ಟು..? ಸೂಚನಾ ಫಲಕವನ್ನಾದ್ರೂ ಹಾಕಿ‌ ಮೇಡಂ..!

ಮುಂಡಗೋಡ ತಾಲೂಕಿನಲ್ಲಿ ಬಹುಶಃ ಇಂದೂರು ಗ್ರಾಮ ಪಂಚಾಯತಿಯ ಪಿಡಿಓ ಮೇಡಂ ನಷ್ಟು ಬ್ಯುಸಿ ಯಾರೂ ಇರಲಿಕ್ಕಿಲ್ವೇನೊ..? ಯಾಕಂದ್ರೆ, ಈ ಮೇಡಮ್ಮು ಇಂದೂರು ಪಂಚಾಯತಿಯಲ್ಲಿ ಸಿಗೋದೇ ಅಪರೂಪ ಅಂತಾ ಜನ ಹೇಳ್ತಿದಾರೆ. ತಮ್ಮ ಪಂಚಾಯತಿ ಅಡಿಯಲ್ಲಿ ಏನೇನೇಲ್ಲ ನಡೀತಿವೆ ಅನ್ನೊ ಕನಿಷ್ಟ ಖಬರೂ ಇಲ್ಲದಂತಾಗಿದೆ. ಯಾರ್ಯಾರು ಎಲ್ಲೇಲ್ಲಿ ಏನೇನು ಕಾಮಗಾರಿ ಮಾಡ್ತಿದಾರೆ, ಹೇಗೇ ಹೇಗೆ ನಡಿತಿವೆ ಅನ್ನೊ ಉಸಾಬರಿ ಬಹುತೇಕ ಪಿಡಿಓ ಮೇಡಂಗೆ ಇದೆಯೊ ಇಲ್ವೋ ಅರ್ಥವಾಗಬೇಕಿದೆ. ಬರೋದೇ ಮದ್ಯಾಹ್ನ..! ಅಸಲು, ಇಂದೂರು ಗ್ರಾಮ ಪಂಚಾಯತಿಗೆ ಪಿಡಿಓ ಆಗಿ...

Post
ಟಿಬೇಟಿಯನ್ ಕಾಲೋನಿಯಲ್ಲಿ ಜೇನು ನೋಣಗಳ ದಾಳಿ, 100 ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಜೇನು ನೋಣಗಳು..!

ಟಿಬೇಟಿಯನ್ ಕಾಲೋನಿಯಲ್ಲಿ ಜೇನು ನೋಣಗಳ ದಾಳಿ, 100 ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಜೇನು ನೋಣಗಳು..!

ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂ.1 ರಲ್ಲಿ ಜೇನು ದಾಳಿಯಾಗಿದೆ. ದಲಿತ ಸಂಘರ್ಷ ಸಮಿತಿಯ ಕಾರ್ಯಕ್ರಮಕ್ಕೆ ಬಂದಿದ್ದವರ ಮೇಲೆ ಜೇನುನೋಣಗಳ ದಾಳಿಯಾಗಿದೆ. ಪರಿಣಾಮ ಸುಮಾರು 100 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅದಹಾಗೆ, ಇಂದು ತಾಲೂಕಿನ ಟಿಬೇಟಿಯನ್ ಕಾಲೋನಿ ನಂಬರ್ 1 ರಲ್ಲಿ ದಲಿತ ಸಂಘಟನೆಗಳ ನೇತೃತ್ವದಲ್ಲಿ ಅಹಿಂದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ರು. ಈ ವೇಳೆ ಅದು ಹೇಗೋ ಗೊತ್ತಿಲ್ಲ, ಜೇನು ನೋಣಗಳು ದಾಳಿಮಾಡಿವೆ...

Post
ಶಿಗ್ಗಾವಿ: SCP, TSP ಯೋಜನೆ ಫಲಾನುಭವಿಗಳ ಆಯ್ಕೆಯಲ್ಲಿ ಅಧಿಕಾರಿಗಳ ಪಕ್ಷಪಾತ, ರೈತರ ಆಕ್ರೋಶ..!

ಶಿಗ್ಗಾವಿ: SCP, TSP ಯೋಜನೆ ಫಲಾನುಭವಿಗಳ ಆಯ್ಕೆಯಲ್ಲಿ ಅಧಿಕಾರಿಗಳ ಪಕ್ಷಪಾತ, ರೈತರ ಆಕ್ರೋಶ..!

ಶಿಗ್ಗಾವಿ ತಾಲೂಕಿನಲ್ಲಿ ಪಶು ಇಲಾಖೆ ಅಧಿಕಾರಿಗಳಿಂದ ತಾರತಮ್ಯವಾಯ್ತಾ..? SCP ಹಾಗೂ TSP ಯೋಜನೆಯಡಿ ಹಸುಗಳನ್ನು ನೀಡುವಾಗ ಫಲಾನುಭವಿಗಳ ಆಯ್ಕೆಯಲ್ಲಿ ಯಪರಾತಪರಾ ಮಾಡಿದ್ದಾರಾ..? ಹಾಗಂತ ಶಿಗ್ಗಾವಿಯ ಅನ್ನದಾತರು ಆರೋಪಿಸಿದ್ದಾರೆ. ಶಿಗ್ಗಾವಿ ತಾಲೂಕಿನಲ್ಲಿ 2022-23 ನೇ ಸಾಲಿನ SCP ಹಾಗೂ TSP ಯೋಜನೆ ಅಡಿಯಲ್ಲಿ ಫಲಾನುಭವಿಗಳ ಆಯ್ಕೆ ಸರಿಯಾಗಿಲ್ಲ. ಕೆಲ ಅಧಿಕಾರಿಗಳು ತಮಗೆ ಬೇಕಾದವರಿಗಷ್ಟೆ ಮಾನ್ಯತೆ ನೀಡಿ ಹಸುಗಳನ್ನ ಮಂಜೂರಿಸಲು ಆಯ್ಕೆ‌ಮಾಡಿದ್ದಾರೆ. ಹಸುಗಳನ್ನು ನಿಡುವಲ್ಲಿ ಪಕ್ಷಪಾತ ಮಾಡಿದ್ದಾರೆ ಎಂದು ರೈತರು ತಾಲೂಕಾ ಪಶು ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ಅರ್ಪಿಸಿದ್ರು. ಅರ್ಹರಿಗೆ...

Post
ಶಿಗ್ಗಾವಿಯ ಕುಸ್ತಿ ಹಬ್ಬದಲ್ಲಿ ಜಗಜಟ್ಟಿಗಳ ರೋಮಾಂಚಕ ಕುಸ್ತಿ, ಪಂದ್ಯಾವಳಿಗೆ ಇಂದು ಚಾಲನೆ..!

ಶಿಗ್ಗಾವಿಯ ಕುಸ್ತಿ ಹಬ್ಬದಲ್ಲಿ ಜಗಜಟ್ಟಿಗಳ ರೋಮಾಂಚಕ ಕುಸ್ತಿ, ಪಂದ್ಯಾವಳಿಗೆ ಇಂದು ಚಾಲನೆ..!

ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಇಂದು ಎಲ್ಲಿ ನೋಡಿದರು ಪೈಲ್ವಾನ್ ರುಗಳ ಜಬರ್ಧಸ್ತ್ ಸಂಚಾರ. ಕಣದಲ್ಲಿ ಧೂಳೆಬ್ಬಿಸಿ ತೊಡೆತಟ್ಟಿ ನಿಂತ ಕುಸ್ತಿ ಕಲಿಗಳ ರೋಮಾಂಚಕ ಪಟ್ಟು. ಜಿಲ್ಲೆವಹೊರ ಜಿಲ್ಲೆಯಿಂದ ಹಾಗೂ ಹೊರ ರಾಜ್ಯದಿಂದ ಬಂದಿದ್ದ ನೂರಾರು ಜಗಜಟ್ಟಿಗಳ ಕಾದಾಟ.. ಅಭಿಮಾನಿಗಳ ಕೇಕೆ ಶಿಳ್ಳೆಗಳ ಝೇಂಕಾರ..! ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಐದು ದಿನಗಳ ಕಾಲ‌ ನಡೆಯುವ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯವನ್ನ ಇದೆ ಮೊದಲ ಬಾರಿಗೆ ಆಯೋಜನೆ ಮಾಡಲಾಗಿತ್ತು. ಇಂದು ಈ ಕುಸ್ತಿ ಪಂದ್ಯಕ್ಕೆ ಸಾಂಕೇತಿಕವಾಗಿ...

Post
ಮುಂಡಗೋಡಿನಲ್ಲಿ ಬೇಡ ಜಂಗಮ ಒಕ್ಕೂಟದ ಜಿಲ್ಲಾ ಯಶಸ್ವಿ ಸಮಾವೇಶ, ಹಲವು ಶ್ರೀಗಳ ಸಾನಿಧ್ಯ, ಆಶೀರ್ವಚನ..!

ಮುಂಡಗೋಡಿನಲ್ಲಿ ಬೇಡ ಜಂಗಮ ಒಕ್ಕೂಟದ ಜಿಲ್ಲಾ ಯಶಸ್ವಿ ಸಮಾವೇಶ, ಹಲವು ಶ್ರೀಗಳ ಸಾನಿಧ್ಯ, ಆಶೀರ್ವಚನ..!

ಮುಂಡಗೋಡ: ದೇಶದಲ್ಲಿ ಮಾನವ ಧರ್ಮ ಹುಟ್ಟಿದಾಗಿನಿಂದ ವೀರಶೈವ ಸಮಾಜ ಹುಟ್ಟಿಕೊಂಡಿದೆ ವೀರಶೈವ ಸನಾತನ ಸಂಸ್ಕೃತ ಪದ ಎಂದು ಶಿರಸಿ ಬಣ್ಣದ ಮಠ ಚೌಕಿಮಠದ ಶಿವಲಿಂಗ ಮಹಾಸ್ವಾಮೀಜಿ ನುಡಿದರು. ಅವ್ರು ಪಟ್ಟಣದ ವಿವೇಕಾನಂದ ಬಯಲು ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ ಬೇಡಜಂಗಮ ಒಕ್ಕೂಟದ ಜಿಲ್ಲಾ ಸಮಾವೇಶ ಉದ್ಘಾಟಿಸಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವೀರಶೈವ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಬಾರದು. ಅವರಲ್ಲಿ ಅದ್ಭುತ ಶಕ್ತಿ ಇದೆ. ವೀರಶಕ್ತಿ ಪ್ರಬಲಗೊಳಿಸಿ ಸಮಾಜಕ್ಕೆ ಹಂಚಬೇಕು ಎಂದರು. ಗೋಕರ್ಣ...

Post
ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!

ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!

ಮುಂಡಗೋಡ ತಾಲೂಕಿನ ಹುನಗುಂದ ಅಗಡಿ ರಸ್ತೆಯ, ಸರ್ಕಾರಿ ಪ್ರೌಢಶಾಲೆಯ ಬಳಿ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಹುನಗುಂದ ಗ್ರಾಮದ ರಾಚಯ್ಯ ಬಸಯ್ಯ ಬೆಂಡಿಗೇರಿ(45), ಎಂಬುವವನೇ ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ ಪೆಟ್ಟಾಗಿದೆ. ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ‌ ಮಾಡಿದ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದ್ದಾರೆ. 108 ಅಂಬ್ಯುಲೆನ್ಸ್ ನಲ್ಲಿ ತಂತ್ರಜ್ಞ ಧನರಾಜ್ ಬೆಳೂರು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾಮಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...