ಗೋಕರ್ಣ: ಸಮುದ್ರದ ನೀರಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ ಮಾಡಲಾಗಿದೆ. ಕುಮಟಾದ ಗೋಕರ್ಣ ಕಡಲತೀರದಲ್ಲಿ ಘಟನೆ ನಡೆದಿದ್ದು,ರೋಹಿತ್ ಪಾಟೀಲ್(21) ರಕ್ಷಣೆಗೊಳಗಾದ ಪ್ರವಾಸಿಗನಾಗಿದ್ದಾನೆ. ಐವರು ಸ್ನೇಹಿತರು ಹುಬ್ಬಳ್ಳಿಯಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಈಜಲು ಸಮುದ್ರಕ್ಕೆ ಇಳಿದಿದ್ದ ವೇಳೆ ರೋಹಿತ್ ಅಲೆಗಳಿಗೆ ಸಿಲುಕಿದ್ದ. ಈ ವೇಳೆ ಇನ್ನೇನು ಸಮುದ್ರ ಪಾಲಾಗುತ್ತಿದ್ದ ರೋಹಿತ್ ನನ್ನು ಸ್ಥಳೀಯರು, ಜೀವರಕ್ಷಕ ಸಿಬ್ಬಂದಿ ಸಹಾಯದಿಂದ ರಕ್ಷಣೆ ಮಾಡಿದ್ದಾರೆ. ಬದುಕುಳಿದು ಬಂದ ಯುವಕ ಪ್ರಾಥಮಿಕ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾನೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಇಂದಿನಿಂದ ದೇವಿ ದರ್ಶನಕ್ಕೆ ಅವಕಾಶ..!
ಬೆಳಗಾವಿ: ಸವದತ್ತಿಯ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಇಂದಿನಿಂದ ಸಂಭ್ರಮ ಮತ್ತೆ ಶುರುವಾಗುತ್ತಿದೆ. ಬರೋಬ್ಬರಿ, ಒಂದೂವರೆ ವರ್ಷದ ನಂತರ ಭಕ್ತರ ದರ್ಶನಕ್ಕೆ ಯಲ್ಲಮ್ಮ ದೇವಸ್ಥಾನ ತೆರದುಕೊಳ್ಳುತ್ತಿದೆ. ಇಂದು ಮಂಗಳವಾರ ಬೆಳಿಗ್ಗೆ 6.30ಕ್ಕೆ ಶಾಸ್ತ್ರೋಕ್ತವಾಗಿ ದೇವಸ್ಥಾನ ಓಪನ್ ಮಾಡಿದ ಆಡಳಿತ ಮಂಡಳಿ, ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಭಕ್ತರ ಸ್ವಾಗತಕ್ಕೆ ದೇವಸ್ಥಾನ ಆವರಣದಲ್ಲಿ ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿದೆ. ಇಷ್ಟು ದಿನ, ಭಕ್ತರಿಲ್ಲದೇ ಭಣಗುಡುತ್ತಿದ್ದ ಏಳುಕೊಳ್ಳದಲ್ಲಿ ಭಕ್ತರ ಸಂಭ್ರಮ ಇಂದಿನಿಂದ ಕಳೆ ಕಟ್ಟಲಿದೆ. ಇನ್ನು, ಮಹಾರಾಷ್ಟ್ರ- ಕರ್ನಾಟಕ ಸೇರಿ ಹಲವು...
ಅತ್ತಿವೇರಿ ಬಳಿ, ಬೈಕ್ ಸವಾರನ ಮೇಲೆ ಜಿಗಿದ ಜಿಂಕೆ, ಬೈಕ್ ನಿಂದ ಕೆಳಗೆ ಬಿದ್ದ ಸವಾರ ಗಂಭೀರ ಗಾಯ..!
ಮುಂಡಗೋಡ: ಜಿಂಕೆಯೊಂದು ಬೈಕ್ ಗೆ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಅತ್ತಿವೇರಿ ಪಕ್ಷಿಧಾಮದ ಹತ್ತಿರ ನಡೆದಿದೆ. ಮಾರುತಿ ರಾಮಣ್ಣ ಹುಲಿಹೊಂಡ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರ. ಈತ ಅತ್ತಿವೇರಿ ಪಕ್ಷಿಧಾಮದಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಇಂದು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬರುವ ವೇಳೆ, ಏಕಾಏಕಿ ಜಿಂಕೆ ಬೈಕ್ ಮೇಲೆಯೇ ಜಿಗಿದಿದೆ. ಪರಿಣಾಮ, ಬೈಕ್ ಸವಾರ ಮಾರುತಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾನೆ. ತಲೆಗೆ ಹಾಗೂ ಕೈಗೆ ಗಾಯವಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ...
ಮುಂಡಗೋಡಿನಲ್ಲಿ ಪ್ರತಿಭಟನೆಗಷ್ಟೇ ಸೀಮಿತವಾಯ್ತು ಭಾರತ್ ಬಂದ್..! ಎಂದಿನಂತೆ ಸಹಜ, ಸಹಜ..!!
ಮುಂಡಗೋಡ: ಕೃಷಿ ಕಾಯ್ದೆ ತಿದ್ದುಪಡಿ ವಿಧೇಯಕ ವಿರೋಧಿಸಿ ರೈತ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್, ಮುಂಡಗೋಡಿನಲ್ಲಿ ಸಾಂಕೇತಿಕ ಪ್ರತಿಭಟನೆಗಷ್ಟೇ ಸೀಮಿತವಾಗಿತ್ತು. ಬಿಟ್ಟರೆ, ಪಟ್ಟಣದಲ್ಲಿ ಜನಜೀವನ ಎಂದಿನಂತೆ ಇತ್ತು. ಇಂದು ಬೆಳಗಿನಿಂದಲೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಓಪನ್ ಆಗಿತ್ತು. ವ್ಯಾಪಾರ ವಹಿವಾಟು ಎಂದಿನಂತೆ ಪ್ರಾರಂಭವಾಗಿತ್ತು. ಆಟೋ, ಬಸ್ ಗಳು ಎಂದಿನಂತೆ ರಸ್ತೆಗಿಳಿದಿದ್ದವು. ಆದ್ರೆ, ಇಲ್ಲಿನ ಕೆಲವು ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ...
ಸಿದ್ದಾಪುರದಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ; ಒಂದು ಲಾರಿ ವಶಕ್ಕೆ, ಮೂವರ ಮೇಲೆ ಕೇಸ್..!
ಸಿದ್ದಾಪುರ: ಸಿದ್ದಾಪುರದಲ್ಲಿ ಅನ್ನಭಾಗ್ಯದ ಅಕ್ಕಿಗೆ ಕನ್ನ ಹಾಕಿದ್ದ ಮೂವರು ಲಾರಿ ಸಮೇತ ಸಿಕ್ಕಿಬಿದ್ದಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ತುಂಬಿ ಸಾಗಣೆ ಮಾಡುತ್ತಿದ್ದ ಲಾರಿ ವಶಕ್ಕೆ ಪಡೆಯಲಾಗಿದೆ. ಸಿದ್ದಾಪುರದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಅನ್ನಭಾಗ್ಯದ ಅಕ್ಕಿಯನ್ನು ಸಿದ್ದಾಪುರ ಪಟ್ಟಣದ ಭಗತ್ ಸಿಂಗ್ ವೃತ್ತದ ಬಳಿ, ತಹಶೀಲ್ದಾರ್ ನೇತೃತ್ವದ ತಂಡದಿಂದ ದಾಳಿ ಮಾಡಲಾಗಿದೆ. ಪರಿಣಾಮ, ಅಂದಾಜು 1,73,952 ರೂಪಾಯಿ ಮೌಲ್ಯದ, 50 ಕೆಜಿ ತೂಕದ 163 ಚೀಲದ, 81.40 ಕ್ವಿಂಟಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನೂ...
ಮುಂಡಗೋಡ ಬಿಜೆಪಿಯಲ್ಲಿ “ಲೋಕಲ್” ನಿರ್ಲಕ್ಷಕ್ಕೆ ನಿತ್ಯವೂ ಕತ್ತಲರಾತ್ರಿ..! ಒಳಗೊಳಗಿನ “ಕೆಂಡ” ಕ್ಕೆ ಮೈ ಛಳಿಬಿಟ್ಟು ಕೂತಿದೆ ಕಾಂಗ್ರೆಸ್..!!
ಮುಂಡಗೋಡ ತಾಲೂಕಿನಲ್ಲಿ ಬಿಜೆಪಿ ಇಷ್ಟರ ಮಟ್ಟಿಗೆ ಕುಬ್ಜವಾಯ್ತಾ..? ಅದ್ರಲ್ಲೂ ಸಚಿವ ಹೆಬ್ಬಾರ್ ಸಾಹೇಬ್ರು ಇಂತಹ ರಾಜಕಾರಣಕ್ಕೆ ಜೋತುಬಿದ್ರಾ..? ನಿಜಕ್ಕೂ ನಿಬ್ಬೆರಗಾಗಿ ಯೋಚಿಸ್ತಿದಾರೆ ಜನ. ಯಾಕಂದ್ರೆ, ವಾಸ್ತವ ಸ್ಥಿತಿಯನ್ನು ಒಪ್ಪಿಕೊಳ್ಳದೇ, ಜಿದ್ದಿನ ರಾಜಕೀಯಕ್ಕೆ ಬಂದು ನಿಂತಿರೋದಾದ್ರೂ ಯಾತಕ್ಕೆ ಅನ್ನೋ ಪ್ರಶ್ನೆ ಸಹಜವಾಗೇ ಗುಲ್ಲೆಬ್ಬಿಸಿದೆ. ಅದಕ್ಕೆ ಕಾರಣ, ಬಡ್ಡಿಗೇರಿಯ ಮುಗ್ದ ಕಾರ್ಯಕರ್ತರು ಕಾಂಗ್ರೆಸ್ ಶಾಲು ಹೊದ್ದಿಸಿಕೊಂಡು “ಕೈ” ಹಿಡಿದಿದ್ದರು ಅನ್ನೋ ಬೃಹನ್ ಕತೆ. ಆನಂತರ, ಅವ್ರನ್ನ ಮತ್ತೆ ಕರೆದು, ಬಿಜೆಪಿ ಶಾಲು ಹೊದಿಸಿ ಅದನ್ನೇ ಬಹುದೋಡ್ಡ ಸಾಧನೆ ಅಂತಾ ಬೀಗ್ತಿರೋ...
ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಗ್ರಾಮಗಳಲ್ಲಿ ಪಂ.ದೀನ್ ದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ..!
ಮುಂಡಗೋಡ- ತಾಲೂಕಿನ ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಸೇರಿದಂತೆ ತಾಲೂಕಿನಾದ್ಯಂತ ಇಂದು ಹಲವು ಗ್ರಾಮಗಳಲ್ಲಿ ಜನಸಂಘದ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ 105ನೇ ಜನ್ಮದಿನ ಆಚರಿಸಲಾಯಿತು. ಬಿಜೆಪಿ ಕಾರ್ಯಕರ್ತರು, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿದರು. ಹುನಗುಂದ ಗ್ರಾಮದ ಶಕ್ತಿಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ, ಬೂತ್ ಗಳ ಅಧ್ಯಕ್ಷರುಗಳು, ಗ್ರಾಮಗಳ ಪ್ರಮುಖರು, ಬಿಜೆಪಿಯ ಹಿರಿಯರು ಹಾಗೂ ಊರಿನ ಗಣ್ಯರು ಭಾಗವಹಿಸಿದ್ದರು.
ನಕಲಿ ಸಹಿ ಮಾಡಿ ಭೂಮಿ ನೋಂದಾಯಿಸಿದ್ದ ಗ್ರೇಡ್2 ತಹಶೀಲ್ದಾರ್ ಅರೆಸ್ಟ್..!
ಚಿಕ್ಕೋಡಿ: ನಕಲಿ ದಾಖಲೆ ಸೃಷ್ಟಿಸಿ ಬೇರೆಯವರಿಗೆ ಜಮೀನು ನೊಂದಾಯಿಸಿದ್ದ ಚಿಕ್ಕೋಡಿ ಗ್ರೇಡ್ 2 ತಹಶೀಲ್ದಾರ್ ಅರೆಸ್ಟ್ ಆಗಿದ್ದಾರೆ. ಚಿಕ್ಕೋಡಿ ತಹಶೀಲ್ದಾರರ ಕಚೇರಿಯಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅರುಣ್ ಶ್ರೀಖಂಡೆ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಏನದು ಕೇಸ್..? ಬಂಧಿತ ಗ್ರೇಡ್ 2 ತಹಶೀಲ್ದಾರ್ ಶ್ರೀಖಂಡೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದ ಮಾರುತಿ ಕರಿಗಾರ ಎಂಬುವರಿಗೆ ಸೇರಿದ್ದ ರಿ.ನಂ 436/5ಮತ್ತು 436/6 ರ ಜಮೀನು ಕೊಟ್ಟಿ ದಾಖಲೆ ಸೃಷ್ಠಿಸಿ, ಖರೀದಿ ಮಾಡಿ, ಪೋರ್ಜರಿ ಸಹಿ...
ನಂದಿಕಟ್ಟಾ ಪಿಡಿಓ ಮೇಲೆ ಹಲ್ಲೆಗೆ ಖಂಡನೆ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಗ್ರಾಪಂ ನೌಕರರ ಒತ್ತಾಯ..!
ಮುಂಡಗೋಡ: ಪಂಚಾಯತ ಅಭಿವೃದ್ಧಿ ಅಧಿಕಾರಿ ವೆಂಕಪ್ಪ ಲಮಾಣಿಯವರ ಮೇಲೆ ದೈಹಿಕ ಹಲ್ಲೆ ನಡೆಸಿದವರ ಮೇಲೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕಿನ ಗ್ರಾಮ ಪಂಚಾಯತಿ ಪಿಡಿಓಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಮನವಿ ಅರ್ಪಿಸಿದ್ರು. ನಂದಿಕಟ್ಟಾ ಗ್ರಾಮ ಪಂಚಾಯತ ಪಿಡಿಓ ವೆಂಕಪ್ಪ ಕೆ.ಲಮಾಣಿ ರವರ ಮೇಲೆ ದೈಹಿಕ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗೌಸುಸಾಬ ಮೌಲಾಲಿ ಯಳ್ಳುರ ಎಂಬುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ಅಪರಾಧಿಗೆ ತಕ್ಕೆ ಶಿಕ್ಷೆಯಾಗಬೇಕು...
ಏಕಾಏಕಿ ರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದು ನರಳಾಡಿದ್ಲು ಯುವತಿ, ಭಯಬಿಟ್ಟು ಕಾಪಾಡಿದ್ರು ಮುಂಡಗೋಡಿಗರು..!
ನಿಜಕ್ಕೂ ಮುಂಡಗೋಡಿನ ಮಣ್ಣ ಕಣಕಣದಲ್ಲೇ ಮಾನವೀಯತೆ ಇದೆ ಅನ್ನೋದಕ್ಕೆ ಇವತ್ತಿನ ಈ ಘಟನೆಯೇ ಸಾಕ್ಷಿ. ಯುವತಿಯೊಬ್ಳು ರಸ್ತೆಯ ಮದ್ಯದಲ್ಲೇ ಪ್ರಜ್ಞಾಹೀನವಾಗಿ ಬಿದ್ದಾಗ ಸಾರ್ವಜನಿಕರೇ ಆ ಯುವತಿಯನ್ನ ಆಸ್ಪತ್ರೆಗೆ ಸೇರಿಸಿರೋ ಘಟನೆ ನಡೆದಿದೆ. ಏನಾಯ್ತು..? ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ಸಮೀಪ ಬಂಕಾಪುರ ರಸ್ತೆಯಲ್ಲಿ ಇಂದು ಮದ್ಯಾಹ್ನ ಓರ್ವ ಯುವತಿ ಏಕಾಏಕಿ ಪ್ರಜ್ಞೆ ತಪ್ಪಿ ರಸ್ತೆಯಲ್ಲೆ ಬಿದ್ದಿದ್ದಾಳೆ. ಆ ಹೊತ್ತಲ್ಲಿ ಆಕೆಯ ಜೊತೆಗಿದ್ದ ಓರ್ವ ಅಜ್ಜಿ ಆತಂಕದಲ್ಲಿ ಚೀರಾಟ ಶುರುವಿಟ್ಟಿದ್ದಾಳೆ. ಆ ಕ್ಷಣ ನಿಜಕ್ಕೂ ಈ ಘಟನೆ ಯಾರಿಗೂ...









