ಕಲಘಟಗಿ: ಕೋವಿಡ್ ಆತಂಕದ ನಡುವೆಯೇ ಕಲಘಟಗಿಯಲ್ಲಿ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಮಾಜಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ 2 ಕಿಮೀ ಉದ್ದದ 9 ಅಡಿ ಅಗಲ ಇರುವ ರಾಷ್ಟ್ರಧ್ವಜದ ಮೆರವಣಿಗೆ ನಡೆಯಿತು. ಮೆರವಣಿಗೆ ವೇಳೆ ಸಾವಿರಾರು ಜನರಿಂದ ರಾಷ್ಟ್ರಭಕ್ತಿಯ ಘೋಷಣೆಗಳು ಮೊಳಗಿದವು. ದೇಶಭಕ್ತಿಯ ಗೀತೆಗಳ ಮೂಲಕ, ಘೋಷಣೆ ಗಳ ಮೂಲಕ ವಿಶೇಷ ರಾಷ್ಟ್ರಧ್ವಜದ ಮೆರವಣಿಗೆ ನಡೆಸಲಾಯಿತು.
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಂಭ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಾಯಣ್ಣ ಅಭಿಮಾನಿಗಳ ಸಂಘದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ ಆಚರಿಸಲಾಯಿತು. ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ರಾಯಣ್ಣನವರ ಶೌರ್ಯ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ರಾಯಣ್ಣನವರ ಪರವಾಗಿ ಘೋಷಣೆ ಕೂಗಿ ಅಭಿಮಾನಿಗಳು ಸಂಭ್ರಮಿಸಿದ್ರು.
ಹುನಗುಂದದಲ್ಲಿ ರಾಯಣ್ಣ ಬಾಯ್ಸ್ ನಿಂದ ಸಂಭ್ರಮದ ಧ್ವಜಾರೋಹಣ..!
ಮುಂಡಗೋಡ; ತಾಲೂಕಿನ ಹುನಗುಂದ ಗ್ರಾಮದಲ್ಲಿ ರಾಯಣ್ಣ ಬಾಯ್ಸ್ ವತಿಯಿಂದ ಸಂಭ್ರಮದ ಧ್ವಜಾರೋಹಣ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದ್ರು. ಹುನಗುಂದದ ಮುಖ್ಯ ಸರ್ಕಲ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ದೇ ಸರ್ಕಲ್ ನಲ್ಲಿ ಇರುವ ಧ್ವಜಸ್ತಂಭದ ಮೇಲೆ ಭಗವಾ ಧ್ವಜವನ್ನೂ ಹಾರಿಸಲಾಯಿತು. ಈ ವೇಳೆ ಗ್ರಾಮದ ರಾಯಣ್ಣ ಬಾಯ್ಸ್ ಸೇರಿದಂತೆ ಹಲವರು ಭಾಗಿಯಾಗಿದ್ರು.
ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು..!
ಹಾನಗಲ್: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲೆ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಚೇತನ್ ಈಳಗೇರ್ (32) ಹಾಗೂ ಸುರೇಶ್ ಚಕ್ರಸಾಲಿ (33) ಮೃತ ಬೈಕ್ ಸವಾರರು. ಮೃತರಿಬ್ಬರೂ ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ನಿವಾಸಿಗಳು ಎನ್ನಲಾಗಿದೆ. ಹಾನಗಲ್ ನಿಂದ ಸ್ವಗ್ರಾಮ ಬೆಳೆಗಾಲಪೇಟೆ ಗೆ ಹೋಗುವಾಗ ದುರಂತ ನಡೆದಿದೆ. ಅಪಘಾತ ತೀವ್ರತೆಗೆ ದೇಹಗಳು ಚಿದ್ರಗೊಂಡಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲೆ ಸಾವು ಕಂಡಿದ್ದಾರೆ....
ಭಲೇ ಬಹಾದ್ದೂರ್..! ಒಂದೇ ನಿಮಿಷದಲ್ಲಿ 100 ಅಡಿ ದೂರ ಟ್ರಾಕ್ಟರ್ ಎಳೆದ ಪೈಲ್ವಾನ್..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಇಂದು ನಾಗರ ಪಂಚಮಿ ಪ್ರಯುಕ್ತ ಖಾಲಿ ಟ್ರಾಕ್ಟರ್ ಇಂಜಿನ್ ಎಳೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಯಲ್ಲಪ್ಪ ಫಕ್ಕೀರಪ್ಪ ತುಳಜಾನವರ್ ಎಂಬುವ ಯುವಕ, ಕೇವಲ ಒಂದು ನಿಮಿಷದಲ್ಲಿ100 ಅಡಿ ದೂರ ಟ್ರಾಕ್ಟರ್ ಎಳೆದು ಸಾಹಸ ತೋರಿಸಿದ್ರು. ಹೀಗಾಗಿ, ಗ್ರಾಮಸ್ಥರ ಸಂಭ್ರಮಕ್ಕೆ ಕಾರಣರಾದ್ರು. ಜಯಶಾಲಿ ಯುವಕನಿಗೆ ಕೊಪ್ಪ ಗ್ರಾಮಸ್ಥರು ಸನ್ಮಾನಿಸಿ ಬಹುಮಾನ ನೀಡಿದ್ರು.
ಬೊಮ್ಮಾಯಿ ಸಂಪುಟದ ಮೊದಲ ವಿಕೆಟ್ ಪತನ..? ನೂತನ ಸಿಎಂ ಗೆ ಸಂಕಷ್ಟ ಶುರು..!
ವಿಜಯನಗರ: ತಾವು ಬಯಸದ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರೋ ಶಾಸಕ ಆನಂದ ಸಿಂಗ್ ಬುಧವಾರವೇ ತಮ್ಮ ಸಚಿವಸ್ಥಾನ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳಿವೆ. ಇನ್ನೊಂದು ಮೂಲಗಳ ಪ್ರಕಾರ ಅವರು ಈಗಾಗಲೆ ಮುಖ್ಯಮಂತ್ರಿಗಳಿಗೆ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ, ಜೀವಿಶಾಸ್ತ್ರ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರುವ ಆನಂದ ಸಿಂಗ್ ಈಗಾಗಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಖಾತೆ ಬದಲಾವಣೆ ಮಾಡಲು ವಿನಂತಿಸಿ, ಅದಕ್ಕೆ ಗಡುವನ್ನೂ ನೀಡಿದ್ದಾರೆ. ಗಡುವಿನೊಳಗೆ ಖಾತೆ ಬದಲಾಗದಿದ್ದರೆ...
ಇಬ್ಬರು ಅಂತರ್ ಜಿಲ್ಲಾ ಕಳ್ಳರ ಹೆಡೆಮುರಿ ಕಟ್ಟಿದ ಮುಂಡಗೋಡ ಪೊಲೀಸ್ರು..!
ಮುಂಡಗೋಡ: ಅವ್ರು ದೇವಸ್ಥಾನ, ಒಂಟಿ ಮನೆಗಳನ್ನು ಗುಡಿಸಿ ಗುಂಡಾಂತರ ಮಾಡೋ ಮಹಾನ್ ಖದೀಮರು, ಅವಕಾಶ ಸಿಕ್ರೆ ರಾಬರಿ ಮಾಡಿ ಬಾಚಿಕೊಂಡು ಹೋಗೋ ಖತರ್ನಾಕ ಕಿರಾತಕರು, ಆದ್ರೆ ಈಗ ಮುಂಡಗೋಡ ಪೊಲೀಸರ ಕೈಗೆ ತಗಲಾಕ್ಕೊಂಡು ಬಿಟ್ಟಿದ್ದಾರೆ. ತಾಲೂಕಿನ ಮಂದಿಗೆ ಒಂದಿಷ್ಟು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ದೇವರನ್ನೇ ಬಿಡದವರು..! ಯಸ್, ಇವ್ರು ಅಕ್ಷರಶಃ ಅಂತರ್ ಜಿಲ್ಲಾ ಪ್ರೊಫೆಷನಲ್ ಕಳ್ಳರು. ಮುಂಡಗೋಡ ತಾಲೂಕಿನಲ್ಲಿ ದೇವಸ್ಥಾನ, ಮನೆ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಸೇರಿ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದವರು. ಆದ್ರೆ ನಸೀಬು...
ಸವಣೂರಿನಲ್ಲಿ ನಿನ್ನೆ ನಡೆದ ಮರ್ಡರನ ಎದೆ ನಡುಗಿಸುವ ರಣಭೀಕರ ದೃಷ್ಯ..!
ಸವಣೂರು: ಇಲ್ಲಿನ ಕಾರಡಗಿ ಕ್ರಾಸ್ ಬಳಿ ನಿನ್ನೆ ರವಿವಾರ, ನಡು ರಸ್ತೆಯಲ್ಲೇ ನಡೆದಿದ್ದ ರೌಡಿಶೀಟರ್ ಬರ್ಬರ ಹತ್ಯೆಯ ಭಯಾನಕ ದೃಷ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಚ್ಚು ಹಾಗೂ ಕೊಡಲಿಯಿಂದ ಮನಸೊಯಿಚ್ಚೆ ಹೊಡೆದು ಕೊಂದು ಹಾಕಿದ್ದಾರೆ ಕೊಲೆ ಪಾತಕಿಗಳು. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಕಾರಡಗಿ ಕ್ರಾಸ್ ಬಳಿ ನಿನ್ನೆ ಸಂಜೆ ನಡೆದಿದ್ದ ಘಟನೆಯಲ್ಲಿ, ಅನ್ವರ ಶೇಕ್ ಅಲಿಯಾಸ್ ಹಜರತ್ ಅಲಿ ಮೂಮಿನ್ ಎಂಬುವ 40 ವರ್ಷ ವಯಸ್ಸಿನ ರೌಡಿಶೀಟರ್ ಬರ್ಬರ ಹತ್ಯೆಯಾಗಿದ್ದ. ಇಮ್ರಾನ್ ಚೌದರಿ (28) ಹಾಗೂ...
ಎಸ್.ಎಸ್.ಎಲ್.ಸಿ ಫಲಿತಾಂಶ: ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಫಸ್ಟ್..!
ಶಿರಸಿ: ಇಂದು ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ. ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಸಿದ್ದಾಪುರದ ಪ್ರಶಾಂತಿ ವಿದ್ಯಾನಿಕೇತನದಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಹೇಮಾ ಉಮೇಶ ಹೆಗಡೆ ಹಾಗೂ ಸಿದ್ದಾಪುರದ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಎಸ್.ಎನ್.ಸುನೈ ಮತ್ತು ರೇಷ್ಮಾ ಹೆಗಡೆ 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಕಳೆದ ವರ್ಷ ಒಬ್ಬ ವಿದ್ಯಾರ್ಥಿನಿ 625 ಅಂಕ ಗಳಿಸಿ ಸಾಧನೆ ಮಾಡಿದ್ದಳು. ಆದರೆ ಈ ಬಾರಿ...
ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ..!
ಶಿಗ್ಗಾವಿ : ಅನ್ನದಾನತನ ಮೇಲೆ ಕರಡಿಯೊಂದು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ದುಂಢಶಿ ಗ್ರಾಮದ ಬಳಿ ನಡೆದಿದೆ. ಮಹಾವೀರ ಧರ್ಮಪ್ಪ ದಿಪ್ಪಣ್ಣನವರ (55) ಎಂಬುವವರೇ ಕರಡಿ ದಾಳಿಗೆ ತುತ್ತಾದವರು. ಇಂದು ತನ್ನ ಜಮೀನಿನಲ್ಲಿ ಕೆಲಸಕ್ಕೆ ಹೋದ ವೇಳೆ ದಾಳಿ ನಡೆಸಿದ ಕರಡಿ, ರೈತನ ಮುಖ,ತಲೆ, ಮೈಮೇಲೆ ಮನಬಂದಂತೆ ಕಚ್ಚಿದೆ. ಪರಿಣಾಮ ರೈತ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಕೆಲಹೊತ್ತು ನರಳಾಡುತ್ತ ಬಿದ್ದಿದ್ದಾನೆ. ನಂತರ, ಸ್ಥಳೀಯರು ಅಂಬ್ಯುಲೆನ್ಸ್ ಗೆ ಕರೆಮಾಡಿ ಗಂಭೀರ...









