Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!

ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!

ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆ ಹತ್ತಿರ, ಇಂದು ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ 12 ಗಂಟೆ ನಂತರ ಪಟ್ಟಣದ ಒಳಗೆ ಅನಗತ್ಯವಾಗಿ ಪ್ರವೇಶಿಸುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನ ಸವಾರರನ್ನು ತಡೆದು ಕೋವಿಡ್ನಿ ನಿಯಮಗಳನ್ನು ತಿಳಿ ಹೇಳಿದರು. ಹಾಗೆ ಸಂಚಾರ ನಿಯಮ ಪಾಲಿಸಲು ಸಾರ್ವಜನಿಕರಿಗೆ ಪೊಲೀಸ್ ಪೇದೆಗಳು ಎಚ್ಚರಿಸಿದರು.

Post
12 ಗಂಟೆ ನಂತರವೂ ತೆರೆದಿದ್ದ ದಿನಸಿ ಅಂಗಡಿಗಳು: ಪೊಲೀಸರಿಂದ ಕ್ರಮ..!

12 ಗಂಟೆ ನಂತರವೂ ತೆರೆದಿದ್ದ ದಿನಸಿ ಅಂಗಡಿಗಳು: ಪೊಲೀಸರಿಂದ ಕ್ರಮ..!

ಮುಂಡಗೋಡ: ಪಟ್ಟಣದಲ್ಲಿ ಇಂದು ಲಾಕ್ ಡೌನ್ ಸಡಿಲಿಕೆಯ ವಾರದ ಕೊನೆಯ ದಿನ ಅಗತ್ಯ ವಸ್ತುಗಳ ಖರೀಧಿಯಲ್ಲಿ ತೊಡಗಿದ್ದ ಜನ್ರು 12 ಗಂಟೆಯ ನಂತರವೂ ಅನಗತ್ಯ ತಿರುಗಾಡುತ್ತಿದ್ದ ದೃಷ್ಯ ಕಂಡು ಬಂತು. ದಿನಸಿ ಅಂಗಡಿಗಳು ಕೂಡ 12 ಗಂಟೆ ನಂತರವೂ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಹೀಗಾಗಿ, ಮುಂಡಗೋಡ ಪ್ರೊಬೇಷನರಿ ಪಿಎಸ್ ಐ ಕುಮಾರಿ ಕಸ್ತೂರಿ, ಅಂಗಡಿಕಾರರಿಗೆ ಎಚ್ಚರಿಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರು. ಗುಂಪು ಗುಂಪಾಗಿ ನಿಂತಿದ್ದ ಜನರನ್ನು ಎಚ್ಚರಿಸಿ ಕಳಿಸಿದ್ರು.

Post
ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!

ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!

ಹುಬ್ಬಳ್ಳಿ: ನಗರದ ಗದಗ ರಿಂಗ್ ರೋಡಲ್ಲಿ ಎರಡು ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ, ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಹುಬ್ಬಳ್ಳಿ ಸೆಟ್ಲಮೆಂಟ್ ಗಂಗಾಧರನಗರದ ವಿಶಾಲ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದ್ದು, ಪಲ್ಸರ್ ಬೈಕಿನಲ್ಲಿ ಹೋಗಿ ವಾಹನ ಚಾಲಕರನ್ನು ಬೆದರಿಕೆ ಹಾಕಿ ಹಣ ದೋಚುತ್ತಿದ್ದರು ಎನ್ನಲಾಗಿದೆ. ರಿಂಗ್ ರೋಡಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ ಎಂಬುವವರ ಟಾಟಾ ಏಸ್ ವಾಹನಗಳನ್ನ ನಿಲ್ಲಿಸಿ,...

Post

ಕಾರವಾರ ಡಿಸಿ ಕಛೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಚಿವ ಹೆಬ್ಬಾರ್ ಸಭೆ..!

ಕಾರವಾರ: ಕಾರ್ಮಿಕ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಶಿವರಾಮ ಹೆಬ್ಬಾರ್ ಇಂದು ಕಾರವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಕೋವಿಡ್ – 19 ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಸದ್ಯದ ಸ್ಥಿತಿಗಳ ಕುರಿತು ಮಾಹಿತಿ ಪಡೆದು, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು,ಸೊಂಕಿತರಿಗೆ ಚಿಕಿತ್ಸೆ, ವೈದ್ಯಕೀಯ ಸೌಕರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕಿ...

Post

ಜಿಲ್ಲಾಸ್ಪತ್ರೆಗೆ 5 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಿದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ..!

ಕಾರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಉತ್ತರಕನ್ನಡ ಜಿಲ್ಲೆಗೆ ನೀಡಿರುವ ಸುಮಾರು 5 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಜಿಲ್ಲಾ ವೈದ್ಯಾಧಿಕಾರಿ ಮೂಲಕ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ , ಜಿಲ್ಲಾ ವೈದ್ಯಾಧಿಕಾರಿ, ಶರದ್ ನಾಯಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು‌.

Post

ಅಸಲಿ ನೋಟಿಗೆ ಕೋಟಾನೋಟು ಮಾರಾಟ ಜಾಲ: 6 ಜನ ದಂಧೆಕೋರರ ಬಂಧನ..!

ದಾಂಡೇಲಿ: ಅಸಲಿ ನೋಟು ಪಡೆದು ನಕಲಿ ನೋಟುಗಳನ್ನು ಮಾರಾಟ ಮಾಡುತ್ತಿದ್ದ ಖತರ್ನಾಕ ಕೋಟಾ ನೋಟು ಖದೀಮರ ಜಾಲವನ್ನು ದಾಂಡೇಲಿ ಪೊಲೀಸ್ರು ಹೆಡೆಮುರಿ ಕಟ್ಟಿದ್ದಾರೆ. ಅಸಲಿ ನೋಟು ಪಡೆದು , ನಕಲಿ ನೋಟು ನೀಡುತ್ತಿದ್ದ ವೇಳೆಯೇ ದಾಂಡೇಲಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.‌ ದಾಳಿ ವೇಳೆ ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಮಹಾರಾಷ್ಟ್ರದ...

Post

ನಂದಿಕಟ್ಟಾದಲ್ಲಿ ಕೊರೋನಾ ಸೋಂಕಿತರಿಗೆ ಔಷಧಿ ಕಿಟ್ ವಿತರಣೆ..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಕೊರೋನ ಸೋಂಕಿತರ ಮನೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೀಡಿದ ಕೋವಿಡ್ ಕೇರ್ ಮೆಡಿಷನ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ‌ತಾಲೂಕಾ ರೈತ ಮೂರ್ಚಾ ಅಧ್ಯಕ್ಷರಾದ ಕಲ್ಲನಗೌಡ ಬಸನ ಗೌಡ್ರ, ತಾಲೂಕ ಎಪಿಎಮ್ ಸಿ ಸದಸ್ಯರು ನಿಂಗಪ್ಪಾ ಕವಟೆ, ಪರಶುರಾಮ್ ಮೇಂತೆಕಾರ, ಸಹಕಾರ ಸಂಘದ ಸದಸ್ಯ ರಾಘವೇಂದ್ರ ಜೋಂಡಿಗನವರ, ತಾಲೂಕಾ ಯುವ ಮೂರ್ಚಾ ಕಾರ್ಯದರ್ಶಿ ಕೇದಾರಿ ಬಿ ಮುಗಳಿ ಹಾಗೂ ಕಮ್ಯೂನಿಟಿ ಹೆಲ್ತ್ ಆಪೀಸರ್ ತಾಯವ್ವಾ ಸರ್ದಾರ್, ಆಶಾ ಕಾರ್ಯಕರ್ತೆ ಸವಿತಾ...

Post
SSLC, PUC ಪರೀಕ್ಷೆ: ಶೀಘ್ರದಲ್ಲಿಯೇ ಸೂಕ್ತ ತೀರ್ಮಾನ: ಸುರೇಶ್ ಕುಮಾರ್

SSLC, PUC ಪರೀಕ್ಷೆ: ಶೀಘ್ರದಲ್ಲಿಯೇ ಸೂಕ್ತ ತೀರ್ಮಾನ: ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರದ್ದು ಪಡಿಸಿದ ಬೆನ್ನಲ್ಲೇ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಕೊಳ್ಳಲಾಗುವುದು ಅಂತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರಿಸ್ಥಿತಿ ಅವಲೋಕಿಸಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ರಾಜ್ಯ ಸರಕಾರ ಪರೀಕ್ಷೆ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿತ್ತು. ಆದ್ರೀಗ ಕೇಂದ್ರ ಸರಕಾರದ ನಿರ್ಧಾರ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಮೇಲೆ ನೇರ ಪರಿಣಾಮವನ್ನುಂಟು ಮಾಡಲಿದೆ. ಇನ್ನು...

Post
ಮುಂಡಗೋಡ: ತಾಲೂಕಿನಲ್ಲಿಂದು 58 ಪಾಸಿಟಿವ್ ದೃಢ, 87 ಗುಣಮುಖ, ಒಂದು ಸಾವು..!

ಮುಂಡಗೋಡ: ತಾಲೂಕಿನಲ್ಲಿಂದು 58 ಪಾಸಿಟಿವ್ ದೃಢ, 87 ಗುಣಮುಖ, ಒಂದು ಸಾವು..!

ಮುಂಡಗೋಡ-ತಾಲೂಕಿನಲ್ಲಿ ಇಂದು 58 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಓರ್ವ ಸಾವನ್ನಿಪ್ಪಿದ್ದಾನೆ. ಇನ್ನು 87 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ತಾಲೂಕಿನಲ್ಲಿ ಒಟ್ಟೂ 384 ಸಕ್ರೀಯ ಪ್ರಕರಣಗಳಿದ್ದು, 114 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 227 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 43 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ. ಇನ್ನು ತಾಲೂಕಿನ ಇಂದಿರಾನಗರದ 76 ವರ್ಷದ ವೃದ್ದ ಕೊರೋನಾಗೆ ಇಂದು ಬಲಿಯಾಗಿದ್ದು, ಇದುವರೆಗೂ ತಾಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 58 ಕ್ಕೆ...

Post

ಕಾರವಾರ: ಜಿಲ್ಲೆಯಲ್ಲಿ E- ಹಾಸ್ಪಿಟಲ್ ಅಡಿ ನೇಮಕಗೊಂಡಿದ್ದ, 25 ಹೊರಗುತ್ತಿಗೆ ಸಿಬ್ಬಂದಿಗಳ ದಿಢೀರ್ ವಜಾ..!

ಕಾರವಾರ: E-ಹಾಸ್ಪಿಟಲ್ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಯೋಜನೆಗೊಂಡಿದ್ದ ಸುಮಾರು 25 ಸಿಬ್ಬಂದಿಗಳನ್ನು ಇಂದಿನಿಂದ ಕೈ ಬಿಡುವಂತೆ ಸರ್ಕಾರ ಆದೇಶ ಹೊರಡಿಸಿದ್ದು, ಸಿಬ್ಬಂದಿಗಳು ದಿಢೀರ್ ವಜಾದಿಂದ ದಿಕ್ಕು ತೋಚದಂತಾಗಿದ್ದಾರೆ. ಸರ್ಕಾರ ಕಳೆದ ಒಂದು ತಿಂಗಳ ಹಿಂದೆ E-ಹಾಸ್ಪಿಟಲ್ ಅಡಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ನೇಮಕ ಮಾಡಿಕೊಂಡಿತ್ತು. ಆಯಾ ತಾಲೂಕಾ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ನಿರ್ದಿಷ್ಟ ಮೊತ್ತಕ್ಕೆ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳುವಂತೆ ಆದೇಶಿಸಿತ್ತು. ಈ ಆದೇಶದಂತೆ ಆಸ್ಪತ್ರೆಗಳು ಡಾಟಾ ಎಂಟ್ರಿ ಸಿಬ್ಬಂದಿಗಳ ನೇಮಕ...

error: Content is protected !!