Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಉತ್ತರ ಕನ್ನಡದಲ್ಲಿ ಮೇ.5 ರಿಂದ ಪ.ಜಾತಿ ಸಮುದಾಯದ ಸಮೀಕ್ಷೆ : ಜಿಲ್ಲಾಧಿಕಾರಿ

ಉತ್ತರ ಕನ್ನಡದಲ್ಲಿ ಮೇ.5 ರಿಂದ ಪ.ಜಾತಿ ಸಮುದಾಯದ ಸಮೀಕ್ಷೆ : ಜಿಲ್ಲಾಧಿಕಾರಿ

ಕಾರವಾರ: ನ್ಯಾಯ ಮೂರ್ತಿ ಹೆಚ್.ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ- 2025 ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಮೇ.5 ರಿಂದ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರು, ಪ್ರತಿ 10 ಗಣತಿದಾರರಿಗೆ ಒರ್ವ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಮೇ.5 ರಿಂದ 17 ವರೆಗೆ ಗಣತಿದಾರರು ಮನೆ ಮನೆ...

Post
ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು..!

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು..!

ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರು ಸೇರಿಕೊಂಡು ಸುತ್ತಾಡಲು ಹೋದಾಗ ಕೃಷಿ ಹೊಂಡದಲ್ಲಿ ಮೂವರು ಬಾಲಕರು ಬಿದ್ದಿದ್ದಾರೆ‌. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ(13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13)ಮೃತಪಟ್ಟ ಬಾಲಕರಾಗಿದ್ದಾರೆ. ಇನ್ನು ತಿರುಗಾಡಲು ಹೊರಗೆ ಹೋದ ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆ ವೇಳೆ, ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರೋ...

Post
ಮುಂಡಗೋಡ ತಾಲೂಕಿಗೆ 65.3% ರಷ್ಟು SSLC ಫಲಿತಾಂಶ, ಮಳಗಿ ಪ್ರೌಢಶಾಲೆಯ  ಭಾಗ್ಯಶ್ರೀ ಗೆ ಅತಿ ಹೆಚ್ಚು ಅಂಕ..!

ಮುಂಡಗೋಡ ತಾಲೂಕಿಗೆ 65.3% ರಷ್ಟು SSLC ಫಲಿತಾಂಶ, ಮಳಗಿ ಪ್ರೌಢಶಾಲೆಯ ಭಾಗ್ಯಶ್ರೀ ಗೆ ಅತಿ ಹೆಚ್ಚು ಅಂಕ..!

ರಾಜ್ಯದಲ್ಲಿ SSLC ಫಲಿತಾಂಶ ಹೊರಬಿದ್ದಿದೆ. ಅದ್ರಂತೆ, ಮುಂಡಗೋಡ ತಾಲೂಕಿನಲ್ಲೂ SSLC ಫಲಿತಾಂಶ ಘೋಷಣೆ ಆಗಿದ್ದು, 65.3 ರಷ್ಟು ಶೇಕಡವಾರು ಫಲಿತಾಂಶ ತಾಲೂಕಿನ ಪಾಲಾಗಿದೆ. ಅದ್ರಲ್ಲಿ ಅತಿಹೆಚ್ಚು ಅಂಕ ಪಡೆದ ತಾಲೂಕಿನ ಮೂವರು ವಿದ್ಯಾರ್ಥಿಗಳ ಹೆಸರು ಇಲ್ಲಿದೆ‌. ತಾಲೂಕಿನ ಮಳಗಿ ಕೆಪಿಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾಗ್ಯಶ್ರೀ ಸುರೇಶ್ ನಾಯ್ಕ್ 625 ಕ್ಕೆ 614 ಅಂಕಗಳನ್ನು ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಇನ್ನು ಮುಂಡಗೋಡಿನ ಮೌಲಾನಾ ಆಜಾದ್ ಪ್ರೌಢಶಾಲೆಯ ವಿದ್ಯಾರ್ಥಿನಿ, ಪರ್ವೀನ್ ಕೌಸರ್ ಅಬ್ದುಲ್ ಕರೀಂ ನರೇಗಲ್,...

Post
ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಲ್ಲಿ ಕೆಲಸದ ಸಮಯದಲ್ಲಿ ಬೃಹತ್ ಗಾತ್ರದ ಪ್ಯಾನಲ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು

ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಲ್ಲಿ ಕೆಲಸದ ಸಮಯದಲ್ಲಿ ಬೃಹತ್ ಗಾತ್ರದ ಪ್ಯಾನಲ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು

ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಪೇಪರ ಮಿಲ್ ನ ಬೃಹತ್ ಗಾತ್ರದ ಯಂತ್ರದ ಪ್ಯಾನಲ್ ಬಿದ್ದು ಗುತ್ತಿಗೆ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಹಳೇ ದಾಂಡೇಲಿ ನಿವಾಸಿ ಅಬ್ದುಲ್ ಸಲೀಂ ಖಲಾಸಿ (55) ಸಾವನ್ನಪಿದ್ದ ವ್ಯಕ್ತಿ. ಮೃತ ವ್ಯಕ್ತಿಯನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು ನಗರದ ಪೊಲೀಸ ಠಾಣೆಯ ಪಿಎಸ್‌ಐ ಅಮೀನಸಾಬ ಅತ್ತಾರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗುತ್ತಿಗೆದಾರ ಸಾಜಿದ್ ಪಠಾಣ್ ಹಾಗೂ ಮೇಲ್ವಿಚಾರಕ ಅಬ್ದುಲ್‌ ಖಾದರ ಪಠಾಣ ಇವರ...

Post
ಮುಂಡಗೋಡ ತಾಲೂಕಿನ 79 ಶಾಲೆಗಳ ಸ್ಥಿತಿ ಚಿಂತಾಜನಕ, ಮಕ್ಕಳನ್ನು ಶಾಲೆಗೆ ಕಳಿಸೋಕೆ ಪಾಲಕರಿಗೆ ಭಾರೀ ಆತಂಕ..!

ಮುಂಡಗೋಡ ತಾಲೂಕಿನ 79 ಶಾಲೆಗಳ ಸ್ಥಿತಿ ಚಿಂತಾಜನಕ, ಮಕ್ಕಳನ್ನು ಶಾಲೆಗೆ ಕಳಿಸೋಕೆ ಪಾಲಕರಿಗೆ ಭಾರೀ ಆತಂಕ..!

ಮುಂಡಗೋಡ ತಾಲೂಕಿನಲ್ಲಿ ಅದ್ಯಾಕೋ ಏನೋ ಎಲ್ಲವೂ ಸರಿಯಿಲ್ಲ. ಇಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯೋ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷವೋ ಗೊತ್ತಿಲ್ಲ. ಇಲ್ಲಿ ಏನಂದ್ರೆ ಏನೂ ನಡೆಯುತ್ತಿಲ್ಲ ಅನ್ನೋ ಮಾತು ಕೇಳಿ ಬರ್ತಿವೆ. ಬೇರೆ ಏನಾದ್ರೂ ಸಮಸ್ಯೆಗಳು ಒತ್ತಟ್ಟಿಗಿರಲಿ, ಆದ್ರೆ, ವಿದ್ಯಾರ್ಥಿಗಳಿಗೆ ನಿರಾತಂಕವಾಗಿ ಪಾಠ ಕೇಳಲು ತಾಲೂಕಿನಲ್ಲಿ ಬರೋಬ್ಬರಿ 79 ಶಾಲೆಗಳು ಸಾಧ್ಯವಾಗದ ಸ್ಥಿತಿಯಲ್ಲಿದೆ. ಹೌದು, ಮುಂಡಗೋಡ ತಾಲೂಕಿನ ಒಟ್ಟೂ 169 ಶಾಲೆಗಳಲ್ಲಿ 79 ಶಾಲೆಗಳಿಗೆ ಪ್ರಕೃತಿ ವಿಕೋಪದಿಂದ ಹಾನಿಯಾಗಿದೆ. ಅನುದಾನ ಕೊರತೆಯಿಂದಾಗಿ ಶಾಲೆಗಳು ದುರಸ್ಥಿಯಾಗದೆ ಹಾಗೆಯೇ ಉಳಿದುಕೊಂಡಿರುವುದು ಪಾಲಕರಲ್ಲಿ ಆತಂಕ...

Post
ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!

ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!

ಮುಂಡಗೋಡ: ತಾಲೂಕಿನ ಮೈನಳ್ಳಿಯ ಗ್ರಾಮ ದೇವಿ ಜಾತ್ರೆಗೆಂದು ಸಂಬಂಧಿಕರ‌ ಮನೆಗೆ ಬಂದಿದ್ದ ಐವರಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ. ನಾಗರತ್ನ ಜೋಲೆ, ಲಕ್ಷ್ಮೀ ಕೊಕರೆ,  ಗಂಗಾರಾಮ ಮುಕ್ಕೊ ಕೊಕರೆ, ಶಾಂತಾಬಾಯಿ ಸಳಕೆ ಹಾಗೂ ಭರತ್ ಸಳಕೆ ಎಂಬಾತರೇ ಸಿಡಿಲಿನ ಶಾಖದಿಂದ ಗಾಯಗೊಂಡಿದ್ದಾರೆ. ತಾಲೂಕಿನಾದ್ಯಂತ ಶನಿವಾರ ಮತ್ತು ರವಿವಾರ ರಾತ್ರಿ ಸಿಡಿಲು ಸಹಿತ  ರಭಸದ ಗಾಳಿ ಮಳೆ ಸುರಿದಿತ್ತು. ಬಾಳೆಹಳ್ಳಿ ಹಾಗೂ ಕಳಕೀಕೆರಿ ಗ್ರಾಮದವರು ಮೈನಳ್ಳಿ ಗ್ರಾಮದೇವಿ ಜಾತ್ರೆಗೆ ಬಂದು ದೇವಿ ದರ್ಶನ ಪಡೆದು ನಂತರ ಸಿಡಿಲು...

Post
ನಂದಿಪುರದಲ್ಲಿ ಸಿಡಿಲಿನಾರ್ಭಟ, ಮನೆಯ ವಿದ್ಯುತ್ ವೈಯರ್ ಗಳೇ ಭಸ್ಮ, ಟಿವಿ, ಪ್ರಿಡ್ಜು ಹರೋಹರ..! ಮನೆ ಮಂದಿಗೂ ಗಾಯ..!

ನಂದಿಪುರದಲ್ಲಿ ಸಿಡಿಲಿನಾರ್ಭಟ, ಮನೆಯ ವಿದ್ಯುತ್ ವೈಯರ್ ಗಳೇ ಭಸ್ಮ, ಟಿವಿ, ಪ್ರಿಡ್ಜು ಹರೋಹರ..! ಮನೆ ಮಂದಿಗೂ ಗಾಯ..!

ಮುಂಡಗೋಡ ತಾಲೂಕಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆ, ಗಾಳಿ ಸಿಡಿಲಿನಾರ್ಭಟಕ್ಕೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ.. ಮುಂಡಗೋಡ ಪಟ್ಟಣದಲ್ಲೇ ಎರಡು ಕಡೆ ತೆಂಗಿನ ಮರಕ್ಕೆ ಸಿಡಿಲು ಬಡಿದು ಮರಗಳು ಹೊತ್ತಿ ಉರಿದಿದ್ದರೆ, ತಾಲೂಕಿನ ನಂದಿಪುರ ಗ್ರಾಮದಲ್ಲಿ ಹಲವು ಮನೆಗಳಿಗೆ ಸಿಡಿಲಿನ ಸೆಳೆತ ಭಾರೀ ಹಾನಿ ಮಾಡಿದೆ.  ನಂದಿಪುರ ಗ್ರಾಮದ ದಸ್ತಗಿರ ಮಹ್ಮದ್ ಹುಸೇನ್ ಮರಗಡಿ ಎಂಬುವವರ ಮನೆ ಮುಂದಿನ ಗಿಡಕ್ಕೆ ಸಿಡಿಲು ಹೊಡೆದ ಪರಿಣಾಮ, ಮನೆಯ ವಿದ್ಯುತ್ ವೈಯರಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಟಿವಿ, ಪ್ರಿಡ್ಜು...

Post
ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ಸಮುದ್ರ ಪಾಲು, ಮತ್ತಿಬ್ಬರು ಬಚಾವ್..!

ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ಸಮುದ್ರ ಪಾಲು, ಮತ್ತಿಬ್ಬರು ಬಚಾವ್..!

ಗೋಕರ್ಣ: ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ಯುವತಿಯರು ಜಟಾಯು ತೀರ್ಥದ ಹತ್ತಿರ ಕಾಲು ಜಾರಿ ಸಮುದ್ರಕ್ಕೆ ಬಿದ್ದು ದಾರುಣ ಸಾವು ಕಂಡಿದ್ದಾರೆ. ತಮಿಳನಾಡು ತಿರುಚಿಯ ವೈದ್ಯಕೀಯ ಮಹಾವಿದ್ಯಾಲಯದ ಕೊನೆಯ ವರ್ಷದ ಪರೀಕ್ಷೆ ಮುಗಿಸಿ, ಚಾರಣಕ್ಕೆ ಬಂದಿದ್ದ ಒಟ್ಟು 23ಜನರ ತಂಡದಲ್ಲಿದ್ದ, ಸಿಂದುಜಾ ಮತ್ತು ಕನ್ನಿಮೊಳಿ ಎಂಬ ಹೆಸರಿನ ಇಬ್ಬರು ಯುವತಿಯರು ಸಮುದ್ರದ ಪಾಲಾಗಿದ್ದಾರೆ. ನಾಲ್ವರು ಯುವತಿಯರು ಸಮುದ್ರ ಅಂಚಿನ ಬಂಡೆ ಮೇಲೆ ಕುಳಿತಿ ಸಮುದ್ರದ ಸುಂದರತೆಯನ್ನು ಕಣ್ತುಂಬಿಕೊಳ್ತಿದ್ದರು. ಇದೇ ವೇಳೆ ರಭಸದ ಅಲೆ ಬಡಿದು ಇಬ್ಬರು ಸಮುದ್ರಕ್ಕೆ ಬಿದ್ದಿದ್ದಾರಡ....

Post
ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!

ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!

ಮುಂಡಗೋಡ ಪಟ್ಟಣದಲ್ಲಿ ಗುರುವಾರ ಬಾರೀ ಚರ್ಚೆ ಹಾಗೂ ಹಿಂದು ಕಾರ್ಯಕರ್ತರ ಪ್ರತಿರೋಧಕ್ಕೆ ಕಾರಣವಾಗಿದ್ದ ಗೋಹತ್ಯೆ ಕೇಸಿನಲ್ಲಿ ಮುಂಡಗೋಡ ಪೊಲೀಸ್ರು ಕೆಚ್ಚೆದೆಯ ಕ್ರಮ ಕೈಗೊಂಡಿದ್ದಾರೆ. ಜಾನುವಾರನ್ನು ಅಕ್ರಮವಾಗಿ ವಧೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇಬ್ಬರಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ದೇಶಪಾಂಡೆ ನಗರದ ಜಹೀರ ಅಹ್ಮದ್ ಮೈಮದ್ದಿನ್ ಬೇಪಾರಿ(32) ಎಂಬುವವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಗುರುವಾರ ಬೆಳಗ್ಗೆ 09-15 ಗಂಟೆಯ ಸುಮಾರಿಗೆ ಮುಂಡಗೋಡ ಪಟ್ಟಣದ ಯಲ್ಲಾಪೂರ ರಸ್ತೆಯಲ್ಲಿರುವ ರಜಾಕಿಯ...

Post
ಮುಂಡಗೋಡ ಕರಗಿನಕೊಪ್ಪ ಬಳಿ ಬೈಕ್ ಅಪಘಾತ, ಮೂಡಸಾಲಿಯ ವ್ಯಕ್ತಿಗೆ ಗಂಭೀರ ಗಾಯ..!

ಮುಂಡಗೋಡ ಕರಗಿನಕೊಪ್ಪ ಬಳಿ ಬೈಕ್ ಅಪಘಾತ, ಮೂಡಸಾಲಿಯ ವ್ಯಕ್ತಿಗೆ ಗಂಭೀರ ಗಾಯ..!

ಮುಂಡಗೋಡ ಸಮೀಪದ ಕರಗಿನಕೊಪ್ಪ ಬಳಿ ಬೈಕ್ ಅಪಘಾತವಾಗಿದೆ‌. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರಗೆ ರವಾನಿಸಲಾಗಿದೆ. ತಾಲೂಕಿನ ಮೂಡಸಾಲಿ ಗ್ರಾಮದ ಜಗದೀಶ ಪಕ್ಕೀರಪ್ಪ ಪಾಟೀಲ್ (52) ಎಂಬುವ ಬೈಕ್ ಸವಾರನೇ ಗಂಭೀರ ಗಾಯಗೊಂಡಿದ್ದಾನೆ. ಈತ ಮುಂಡಗೋಡಿನಿಂದ ಮೂಡಸಾಲಿಗೆ ಮತ್ತೋರ್ವ ವ್ಯಕ್ತಿ ಕೇದಾರಲಿಂಗ್ ಹನ್ಮಂತಪ್ಪ ಬೆಡಸಗಾವ್ ಎಂಬುವವರ ಜೊತೆ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹೀಗಾಗಿ, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯವಾಗಿದೆ. ಇದೇ ವೇಳೆ ವಕೀಲ ಗುಡ್ಡಪ್ಪ ಕಾತೂರ ಅದೇ ಮಾರ್ಗದಲ್ಲಿ ಬರುತ್ತಿದ್ದಾಗ ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...

error: Content is protected !!