Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!

ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಜಿಲ್ಲೆಗೆ ನೀಡಿದ ನಿಗಧಿತ ಮಾನವ ದಿನಗಳನ್ನು ಸೃಜಿಸುವ ಕಾರ್ಯದಲ್ಲಿ ಶೇ.100 ರಷ್ಟು ಸಾಧನೆ ಮಾಡಿದ್ದು, 2023-24 ರ ಅವಧಿಯಲ್ಲೂ ಸಹ ಶೇ.100 ಸಾಧನೆ ಮಾಡಿದ್ದು, ಸತತ ಎರಡನೇ ವರ್ಷವೂ ಗುರಿ ಸಾಧಿಸುವ ಮೂಲಕ ವಿಶೇಷ ಸಾಧನೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ...

Post
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ

ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ

 ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ‌. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ...

Post
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!

ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!

 ಮುಂಡಗೋಡ ತಾಲೂಕಿನ ಕೆಲವು ಕಡೆ ಸಂಜೆ ಭಾರಿ ಮಳೆ ಗಾಳಿಗೆ ಅವಾಂತರಗಳು ಸೃಷ್ಠಿಯಾಗಿವೆ. ಭಾರೀ ಮಳೆ ಗಾಳಿಗೆ ಶಿರಸಿ ರಸ್ತೆಯ ಸಾಲಗಾಂವ್ ಸಮೀಪ ಬೃಹತ್ ಮಾವಿನ ಮರ ರಸ್ತೆ ಮೇಲೆ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕಳೆದ ಒಂದು ಗಂಟೆಯಿಂದ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಮಳೆ ಗಾಳಿಗೆ ರಸ್ತೆ ಮೇಲೆಯೇ ಧರೆಗುರುಳಿರೋ ಮರದ ತೆರವು ಮಾಡಬೇಕಿದೆ. ರಸ್ತೆ ಸಂಚಾರ ಸುಗಮಗೊಳಿಸವೇಕಿದೆ ಅಂತಾ ವಾಹನ ಸವಾರರು ಪರದಾಡುತ್ತಿದ್ದಾರೆ.

Post
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!

ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!

ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೊಂದು ವಿದ್ಯುತ್ ದುರಂತ ಸಂಭವಿಸಿದೆ. ಅನಧೀಕೃತವಾಗಿ ವಿದ್ಯುತ್ ಕಂಬಕ್ಕೆ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ...

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ‌. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32)...

Post
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್

ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್

ಕಾರವಾರ: ಮಾದಕ ವಸ್ತುಗಳ ಬಳಕೆಯಿಂದ ಅದನ್ನು ಸೇವನೆ ಮಾಡುವ ವ್ಯಕ್ತಿಯ ಕುಟುಂಬದ ಮೇಲೆ ಮಾತ್ರವಲ್ಲದೇ ಇಡೀ ಸಮಾಜದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಡಿ.ಎಸ್.ವಿಜಯ ಕುಮಾರ್ ತೀವ್ರ ಕಳವಳ ವ್ಯಕ್ತಪಡಿಸಿದರು. ಅವರು ಭಾನುವಾರ ಕ್ರಿಮ್ಸ್ ನ ಕುವೆಂಪು ಕಲಾಭವನದಲ್ಲಿ , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ಉತ್ತರ ಕನ್ನಡ...

Post
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!

ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!

 ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಶ್ರೀರಾಮ‌ಸೇನೆಯ ಕಾರ್ಯಕರ್ತರು, ರಾಮನವಮಿ ಅಂಗವಾಗಿ ಸಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಹುಬ್ಬಳ್ಳಿಯ ಪ್ರತಿಷ್ಠಿತ ಸೆಕ್ಯೂರ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣಾ ಶಿಬಿರ ಏರ್ಪಡಿಸಿದ್ದರು. ಶ್ರೀರಾಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ಸನ್ಮಾನ ಮಾಡಲಾಯಿತು. ನಂತರ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಉಚಿತ ಆರೋಗ್ಯ, ಹೃದಯ ತಪಾಸಣೆ ನಡೆಸಲಾಯಿತು. ನೂರಾರು ಜನರ ಆರೋಗ್ಯ ತಪಾಸಣೆ ಮಾಡಿಸಿಕೊಂಡರು‌. ಈ ವೇಳೆ ನಂದಿಕಟ್ಟಾ ಗ್ರಾಮ...

Post
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!

ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!

ಮುಂಡಗೋಡ: ಪಟ್ಟಣದ ಗಾಂಧಿನಗರ ಸ್ಲಂ ಬೋರ್ಡ್ ಘೋಷಣೆಗೆ ಸಂಬಂಧಿಸಿದಂತೆ ಶನಿವಾರ ಜಂಟಿ ತನಿಖಾ ತಂಡಕ್ಕೆ ಗಾಂಧಿನಗರದ ನಿವಾಸಿಗಳು ಪರ-ವಿರೋಧ ಪ್ರತ್ಯೇಕ ವಾಗಿ ದಾಖಲೆ ಸಮೇತ ಮನವಿ ಸಲ್ಲಿಸಿದ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರದ ಇಪ್ಪತೈದು ಎಕರೆ ಪ್ರದೇಶದಲ್ಲಿ ಎಲ್ಲಾ ಮೂಲಸೌಕರ್ಯ ಇದ್ದರು ಸುಳ್ಳು ದಾಖಲೆ ನೀಡಿ ಸ್ಲಂ ಬೋರ್ಡ್ ಘೋಷಣೆ ಮಾಡಲಾಗಿದೆ. ಎಂದು ವೇಕಟೇಶ ಶಿರಾಲಿ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು ಈ ದೂರಿನ ಅನ್ವಯ ಜಿಲ್ಲಾ ಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ಸತ್ಯ ಶೋಧನಾ ವರದಿ ನೀಡುವಂತೆ...

Post
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!

ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!

ಮುಂಡಗೋಡ: ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಹೆಚ್ಚು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಅರಣ್ಯ ಬೆಳಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಖಾಂದೂ ಶನಿವಾರ ಹೇಳಿದ್ರು.. ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಕೂಲತೆಯಿದೆ ಆದರೆ ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳುತ್ತಿಲ್ಲ ಮುಂದಿನ...

Post
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!

ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!

ಮುಂಡಗೋಡ ಪಟ್ಟಣದ ಸರ್ವೆ ನಂಬರ್ 186 ರ ಗಾಂಧಿ ನಗರ ಪ್ರದೇಶವನ್ನು ಸುಳ್ಳು ಹಾಗೂ ತಪ್ಪು ಮಾಹಿತಿ ನೀಡಿ, ಸ್ಲಂ ಅಂತಾ ಘೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಡಗೋಡ ಪಟ್ಟಣ ಪಂಚಾಯತ್ ಹಾಗೂ ಸ್ಲಂ ಬೋರ್ಡ್ ಬೆಳಗಾವಿ ವಿರುದ್ಧ ಗಾಂಧಿನಗರದ ನಿವಾಸಿಗಳು ಇಂದು ಶನಿವಾರ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗಾಂಧಿನಗರವನ್ನು ಸ್ಲಂ ಬೋರ್ಡ್ ಅಂತಾ ಮಾಡಿರುವುದನ್ನು ಕೂಡಲೇ ತಿದ್ದುಪಡಿ ಮಾಡಬೇಕು ಅಂತ ಆಗ್ರಹಿಸಿ, ಗಾಂಧಿನಗರ ನಿವಾಸಿಗಳು, ಬೆಳಿಗ್ಗೆ 11 ಗಂಟೆಗೆ ಗಾಂಧಿನಗರದಿಂದ ಪಟ್ಟಣ ಪಂಚಾಯತಿವರೆಗೂ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ...

error: Content is protected !!