ಮುಂಡಗೋಡ ಪಟ್ಟಣದ ಸರ್ವೆ ನಂಬರ್ 186 ರ ಗಾಂಧಿ ನಗರ ಪ್ರದೇಶವನ್ನು ಸುಳ್ಳು ಹಾಗೂ ತಪ್ಪು ಮಾಹಿತಿ ನೀಡಿ, ಸ್ಲಂ ಅಂತಾ ಘೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಡಗೋಡ ಪಟ್ಟಣ ಪಂಚಾಯತ್ ಹಾಗೂ ಸ್ಲಂ ಬೋರ್ಡ್ ಬೆಳಗಾವಿ ವಿರುದ್ಧ ಗಾಂಧಿನಗರದ ನಿವಾಸಿಗಳು ಇಂದು ಶನಿವಾರ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗಾಂಧಿನಗರವನ್ನು ಸ್ಲಂ ಬೋರ್ಡ್ ಅಂತಾ ಮಾಡಿರುವುದನ್ನು ಕೂಡಲೇ ತಿದ್ದುಪಡಿ ಮಾಡಬೇಕು ಅಂತ ಆಗ್ರಹಿಸಿ, ಗಾಂಧಿನಗರ ನಿವಾಸಿಗಳು, ಬೆಳಿಗ್ಗೆ 11 ಗಂಟೆಗೆ ಗಾಂಧಿನಗರದಿಂದ ಪಟ್ಟಣ ಪಂಚಾಯತಿವರೆಗೂ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Author: ಸಂತೋಷ ಶೆಟ್ಟೆಪ್ಪನವರ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಶುಂಠಿ ಹೊಲದಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕನೋರ್ವ ವಿದ್ಯುತ್ ಗೆ ಬಲಿಯಾಗಿ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ, ಮುಂಡಗೋಡ ತಾಲೂಕಿನ ಓಣಿಕೇರಿ ಗ್ರಾಮದಲ್ಲಿ ನಡೆದಿದೆ. ಅಂದಹಾಗೆ, ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದ ಬಸವರಾಜ್ ಚಂದ್ರಪ್ಪ ಹರಿಜನ್ (22) ವಿದ್ಯುತ್ ದುರಂತದಲ್ಲಿ ಜೀವ ಕಳೆದುಕೊಂಡ ನತದೃಷ್ಟನಾಗಿದ್ದಾನೆ. ಹರೀಶ್ ರಾಮಣ್ಣ ಹರಿಜನ್ ಗಾಯಗೊಂಡವನಾಗಿದ್ದಾನೆ ಪಾಳಾ ಗ್ರಾಮದ ಮೂಕಪ್ಪ ಹರಿಜನ್ ಎಂಬಾತ, ಓಣಿಕೇರಿ ಗ್ರಾಮದಲ್ಲಿ ಬೇರೋಬ್ಬರ ಜಮೀನನ್ನು ಲಾವಣಿ ಮೇಲೆ ಪಡೆದು ಶುಂಠಿ ಕೃಷಿ ಮಾಡುತ್ತಿದ್ದಾರೆ. ಹೀಗಾಗಿ, ಇಂದು ಶುಂಠಿ...
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು, ರಾಮನವಮಿ ಅಂಗವಾಗಿ ಸಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹುಬ್ಬಳ್ಳಿಯ ಪ್ರತಿಷ್ಠಿತ ಸೆಕ್ಯೂರ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣಾ ಶಿಬಿರ ಏರ್ಪಡಿಸಿದ್ದಾರೆ. ನಾಳೆ ರವಿವಾರ ದಿನಾಂಕ 06.04. 2025 ರಂದು ನಂದಿಕಟ್ಟಾ ಗ್ರಾಮದಲ್ಲಿ ನಡೆಯುವ ಶಿಬಿರದಲ್ಲಿ,ನಾಡಿ ಮಿಡಿತ(ಪಲ್ಸ್), ರಕ್ತದೊತ್ತಡ(ಬಿಪಿ), ಸಕ್ಕರೆ ಖಾಯಿಲೆ(ಶುಗರ್), ಇಸಿಜಿ(ECG) ಇಖೋ(ECHO) ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಬಹುದಾಗಿದೆ. ಹೀಗಾಗಿ, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಲು ನಂದಿಕಟ್ಟಾ, ಉಗ್ಗಿನಕೇರಿ, ಕೆಂದಲಗೇರಿ...
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಪಟ್ಟಣದ ಎಪಿಎಂಸಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಎಳೆದು ತಂದಿದ್ದಾರೆ. ದಾಳಿಯ ವೇಳೆ ಇಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಉಳಿದ ಎಂಟು ಜನರು ಪರಾರಿಯಾಗಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ದಾಳಿ ಮಾಡಿದ ಪೊಲೀಸರಿಗೆ, ಮುಂಡಗೋಡಿನ ರಾಘವೇಂದ್ರ ರಾಮಚಂದ್ರ ರಾಯ್ಕರ್, ನಿಸ್ಸಾರಾಹ್ಮದ್ ಮದರಸಾಬ ದರ್ಗಾವಾಲೆ ಸಿಕ್ಕಿಬಿದ್ದಿದ್ದಾರೆ. ಉಳಿದಂತೆ ಲಾಲಸಾಬ್ ಇಟ್ಟಂಗಿ, ನಾಶೀರ ಬಂಕಾಪೂರ, ರಫೀಕ್ ಭಟ್ಕಳ್, ಅಲ್ಲಾಭಕ್ಷ ಹಿರೇಹಳ್ಳಿ, ಅಕ್ಬರಶಾ ಮೀರಾಶಿ, ಮೌಲಾಲಿ ಜಂಡೆವಾಲೆ, ಸೈಯದ್ ಹುಸೇನ್ ಯಳ್ಳೂರ್,...
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಾರವಾರ: ಪ್ರಸ್ತುತ ಬೇಸಿಗೆಗಾಲವಾದ್ದರಿಂದ ಜಿಲ್ಲೆಯ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾಗದoತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಅಂಗನವಾಡಿ,...
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಮುಂಡಗೋಡ; ತಾಲ್ಲೂಕಿನ ಕಲಕೇರಿ ಗ್ರಾಮದ ಶಿವಾಜಿ ವೃತ್ತದಲ್ಲಿ ರವಿವಾರದಂದು ಗೋದುಳಿ ಮುಹೂರ್ತದಲ್ಲಿ ಕಲಕೇರಿ ಗ್ರಾಮದ ಯುವ ಮರಾಠ ಪರಿಷತ್, ಮುಂದಾಳತ್ವದಲ್ಲಿ, ತಾಲೂಕಿನ ಮರಾಠ ಸಮಾಜದ ಮುಖಂಡರ ಹಾಗೂ ಕಲಕೇರಿ, ಹೊನ್ನಿಕೊಪ್ಪ, ಅಂದಲಗಿ. ಗ್ರಾಮದ ಎಲ್ಲ ಸಮಾಜದ ಗುರು ಹಿರಿಯರ ಉಪಸ್ಥಿತಿಯಲ್ಲಿ ಹಿಂದೂ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಅಶ್ವಾರೂಢ ಮೂರ್ತಿಯನ್ನು ಲೋಕಾರ್ಪಣೆ ಮಾಡಲಾಯಿತು. ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಕಾರ್ಯಕ್ರಮದ ನಿಮಿತ್ತ ನಡೆದ ಸಭಾ ಕಾರ್ಯಕ್ರಮವನ್ನು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ್,...
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಏಪ್ರಿಲ್ 1 ರಿಂದ ಜೂನ್ 30ರ ವರೆಗೆ ಸ್ತ್ರೀ ಚೇತನ ಎಂಬ ವಿಶೇಷ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ . ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣ ಕನಿಷ್ಠ 55 ಪ್ರತಿಶತದಷ್ಟು ಇರಬೇಕೆಂಬ ನಿಯಮವಿದೆ. ಆದರೆ ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ 2024-25ನೇ ಸಾಲಿನಲ್ಲಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣ 52.41 ಪ್ರತಿಶತವಿದೆ....
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ; ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆ ಯಾಕಾಗಿದೆ ಗೊತ್ತಿಲ್ಲ. ಆದರೆ ಇದರ ಪರಿಣಾಮ ಮಾತ್ರ ಇನ್ನು ಎರಡು ಮೂರು ದಿನದಲ್ಲಿ ಗೊತ್ತಾಗಲಿದೆ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ತಾಲೂಕಿನ ಬಾಚಣಕಿ ಗ್ರಾಮದಲ್ಲಿ ಮನುವಿಕಾಸ ಸಂಸ್ಥೆಯ ವತಿಯಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ. ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವ್ರು ಪ್ರತಿಕ್ರಿಯಿಸಿದರು. ಬಸವನಗೌಡ ಪಾಟೀಲ್ ಉಚ್ಚಾಟನೆ ಅದು ಪಕ್ಷದ ನಿರ್ಣಯ. ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದರು. ಇನ್ನು ಬಿಜೆಪಿ...
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮುಂಡಗೋಡ: ಶಾಸಕ ಶಿವರಾಮ ಹೆಬ್ಬಾರ್ ಇಂದು ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ರು. ಬಾಚಣಕಿ ಗ್ರಾಮದಲ್ಲಿ ಮನುವಿಕಾಸ ಸಂಸ್ಥೆಯ ವತಿಯಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪೂಜೆ ಸಲ್ಲಿಸುವ ಮೂಲಕ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ನಂತರ ಶಾಸಕರು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಬ್ಲಾಕ್ ಪಬ್ಲಿಕ್ ಹೆಲ್ತ್ ಯುನಿಟ್ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬ್ಲಾಕ್ ಪಬ್ಲಿಕ್ ಹೆಲ್ತ್ ಯುನಿಟ್ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ಸಲ್ಲಿಸಿ ಚಾಲನೆ ನೀಡಿದ...
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಮುಂಡಗೋಡ ತಾಲೂಕಿನ ಮಳಗಿ ಬಳಿ ಚಲಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ್ ಬಸ್ ಜಖಂ ಗೊಂಡಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ, ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿತ್ತು. ಮಳಗಿ ಭಾಗದಲ್ಲಿ ಸಂಜೆಯಿಂದ ಭಾರಿ ಪ್ರಮಾಣದ ಗಾಳಿ ಬೀಸಿದೆ. ಮಳೆಗಾಳಿಯ ಪರಿಣಾಮ ರಸ್ತೆ ಬದಿಯ ಮರ ಉರುಳಿ ಬಿದ್ದಿದೆ. ಅದೇ ವೇಳೆ ರಸ್ತೆ ಮೇಲೆ ಸಂಚರಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಪದರಯಾಣಿಕರಿಗೆ ಯಾವುದೇ ಪ್ತಾಣಾಪಾಯವಾಗಿಲ್ಲ. ನಂತರ ಸ್ಥಳೀಯರು ಹಾಗೂ...









