ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today;
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ..!

ಕಾರವಾರ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರಕಾರದಿಂದ 2025ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2025 ರ ಜುಲೈ 31ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ವಿವಿಧ ಕ್ಷೇತ್ರಗಳ ಸಾಧಕರಾದ (ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ, ಕ್ರೀಡೆ,ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ,ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳು) ಎಲ್ಲಾ ಮಕ್ಕಳ ಪ್ರಶಸ್ತಿಗೆ ಅರ್ಜಿಯನ್ನು ಆನ್‌ಲೈನ್ https://awards.gov.in ಮೂಲಕ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಮಕ್ಕಳ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಡಗುಂಜಿ ದೇವಾಲಯ; ಅಂಗಡಿ ಮಳಿಗೆಗಳ ಹರಾಜು ಮುಂದೂಡಿಕೆ

ಕಾರವಾರ; ಶ್ರೀ ವಿನಾಯಕ ದೇವಾಲಯ ಇಡಗುಂಜಿಯ ಮಂಗಲಮೂರ್ತಿ ಮಂಗಲ ಕಾರ್ಯಾಲಯದಲ್ಲಿ ಜೂ.20 ರಂದು ಬೆಳಗ್ಗೆ 11 ಗಂಟೆಗೆ ನಡೆಯಬೇಕಿದ್ದ, ಶ್ರೀ ವಿನಾಯಕ ದೇವಾಲಯ ಇಡಗುಂಜಿಗೆ ಸಂಬAಧಿಸಿದ ಎಂಟು ಅಂಗಡಿ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಗೌರವಾನ್ವಿತ ರಿಸೀವರ್ ಶ್ರೀ ವಿನಾಯಕ ದೇವಾಲಯ ಇಡಗುಂಜಿ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಉತ್ತರ ಕನ್ನಡ ಕಾರವಾರ ಇವರ ಆದೇಶದ ಮೇರೆಗೆ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Uttar Kannada News Today;

ಕಾರವಾರದಲ್ಲಿ ಜೂನ್ 21 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಕಾರವಾರ; ಕಾರವಾರ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ಕಚೇರಿಯಲ್ಲಿ ಜೂ.21 ರಂದು ಗ್ರಾಹಕರ ಸಂವಾದ ಸಭೆಯನ್ನು ಮಧ್ಯಾಹ್ನ 3.30 ರಿಂದ ಸಂಜೆ 5.30 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳೆನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ನೀಡುವಂತೆ ಕಾರವಾರ ಕಾರ್ಯಪಾಲನಾ ಮತ್ತು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ..!

ಕಾರವಾರ; ಕರ್ನಾಟಕ ರಾಜ್ಯದ ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್.ಎಸ್.ಪಿ)ಯಲ್ಲಿ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು.

ಕುಟುಂಬದ ವಾರ್ಷಿಕ ಆದಾಯ (ಸಾಮಾನ್ಯ ಪದವಿ, ಸ್ನಾತಕೋತ್ತರ ಪದವಿಗಳಿಗೆ) ರೂ.2 ಲಕ್ಷಗಳು ಹಾಗೂ (ವೃತ್ತಿಪರ ಮತ್ತು ತಾಂತ್ರಿಕ ಕೋರ್ಸುಗಳಿಗೆ) 2.5 ಲಕ್ಷಗಳು ಮೀರಿರಬಾರದು. ಕಡ್ಡಾಯವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ (NPCI Mapping Active) ಆಧಾರ ಜೋಡಣೆಯಾಗಿದೆಯೇ ಎಂದು ಖಚಿತ ಪಡಿಸಿಕೊಳ್ಳತಕ್ಕದ್ದು, ಅರ್ಜಿ ಗಳನ್ನು https://ssp.karnataka.gov.in ವೆಬ್‌ಸೈಟ್‌ನಲ್ಲಿ ಸಲ್ಲಿಸಬೇಕು.

ಎಸ್.ಎಸ್.ಪಿ ಯಲ್ಲಿ ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in ಅಥವಾ ಸಹಾಯವಾಣಿ: 8277799990ಗೆ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸುವAತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Uttar Kannada News Today;

ಉತ್ತರ ಕನ್ನಡ ಜಿಲ್ಲೆ ಕಳೆದ 24 ಗಂಟೆಯಲ್ಲಿ, ಮಳೆ ಮತ್ತು ಹಾನಿ ವಿವರ..!

ಕಾರವಾರ; ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ, ಅಂಕೋಲಾದಲ್ಲಿ 26.5 ಮಿಮೀ,ಭಟ್ಕಳದಲ್ಲಿ 18.5 ಹಳಿಯಾಳ 3.5 ಹೊನ್ನಾವರ 28.3 ಕಾರವಾರ 27.8, ಕುಮಟಾ 31.1 ಮುಂಡಗೋಡ 15.2, ಸಿದ್ದಾಪುರ 53.3, ಶಿರಸಿ 31.7, ಸೂಪಾ 19.2, ಯಲ್ಲಾಪುರ 16.9, ದಾಂಡೇಲಿಯಲ್ಲಿ 5.2 ಮಿಲಿ ಮೀಟರ್ ಮಳೆ ಸುರಿದಿದ್ದು, 6 ಮನೆಗಳಿಗೆ ಭಾಗಶ: ಹಾನಿ ಸಂಭವಿಸಿದೆ.

error: Content is protected !!