ಹಾವೇರಿ; ಬೆಂಗಳೂರಿನಿಂದ ಹಾವೇರಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯವಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಿರಿಯೂರು ಬಳಿ ರೆಸ್ಟ್ ವೇಳೆ ದ್ವಿಚಕ್ರ ವಾಹನ ಸವಾರನೋರ್ವ ರುದ್ರಪ್ಪ ಲಮಾಣಿ ಅವರಿಗೆ ಡಿಕ್ಕಿ ಹೊಡೆದು ತಲೆಗೆ, ಮೂಗಿಗೆ ಗಾಯಗಳು ಆಗಿವೆ ಎಂದು ಲಮಾಣಿ ಅವರನ್ನು ದಾವಣಗೆರೆ ಎಸ್ ರಸ್ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
Top Stories
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Category: ಅಪಘಾತ
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿ ನಡೆದಿದ್ದ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾರವಾರದ ಸಾಮಾಜಿಕ ಕಾರ್ಯಕರ್ತ ಮಾಧವ ನಾಯ್ಕ್ ಇಡೀ ಪ್ರಕರಣದ ಬಗ್ಗೆ ವಿಸ್ತೃತ ದೂರು ನೀಡಿದ್ದಾರೆ. ಘಟನೆ ನಡೆದದ್ದೇ ಬೇರೆ, ಕೇಸು ದಾಖಲಾಗಿದ್ದೇ ಬೇರೆ, ಇನ್ಶ್ಯೂರನ್ಸ್ ಹಣಕ್ಕಾಗಿ ಇಲ್ಲಿ ಇಡೀ ಕೇಸನ್ನೇ ಉಲ್ಟಾ ಪಲ್ಟಾ ಮಾಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಅಲ್ದೇ ಈ ಕುರಿತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ, ಈ ಕೇಸು ಮುಂಡಗೋಡ ಪೊಲೀಸರಿಗೆ ಬಹುತೇಕ...
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ.. ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ...
ಸಾಲಗಾಂವ್ ಕೆರೆಯಲ್ಲಿ ಮೀನು ಹಿಡಿಯಲು ಇಳಿದಿದ್ದವ ಹೆಣವಾದ..!
ಮೀನು ಹಿಡಿಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೋರ್ವ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಾಲಗಾಂವ್ ಕೆರೆಯಲ್ಲಿ ನಡೆದಿದೆ. ಗ್ರಾಮಸ್ಥರ ಸಹಕಾರದಿಂದ ಮುಂಡಗೋಡ ಪಿಎಸ್ಐ ಪರಶುರಾಮ್ ಮಿರ್ಜಿಗಿ ಕೆರೆಯಲ್ಲಿ ಇಳಿದು ವ್ಯಕ್ತಿಯ ಶವ ಹೊತೆಗೆದಿದ್ದಾರೆ. ಗುಡ್ಡಪ್ಪ ಜಾಡರ್(58) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ. ಈತ ಇಂದು ಮೀನು ಹಿಡಿಯಲು ಕೆರೆಯಲ್ಲಿ ಇಳಿದಿದ್ದ. ಈ ವೇಳೆ ಕೆರೆಯ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ. ಹೀಗಾಗಿ, ಸುದ್ದಿ ತಿಳಿದ ಪಿಎಸ್ಐ ಸ್ಥಳಕ್ಕೆ ಧಾವಿಸಿ ಶವ ಹೊರತೆಗೆದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
ಯಲ್ಲಾಪುರ ಅರಬೈಲು ಘಟ್ಟದಲ್ಲಿ ಭೀಕರ ಅಪಘಾತ, 10 ಜನ ಸ್ಥಳದಲ್ಲೇ ಸಾವು..! 15 ಜನರಿಗೆ ಗಾಯ..!
ಯಲ್ಲಾಪುರದ ಅರಬೈಲು ಘಟ್ಟದ ಗುಳ್ಳಾಪುರ ಬಳಿ ಭೀಕರ ಅಪಘಾತವಾಗಿದೆ. ತರಕಾರಿ ಸಾಗಿಸುತ್ತಿದ್ದ ಅಶೋಕ ಲೈಲ್ಯಾಂಡ್ ವಾಹನ ರಸ್ತೆಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿದೆ. ಪರಿಣಾಮ 10 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ, 15 ಜನರಿಗೆ ಗಾಯವಾಗಿದೆ. ಇದ್ರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮೃತರೇಲ್ಲರೂ ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದ್ದು. ಕುಮಟಾಗೆ ತರಕಾರಿ ಸಾಗಿಸುತ್ತಿದ್ದರು ಎನ್ನಲಾಗಿದೆ. 15 ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ ಹಲವರ ಸ್ಥಿತಿ ಗಂಭಿರವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ...
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ತಾಲೂಕಿನ ಮಳಗಿ ಸಮೀಪದ ಬನವಾಸಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ನೀಲಗಿರಿ ಕಟ್ಟಿಗೆ ತುಂಬಿಕೊಂಡು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದು, ಹಿಂಬದಿಯ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಕಲ್ಲಹಕ್ಕಲ ಗ್ರಾಮದ ಮಹೇಶ್ ಬಸವಂತಪ್ಪ ಶೃಂಗೇರಿ(50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಇನ್ನು ಪರಶುರಾಮ್ ಕುರುಬರ (32) ಎಂಬುವ ಹಿಂಬದಿಯ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿಲುತ್ತಿದೆ. ಮುಂಡಗೋಡ ಪೊಲೀಸ್...
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಭೀಕರ ಅಫಘಾತವಾಗಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊರ್ವನಿಗೆ ಗಾಯವಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿಯ ಗುರುನಾಥ್ ಅಶೋಕ್ ಪವಾರ್(35), ಸ್ಥಳದಲ್ಲೇ ಸಾವು ಕಂಡ ಬೈಕ್ ಸವಾರನಾಗಿದ್ದಾನೆ. ಇನ್ನು ಮತ್ತೊಂದು ಬೈಕಿನಲ್ಲಿದ್ದ ಮುಂಡಗೋಡ ಸುಭಾಸ್ ನಗರದ ಆಶೀಫ್ ಗುಲಾಬ್ ಖಾನ್ (24) ಗಂಭೀರ ಗಾಯಗೊಂಡಿದ್ದಾನೆ. ಹೀಗಾಗಿ, ಈತನಿಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ...
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡ ಪಟ್ಟಣದ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣವೇ ಪಿಎಸ್ಐ ಪರಶುರಾಮ್ ಸ್ಥಳಕ್ಕೆ ಆಗಮಿಸಿ ಶವ ಹೊರತೆಗೆದಿದ್ದಾರೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರೋ ಅನುಮಾನ ಇದೆ. ಚಾಂದಬಾಷಾ ಚಿಕ್ಕೇರಿ (52) ಎಂಬುವವನೇ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಇಂದು ಮದ್ಯಾನ ಮನೆಯಿಂದ ಹೋಗಿದ್ದ ಎನ್ನಲಾಗಿದೆ. ಆದ್ರೆ, ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.. ಮುಂಡಗೋಡನಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿ ಗಂಭೀರಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಬದುಕಿ ಉಳಿಯಲೇ ಇಲ್ಲ. ಮುಂಡಗೋಡ ತಾಲೂಕಾಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದ್ದ ಬಾಲಕಿ ಮೃತಪಟ್ಟಿದ್ದಾಳೆ ಅಂತಾ ಕಿಮ್ಸ್ ವೈದ್ಯರು ದೃಢಪಡಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಹಳೂರು ಬಳಿಯ ಮಾರಿಕಾಂಬಾ ನಗರದ ಅಂಗನವಾಡಿಗೆ ಬಂದಿದ್ದ, ಅಂಗನವಾಡಿ ಹೊರಗೆ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮ ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಬಾಲಕಿಗೆ ಹಾವು ಕಚ್ಚಿತ್ತು. ಆದ್ರೆ ಯಾವ ಹಾವು ಏನು ಅಂತಾ ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ,...
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಮುಂಡಗೋಡಿನ ಅಂಗನವಾಡಿಯೊಂದರಲ್ಲಿ ಭಾರಿ ಅನಾಹುತ ಸಂಭವಿಸಿದೆ. ಅಂಗನವಾಡಿಯ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮನಿಗೆ ಹಾವು ಕಚ್ಚಿದೆ. ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ಘಟನೆ ನಡೆದಿದ್ದು, ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಪುಟ್ಟ ಬಾಲಕಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ಮೂತ್ರ ವಿಸರ್ಜನೆಗೆ ಅಂತಾ ಹೋಗಿದ್ದ ಬಾಲಕಿಯ ಕಾಲಿನಲ್ಲಿ ರಕ್ತಸ್ರಾವ ಕಂಡ ಅಂಗನವಾಡಿ ಸಿಬ್ಬಂದಿಗಳು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ...