Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಮುಂಡಗೋಡ-ಯಲ್ಲಾಪುರ ರಸ್ತೆಯಲ್ಲಿ ಕ್ರೂಸರ್ ವಾಹನ ಪಲ್ಟಿ, ಜಾನಪದ ಕಲಾವಿದರಿಗೆ ಗಾಯ..!

ಮುಂಡಗೋಡ-ಯಲ್ಲಾಪುರ ರಸ್ತೆಯಲ್ಲಿ ಕ್ರೂಸರ್ ವಾಹನ ಪಲ್ಟಿ, ಜಾನಪದ ಕಲಾವಿದರಿಗೆ ಗಾಯ..!

 ಮುಂಡಗೋಡ ಯಲ್ಲಾಪುರ ಗಡಿಭಾಗದ ಹುಣಶೆಟ್ಟಿಕೊಪ್ಪದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿದೆ‌. ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಇನ್ನು, ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತಿದ್ದ ಕ್ರೂಸರ್ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ‌‌. ಚಿಗಳ್ಳಿಯಲ್ಲಿ ನಡೆಯುತ್ತಿರೋ ಕಾರ್ಯಕ್ರಮಕ್ಕೆ ಯಲ್ಲಾಪುರದಿಂದ ಜಾನಪದ ಕಲಾವಿದರನ್ನು ಕರೆತರುತ್ತಿದ್ದ ವಾಹನ ಅಪಘಾತಕ್ಕೆ ಈಡಾಗಿದೆ. 7-8 ಜನ ಜಾನಪದ ಕಲಾವಿದರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಹುಣಶೆಟ್ಟಿಕೊಪ್ಪದ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ರಸ್ತೆ ಮೇಲೆ ಅಡ್ಡಲಾಗಿ ಬಿದ್ದಿದ್ದ ಕ್ರೂಸರ್ ಅನ್ನು...

Post
ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!

ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!

ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ, ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವ ಗಂಭೀರ ಗಾಯಗೊಂಡಿದ್ದ. ಗಾಯಾಳುವನ್ನು 108 ಅಂಬ್ಯಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್...

Post
ಬಾಚಣಕಿಯ ಮಜ್ಜಿಗೇರಿ ಕ್ರಾಸ್ ಬಳಿ ಕಾರು ಬೈಕ್ ನಡುವೆ ಅಪಘಾತ, ಬೈಕ್ ಸವಾರ ಗಂಭೀರ..!

ಬಾಚಣಕಿಯ ಮಜ್ಜಿಗೇರಿ ಕ್ರಾಸ್ ಬಳಿ ಕಾರು ಬೈಕ್ ನಡುವೆ ಅಪಘಾತ, ಬೈಕ್ ಸವಾರ ಗಂಭೀರ..!

ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತವಾಗಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವನಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುವನ್ನು 108 ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಗಾಯಾಳುವಿನ ಬಳಿಯಿದ್ದ 1450 ರೂ. ಹಾಗೂ ಮೊಬೈಲ್ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 108 ಅಂಬ್ಯಲೆನ್ಸ್...

Post
ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?

ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?

ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ. ಕೊಂದು ಬೀಸಾಕಿದ್ರಾ..? ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Post
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!

ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!

 ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ‌ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...

Post
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!

ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!

ಬೈಲಹೊಂಗಲ: ಇದು ನಿಜಕ್ಕೂ ದುರಂತದ ಸಂಗತಿ. ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮುರುಘಾ ಶ್ರೀಗಳ ಕೇಸ್ ಹಿನ್ನಲೆಯಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋದಲ್ಲಿ ಇವರ ಹೆಸರನ್ನು ಬಳಸಿಕೊಂಡು ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದು ವೈರಲ್ ಅಗಿದ್ದರಿಂದ ಮನ ನೊಂದು...

Post
ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!

ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!

ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.

Post
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.‌!

ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.‌!

ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...

Post
ಗುಂಜಾವತಿ ಬಳಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ, ಬೈಕ್ ಸವಾರ ಗಂಭೀರ..! ರಸ್ತೆಯಲ್ಲೇ ಬಿದ್ದು ಒದ್ದಾಡಿದ ಗಾಯಾಳು..!

ಗುಂಜಾವತಿ ಬಳಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ, ಬೈಕ್ ಸವಾರ ಗಂಭೀರ..! ರಸ್ತೆಯಲ್ಲೇ ಬಿದ್ದು ಒದ್ದಾಡಿದ ಗಾಯಾಳು..!

 ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಗುಂಜಾವತಿ ಮೈನಳ್ಳಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಸಂಭವಿಸಿದ ದುರಂತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಂಗಾರಾಮ ರಾಮು ಎಡಗೆ (20) ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದು. ಮುಂಡಗೋಡ ಕಡೆಯಿಂದ ಯಲ್ಲಾಪುರ ಕಡೆಗೆ ಹೊರಟಿದ್ದ KA-03 MV-6816 ನೋಂದಣಿ ಸಂಖ್ಯೆಯ ಕಾರ್ ಹಾಗೂ ಗುಂಜಾವತಿ ಸಮೀಪದ ಬೆಂಡಿಕಟ್ಟಾ ಕಡೆಯಿಂದ ಗದ್ದೆಗೆ ಹೊರಟಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ನಲ್ಲಿನ ಏರ್ ಬ್ಯಾಗ್...

Post
ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!

ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೊಂಡಾ ಶೋ ರೂಂ ಬಳಿ ಭೀಕರ ಅಪಘಾತವಾಗಿದೆ‌. ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದ ಮಹೇಶ್ ಪುಂಡಲೀಕ್ ಅರ್ಕಸಾಲಿ(53) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಿಒಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಮುಂಡಗೋಡ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ....

error: Content is protected !!