Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಪಾಳಾ ಸಮೀಪದ ರಾಮಾಪುರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 50 ಸಾವಿರ ಮೌಲ್ಯದ್ದು..!ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಯಲ್ಲಾಪುರ ರಸ್ತೆಯ ಮಹಮ್ಮದಅನಿಸ ಎಜಾಜ್ ಅಹ್ಮದ್ ಬೇಗ್ (20) ಎಂಬುವವ.. ಈತ ತನ್ನ ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಖಚಿತ ಮಾಹಿತಿ ಆಧಾರದಲ್ಲಿ...

Post
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?

ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?

ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಷ್ಟರು ನೀಚ ಕೃತ್ಯ ಮಾಡಿದ್ದಾರೆ. ಮೀನು ಸಾಕಾಣಿಕೆ ಮಾಡಿದ್ದ ಕೆರೆಗೆ ವಿಷ ಬೆರೆಸಿ ಮೀನುಗಳ ಸಾವಿಗೆ ಕಾರಣರಾಗಿದ್ದಾರೆ. ನೂರಾರು ಮೀನುಗಳು ಹಂತಹಂತವಾಗಿ ಸಾವನ್ನಪ್ಪುತ್ತಿವೆ ಅನ್ನೊ ಮಾಹಿತಿ ಲಭ್ಯವಾಗಿದೆ. ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ ಸರ್ವೇ ನಂಬರ್ 49 ರಲ್ಲಿ ಘಟನೆ ನಡೆದಿದ್ದು, ಮೌಲಾಲಿ ಮಕಾಂದಾರ ಎನ್ನುವವರು ಕೆರೆಯಲ್ಲಿ ಮೀನು ಸಾಕಾಣಿಕೆ‌ ಮಾಡಲು ಟೆಂಡರ್ ಪಡೆದಿದ್ದರು. ಆದ್ರೆ, ಈಗಾಗಲೇ ಮೀನುಗಳು ಒಂದು ಹಂತಕ್ಕೆ ಬೆಳೆದಿದ್ದಾಗಲೇ ದುರುಳರು ಕೆರೆಗೆ ವಿಷ ಹಾಕಿರೋ ಅನುಮಾನ...

Post
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್  ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!

ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!

ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರನ್ನ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರದ ಎಚ್‌ಎಸ್‌ಆ‌ರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ನಡೆದಿದೆ. ಈ ಹತ್ಯೆಯನ್ನು ಅವರ ಪತ್ನಿಯೇ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವವನ್ನು ಮನೆಯಲ್ಲಿ ಪತ್ತೆ ಹಚ್ಚಲಾಗಿದೆ ಮತ್ತು ಮನೆ ತುಂಬಾ ರಕ್ತಸಿಕ್ತವಾದ ಸ್ಥಿತಿಯಲ್ಲಿ ಕಂಡುಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈಗಾಗಲೆ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 1981ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಓಂ...

Post
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!

ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!

ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಭೀಕರ ಹತ್ಯೆ ಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ‌. ಹೀಗಾಗಿ ಇಡೀ ಕಾರವಾರ ನಗರ ಬೆಚ್ಚಿ ಬಿದ್ದಿದೆ‌. ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಈ ಕೊಲೆಯಿಂದ ಕಾರವಾರಿಗರು ಬೆಚ್ಚಿ ಬಿದ್ದಿದ್ದಾರೆ. ಸ್ಕೂಟಿಯಲ್ಲಿ ಬಂದ...

Post
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!

ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!

ಹಾವೇರಿ ತಾಲೂಕಾ ಶಿಕ್ಷಣಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಿಇಓ ಮೌನೇಶ ಬಡಿಗೇರ ಮನೆ ಮೇಲೆ ದಾಳಿ ನಡೆದಿದ್ದು, ವೇತನ ಬಿಡುಗಡೆ ಮಾಡಲು 50 ಸಾವಿರಕ್ಕೆ ಡಿಮ್ಯಾಂಡ್ ಮಾಡಿ, ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ‌. ಇನ್ನು ಶಿಕ್ಷಕ ಪ್ರಕಾಶ್ ಬಾರ್ಕಿ ಎಂಬುವವರಿಗೆ ವೇತನ ಬಿಡುಗಡೆ ಮಾಡಲು, 50 ಸಾವಿರ ರೂ. ಗೆ ಬೇಡಿಕೆ ಇಟ್ಟಿದ್ದರು, ಅದ್ರಲ್ಲಿ ಇವತ್ತು 15 ಸಾವಿರ ರೂ‌. ಲಂಚ ತೆಗೆದುಕೊಳ್ಳುವಾಗ ಟ್ರ್ಯಾಪ್ ಮಾಡಲಾಗಿದೆ. ದಾಳಿ ವೇಳೆ ಬಿಇಓ ಮೌನೇಶ್...

Post
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!

ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!

ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. 5 ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, ಕಾಮದ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಆಕ್ರೋಶಗೊಂಡ ಹಲವರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಕಮೀಷನ‌ರ್ ಕಿಮ್ಸ್‌ಗೆ...

Post
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!

ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!

ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೊಂದು ವಿದ್ಯುತ್ ದುರಂತ ಸಂಭವಿಸಿದೆ. ಅನಧೀಕೃತವಾಗಿ ವಿದ್ಯುತ್ ಕಂಬಕ್ಕೆ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ...

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ‌. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32)...

Post
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!

ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!

ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಪಟ್ಟಣದ ಎಪಿಎಂಸಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಎಳೆದು ತಂದಿದ್ದಾರೆ. ದಾಳಿಯ ವೇಳೆ ಇಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಉಳಿದ ಎಂಟು ಜನರು ಪರಾರಿಯಾಗಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ದಾಳಿ ಮಾಡಿದ ಪೊಲೀಸರಿಗೆ, ಮುಂಡಗೋಡಿನ ರಾಘವೇಂದ್ರ ರಾಮಚಂದ್ರ ರಾಯ್ಕರ್, ನಿಸ್ಸಾರಾಹ್ಮದ್ ಮದರಸಾಬ ದರ್ಗಾವಾಲೆ ಸಿಕ್ಕಿಬಿದ್ದಿದ್ದಾರೆ‌. ಉಳಿದಂತೆ ಲಾಲಸಾಬ್ ಇಟ್ಟಂಗಿ, ನಾಶೀರ ಬಂಕಾಪೂರ, ರಫೀಕ್ ಭಟ್ಕಳ್, ಅಲ್ಲಾಭಕ್ಷ ಹಿರೇಹಳ್ಳಿ, ಅಕ್ಬರಶಾ ಮೀರಾಶಿ, ಮೌಲಾಲಿ ಜಂಡೆವಾಲೆ, ಸೈಯದ್ ಹುಸೇನ್ ಯಳ್ಳೂರ್,...

Post
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..

ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..

ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್ ಆಗಿದ್ದಾರೆ. ಬೇಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಆಕ್ಟಿವ್ ಆಗಿದ್ದ ಕಳ್ಳಿಯರ ಖರ್ತನಾಕ್ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಬೆಳಗಾವಿ ಮಾರ್ಕೆಟ್ ಎಸಿಪಿ ಸಂತೋಷ ಸತ್ಯನಾಯಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮೂವರು ಖರ್ತನಾಕ್ ಕಳ್ಳಿಯರ ಅರೇಸ್ಟ್ ಆಗಿದ್ದಾರೆ. ಬೆಳಗಾವಿ ನಗರದ ವಡ್ಡರವಾಡಿಯ ನಿವಾಸಿಗಳಾದ‌ ಅನೀತಾ ಚೌಗಲೆ 58, ನಿಶಾ ಲೊಂಡೆ 25, ಗಿಡ್ಡಿ ಲೊಂಡೆ 35 ಅರೇಸ್ಟ್ ಆದ ಆರೋಪಿಗಳು. ಆರೋಪಿಗಳಿಂದ 12 ಲಕ್ಷ 70 ಸಾವಿರ ಮೌಲ್ಯದ...

error: Content is protected !!