ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ರನ್ನು ವರ್ಗಾವಣೆ ಮಾಡಲಾಗಿದೆ. ಯಲ್ಲಾಪುರದ ಇಡಗುಂದಿ ಅರಣ್ಯ ವಲಯಕ್ಕೆ ನಿಯುಕ್ತಿ ಮಾಡಲಾಗಿದ್ದು ಇವ್ರ ಜಾಗಕ್ಕೆ ಅಂದ್ರೆ ಕಾತೂರು ಅರಣ್ಯ ವಲಯಕ್ಕೆ ವೀರೇಶ್ ಎಂಬುವವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
Top Stories
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Category: ಮುಂಡಗೋಡ ಸುದ್ದಿ
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಮುಂಡಗೋಡ ಪಟ್ಟಣ ಪಂಚಾಯತಿಯ ಬಿಲ್ ಕಲೆಕ್ಟರ್ ಮಂಜುನಾಥ್ ಮುಚ್ಚಂಡಿ ಅಂತೂ ಇಂತೂ ಟ್ರಾನ್ಸಪರ್ ಆಗಿದ್ದಾರೆ. ಜುಲೈ 31 ರಂದೇ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದ್ದರೂ ಸಾಹೇಬ್ರು ಮಾತ್ರ ಇನ್ನೂ ಜಾಗ ಕದಲಿಸಿಲ್ಲ. ಅದ್ಯಾರ ಕೃಪೆಯೋ ಅಥವಾ, ತಮಗಿರೋ ಭಾರೀ ಪ್ರಭಾವ ಬಳಸಿ ಇಲ್ಲೇ ಮುಂದುವರಿಯೋ ಮಹಾ ಪ್ಲ್ಯಾನೋ ಯಾರಂದ್ರೆ ಯಾರಿಗೂ ಅರ್ಥವಾಗಿಲ್ಲ. ಹೀಗಾಗಿ, ಸಾರ್ವಜನಿಕ ವಲಯದಲ್ಲಿ ಇದು ಭಾರೀ ಚರ್ಚೆಗೆ ಕಾರಣವಾಗ್ತಿದೆ. ಗುಸು, ಗುಸು ಪಿಸು, ಪಿಸು ನಡೀತಿದೆ..! ಅಸಲು, ಸಾಕಷ್ಟು ಆಕ್ರೋಶಗಳು, ಆರೋಪಗಳು ಮಾರ್ದನಿಸಿದ ಹಿನ್ನೆಲೆಯಲ್ಲಿ, ಮುಚ್ಚಂಡಿ...
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಮುಂಡಗೋಡ ತಾಲೂಕಿನ ಶಿಡ್ಲಗುಂಡಿ ಗ್ರಾಮದ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 60-65 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು ಯಾರಿಗಾದ್ರೂ ಈತನ ಬಗ್ಗೆ ಗುರುತು ಇದ್ರೆ ಮುಂಡಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ. ಮುಂಡಗೋಡ ಪೊಲೀಸ್ ಠಾಣೆ ಫೋನ್ ನಂಬರ್ 08301 222211 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕ್ರೈ ಪಿಎಸ್ಐ ಹೆಚ್.ಬಿ.ಕುಡುಗುಂಟಿ ತಿಳಿಸಿದ್ದಾರೆ
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಜಯಸುಧಾ ಭೋವಿ ಆಯ್ಕೆಯಾಗಿದ್ದಾರೆ. ಆದ್ರೆ, ಅಧ್ಯಕ್ಷರಾದ ಮೊದಲ ದಿನವೇ ಶಾಕ್ ಎದುರಾಗಿದೆ. ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿಗೆ, ಮಾನ್ಯ ಧಾರವಾಡ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಅದರ ವಿರುದ್ಧ ನಾಲ್ವರು ಪಟ್ಟಣ ಪಂಚಾಯತಿ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಹೀಗಾಗಿ, ವಿಚಾರಣೆ ನಡಸಿರೊ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಹೀಗಾಗಿ, ಅಧ್ಯಕ್ಷ ಪದವಿಗೇರಿದ್ರೂ ಜಯಸುಧಾ ಭೋವಿ ಮೇಡಂ ಸದ್ಯ ಕೋರ್ಟ್...
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಜಯಸುಧಾ ಭೋವಿ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂಬಂತೆ ಕೊನೆ ಕ್ಷಣದಲ್ಲಿ ಅಧ್ಯಕ್ಷ ಪದವಿ ಗಿಟ್ಟಿಸಿಕೊಂಡಿದ್ದಾರೆ. ಉಪಾಧ್ಯಕ್ಷರಾಗಿ ರಹಿಮಾಬಾನು ಕುಂಕೂರ್ ನಿರಾಯಾಸವಾಗಿ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ, ಮುಂಡಗೋಡ ಪಟ್ಟಣ ಪಂಚಾಯತಿ ಕಾಂಗ್ರೆಸ್ ನೆರಳಲ್ಲಿ, ಶಿವರಾಮ್ ಹೆಬ್ಬಾರ್ ಬೆಂಬಲಿಗರ ಪಾಲಾಗಿದೆ. ಅಸಲು, ಅಧ್ಯಕ್ಷ ಸ್ಥಾನ ಜಯಸುಧಾ ಭೋವಿಯವರಿಗೆ ದಕ್ಕಿದ್ದೇ ರೋಚಕ ಎಂಬಂತಾಗಿದೆ. ಮೊನ್ನೆ ಯಿಂದಲೂ ಆಯ್ಕೆ ಕಸರತ್ತು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿತ್ತು. ಇವತ್ತು ಬೆಳಗಿನವರೆಗೂ ಕಸುಮಾ ನಾಗಭೂಷಣ ಹಾವಣಗಿಯವ್ರೇ ಕೈ ಪಡೆಯ...
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಮುಂಡಗೋಡ ಹೊರ ವಲಯದ ಮಹಾಲೆ ಮಿಲ್ ಹತ್ತಿರ PWD ಅಧಿಕಾರಿಗಳು ಬಂದಿಳಿದಿದ್ದಾರೆ. ನಿನ್ನೆಯಷ್ಟೇ ರಸ್ತೆಯಲ್ಲಿ ಬಾಯ್ತೆರೆದಿರೋ ಯಮರೂಪಿ ಗುಂಡಿಗಳ ಬಗ್ಗೆ ಪಬ್ಲಿಕ್ ಫಸ್ಟ್ ನ್ಯೂಸ್ ಪ್ರತ್ಯಕ್ಷ ವರದಿ ಬಿತ್ತರಿಸಿತ್ತು. ಈ ಹಿನ್ನೆಲೆಯಲ್ಲಿ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗ್ತಿದೆ. ವಾಹನ ಸವಾರರಿಗೆ ತಾತ್ಕಾಲಿಕವಾಗಿ ಕೊಂಚ ಸಮಾಧಾನ ಸಿಕ್ಕಂತಾಗಿದೆ. ಅಂದಹಾಗೆ, ಇದು ಪಬ್ಲಿಕ್ ಫಸ್ಟ್ ನ್ಯೂಸ್ ಇಂಪ್ಯಾಕ್ಟ್..! ನಿಜ, ಇದು ನಿನ್ನೆ ಮೊನ್ನೆಯ ಸಮಸ್ಯೆ ಅಲ್ಲ. ಪ್ರತೀ ವರ್ಷದ ಮಳೆಗಾಲ ಬಂತಂದ್ರೆ ಸಾಕು ಈ ರಸ್ತೆಯಲ್ಲಿ ಜಸ್ಟ್ ನಡೆದಾಡಲೂ...
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಮಹಾಲೆ ಮಿಲ್ ಹತ್ತಿರ ಭೀಕರ ಅಪಘಾತವಾಗಿದೆ. PWD ಇಲಾಖೆಯ ಬೇಜವಾಬ್ದಾರಿ ಹಾಗೂ ಸರ್ಕಾರದ ಖಬರಗೇಡಿತನಕ್ಕೆ ಈ ರಸ್ತೆ ಅನ್ನೋದು ಯಮರೂಪಿಯಾಗಿದೆ. ನಿತ್ಯವೂ ಹಲವರು ಇಲ್ಲಿ ಎದ್ದು, ಬಿದ್ದು ಓಡಾಡುವಂತಾಗಿದೆ. ಅಂತದ್ದರಲ್ಲಿ ಇವಾಗ ಮತ್ತೊಂದು ಅಪಘಾತಕ್ಕೆ ಇದೇ ರಸ್ತೆಯ ಗುಂಡಿಗಳು ಕಾರಣವಾಗಿವೆ. ಅಂದಹಾಗೆ, ಮುಂಡಗೋಡ ಪಟ್ಟಣದ ಹೊರ ವಲಯದ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬೈಕ್ ಸವಾರನೊಬ್ಬ ಬಿದ್ದಿದ್ದಾನೆ. ಹೀಗಾಗಿ, ಗಂಭೀರ ಗಾಯಗೊಂಡಿರೋ ಬೈಕ್ ಸವಾರನನ್ನು ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ...
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಟಾಟಾ ಎಸ್ ನಲ್ಲಿ ಸಾಗಿಸುತ್ತಿದ್ದ 6 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಚೇಸ್ ಮಾಡಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ತಾಲೂಕಿನ ಬಡ್ಡಿಗೇರಿಯಿಂದ ಹಾನಗಲ್ಲಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಟಾಟಾ ಎಸ್ ನಲ್ಲಿ ಆರು ಜಾನುವಾರುಗಳನ್ನು ಅಮಾನುಷವಾಗಿ ತುಂಬಿಕೊಂಡು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ತಿಳಿದ ಪೊಲೀಸರು ತಕ್ಷಣವೇ ಅಲರ್ಟ್ ಆಗಿದ್ದಾರೆ. ಹಾನಗಲ್ಲಿನ ಕಡೆಗೆ ವಾಹನ ಹೊರಟಿದೆ ಅನ್ನೊ ಮಾಹಿತಿ ತಿಳಿದ ಪೊಲೀಸ್ರು, ಪಟ್ಟಣದ ಹೊರ ವಲಯದ...
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಮುಂಡಗೋಡ: ಕೊಲ್ಕತ್ತಾದಲ್ಲಿ ಇತ್ತೀಚಿಗೆ ನಡೆದ ಮೆಡಿಕಲ್ ಸ್ನಾತಕೋತ್ತರ ಪದವಿಧರ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ದೇಶವ್ಯಾಪಿ ಮುಷ್ಕರದ ಕರೆಯ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ನಾಳೆ ಮುಷ್ಕರ ನಡೆಯುತ್ತಿದೆ. ಆದ್ರೆ ಮುಂಡಗೋಡಿನಲ್ಲಿ ಮಾತ್ರ ಮುಷ್ಕರದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಾಳೆ ಶನಿವಾರ ಮುಂಜಾನೆ 6 ಗಂಟೆಯಿಂದ ರವಿವಾರ ಮುಂಜಾನೆ 6 ಗಂಟೆಯವರೆಗೆ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ದಂತ ಚಿಕಿತ್ಸಾ...
ಯಾರಾಗ್ತಾರೆ ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ..?
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನದ ಆಯ್ಕೆ ಹಿನ್ನೆಲೆ ಅಸಲೀ ಮಜಕೂರಗಳು ಜಾರಿಯಲ್ಲಿವೆ. ಆಗಷ್ಟ 20 ರಂದು ನಡೆಯಲಿರೋ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಎರಡೂ ಪಕ್ಷಗಳಲ್ಲೂ ಒಳಗೊಳಗಿನ ಲೆಕ್ಕಾಚಾರಗಳು ಗರಿಗೆದರಿವೆ. ಇಲ್ಲಿ ಮೇಲ್ನೋಟಕ್ಕೆ ಕೈ ಪಡೆಗೆ ಆಡಳಿತದ ಚುಕ್ಕಾಣಿ ಅನಾಯಾಸವಾಗಿ ದಕ್ಕುವ ಎಲ್ಲಾ ಸಾಧ್ಯತೆಗಳಿದ್ದರೂ ಬಿಜೆಪಿಯ ಒಳಗೊಳಗಿನ ಮಸಲತ್ತುಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವ ಬಹುದೊಡ್ಡ ಗೇಮ್ ಪ್ಲ್ಯಾನ್ “ಕೈ”ಗೆತ್ತಿಗೊಂಡಿದೆ. 19 ಸಂಖ್ಯೆಯ ಆಟ..! ಅಸಲು, 19 ಸದಸ್ಯ ಬಲದ ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಸದ್ಯ ಬಿಜೆಪಿಗೆ 7 ಜನ...