ಮುಂಡಗೋಡ: ಗಾಂಧಿ ಜಯಂತಿ ಹಾಗೂ ಶಾಸ್ತ್ರಿಯವರ ಜಯಂತಿಯಂದು ಮುಂಡಗೋಡಿನಲ್ಲಿ ಪುಣ್ಯದ ಕೆಲಸ ಮಾಡುತ್ತಿರುವ ಧನ್ಯತೆ ಇದೆ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮನತುಂಬಿ ಹೇಳಿದ್ರು. ಅವ್ರು ಇಂದು ಪಟ್ಟಣದ ಟೌನ್ ಹಾಲ್ ನಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ಗಾಂಧಿನಗರ, ಕಂಬಾರಗಟ್ಟಿ, ಲಂಬಾಣಿ ತಾಂಡಾ, ಅಂಬೇಡ್ಕರ್ ಬಡಾವಣೆಯ 250 ಅರ್ಹ ಫಲಾನುಭವಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿ ಮಾತನಾಡುತ್ತಿದ್ದರು. ಮುಂಡಗೋಡಿನ ಬಡವರಿಗೆ ಒಳ್ಳೆಯ ದಿನಗಳು ಬಂದಿವೆ. ಕಳೆದ ಮೂವತ್ತು...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಮುಂಡಗೋಡ ಸುದ್ದಿ
ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಬಸ್ ವ್ಯವಸ್ಥೆಗೆ ಆಗ್ರಹ, ಮುಂಡಗೋಡಿನಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ..!
ಮುಂಡಗೋಡ: ತಾಲೂಕಿನಲ್ಲಿ ಇದುವರೆಗೂ ಬಸ್ ಮುಖವನ್ನೇ ಕಾಣದ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಇಂದು ಪ್ರತಿಭಟನೆಗಿಳಿದಿದ್ದಾರೆ. ನಮಗೆ ಬಸ್ ಬೇಕೇ ಬೇಕು ಅಂತಾ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಇದುವರೆಗೂ ಬಸ್ ಸೌಲಭ್ಯ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿ ನಿತ್ಯವೂ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಬೇಕು ಅಂದ್ರೆ ಏನಿಲ್ಲವೆಂದರೂ ನಾಲ್ಕೈದು ಕೀ.ಮಿ ನಡೆದುಕೊಂಡೇ ಬರಬೇಕು. ಅಲ್ದೆ ಗ್ರಾಮಸ್ಥರು...
ಬರಗೆಟ್ಟವನ ಲಂಚದಾಸೆಗೆ ಬೀದಿಗೆ ಬಿದ್ಲಾ ಆ ವೃದ್ದೆ..? ಅಸಲು, ಆ ವೃದ್ದೆಗೆ ಆಗಿರೋ ಅನ್ಯಾಯ ಎಂಥಾದ್ದು ಗೊತ್ತಾ..?
ಮುಂಡಗೋಡ: ಪ್ರಿಯ ವೀಕ್ಷಕರೇ, ನಿನ್ನೆ ನಿಮಗೆ ಮುಂಡಗೋಡ ತಾಲೂಕಿನಲ್ಲಿ ಬಡವ್ರಿಗೆ ಹಂಚಿಕೆಯಾಗೋ ಮನೆಗಳಲ್ಲಿ ನಡೆಯುತ್ತಿರೋ ಎತ್ತುವಳಿ ಪುರಾಣದ ಬಗ್ಗೆ ಹೇಳಿದ್ವಿ. ನೊಂದ ಸಂತ್ರಸ್ಥ ಕುಟುಂಬಗಳ ಆರ್ತನಾದ ಕೇಳಿಸಿದ್ವಿ. ಇವತ್ತೂ ಕೂಡ ಅದರದ್ದೇ ಮುಂದುವರಿದ ಭಾಗವಾಗಿ ಅದೊಂದು ಮನಕಲುಕುವ ಹಕೀಕತ್ತು ತಮ್ಮ ಮುಂದೆ ಇಡ್ತಿದಿವಿ. ರೊಕ್ಕ ಗಳಿಸಲೆಂದೇ ಬಾಯ್ತೆರೆದು ಕೂತಿರೋ, ಮನುಷ್ಯತ್ವವನ್ನೇ ಮರೆತಿರೋ ಕೆಲವು ಸರ್ಕಾರಿ ಸಿಬ್ಬಂದಿಗಳು ಹೇಗೇಲ್ಲ ಅಮಾನುಷವಾಗಿ ನಡೆದುಕೊಳ್ತಾರೆ ಅನ್ನೋದನ್ನ ಇವತ್ತು ಹೇಳ್ತಿವಿ. ವೇದಿಕೆಯಷ್ಟೇ..! ಯಸ್, ನಾವೀಗ ಮುಂಡಗೋಡಿನ ತಹಶೀಲ್ದಾರ್ ಕಚೇರಿಯ ಅವನೊಬ್ಬನ...
ಮುಂಡಗೋಡ ತಾಲೂಕಿನಲ್ಲಿ ಮನೆ ಕಳೆದುಕೊಂಡ ಬಡವ್ರಿಗೆ ಲಂಚಬಾಕರದ್ದೇ ಕಾಟ, ಸಚಿವರ ಪಿಎ ಹೆಸರಲ್ಲೂ ವಸೂಲಿ..? ಹಿಂಗಾದ್ರೆ ಹೆಂಗೆ ಗುರೂ..?
ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...
ಮುಂಡಗೋಡಿನಲ್ಲಿ ವೆಲ್ಡಿಂಗ್ ವರ್ಕ್ ಶಾಪ್ ದೋಚಿದ ಕಳ್ಳರು, 1.30 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಕಳ್ಳತನವಾಗಿದೆ. ಒಟ್ಟೂ 1 ಲಕ್ಷ 30 ಸಾವಿರ ಮೌಲ್ಯದ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಖದೀಮರು. ವೆಲ್ಡಿಂಗ್ ವರ್ಕ್ ಶಾಪ್ ನ ಮಾಲೀಕ ಎಜಾಜ್ ನವಾಜ ಮಹ್ಮದ್ ರಫೀಕ ನರೇಗಲ್ ಎಂಬುವವರು ಮುಂಡಗೋಡ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಸೆಪ್ಟೆಂಬರ್ 16 ರಂದು ರಾತ್ರಿ ಘಟನೆ ನಡೆದಿದ್ದು, ನವರಂಗ್ ವೆಲ್ಡಿಂಗ ವರ್ಕ್ಸ್ ಶಾಪ್ ನ ಮುಂದೆ ಇಟ್ಟಿದ್ದ ಕಬ್ಬಿಣದ ಟೇಬಲ್ಲುಗಳು, ದೊಡ್ಡದಾದ ಕಬ್ಬಿಣದ...
ರಾಜ್ಯದಲ್ಲಿ ಮಹಿಳೆಯರ ಮಾರಾಟ ಜಾಲ ಸಕ್ರೀಯವಾಗಿದೆ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಕಳವಳ..!
ಮುಂಡಗೋಡ: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮಾರಾಟ ಜಾಲ ಸಕ್ರೀಯವಾಗಿದೆ. ನಾವು ಈ ಜಾಲವನ್ನು ಬೇಧಿಸಲು ಸಂಪೂರ್ಣ ಸನ್ನದ್ಧಗೊಳ್ಳುತ್ತೇವೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತೇವೆ ಅಂತಾ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ರು. ಮುಂಡಗೋಡಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪ್ರಮೀಳಾ ನಾಯ್ಡು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಹಿಳೆಯರನ್ನು ಮದುವೆ ನೆಪದಲ್ಲಿ ದೂರದ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಗೆ ಮಾರಾಟ ಮಾಡುವ ಗ್ಯಾಂಗ್ ಆ್ಯಕ್ಟಿವ್ ಆಗಿದೆ. ಹೀಗಾಗಿ, ರಾಜ್ಯ ಮಹಿಳಾ ಆಯೋಗ ಈ...
ಮುಂಡಗೋಡಿನಲ್ಲಿ ವಿಶ್ವಕರ್ಮ ಜಯಂತಿ ಸರಳ ಉತ್ಸವ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾಡಳಿತ ಹಾಗೂ ಮುಂಡಗೋಡ ತಾಲೂಕ ವಿಶ್ವಕರ್ಮ ಸಮಾಜ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮ ಭಗವಾನರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಗೌರವ ಸಮರ್ಪಣೆ ಮಾಡಲಾಯಿತು. ನಂತರ ಇಲಾಖೆಯ ವತಿಯಿಂದ, ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ, ವಿಶ್ವಕರ್ಮ ಸಮಾಜದ ಶ್ರೀಮತಿ ರೇಣುಕಾ ಬಡಿಗೇರ, ಈಶ್ವರಪ್ಪ ಬಡಿಗೇರ ಇಂದೂರು, ಮೌನೇಶ ಬಡಿಗೇರ ಉಗ್ಗಿನಕೇರಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಇಓ...
ಇಂದು “ನಮೋ ಜನ್ಮದಿನ” ಹಡಪದ ಸಮಾಜದಿಂದ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ..!
ಮುಂಡಗೋಡ: ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಸಂಭ್ರಮ ಜೋರಾಗಿತ್ತು. ಇಲ್ಲಿನ ಹಡಪದ ಅಪ್ಪಣ್ಣ ಸಮಾಜದಿಂದ ವಿಶೇಷವಾಗಿ ಮೋದಿಯವರ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಜ್ಞಾನಪ್ರಜ್ಞಾ ಅಂಧಮಕ್ಕಳ ವಿಶೇಷ ವಸತಿ ಶಾಲೆಯಲ್ಲಿ ಅಂಧ ಮಕ್ಕಳಿಗೆ ಕ್ಷೌರ ಸೇವೆ ಸಲ್ಲಿಸಲಾಯಿತು. ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ನೇತೃತ್ವದಲ್ಲಿ ಸುಮಾರು 35 ಅಂಧ ಮಕ್ಕಳಿಗೆ ಉಚಿತವಾಗಿ ಕ್ಷೌರ ಮಾಡಲಾಯಿತು. ಕದಂಬ ಹೇರ್ ಡ್ರೆಸಸ್ ನ ಕ್ಷೌರಿಕ ಬಾಂಧವರು ಅಂಧ ಮಕ್ಕಳಿಗೆ ಬೆಳಿಗಿನಿಂದಲೇ ಕ್ಷೌರ...
ಅತ್ತಿವೇರಿಯ ವ್ಯಕ್ತಿ ಲಕ್ಣ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಅತ್ತಿವೇರಿಯ ವ್ಯಕ್ತಿಯೊಬ್ಬ ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಅತ್ತಿವೇರಿ ಗ್ರಾಮದ ನಬೀಸಾಬ್ ಮತ್ತಿಗಟ್ಟಿ(32) ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ತನ್ನ ಪತ್ನಿಯ ತವರು ಮನೆಯಲ್ಲೇ ವಾಸವಾಗಿದ್ದ ನಬೀಸಾಬ್ ಹೀಗೆ ದಿಢಿರನೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?
ಮುಂಡಗೋಡ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಾನಸಿಕ ಅಸ್ವಸ್ಥಳೊಬ್ಬಳನ್ನು ಮಹಿಳೆಯೋರ್ವಳು ಮನಬಂದಂತೆ ಥಳಿಸಿದ್ದಾಳೆ. ಮನಸೋ ಇಚ್ಚೆ ಚಪ್ಪಲಿಯಿಂದ ನಡುರಸ್ತೆಯಲ್ಲೇ ಥಳಿಸಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಸ್ವಸ್ಥೆಯ ನರಳಾಟ..! ನಿಜ ಅಂದ್ರೆ, ಇದು ನಡೆದದ್ದು ಮುಂಡಗೋಡ ಪಟ್ಟಣದ ಪಟ್ಟಣ ಪಂಚಾಯತಿ ಎದುರಗಡೆ. ಮಾನಸಿಕ ಅಸ್ವಸ್ಥೆಯನ್ನು ಅಟ್ಟಾಡಿಸಿ ಹೊಡೆದಿರೋ ಮಹಿಳೆ ಥೇಟು ರೌಡಿಯಂತೆ ನಡೆದುಕೊಂಡಿದ್ದಾಳೆ. ರಸ್ತೆಯಲ್ಲಿ ಹೊಡೆತ ತಾಳಲಾರದೇ ಮಾನಸಿಕ ಅಸ್ವಸ್ಥೆ ಚೀರಾಟ ಮಾಡುತ್ತಿದ್ದರೂ ಕರುಣೆ ಬಾರದೇ ಆ ಮಹಿಳೆ ಚಪ್ಪಲಿಯಿಂದ ಥಳಿಸಿದ್ದಾಳೆ. ಇನ್ನು ಘಟನೆ ಕಂಡ ದಾರಿಹೋಕನೊಬ್ಬ...









