ಶಿರಸಿ: ನಗರದಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ, ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ನಡೆಯಿತು. ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು. ಕಾಂಗ್ರೆಸ್ ಹಿರಿಯ ಮುಖಂಡ ಆರ್. ವಿ.ದೇಶಪಾಂಡೆ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು.
Top Stories
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Category: ಉತ್ತರ ಕನ್ನಡ
ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಇನ್ನೂ ಉಸಿರಾಡ್ತಿದೆಯಾ..? ಇಂತಹದ್ದೊಂದು ಪ್ರಶ್ನೆ ಬಹುತೇಕ ಕ್ಷೇತ್ರದ ಜನರಲ್ಲಿದೆ. ಯಾಕಂದ್ರೆ, ಯಾವಾಗ, ಶಿವರಾಮ್ ಹೆಬ್ಬಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಬಾವುಟ ಹಿಡಿದ್ರೊ, ಆ ಕ್ಷಣದಿಂದಲೇ ಇಡೀ ಮುಂಡಗೋಡ ತಾಲೂಕಿನ “ಕೈ” ಪಡೆಯ ಜಂಘಾಬಲವೇ ಕುಗ್ಗಿಹೋಯ್ತು, ಇನ್ನೇನು ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಯ್ತು ಅನ್ನೋ ವಾತಾವರಣ ಇತ್ತು. ಇದು ಇತಿಹಾಸ..! ಹಾಗೆ ನೋಡಿದ್ರೆ, ಇದುವರೆಗೂ ತಾಲೂಕಿನ ಮೂರೂ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಭಲವಾಗಿಯೇ ಇತ್ತು. ಬಿಜೆಪಿ ಯಾವುದೇ ಒಂದು...
ಶಿರಸಿಯಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೈಕಲ್ ಸವಾರಿಗೆ ಆರಂಭಿಕ ವಿಘ್ನ..? ನಡಿಯತ್ತಾ ಪ್ರತಿಭಟನೆ..?
ಶಿರಸಿ: ನಗರದಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ನಡೆಸಲಿರೋ ಸೈಕಲ್ ಜಾಥಾ ಗೆ ಆರಂಭಿಕ ವಿಘ್ನ ಎದುರಾಗಿದೆ. ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಅನುಮತಿ ನಿರಾಕರಿಸಲಾಗಿದ್ದು, ಈ ನಡುವೆಯೇ ಕಾಂಗ್ರೆಸ್ ಸೈಕಲ್ ಜಾಥಾ ನಡೆಸಲು ತಯಾರಿ ನಡೆಸಿದೆ. ಈಗಷ್ಟೇ ಶಿರಸಿ ನಗರಕ್ಕೆ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ಮೊದಲು ಮಾರಿಕಾಂಬೆಯ ದರ್ಶನ ಪಡೆದ ಡಿಕೆಶಿ, ಆನಂತರದಲ್ಲಿ ಸೈಕಲ್ ಜಾಥಾ ನಡೆಸಲಿದ್ದಾರೆ....
ಹನುಮಾಪುರ ಕಾಳಿಕಾಮಠದ “ಶ್ರೀಗಳು” ಅಸ್ತಂಗತ..! ಗಣ್ಯರ ಸಂತಾಪ..!!
ಮುಂಡಗೋಡ ತಾಲೂಕಿನ ಹನುಮಾಪುರ ಕಾಳಿಕಾಮಠದ (ಹೀರೇಮಠ) ಸದಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ನಸುಕಿನ ಜಾವ ವಿಧಿವಶರಾಗಿದ್ದಾರೆ. ಒಂದು ತಿಂಗಳಿಂದ ಅನಾರೋಗ್ಯ..! ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀಗಳು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಇಂದು ಬೆಳಗಿನ ಜಾವ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಪ್ರತಿಷ್ಠಿತ ಮಠ..! ಮುಂಡಗೋಡ ತಾಲೂಕಿನ ಪ್ರತಿಷ್ಠಿತ ಕಾಳಿಕಾಮಠದಲ್ಲಿ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯಗಳನ್ನು ಶ್ರೀಗಳು ಕೈಗೊಂಡಿದ್ರು. ಹೀಗಾಗಿ, ಶ್ರೀ ಮಠ ತಾಲೂಕು ಸೇರಿದಂತೆ...
ತವರಿಗೆ ಹೋದ ಪತ್ನಿ ವಾಪಸ್ ಬರಲೇ ಇಲ್ಲ: ಮನನೊಂದ ಪತಿ ಮಾಡಿಕೊಂಡಿದ್ದು ಮಾತ್ರ ದುರಂತ..!
ಮುಂಡಗೋಡ : ಅವನು ಹೆಂಡತಿಯನ್ನು ಅತಿಯಾಗಿ ಹಚ್ಚಿಕೊಂಡಿದ್ದ, ನೀನಿಲ್ಲದೇ ನಾನಿಲ್ಲ, ನನಗೆ ನೀನು; ನಿನಗೆ ನಾನು ಅಂತಿದ್ದ, ಆದ್ರೆ ಆತನ ಬಾಳಲ್ಲಿ ಅದು ಹಾಗಾಗಲೇ ಇಲ್ಲ. ಆದ್ರೆ, ತವರಿಗೆ ಹೋದ ತನ್ನ ಹೆಂಡ್ತಿ ವಾಪಸ್ ಬರಲೇ ಇಲ್ಲ ಅಂತಾ ಪತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವರಾಜ್ ಬರಮಣ್ಣ ಕುರಿಯವರ್ ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈಗಷ್ಟೇ 36 ವರ್ಷಕ್ಕೆ ಕಾಲಿಟ್ಟಿದ್ದ, ಹೀಗಾಗಿ, ವಯಸ್ಸಲ್ಲದ ವಯಸ್ಸಲ್ಲೇ ದುರಂತ ಅಂತ್ಯ ಕಂಡಿದ್ದಾನೆ. ಅಂದಹಾಗೆ, ಈ ಘಟನೆ ನಡೆದಿರೋದು ಮುಂಡಗೋಡ ತಾಲೂಕಿನ...
ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..? ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆ ಇನ್ನೂ ಘೋಷಣೆಯೇ ಆಗಿಲ್ಲ. ಕೇವಲ ಮೀಸಲಾತಿ ಮಾತ್ರ ಪ್ರಕಟವಾಗಿದೆ. ಆದ್ರೆ ಇಷ್ಟರೊಳಗೆ ಮುಂಡಗೋಡ ತಾಲೂಕಿನಾಧ್ಯಂತ ಇನ್ನಿಲ್ಲದ ರಾಜಕೀಯ ಚರ್ಚೆಗಳು ಶುರುವಾಗಿವೆ. ತಾಲೂಕಿನಲ್ಲಿರೋ ಮೂರು ಜಿಪಂ ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಪಡೆಯಲು “ಬಹುಪರಾಕ್” ಸಂಪ್ರದಾಯಗಳು ಚಾಲ್ತಿ ಪಡೆದುಕೊಂಡಿವೆ. ಎಲ್ಲವೂ ಟಿಕೆಟ್ ಗಾಗಿ..! ಅದ್ರಲ್ಲೂ, ಬಿಜೆಪಿ ಪಾಳಯದಲ್ಲಂತೂ ಈಗಾಗಲೇ ನಂಗೇ ಟಿಕೆಟ್...
ಉತ್ತರ ಕನ್ನಡ ಜಿಲ್ಲೆಯ ದೇವಾಲಯಗಳಲ್ಲಿ ಇಂದಿನಿಂದ ಭಕ್ತರಿಗೆ ದರ್ಶನ ಭಾಗ್ಯ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ದೇವಸ್ಥಾನಗಳ ಬಾಗಿಲು ಓಪನ್ ಆಗ್ತಿವೆ. ಕಳೆದ ಎರಡು ತಿಂಗಳಿಂದ ಕೊರೋನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲಾ ದೇವಾಲಯಗಳು ಓಪನ್ ಆಗಲಿವೆ. ಶಿರಸಿ ಮಾರಿಕಾಂಬಾ, ಗೋಕರ್ಣ ಮಹಾಬಲೇಶ್ವರ, ಮುರ್ಡೆಶ್ವರ ದೇವಸ್ಥಾನ, ಇಡಗುಂಜಿ ಮಹಾಗಣಪತಿ ಸೇರಿದಂತೆ ಹಲವು ದೇವಾಲಯಗಳಲ್ಲಿ ಭಕ್ತರಿಗೆ ಇಂದಿನಿಂದ ದರ್ಶನ ಭಾಗ್ಯ ಸಿಗಲಿದೆ. ಜಿಲ್ಲೆಯಲ್ಲಿ ಇಂದು ಓಪನ್ ಆದ ದೇಗುಲಗಳನ್ನು ದರ್ಶನ ಮಡ್ಕೊಬೇಕಾ..?...
ಮುಂಡಗೋಡಿನ “ಅನಾಸಾಗರ್” ಇಸ್ಮಾಯಿಲ್ ಇನ್ನು ನೆನಪು ಮಾತ್ರ..!
ಮುಂಡಗೋಡ: ಪಟ್ಟಣದಲ್ಲಿ ಪ್ಲೈವುಡ್ ಹಾಗೂ ಹಾರ್ಡವೇರ್ ಟ್ರೇಡರ್ಸ್ ನಡೆಸುತ್ತಿದ್ದ ಇಸ್ಮಾಯಿಲ್ ದೊಡ್ಮನಿ (40) ರವಿವಾರ ರಾತ್ರಿ ನಿಧನರಾಗಿದ್ದಾರೆ. ಅನಾಸಾಗರ್ ಅಂತಲೇ ತಾಲೂಕಿನಲ್ಲಿ ಖ್ಯಾತಿ ಪಡೆದಿದ್ದ ಇಸ್ಮಾಯಿಲ್, ಮುಂಡಗೋಡಿನಲ್ಲಿ ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅನಾಸಾಗರ್, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತಿಚೆಗಷ್ಟೇ ಇಸ್ಮಾಯಿಲ್ ರವರ ತಾಯಿ ಅನಾರೋಗ್ಯದಿಂದ ನಿಧನರಾಗಿದ್ದರು. ಇಸ್ಮಾಯಿಲ್ ನಿಧನಕ್ಕೆ ಮುಂಡಗೋಡಿನ ಅಪಾರ ಸ್ನೇಹ ಬಳಗ ಸಂತಾಪ ಸೂಚಿಸಿದೆ.
ಹೊನ್ನಾವರದಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆ, ಓರ್ವ ನಾಪತ್ತೆ, ಮೂವರ ರಕ್ಷಣೆ..!
ಹೊನ್ನಾವರ: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆಯಾಗಿ ಓರ್ವ ಮೀನುಗಾರ ನಾಪತ್ತೆಯಾಗಿ, ಮೂವರನ್ನು ರಕ್ಷಿಸಿರೋ ಘಟನೆ ಹೊನ್ನಾವರದ ಕಾಸರಕೋಡು ಇಕೋ ಬೀಚ್‌ನಲ್ಲಿ ನಡೆದಿದೆ. ಉದಯ ದಾಮೋದರ ತಾಂಡೇಲ್ ಕಾಣೆಯಾದ ಮೀನುಗಾರನಾಗಿದ್ದು, ವಿಜಯ್ ಫರ್ನಾಂಡೀಸ್, ಶಂಕರ್ ತಾಂಡೇಲ್, ಕಾಮೇಶ್ವರ ತಾಂಡೇಲ್ ಎಂಬುವವರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಇಂದು ಬೆಳಿಗ್ಗೆ ಮೀನುಗಾರಿಕೆಗಾಗಿ ತಮ್ಮ ಬೋಟ್ ಮೂಲಕ ಸಮುದ್ರಕ್ಕಿಳಿದಿದ್ದ ಮೀನುಗಾರರು, ವಾಪಸ್ಸಾಗುವಾಗ ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮುಳುಗಡೆಯಾಗಿ ದುರಂತ ಸಂಭವಿಸಿದೆ. ಕಾಣೆಯಾದ ಮೀನುಗಾರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ....
ತಾಲೂಕಿನಲ್ಲಿ ನಾಳೆ ಹಾಗೂ ನಾಡಿದ್ದು ನಡೆಯಬೇಕಿದ್ದ ಸಚಿವ ಹೆಬ್ಬಾರ್ ಕಾರ್ಯಕ್ರಮಗಳು ರದ್ದು..!
ಮುಂಡಗೋಡ: ತಾಲೂಕಿನಲ್ಲಿ ನಾಳೆ ಸೋಮವಾರ ದಿನಾಂಕ ಜು.5 ರಂದು ಮಧ್ಯಾಹ್ನ ಮುಂಡಗೋಡ ಗ್ರಾಮಾಂತರ ಪ್ರದೇಶಗಳಲ್ಲಿ ಹಾಗೂ ನಾಡಿದ್ದು ಮಂಗಳವಾರ ಜು.6 ರಂದು ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಚಿವ ಶಿವರಾಮ ಹೆಬ್ಬಾರ್ ರವರ ಸಾರ್ವಜನಿಕ ಕಾರ್ಯಕ್ರಮಗಳು ರದ್ದಾಗಿವೆ. ಅನಿವಾರ್ಯ ಕಾರಣಗಳಿಂದ ಸಚಿವ ಶಿವರಾಮ ಹೆಬ್ಬಾರ್ ಅವರು ತುರ್ತಾಗಿ ಬೆಂಗಳೂರಿನಲ್ಲಿ ಸಭೆಗೆ ಹಾಜರಾಗಬೇಕಾಗಿರುವುದರಿಂದ ನಾಳೆ ಮಧ್ಯಾಹ್ನದ ಹಾಗೂ ಮಂಗಳವಾರದ ಮುಂಡಗೋಡ ತಾಲೂಕಿನ ಎಲ್ಲಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಅಂತಾ ಸಚಿವರ ಆಪ್ತ ವಲಯ ಮಾಹಿತಿ ನೀಡಿದೆ....