ಕಾರವಾರ- ಗ್ರಾಮ ಪಂಚಾಯತಿ ಚುನಾವಣೆಯಲ್ಲಿನ ಅವಿರೋಧ ಆಯ್ಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಅಂತಾ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ತಿಳಿಸಿದ್ದಾರೆ.. ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ ಮತ್ತು ಭಟ್ಕಳದಲ್ಲಿ ಮುಗಿದಿದೆ. ಇನ್ನು, ಎರಡನೇ ಹಂತದಲ್ಲಿ ಸಿದ್ದಾಪುರ, ಸಿರಸಿ, ಮುಂಡಗೊಡ, ಯಲ್ಲಾಪುರ, ಹಳಿಯಾಳ, ದಾಂಡೇಲಿ ಮತ್ತು ಜೊಯಿಡಾಗಳಲ್ಲಿ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳು ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಉತ್ತರ ಕನ್ನಡ
ಹುನಗುಂದ ಬಳಿ ಅಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಗಡಿ ಮಹಿಳೆ
ಮುಂಡಗೋಡ- ಹೆರಿಗೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ 108 ಅಂಬುಲೆನ್ಸ್ ನಲ್ಲಿಯೇ ಗರ್ಭಿಣಿಯೊಬ್ರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.. ಮುಂಡಗೋಡ ತಾಲೂಕಿನ ಅಗಡಿ ಗ್ರಾಮದ 22 ವರ್ಷ ವಯಸ್ಸಿನ ಲಕ್ಷ್ಮೀ ಸುನಿಲ್ ಲಮಾಣಿ ಎಂಬುವರಿಗೆ ಇವತ್ತು ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ 108 ಅಂಬುಲೆನ್ಸ್ ಮೂಲಕ ಮುಂಡಗೋಡ ಆಸ್ಪತ್ರೆಗೆ ಗರ್ಭಿಣಿಯನ್ನು ಸಾಗಿಸುವ ಮದ್ಯೆ ಹುನಗುಂದ ಕ್ರಾಸ್ ಬಳಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.. ಇದು ಇವ್ರಿಗೆ ಎರಡನೇಯ ಹೆರಿಗೆಯಾಗಿದ್ದು ಮಗು ಆರೋಗ್ಯವಾಗಿದೆ.. ಈ ವೇಳೆ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್...
ನಾಳೆಯೂ ಬಸ್ ಗಳು ರಸ್ತೆಗಿಳಿಯಲ್ಲ; ಕುಟುಂಬಸ್ಥರೊಂದಿಗೆ ಪ್ರತಿಭಟನೆಗೆ ಸಜ್ಜಾದ ಸಾರಿಗೆ ನೌಕರರು
ಬೆಂಗಳೂರು- ಸಾರಿಗೆ ನೌಕರರ ಮುಷ್ಕರ ಮತ್ತಷ್ಟು ಜೋರಾಗುವ ಲಕ್ಷಣಗಳು ಕಾಣ್ತಿವೆ.. ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಅಂತಾ ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸ್ತಿರೋ ಸಾರಿಗೆ ಸಂಸ್ಥೆಯ ಚಾಲಕರು ಹಾಗೂ ನಿರ್ವಾಹಕರು ಎರಡು ದಿನದಿಂದ ಯಾವುದೇ ಸರ್ಕಾರಿ ಬಸ್ ಗಳನ್ನು ರಸ್ತೆಗಿಳಿಸಿಲ್ಲ.. ಪರಿಣಾಮ ನಿನ್ನೆಯಿಂದ ರಾಜ್ಯದಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.. ಇನ್ನು, ಸರ್ಕಾರ ಪ್ರತಿಭಟನಾನಿರತರ ಜೊತೆಗೆ ನಡೆಸುತ್ತಿರೊ ಸಂಧಾನಗಳು ಯಶಸ್ವಿಯಾಗಿಲ್ಲ.. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲ ನೀಡಿದ ಮೇಲಂತೂ ಸಾರಿಗೆ ನೌಕರರ ಮುಷ್ಕರ ಮತ್ತಷ್ಟು...
ಅಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಮುಂಡಗೋಡ- ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ 108 ಅಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರೋ ಘಟನೆ ಮಳಗಿ ಸಮೀಪ ಶಿರಸಿ ರಸ್ತೆಯಲ್ಲಿ ನಡೆದಿದೆ.. ಗೋಟಗೋಡಿಕೊಪ್ಪದ ರೂಪಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.. ಗೊಟಗೋಡಿಕೊಪ್ಪದಿಂದ ಶಿರಸಿ ಗೆ ಹೋಗುವ ಮಾರ್ಗ ಮದ್ಯೆ ಹೆರಿಗೆಯಾಗಿದ್ದು ತಾಯಿ ಮಗು ಆರೋಗ್ಯವಾಗಿದೆ..
ಕಾಡಾನೆ ದಾಳಿಯಿಂದ ಬೆಳೆನಾಶ; ಮನನೊಂದ ರೈತ ಆತ್ಮಹತ್ಯೆ
ಮುಂಡಗೋಡ: ಕಾಡಾನೆಗಳು ಭತ್ತದ ಕಾಳು ಬಣವೆಯನ್ನು ತಿಂದು ತುಳಿದು ಹಾನಿ ಮಾಡಿದ್ದನ್ನೆ ಮನಸ್ಸಿಗೆ ಹಚ್ಚಿಕೊಂಡು ತಾಲೂಕಿನ ಬೆಡಸಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯ ತೊಗರಳ್ಳಿ ಗ್ರಾಮದ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.. ಪ್ರಭಾಕರ್ ವಾಮನ ಕೊರ್ಸಿ(51) ಆತ್ಮಹತ್ಯೆ ಮಾಡಿಕೊಂಡ ರೈತ.. ಈತ ತನ್ನ ವ್ಯವಸಾಯಕ್ಕೆಂದು ವಿವಿಧ ಬ್ಯಾಂಕ ಹಾಗೂ ಸಂಘ ಸಂಸ್ಥೆಗಳಲ್ಲಿ ಸುಮಾರು 4ಲಕ್ಷ 20 ಸಾವಿರ ರೂಪಾಯಿ ಸಾಲ ಮಾಡಿ ಹೊಲದಲ್ಲಿ ಭತ್ತದ ಬೆಳೆಯನ್ನು ಬೆಳೆದು ಕೊಯ್ಲು ಮಾಡಿ ಕಾಳು ತುಂಬಿದ...
ಕಾಲುವೆಯಲ್ಲೂ ಅಕ್ರಮದ ವಾಸನೆ.?; ತನಿಖೆ ಕೋರಿ ತಹಶೀಲ್ದಾರರಿಗೆ ಅಟ್ಟಣಗಿ ಗ್ರಾಮಸ್ಥರ ಮನವಿ
ಮುಂಡಗೋಡ-ತಾಲೂಕಿನ ಅಟ್ಟಣಗಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯವರು ಕೈಗೊಂಡ ಕಾಲುವೆ ಕಾಮಗಾರಿ ಕಳಪೆಯಾಗಿದೆ, ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಬೇಕೆಂದು ಅಟ್ಟಣಗಿ ಗ್ರಾಮಸ್ಥರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ. ನಾಗನೂರ( ಹನುಮಾಪುರ) ಗ್ರಾಮ ಪಂಚಾಯತ ವ್ಯಾಪ್ತಿಯ ಅಟ್ಟಣಗಿ ಕೆರೆಗೆ ಸಣ್ಣ ನೀರಾವರಿ ಇಲಾಖೆಯಿಂದ ಕಾಲುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಈ ಕಾಮಗಾರಿ ಅಂದಾಜು ಮೊತ್ತ 50 ಲಕ್ಷ ಇದ್ದು ಕಾಮಗಾರಿ ಸಂಪೂರ್ಣ ಕಳಪೆ ಮಾಡಿದ್ದಾರೆ. ಈ ಕಾಮಗಾರಿಯಿಂದ ಅಟ್ಟಣಗಿ ಭಾಗದ ಸುಮಾರು 400 ರಿಂದ 500 ಎಕರೆ ಜಮೀನಿಗೆ ನೀರು ಹಾಯಲು...
ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಸಿಡ್ಲಗುಂಡಿಯಲ್ಲಿ 1 ಎಕರೆ ಕಬ್ಬು ಭಸ್ಮ
ಮುಂಡಗೋಡ- ಗದ್ದೆಯಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ, 1 ಎಕರೆ ಕಬ್ಬು ಸುಟ್ಟು ಕರಕಲಾದ ಘಟನೆ ತಾಲೂಕಿನ ಸಿಡ್ಲಗುಂಡಿಯಲ್ಲಿ ನಡೆದಿದೆ.. ಸಿಡ್ಲಗುಂಡಿಯ ರೈತ ಶಾಮು ದಾಕ್ಲು ಶಿಂಧೆ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯ ಮೇಲೆ ಹಾದು ಹೋಗಿರೋ ಕೆಇಬಿ ವಿದ್ಯತ್ ಕಂಬದ ತಂತಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಕಿಡಿ ಹೊತ್ತಿಕೊಂಡು ಅವಘಡ ಸಂಭವಿಸಿದೆ.. ಘಟನೆಯಲ್ಲಿ ಸುಮಾರು 1 ಲಕ್ಷ ಮೌಲ್ಯದ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯವಾಗಿದೆ.. ಹೀಗಾಗಿ...
ಗ್ರಾಮ ಪಂಚಾಯತಿ ಚುನಾವಣೆ ಸಚಿವ ಹೆಬ್ಬಾರಗೆ ಪ್ರತಿಷ್ಠೆ..! ಕಾಂಗ್ರೆಸ್ಸಿಗೆ ಆಕ್ಸಿಜನ್..?
ಮುಂಡಗೋಡ- ಸದ್ಯ ಗ್ರಾಮ ಪಂಚಾಯತಿ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ.. ಹೀಗಾಗಿ ತಾಲೂಕಿನಾಧ್ಯಂತ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.. ಅಧಿಕೃತ ಪಕ್ಷದ ಚಿನ್ಹೆಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸದೇ ಇದ್ದರೂ, ಆಯಾ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಇನ್ನಿಲ್ಲದ ಕಸರತ್ತು ನಡೆಸೋದಂತೂ ಸತ್ಯ.. ಅದ್ರಲ್ಲೂ ಮುಂಡಗೋಡ ತಾಲೂಕಿನ ಅಷ್ಟೂ ಗ್ರಾಮ ಪಂಚಾಯತಿಗಳಲ್ಲೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಲೇ ಬೇಕು, ಸಂಪೂರ್ಣ ಗ್ರಾಮ ಪಂಚಾಯತಿಗಳು ಕೇಸರಿಮಯವಾಗಲೇಬೇಕು ಅನ್ನೋ ಮಹತ್ವಾಕಾಂಕ್ಷೆಯಲ್ಲಿರೋ ಹೆಬ್ಬಾರ್ ಪಡೆಗೆ ತಾಲೂಕಿನಲ್ಲಿ ಒಂದಿಷ್ಟು ಪಕ್ಷದ...
ಲೆಫ್ಟಿನೆಂಟ್ ಅಭಯ್ ಪಂಡಿತ್ ಸಾಧನೆ; ಕನಸಿನ ಮುಂಡಗೋಡ ತಂಡದಿಂದ ಸನ್ಮಾನ
ಮುಂಡಗೋಡ- ಮುಂಡಗೋಡಿನ ಯುವಕ ಅಭಯ್ ಪಂಡಿತ್ ಚೆನ್ನೈನ ಭಾರತೀಯ ಸೇನೆಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ನವೆಂಬರ್ 21 ರಂದು ಲೆಫ್ಟಿನೆಂಟ್ ಆಗಿ ನಿಯುಕ್ತಿಗೊಂಡು ಸಾಧನೆಗೈದಿದ್ದಾರೆ. ಮುಂದೆ ರಾಜಸ್ಥಾನದ ವೆಸ್ಟರ್ನ್ ಸೆಕ್ಟರ್ ನಲ್ಲಿ ಸೇವೆ ಸಲ್ಲಿಸಲು ಹೊರಟಿದ್ದಾರೆ. ಈ ಮೂಲಕ ಮುಂಡಗೋಡಿನ ಮೊದಲ ಲೆಫ್ಟಿನೆಂಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೀಗಾಗಿ, ನಮ್ಮ ಕನಸಿನ ಮುಂಡಗೋಡ ವೇದಿಕೆ ವತಿಯಿಂದ ಲೆಫ್ಟಿನೆಂಟ್ ಅಭಯ್ ಪಂಡಿತ್ ಅವರಿಗೆ ಮುಂಡಗೋಡಿನ ಪರವಾಗಿ ಅಭಿನಂದಿಸಿ ,ಗೌರವಿಸಲಾಯಿತು.
ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ; ಮುಂಡಗೋಡ ಬಿಜೆಪಿಗರ ಸಂಭ್ರಮ
ಮುಂಡಗೋಡ- ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕ ಮಂಡನೆಯಾದ ಹಿನ್ನೆಲೆಯಲ್ಲಿ. ಬಿಜೆಪಿ ಮುಂಡಗೋಡ ಮಂಡಲ ಕಾರ್ಯಕರ್ತರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದ್ರು.. ಈ ಸಂದರ್ಭದಲ್ಲಿ ಬಿಜೆಪಿ ಮುಂಡಗೋಡ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಜಿ.ಪಂ ಸದಸ್ಯಎಲ್.ಟಿ.ಪಾಟೀಲ ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷ ಮಂಜುನಾಥ ಹರ್ಮಲಕರ, ಪಟ್ಟಣ ಪಂಚಾಯಿತಿಯ ಸದಸ್ಯ ಶೇಖರ್ ಲಮಾಣಿ, ಶ್ರೀಕಾಂತ ಸಾನು, ಶಿವರಾಜ ಸುಬ್ಬಾಯವರ ಯುವಮೋರ್ಚಾ ಅಧ್ಯಕ್ಷ ಗಣೇಶ ಶಿರಾಲಿ, ಮಂಡಳದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿಠ್ಠಲ...

