ಮುಂಡಗೋಡ ಸಮೀಪದ ಕರಗಿನಕೊಪ್ಪ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರಗೆ ರವಾನಿಸಲಾಗಿದೆ. ತಾಲೂಕಿನ ಮೂಡಸಾಲಿ ಗ್ರಾಮದ ಜಗದೀಶ ಪಕ್ಕೀರಪ್ಪ ಪಾಟೀಲ್ (52) ಎಂಬುವ ಬೈಕ್ ಸವಾರನೇ ಗಂಭೀರ ಗಾಯಗೊಂಡಿದ್ದಾನೆ. ಈತ ಮುಂಡಗೋಡಿನಿಂದ ಮೂಡಸಾಲಿಗೆ ಮತ್ತೋರ್ವ ವ್ಯಕ್ತಿ ಕೇದಾರಲಿಂಗ್ ಹನ್ಮಂತಪ್ಪ ಬೆಡಸಗಾವ್ ಎಂಬುವವರ ಜೊತೆ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹೀಗಾಗಿ, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯವಾಗಿದೆ. ಇದೇ ವೇಳೆ ವಕೀಲ ಗುಡ್ಡಪ್ಪ ಕಾತೂರ ಅದೇ ಮಾರ್ಗದಲ್ಲಿ ಬರುತ್ತಿದ್ದಾಗ ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...
Top Stories
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
Category: ಉತ್ತರ ಕನ್ನಡ
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?
ಮುಂಡಗೋಡಿನಲ್ಲಿ ಅಕ್ರಮವಾಗಿ ಗೋಮಾತೆಯ ವಧೆ ಮಾಡಲಾಗಿದೆ. ಹಾಗಂತ ಮುಂಡಗೋಡಿನ ಹಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಮುಂಡಗೋಡ ಹಳೂರಿನಲ್ಲಿರೋ ದರ್ಗಾ ಹತ್ತಿರ ಘಟನೆ ನಡೆದಿದ್ದು, ಘಟನೆಯಲ್ಲಿ ಎಷ್ಟು ಆಕಳನ್ನು ವಧೆ ಮಾಡಲಾಗಿದೆ..? ವಶಪಡಿಸಿಕೊಂಡ ವಸ್ತುಗಳು ಏನೇನು..? ಸಿಕ್ಕ ಆರೋಪಿಗಳು ಎಷ್ಟು..? ಎಲ್ಲ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?
ಕಾರವಾರ: ನಗರಸಭೆ ಮಾಜಿ ಸದಸ್ಯ ಸತೀಶ್ ಕೋಳಂಬಕರ್ ಹತ್ಯೆಯ ಹಿಂದೆ ಅಲ್ಲಿನ ಪೊಲೀಸರ ನಿರ್ಲಕ್ಷ ಹಾಗೂ ಬೇಜವಾಬ್ದಾರಿಯೂ ಕಾರಣವಾಯ್ತಾ..? ಅದೊಂದು ಹೊಟೆಲ್ ನಲ್ಲಿ ನಡೆದಿದ್ದ ಗಲಾಟೆಯ ದೂರು ದಾಖಲಿಸಿಕೊಂಡು ಸರಿಯಾದ ಕ್ರಮ ಕೈಗೊಂಡಿದ್ದರೆ ಸತೀಶ್ ಹೆಣ ಬೀಳ್ತಾನೇ ಇರಲಿಲ್ಲವಾ..? ಹೀಗಾಗಿನೇ ಇವಾಗ ಆ ನಾಲ್ವರು ಬೇಜವಾಬ್ದಾರಿ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆಯಾ..? ಸದ್ಯದ ಬಾತ್ಮಿಗಳನ್ನು ಗಮನಿಸಿದ್ರೆ ಹೌದು ಅನ್ನುತ್ತಿವೆ ಪೊಲೀಸ್ ಮೂಲಗಳು. ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ ಕೋಳಂಬಕರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ, ನಗರ ಠಾಣೆಯ...
ಭಾರೀ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ, ಮನೆಯ ಮೇಲ್ಚಾವಣಿ ಹಾನಿ, ಗೋವಿನಜೋಳ ರಾಶಿ ನೀರಲ್ಲಿ
ಮುಂಡಗೋಡ ತಾಲೂಕಿನಲ್ಲಿ ಸಂಜೆ ಸುರಿದ ಭಾರಿ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಹಲವು ಮನೆಗಳ ಮೇಲ್ಚಾವಣಿಗಳು ಹಾರಿಹೋಗಿದ್ದು, ಇನ್ನಿಲ್ಲದ ನಷ್ಟ ಸಂಭವಿಸಿದೆ. ರೈತರ ಗೋಳು..! ಇನ್ನು ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕೊಪ್ಪ ಗ್ರಾಮದಲ್ಲಿ ಒಣಗಿಸಲು ಹಾಕಿದ್ದ ಗೋವಿನಜೋಳ ಮಳೆ ನೀರಿನ ಪಾಲಾಗಿದ್ದು ಹಾನಿಯುಂಟಾಗಿದೆ. ಗ್ರಾಮದ ಕಾಂಕ್ರೀಟು ರಸ್ತೆಯ ಮೇಲೆ ಒಣಗಲು ಹಾಕಿದ್ದ ಗೋವಿನಜೋಳದ ರಾಶಿಯಲ್ಲಿ ಮಳೆ ನೀರು ಹೊಕ್ಕು ನೆನೆದು ಹೋಗಿದೆ....
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಪಾಳಾ ಸಮೀಪದ ರಾಮಾಪುರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 50 ಸಾವಿರ ಮೌಲ್ಯದ್ದು..!ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಯಲ್ಲಾಪುರ ರಸ್ತೆಯ ಮಹಮ್ಮದಅನಿಸ ಎಜಾಜ್ ಅಹ್ಮದ್ ಬೇಗ್ (20) ಎಂಬುವವ.. ಈತ ತನ್ನ ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಖಚಿತ ಮಾಹಿತಿ ಆಧಾರದಲ್ಲಿ...
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಷ್ಟರು ನೀಚ ಕೃತ್ಯ ಮಾಡಿದ್ದಾರೆ. ಮೀನು ಸಾಕಾಣಿಕೆ ಮಾಡಿದ್ದ ಕೆರೆಗೆ ವಿಷ ಬೆರೆಸಿ ಮೀನುಗಳ ಸಾವಿಗೆ ಕಾರಣರಾಗಿದ್ದಾರೆ. ನೂರಾರು ಮೀನುಗಳು ಹಂತಹಂತವಾಗಿ ಸಾವನ್ನಪ್ಪುತ್ತಿವೆ ಅನ್ನೊ ಮಾಹಿತಿ ಲಭ್ಯವಾಗಿದೆ. ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ ಸರ್ವೇ ನಂಬರ್ 49 ರಲ್ಲಿ ಘಟನೆ ನಡೆದಿದ್ದು, ಮೌಲಾಲಿ ಮಕಾಂದಾರ ಎನ್ನುವವರು ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪಡೆದಿದ್ದರು. ಆದ್ರೆ, ಈಗಾಗಲೇ ಮೀನುಗಳು ಒಂದು ಹಂತಕ್ಕೆ ಬೆಳೆದಿದ್ದಾಗಲೇ ದುರುಳರು ಕೆರೆಗೆ ವಿಷ ಹಾಕಿರೋ ಅನುಮಾನ...
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಮುಂಡಗೋಡ ತಾಲೂಕಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಾಳೆ ಮಂಗಳವಾರ ದಿ. 22 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಅಂತಾ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ ಮಾಹಿತಿ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ ಮುಂಡಗೋಡಿನ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಅಂತಾ ಅವ್ರು ಮಾಹಿತಿ ನೀಡಿದ್ದಾರೆ.
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಭೀಕರ ಹತ್ಯೆ ಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಇಡೀ ಕಾರವಾರ ನಗರ ಬೆಚ್ಚಿ ಬಿದ್ದಿದೆ. ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಈ ಕೊಲೆಯಿಂದ ಕಾರವಾರಿಗರು ಬೆಚ್ಚಿ ಬಿದ್ದಿದ್ದಾರೆ. ಸ್ಕೂಟಿಯಲ್ಲಿ ಬಂದ...
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಮುಂಡಗೋಡ: ಸಿ.ಇ.ಟಿ ಪರೀಕ್ಷೆಯ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಬ್ರಾಹ್ಮಣ ಸಮುದಾಯದ ಒಬ್ಬ ವಿದ್ಯಾರ್ಥಿಯನ್ನು ಆತ ಧರಿಸಿದ ಜನಿವಾರವನ್ನು ಕತ್ತರಿಸಿ ಪರೀಕ್ಷೆಗೆ ಪ್ರವೇಶ ನೀಡಿರುವುದನ್ನು ಹಾಗೂ ಬೀದರನಲ್ಲಿ ವಿದ್ಯಾರ್ಥಿ ಜನಿವಾರ ಧರಿಸಿದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡದ ಘಟನೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಖಂಡಿಸಿರೊ ಅವ್ರು, ಈ ದೇಶವು ವಿವಿಧ ಧರ್ಮ, ಸಂಪ್ರದಾಯ, ಧಾರ್ಮಿಕ ಚಿಹ್ನೆ, ಆಚರಣೆಗಳ ಗೌರವವನ್ನು ಮೂಲಭೂತ ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಅವಮಾನವಾಗುವ...
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ.ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ...