Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!

SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!

ಕಾರವಾರ: ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಅತ್ಯಂತ ವ್ಯವಸ್ಥಿತ ಮತ್ತು ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಮತ್ತು ಪರೀಕ್ಷಾ ಮಾರ್ಗಸೂಚಿಗಳನ್ನು ಕಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ದತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲೆಯಲ್ಲಿ 20035 ವಿದ್ಯಾರ್ಥಿಗಳು ಹಾಜರಾಗುತ್ತಿದ್ದು, ಯಾವುದೇ ವಿದ್ಯಾರ್ಥಿಗಳು...

Post
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!

ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ವೀರಶೈವ ಧರ್ಮ ಸಂಸ್ಥಾಪಕ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. 2024-25 ಸಾಲಿನಯುಗಮಾನೋತ್ಸವ ಹಿನ್ನೆಲೆಯಲ್ಲಿ ಹುನಗುಂದ ಗ್ರಾಮದ ಮಂತ್ರವಾಡಿ ಮಠದ ಶ್ರೀ ರೇಣುಕ ಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬ್ಯಾಹಟ್ಟಿಯ ಉಜ್ಜಯಿನಿ ಶಾಖಾ ಹಿರೇಮಠದ ಶ್ರೀ ಷ ಬ್ರ ಮರುಳ ಸಿದ್ಧ ಶಿವಾಚಾರ್ಯ ಮಹಾ ಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುನಗುಂದ ಸರ್ವಧರ್ಮದ ಗುರು ಹಿರಿಯರು, ಜಂಗಮ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.

Post
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?

ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?

ಹಾವೇರಿ ಜಿಲ್ಲೆಯ ಬಂಕಾಪುರ ಬಳಿ ಮುಂಡಗೋಡಿನ ವ್ಯಕ್ತಿ ಭೀಕರ ಸಾವು ಕಂಡಿದ್ದಾನೆ. ತನ್ನದೇ ಬೈಕ್ ಪಕ್ಕದಲ್ಲಿ ಸಾವನ್ನಪ್ಪಿರೋ ವ್ಯಕ್ತಿ ಅನುಮಾನಾಸ್ಪದವಾಗಿ ಹೆಣವಾಗಿದ್ದಾನೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಮಂಜುನಾಥ್ ಜಾಧವ್(45) ಅಲಿಯಾಸ್ ಮಂಜು ಮೂಡಸಾಲಿ ಎಂಬುವವನೇ ಸಾವನ್ನಪ್ಪಿರೋ ವ್ಯಕ್ತಿ ಅಂತಾ ಅನುಮಾನಿಸಲಾಗಿದೆ. ಅಸಲು, KA 31 E F 3587 ನೋಂದಣಿ ಸಂಖ್ಯೆಯ ಪಲ್ಸರ್ ಬೈಕ್ ನ ಪಕ್ಕದಲ್ಲೇ ರಕ್ತಸಿಕ್ತವಾಗಿ ಬಿದ್ದಿರೋ ವ್ಯಕ್ತಿ, ಮಂಜುನಾಥ್ ಜಾಧವ್ ಅಂತ ಹೇಳಲಾಗ್ತಿದೆ. ಬಂಕಾಪುರ ಪಟ್ಟಣದ ಹೊರವಲಯದ ರಸ್ತೆ ಪಕ್ಕದಲ್ಲಿ ಘಟನೆ ನಡೆದಿದೆ....

Post
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ  “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!

ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಪಿಡಿಒ ಮಂಜುನಾಥ್ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶುಕ್ರವಾರ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು, ಮಂಜುನಾಥ ಅವರಿಗೆ ಫೆಬ್ರವರಿ 2025 ಮಾಹೆಯ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ ಪತ್ರ ನೀಡಿ, ಅಭಿನಂದಿಸಿದರು‌. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಕರೀಂ ಅಸದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ...

Post
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!

ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಮಾರ್ಚ್ 9 ರಂದು ಬೆಳಿಗ್ಗೆ 6 ಗಂಟೆಗೆ ಕಾರವಾರ ರವೀಂದ್ರನಾಥ ಟಾಗೋರ ಕಡಲ ತೀರದಿಂದ ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ” Drugs & Cyber Crime free Karnataka & Fitness for All” ಥೀಮ್‌ ಅಡಿಯಲ್ಲಿ ಕರ್ನಾಟಕ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟವನ್ನು ಆಯೋಜಿಸಲಾಗಿದೆ. ಪೊಲೀಸ್ ರನ್ -2025 ರ ಮ್ಯಾರಾಥಾನ್ 5K ಓಟದಲ್ಲಿ...

Post
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!

ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!

ಸಿದ್ದಾಪುರ : ಮಾಧ್ಯಮ ಕ್ಷೇತ್ರದಲ್ಲಿ ಕಳೆದ‌ ಎರಡು ದಶಕದಿಂದ‌ ಕಾರ್ಯ‌ ನಿರ್ವಹಿಸುತ್ತಿದ್ದ ಶಿವಶಂಕರ್ ಕೋಲಸಿರ್ಸಿ ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 44 ವರ್ಷ ವಯಸ್ಸಾಗಿದ್ದು, ಅವರು Tv-9, ನ್ಯೂಸ್ ನಲ್ಲಿ ಕೆಲ‌ ವರ್ಷಗಳ‌ ಕಾಲ ಉತ್ತರಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕನ್ನಡ ಜನಾಂತರಂಗ, ಕನ್ನಡ ಪ್ರಭ, ಕರಾವಳಿ ಮುಂಜಾವು ಸೇರಿದಂತೆ ಅನೇಕ ಮಾಧ್ಯಮದಲ್ಲಿ ಕಾರ್ಯ‌ ನಿರ್ವಹಿಸಿದ್ದರು, ಸದ್ಯ ರಾಜ್ ನ್ಯೂಸ್ ‌ನಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ಸಹ ವರದಿಗಾರಿಕೆಗೆ ತೆರಳಿದ್ದರು.‌ ಆರೋಗ್ಯದಲ್ಲಿ ಯಾವುದೇ ಏರುಪೇರು...

Post
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ದಿನಾಂಕ:02.03 2025 ರ ವರದಿಯನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಾಗರಿಕರಿಗೆ ಈ ಕೆಳಗೆ ಸೂಚಿಸಲಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ. ಮುನ್ನಚ್ಚರಿಕೆ ಪಾಲಿಸಿ..! ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ. ಸಾಧ್ಯವಾದಷ್ಟು ಹಗುರವಾದ,...

Post
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿ ನಡೆದಿದ್ದ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾರವಾರದ ಸಾಮಾಜಿಕ ಕಾರ್ಯಕರ್ತ ಮಾಧವ ನಾಯ್ಕ್ ಇಡೀ ಪ್ರಕರಣದ ಬಗ್ಗೆ ವಿಸ್ತೃತ ದೂರು ನೀಡಿದ್ದಾರೆ. ಘಟನೆ ನಡೆದದ್ದೇ ಬೇರೆ, ಕೇಸು ದಾಖಲಾಗಿದ್ದೇ ಬೇರೆ, ಇನ್ಶ್ಯೂರನ್ಸ್ ಹಣಕ್ಕಾಗಿ ಇಲ್ಲಿ ಇಡೀ ಕೇಸನ್ನೇ ಉಲ್ಟಾ ಪಲ್ಟಾ ಮಾಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಅಲ್ದೇ ಈ‌ ಕುರಿತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ, ಈ ಕೇಸು ಮುಂಡಗೋಡ ಪೊಲೀಸರಿಗೆ ಬಹುತೇಕ...

Post
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!

ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!

ಮುಂಡಗೋಡ ತಾಲೂಕಿನ ಇಂದೂರ ಸಮೀಪದ, ಮಲಬಾರ್ ಕಾಲೋನಿಯ ಅರಣ್ಯದಲ್ಲಿ ಅಕ್ರಮ ಮಣ್ಣು ಸಾಗಾಟ ನಿರಂತರವಾಗಿದೆ ಅನ್ನೋ ಆರೋಪವಿದೆ. ಹೀಗಾಗಿ, ನಿನ್ನೆ ಶನಿವಾರ ತಡ ರಾತ್ರಿ ಮಲಬಾರ್ ಕಾಲೋನಿಯ ಹಾರನಕೇರಿಯ ಹತ್ತಿರ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಪರಿಣಾಮ ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದ್ದ ಒಂದು JCB ಹಾಗೂ ಒಂದು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಇಂದೂರು ಸೆಕ್ಷೆನ್ ನ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆರೆಯ ಪಕ್ಕದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ರಾತ್ರೋ ರಾತ್ರಿ...

Post
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!

ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!

 ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ.. ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ...

error: Content is protected !!