Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಸಾವಿನಲ್ಲೂ ಸಾರ್ಥಕತೆ ಮೆರೆದ ಅಗಡಿಯ ಯುವಕ ಸಂಜು ಸಿದ್ದಪ್ಪ ಗಳಗಿ, ನೇತ್ರದಾನ, ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ..!

ಸಾವಿನಲ್ಲೂ ಸಾರ್ಥಕತೆ ಮೆರೆದ ಅಗಡಿಯ ಯುವಕ ಸಂಜು ಸಿದ್ದಪ್ಪ ಗಳಗಿ, ನೇತ್ರದಾನ, ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ..!

ಶಿವರಾತ್ರಿಯ ದಿನವೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ ಅಗಡಿಯ ಯುವಕ ಸಾವು ಕಂಡಿದ್ದಾನೆ. ಆದ್ರೆ ಈ ಯುವಕನ ಕುಟುಂಬಸ್ಥರು ನಿಜಕ್ಕೂ ತನ್ನ ಕರುಳಿನ ಕುಡಿಯ ಸಾವಿಗೂ ಒಂದು ಸಾರ್ಥಕತೆಯ ಮೆರಗು ಕೊಟ್ಟಿದ್ದಾರೆ. ಮಣ್ಣಿನಲ್ಲಿ‌ ಮಣ್ಣಾಗ ಹೊರಟಿದ್ದ ಅಮೂಲ್ಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾನವೀಯತೆಯ ಆದರ್ಶ ಮೆರೆದಿದ್ದಾರೆ. ನೋವಿನಲ್ಲೂ ಕುಟುಂಬಸ್ಥರ ಕಳಕಳಿ..! ಅಗಡಿ ಗ್ರಾಮದ ಸಂಜು ಸಿದ್ದಪ್ಪ ಗಳಗಿ (23) ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ. ಸಂಜುವಿನ ತಲೆಗೆ...

Post
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!

ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಅಗಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಮೃತಪಟ್ಟ ಯುವಕನಾಗಿದ್ದಾನೆ. ಈತ ಮೊನ್ನೆ ಶಿವರಾತ್ರಿಯ ದಿನ ಗದ್ದೆಗೆ ಹೋಗಿ ವಾಪಸ್ ಅಗಡಿ ಕಡೆಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ. ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ...

Post
ಛತ್ರಪತಿ ಶಿವಾಜಿ ಮಹಾರಾಜರು ಇಡೀ ಹಿಂದೂ ಕುಲದವರ ಆದರ್ಶ-ಸಚಿವ ಹೆಬ್ಬಾರ್

ಛತ್ರಪತಿ ಶಿವಾಜಿ ಮಹಾರಾಜರು ಇಡೀ ಹಿಂದೂ ಕುಲದವರ ಆದರ್ಶ-ಸಚಿವ ಹೆಬ್ಬಾರ್

ಮುಂಡಗೋಡ: ಶಿವಾಜಿ ಮಹಾರಾಜರು ಒಂದು ಜಾತಿಗೆ ಸೀಮಿತರಾದವರಲ್ಲ, ಸಕಲ ಹಿಂದೂ ಧರ್ಮದ ಜನರ ಆರಾಧಕರು, ಅವರ ಆದರ್ಶಗಳನ್ನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು, ತಾಯಂದಿರು ತಮ್ಮ ಮಕ್ಕಳಿಗೆ ಶಿವಾಜಿ ಮಹಾರಾಜರ ಆದರ್ಶಗಳನ್ನ ತಿಳಿಸಿ ಶಿವಾಜಿ ಮಹಾರಾಜರಂತೆ ಬೆಳೆಸಬೇಕು ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಕರೆ ನೀಡಿದ್ರು‌. ಅವರು ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣೇಶಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಾಜಿ ಮಹಾರಾಜರ ಪುತ್ತಳಿಯನ್ನ ಅನಾವರಣಗೊಳಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಶುಭದಿನದಂದು ಶಿವಾಜಿ...

Post
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್, ಅಗಡಿಯ ಯುವಕನಿಗೆ ಗಂಭೀರ ಗಾಯ..!

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್, ಅಗಡಿಯ ಯುವಕನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಅಗಡಿಯ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಈತ ಗದ್ದೆಗೆ ಹೋಗಿ ವಾಪಸ್ ಅಗಡಿಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾನೆ. ಪರಿಣಾಮ ಯುವಕನ ತಲೆಗೆ ಪೆಟ್ಟಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು...

Post
ಮುಂಡಗೋಡ ಹೊಸ ಓಣಿಯಲ್ಲಿ ಮನೆಗೆ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

ಮುಂಡಗೋಡ ಹೊಸ ಓಣಿಯಲ್ಲಿ ಮನೆಗೆ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

 ಮುಂಡಗೋಡ ಪಟ್ಟಣದ ಹೊಸ ಓಣಿಯಲ್ಲಿ ಬೆಂಕಿ ಅವಘಡವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ‌. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಮುಂಜಾಗ್ರತೆಯಿಂದ ಆಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ. ಹೊಸ ಓಣಿಯ ರಾಜು ಹಿರೇಮಠ ಎಂಬುವವರಿಗೆ ಸೇರಿದ ಮನೆಯಲ್ಲಿ, ವೀಣಾ ಬಾಳಂಬೀಡ ಎನ್ಹುವವರು ಬಾಡಿಗೆ ಇದ್ದರು. ಇಂದು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋದ ನಂತರ ಕೆಲವೇ ಹೊತ್ತಲ್ಲಿ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ...

Post
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?

ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?

  ಮುಂಡಗೋಡ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಅದೇನಾಗಿದೆಯೊ ಒಂದೂ ಅರ್ಥ ಆಗ್ತಿಲ್ಲ. ಇಡೀ ಪಟ್ಟಣದ ಜನ ಒಂದರ್ಥದಲ್ಲಿ ಇಲ್ಲಿನ ಬ್ರಷ್ಟಾಚಾರ ಕಂಡು ಎಲೆ ಎಡಿಕೆ ಸೇವೆ ಮಾಡೋದಷ್ಟೇ ಬಾಕಿ ಉಳಿದಿದೆ. ಯಾಕಂದ್ರೆ, ಈ ಕಚೇರಿಯಲ್ಲಿನ ಕೆಲವು ನುಂಗಣ್ಣರುಗಳ ಕರಾಮತ್ತು ಹಲವರ ಬದುಕಿನ ಜೊತೆ ಚೆಲ್ಲಾಟಕ್ಕಿಳಿದಂತಾಗಿದೆ. ಬ್ರಷ್ಟರ ಬಂಡವಾಳವಾಯ್ತಾ..? ಫಾರ್ಮ್ ನಂ.3 ಅನ್ನೋ “ಬಂಡವಾಳ” ಇಟ್ಕೊಂಡು ಅಕ್ಷರಶಃ ವ್ಯವಹಾರಕ್ಕಿಳಿದಿರೋ ಪಟ್ಟಣ ಪಂಚಾಯತಿಯ ಕೆಲವು ನುಂಗಣ್ಣರುಗಳಿಗೆ ಇದೊಂದು ರೊಕ್ಕ ಗಳಿಸುವ ಅಡ್ಡ ದಂಧೆಯಾಯ್ತಾ ಅನ್ನೋ ಅನುಮಾನ ಶುರುವಾಗಿದೆ. ಈ...

Post
ರಾಜ್ಯದಲ್ಲಿರೋದು 40% ಪರ್ಸೆಂಟ್ ಸರ್ಕಾರ, ಬಿಜೆಪಿ ಜಾತಿಗಳ ನಡುವೆ ಗಲಾಟೆ ನಡೆಸುತ್ತಿದೆ- ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಆರೋಪ

ರಾಜ್ಯದಲ್ಲಿರೋದು 40% ಪರ್ಸೆಂಟ್ ಸರ್ಕಾರ, ಬಿಜೆಪಿ ಜಾತಿಗಳ ನಡುವೆ ಗಲಾಟೆ ನಡೆಸುತ್ತಿದೆ- ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಆರೋಪ

ಮುಂಡಗೋಡ: ರಾಜ್ಯದಲ್ಲಿ ಸದ್ಯ 40% ಪರ್ಸೆಂಟ್ ಸರ್ಕಾರವಿದೆ. ಬಿಜೆಪಿ ಆಡಳಿತಕ್ಕೆ ಬಂದ ನಂತ್ರ ಜಾತಿ ಜಾತಿಗಳ ನಡುವೆ ಗಲಾಟೆ, ವೈರತ್ವ ಬೆಳೆಸಲಾಗ್ತಿದೆ ಹೀಗಾಗಿ, ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನೂರಕ್ಕೆ ನೂರರಷ್ಟು ಸತ್ಯ ಅಂತಾ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆರ್ ವಿ.ದೇಶಪಾಂಡೆ ಭವಿಷ್ಯ ನುಡಿದ್ರು. ಅವ್ರು, ಪಟ್ಟಣದ ಎಲ್ ವಿ ಕೆ ಕೇಂದ್ರದ ಸಭಾಭವನದಲ್ಲಿ ರವಿವಾರ ಸಂಜೆ ‌”ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾ ನೂತನ ಅಧ್ಯಕ್ಷ ಸಾಯಿನಾಥ ಗಾಂವಕರ್ ರವರಿಗೆ...

Post
ಎಣ್ಣೆ ಏಟಲ್ಲಿ ಮಲಗಿದ್ದವನ ಜೇಬಿಗೆ ಕನ್ನ ಹಾಕಿದ ಅಜ್ಜಿ, ಹಣ ಎಗರಿಸಿ ಪರಾರಿ..!

ಎಣ್ಣೆ ಏಟಲ್ಲಿ ಮಲಗಿದ್ದವನ ಜೇಬಿಗೆ ಕನ್ನ ಹಾಕಿದ ಅಜ್ಜಿ, ಹಣ ಎಗರಿಸಿ ಪರಾರಿ..!

 ಯಲ್ಲಾಪುರ: ಎಣ್ಣೆ ಹೊಡೆದು ಟೈಟ್ ಆಗಿ ಮಲಗಿದ್ದವನ ಜೇಬಿನಿಂದ ವೃದ್ದೆಯೋರ್ವಳು ಹಣ ಎಗರಿಸಿದ್ದಾಳೆ. ಹಾಡಹಗಲೇ ಯಲ್ಲಾಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಸ್ಥಳೀಯರ ಮೊಬೈಲ್ ಕೆಮೇರಾದಲ್ಲಿ ಸೆರೆಯಾಗಿದೆ. ಯಲ್ಲಾಪುರ ಬಸ್ ನಿಲ್ದಾಣದ ನಂದಿನ ಹಾಲಿನ ಕೌಂಟರ್ ಬಳಿ ಓರ್ವ ವ್ಯಕ್ತಿ, ಫುಲ್ ಟೈಟ್ ಆಗಿ ನಶೆಯಲ್ಲೇ ಮಲಗಿರ್ತಾನೆ. ಈ ವೇಳೆ ಅಲ್ಲಿಗೆ ಬಂದ ವೃದ್ದೆಯೋರ್ವಳು, ಏಕಾಏಕಿ ನಶೆಯಲ್ಲಿ ಮಲಗಿದ್ದವನ ಜೇವಿಗೆ ಕೈ ಹಾಕಿದ್ದಾಳೆ. ಕೈಗೆ ಸಿಕ್ಕಷ್ಟು ಹಣ ಎಗರಿಸಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾಳೆ‌. ಇದನ್ನೇಲ್ಲ ಅಲ್ಲೇ...

Post
ರೈಲಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವ್ಯಕ್ತಿ ಬಂಧನ, ಕಾರವಾರ ರೈಲ್ವೆ ಪೊಲೀಸರ ಭರ್ಜರಿ ಕಾರ್ಯಾಚರಣೆ..!

ರೈಲಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವ್ಯಕ್ತಿ ಬಂಧನ, ಕಾರವಾರ ರೈಲ್ವೆ ಪೊಲೀಸರ ಭರ್ಜರಿ ಕಾರ್ಯಾಚರಣೆ..!

ಕಾರವಾರ: ಕೇರಳಕ್ಕೆ ಅಕ್ರಮವಾಗಿ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಕಾರವಾರ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮಂಗಳ ಎಕ್ಸ್ ಪ್ರೆಸ್ ರೈಲಿನಲ್ಲಿ ದಾಖಲೆ ರಹಿತ ಹಣ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಮಹಾರಾಷ್ಟ್ರ ಮೂಲದ ವಿಕಾಸ್ ರಮೇಶ್ ದೋಕಲೆ ಬಂಧಿತ ವ್ಯಕ್ತಿಯಾಗಿದ್ದು, ಬಂಧಿತನಿಂದ ದಾಖಲೆ ರಹಿತ ರೂ.20,09,720 ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರ ದಿಂದ ಕೇರಳಕ್ಕೆ ಹಣ ಕೊಂಡೊಯ್ಯುತಿದ್ದನು ಎನ್ನಲಾಗಿದ್ದು, ರೈಲ್ವೆ ಪೊಲೀಸರಿಂದ ಕಾರವಾರ ನಗರ ಠಾಣೆ ಪೊಲೀಸರಿಗೆ ಪ್ರಕರಣ ಹಸ್ತಾಂತರವಾಗಿದೆ.

Post
ಅದ್ದೂರಿಯಾಗಿ ನಡೆದ ಹುನಗುಂದ ಪುರಾತನ ಶ್ರೀ ರಾಮಲಿಂಗೇಶ್ವರ ರಥೋತ್ಸವ..!

ಅದ್ದೂರಿಯಾಗಿ ನಡೆದ ಹುನಗುಂದ ಪುರಾತನ ಶ್ರೀ ರಾಮಲಿಂಗೇಶ್ವರ ರಥೋತ್ಸವ..!

 ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ರಾಮಲಿಂಗೇಶ್ವರ ಸ್ವಾಮಿಯ ಪುರಾತನ ಐತಿಹಾಸಿಕ ರಥೋತ್ಸವ ಅದ್ದೂರಿಯಾಗಿ ಜರುಗಿತು. ನೂರಾರು ವರ್ಷಗಳ ಇತಿಹಾಸ ಹೊಂದಿರೋ ಶ್ರೀ ರಾಮಲಿಂಗೇಶ್ವರ ದೇವರ, ಪುರಾತನ ರಥದಲ್ಲಿ ರಾಮಲಿಂಗೇಶ್ವರ ಸ್ವಾಮಿಯನ್ನು ಪ್ರತಿಷ್ಟಾಪಿಸಿ ರಥೋತ್ಸವ ಮಾಡಲಾಯಿತು. ಅಂದಹಾಗೆ, ಹುನಗುಂದ ಗ್ರಾಮದಲ್ಲಿ ಪುರಾತನವಾದ ಬೃಹತ್ ರಥ ಆಕರ್ಷಣೀಯವಾಗಿದ್ದು, ವಿಶಿಷ್ಟ ಕುಸೂರಿ ಕಲೆಗಳನ್ನು ಹೊಂದಿದೆ. ರಥದಲ್ಲಿ ವಿವಿಧ ಪ್ರಕಾರದ ದಾರ್ಮಿಕ ಕಥೆಗಳನ್ನು, ಐತಿಹ್ಯಗಳನ್ನು ಸಾರುವ ಉಬ್ಬು ಶಿಲ್ಪಗಳನ್ನು...

error: Content is protected !!