ಕರ್ನಾಟಕದಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್ ಇಲಾಖೆಯಲ್ಲಿ ಸಾಧಕರಿಗೆ ಬೆನ್ನು ತಟ್ಟುವ ಕಾರ್ಯ ನಡೀತಿದೆ. ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅದ್ರಲ್ಲಿ ಉತ್ತರ ಕನ್ನಡದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಈ ಪುರಸ್ಕಾರ ಘೋಷಣೆಯಾಗಿದೆ. ಉತ್ತರ ಕನ್ನಡ ಎಸ್ಪಿ ನಾರಾಯಣ ಎಂ. ರವರಿಗೆ ಹಾಗೂ ರಾಮನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಸದ್ಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿರೋ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ನಮ್ಮ ಸಾಧಕ
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಮುಂಡಗೋಡ: CBSE , SSLC, ಫಲಿತಾಂಶ ಪ್ರಕಟವಾಗಿದೆ. ಮುಂಡಗೋಡಿನ ಲೊಯೊಲಾ ಕೇಂದ್ರೀಯ ವಿದ್ಯಾಲಯದ CBSE SSLC ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 100 ರಷ್ಟು ಫಲಿತಾಂಶವಾಗಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಸಂತಸ ವ್ಯಕ್ತಪಡಿಸಿದೆ. ಇನ್ನು ಮಾನಸಿ ಸಿದ್ಧಿ (500/452) 90.4 ಶೇಕಡಾ ಅಂಕಗಳೊಂದಿಗೆ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಅನ್ವೆಶ್ ನಾಯ್ಕ್ (500/443) 88.6 ಶೇಕಡಾ ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡದಿದ್ದಾನೆ. ರಿತೇಶ್ ಬಾಡ್ಕರ್ (500/442) 88.4 ಶೇಕಡಾ...
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತಿಕಾರದಲ್ಲಿ, ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ “ಆಪರೇಷನ್ ಸಿಂಧೂರ” ಹೆಸರಿನ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯ ಖುರೇಷಿ ಬೆಳಗಾವಿಯ ಸೊಸೆಯಾಗಿದ್ದು, ಈಗ ಭಾಥದ ಹೆಮ್ಮೆಯಾಗಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಕುರೆಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು...
ಮುಂಡಗೋಡಿನ ಪತ್ರಕರ್ತ ಶಾಂತೇಶಕುಮಾರ್, ಜಿ.ಎಸ್. ಹೆಗಡೆ ಅಜ್ಜೀಬಳ ದತ್ತಿ ನಿಧಿ ಪುರಸ್ಕಾರಕ್ಕೆ ಆಯ್ಕೆ..!
ಮುಂಡಗೋಡಿನ ಪತ್ರಕರ್ತ ಮಿತ್ರ ಶಾಂತೇಶಕುಮಾರ್ ಬೆನಕನಕೊಪ್ಪ, ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಜಿ.ಎಸ್. ಹೆಗಡೆ ಅಜ್ಜೀಬಳ ದತ್ತಿನಿಧಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪ್ರಜಾವಾಣಿ ಪತ್ರಿಕೆಯ ತಾಲೂಕಾ ವರದಿಗಾರರಾಗಿರೋ ಶಾಂತೇಶಕುಮಾರ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಪತ್ರಿಕಾ ಮಿತ್ರರಿಗೆ ಹರ್ಷ ತಂದಿದೆ. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಯ ಐವರು ಪತ್ರಕರ್ತರು ಇಂತಹದ್ದೊಂದು ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಶಿರಸಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ಜಿಲ್ಲಾಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಸಂಘದ...
ಉತ್ತರ ಕನ್ನಡದ ಇಬ್ಬರು ವಿದ್ಯಾರ್ಥಿಗಳು ಸೈನಿಕ ಶಾಲೆಗೆ ಆಯ್ಕೆ, ಶಿರಾಲಿಯ ಕುಶಾಲ್, ಕಳಕಿಕಾರೆಯ ಭೂಷಣ್ ಸಾಧನೆ..!
ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಷ್ಟಿತ ಸೈನಿಕ ಶಾಲೆಗೆ ಆಯ್ಕೆಯಾಗಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿಯ ಪ್ರತಿಭಾವಂತ ವಿದ್ಯಾರ್ಥಿ ಕುಶಾಲ್ ನಿತ್ಯಾನಂದ್ ನಾಯ್ಕ್ ಹಾಗೂ ಮುಂಡಗೋಡ ತಾಲೂಕಿನ ಕಳಕಿಕಾರೆಯ ಭೂಷಣ್ ಪಾಟೀಲ್ ಸೈನಿಕ ಶಾಲೆಗೆ ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ.. ಶಿರಾಲಿಯ ಕುಶಾಲ್ ನಾಯ್ಕ್ ಸಾಧನೆ..! ಅಂದಹಾಗೆ, ಭಟ್ಕಳ ತಾಲೂಕಿನ ಶಿರಾಲಿಯ ನಿತ್ಯಾನಂದ್, ಪ್ರೇಮಾ ದಂಪತಿಯ ಸುಪುತ್ರ ಕು. ಕುಶಾಲ್ ನಿತ್ಯಾನಂದ್ ನಾಯ್ಕ್ ವಿಜಯಪುರದ Oxford English medium school ನಲ್ಲಿ ಐದನೇ ತರಗತಿ ಓದುತ್ತಿದ್ದು, ಸದ್ಯ...
ಸಾವಿನಲ್ಲೂ ಸಾರ್ಥಕತೆ ಮೆರೆದ ಅಗಡಿಯ ಯುವಕ ಸಂಜು ಸಿದ್ದಪ್ಪ ಗಳಗಿ, ನೇತ್ರದಾನ, ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ..!
ಶಿವರಾತ್ರಿಯ ದಿನವೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ ಅಗಡಿಯ ಯುವಕ ಸಾವು ಕಂಡಿದ್ದಾನೆ. ಆದ್ರೆ ಈ ಯುವಕನ ಕುಟುಂಬಸ್ಥರು ನಿಜಕ್ಕೂ ತನ್ನ ಕರುಳಿನ ಕುಡಿಯ ಸಾವಿಗೂ ಒಂದು ಸಾರ್ಥಕತೆಯ ಮೆರಗು ಕೊಟ್ಟಿದ್ದಾರೆ. ಮಣ್ಣಿನಲ್ಲಿ ಮಣ್ಣಾಗ ಹೊರಟಿದ್ದ ಅಮೂಲ್ಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾನವೀಯತೆಯ ಆದರ್ಶ ಮೆರೆದಿದ್ದಾರೆ. ನೋವಿನಲ್ಲೂ ಕುಟುಂಬಸ್ಥರ ಕಳಕಳಿ..! ಅಗಡಿ ಗ್ರಾಮದ ಸಂಜು ಸಿದ್ದಪ್ಪ ಗಳಗಿ (23) ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ. ಸಂಜುವಿನ ತಲೆಗೆ...
ಮುಂಡಗೋಡ ಪೊಲೀಸ್ ಪೇದೆ ಅಣ್ಣಪ್ಪ ಬುಡಗೇರಗೆ “ತಿಂಗಳ ಅತ್ಯುತ್ತಮ ಸಾಧಕ” ಗೌರವ
ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಅಣ್ಣಪ್ಪಾ ಬುಡಗೇರ್ ಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಬಳಗದಿಂದ ಗೌರವ ದೊರೆತಿದೆ. ಶಿರಸಿ ವಿಭಾಗದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದ ಕಾರಣ “ತಿಂಗಳ ಅತ್ಯುತ್ತಮ ಸಾಧಕ” ಪ್ರಮಾಣಪತ್ರ ಲಭಿಸಿದೆ. ಶಿರಸಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್, ಪೇದೆ ಅಣ್ಣಪ್ಪ ಬುಡಗೇರ್ ಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಿರ್ವಹಿಸಿದ ಅತ್ಯುತ್ತಮ ಸೇವೆ ಪರಿಗಣಿಸಿ ಉತ್ತರ ಕನ್ನಡ ಜಿಲ್ಲಾ...
ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ
ಮುಂಡಗೋಡ ತಾಲೂಕಿನ ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿದೆ. ಅಂದಹಾಗೆ, ಸಹದೇವಪ್ಪ ನಡಗೇರಿಯವರು ತಾಲೂಕಿನ ಹಿರಿಯ ಜನಪದ ಕಲಾವಿದರಾಗಿದ್ದು, ವಿಶೇಷ ಶೈಲಿಯ ಜನಪದ ಗೀತೆಗಳನ್ನು ಹಾಡುತ್ತ ಜನಮನ ಗೆದ್ದಿದ್ದಾರೆ. ಸದ್ಯ ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸ್ತಿರೋ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ತಾಲೂಕಿನ ಜನರ ಹರ್ಷಕ್ಕೆ ಕಾರಣವಾಗಿದೆ. ಪಬ್ಲಿಕ್...
ಕೊಪ್ಪದ “ಉತ್ತಮ ಶಿಕ್ಷಕಿ” ಗೆ ಹಳೆಯ ವಿದ್ಯಾರ್ಥಿಗಳು ಹಾಗೂ SDMC ಸದಸ್ಯರಿಂದ ಗೌರವ ಸನ್ಮಾನ..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಗೀತಾ ಪಟಗಾರ ಅವರಿಗೆ ಶಿರಸಿ ಶೈಕ್ಷಣಿಕ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ಹೀಗಾಗಿ, ಇಂದು ಕೊಪ್ಪದ ಹಳೆಯ ವಿದ್ಯಾರ್ಥಿಗಳಿಂದ ಹಾಗೂ SDMC ಸದಸ್ಯರುಗಳಿಂದ ಗೌರವ ಸನ್ಮಾನ ಮಾಡಲಾಯಿತು. ಅಂದಹಾಗೆ, 26 ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಂದಲಗೇರಿ ಶಾಲೆಯಲ್ಲಿ 9 ವರ್ಷ ಹಾಗೂ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 17 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಿರಸಿ...
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಮುಂಡಗೋಡಿನ “ಮಾಸ್” ಹುಡುಗ್ರ ಸ್ಟೆಪ್..!
ಮುಂಡಗೋಡಿನ ಯುವಕರ ಪಡೆಯೊಂದು ತಾಲೂಕಿನ ಹೆಮ್ಮೆಗೆ ಕಾರಣವಾಗಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗೋ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಂಡಗೋಡಿನ ನೃತ್ಯ ಪಟುಗಳು ಭಾಗಿಯಾಗಿದ್ದಾರೆ. ಇಂದು ರವಿವಾರ ರಾತ್ರಿ ನಮ್ಮ ಹೆಮ್ಮೆಯ ಯುವಕರ ಡ್ಯಾನ್ಸ್ ಕಾರ್ಯಕ್ರಮ ಪ್ರಸಾರವಾಗಲಿದೆ. ಅಂದಹಾಗೆ, ಮುಂಡಗೋಡಿನ ಮಾಸ್ ಅಕಾಡೆಮಿಯ ಹುಲಿಗಳು ಇವ್ರು. ಸಂದೀಪ್ ಕೋರಿ, ಸಾನಿಕಾ ಪವಾರ್,ರಂಜಿತಾ ಜೀವಣ್ಣವರ, ಮನೋಜ್ ಮೆತ್ರಾಣಿ ಎಂಬುವ ಡ್ಯಾನ್ಸ್ ಕಲಿಗಳು ಟಿವಿ ಪರದೆಯ ಮೇಲೆ ಇಂದು ಮಿಂಚಲಿದ್ದಾರೆ. ಪ್ರತೀ ಶನಿವಾರ, ರವಿವಾರ ಜೀ ಕನ್ನಡ...
- 1
- 2