Mundgod Rain Warning Issued: ಮುಂಡಗೋಡ ತಾಲೂಕಿನಲ್ಲಿ ಅಧಿಕ ಮಳೆ ಆಗುತ್ತಿದೆ. ಹಳ್ಳ-ಕೊಳ್ಳಗಳು, ಕೆರೆಗಳು, ಜಲಾಶಯಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ, ಸಾರ್ವಜನಿಕರು ನೀರಿನ ಮೂಲಗಳ ಸಮೀಪ ಹೋಗಬಾರದು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಅನಾಹುತ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಅಂತಾ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಿಂದ ಪ್ರಕಟಣೆ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು, ಮಳೆಗೆ ಸಂಬಂಧಿತ ಯಾವುದೇ ಸಮಸ್ಯೆ, ಅವಘಡಗಳ ಪರಿಹಾರಕ್ಕೆ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ...
Top Stories
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Category: ಮಳೆ ಅವಾಂತರ
ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!
Heavy Rain Alert: ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Death News :ಸೂಟ್‌ಕೇಸ್ ನಲ್ಲಿ...
ಭಾರೀ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು: ಸಂಚಾರಕ್ಕೆ ಅಡಚಣೆ..!
Heavy rain Hill collapses: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಲವು ಅವಾಂತರಳಿಗೆ ಕಾರಣವಾಗುತ್ತಿದೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಗುಡ್ಡ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತಿದ್ದು , ಈ ಹಿಂದೆ ಗುಡ್ಡವನ್ನು ತುಂಡರಿಸಿ ರಸ್ತೆ ಮಾಡಲಾಗಿತ್ತು. ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ರಸ್ತೆ ಬದಿಯಲ್ಲಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ...
ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!
Rain Alert Today: ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಇಂದು ಕರ್ನಾಟಕ ಕರಾವಳಿಗೆ ಹತ್ತಿರದ ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲೆ ಮೇಲ್ಮಟ್ಟದ ವಾಯುಭಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಇಂದು (ಮೇ21) ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅತ್ಯಂತ ಭಾರಿಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು,...
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
Heavy Rain Road block: ಉತ್ತರ ಕನ್ನಡದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನಡುವೆ, ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ, ಭಾರೀ ಮಳೆಯಿಂದ ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದೆ. ಜೊತೆಗೆ ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕುಮಟಾ -ಸಿದ್ದಾಪುರ ರಸ್ತೆ ಜಲಾವೃತ..! ಇನ್ನು ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು,...
ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!
Banglore Rain problem News: ಬೆಂಗಳೂರು: ಬೆಂಗಳೂರಿನ ಅಪಾರ್ಟ್‌ಮೆಂಟ್ ಸಂಕೀರ್ಣವೊಂದರಲ್ಲಿ ನೀರು ತುಂಬಿದ್ದ ನೆಲಮಾಳಿಗೆಯಲ್ಲಿ ವೃದ್ಧ ಮತ್ತು ಬಾಲಕ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 63 ವರ್ಷದ ಮನಮೋಹನ ಕಾಮತ್ ಅವರು ನೆಲಮಾಳಿಗೆಯಿಂದ ನೀರನ್ನು ಹೊರಹಾಕಲು ಬಾಹ್ಯ ಮೋಟಾರ್ ಬಳಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹಕ್ಕೆ ಸಿಲುಕಿದ ನೆಲಮಾಳಿಗೆಯೊಳಗೆ ನಿಂತಿದ್ದ ದಿನೇಶ (12) ಎಂಬ ಬಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಸಾವಗೀಡಾಗಿದ್ದಾನೆ ಎಂದು ಹೇಳಲಾಗಿದೆ. ಬಿಟಿಎಂ 2 ನೇ...
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11) ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಭಾರೀ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ, ಮನೆಯ ಮೇಲ್ಚಾವಣಿ ಹಾನಿ, ಗೋವಿನಜೋಳ ರಾಶಿ ನೀರಲ್ಲಿ
ಮುಂಡಗೋಡ ತಾಲೂಕಿನಲ್ಲಿ ಸಂಜೆ ಸುರಿದ ಭಾರಿ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಹಲವು ಮನೆಗಳ ಮೇಲ್ಚಾವಣಿಗಳು ಹಾರಿಹೋಗಿದ್ದು, ಇನ್ನಿಲ್ಲದ ನಷ್ಟ ಸಂಭವಿಸಿದೆ. ರೈತರ ಗೋಳು..! ಇನ್ನು ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕೊಪ್ಪ ಗ್ರಾಮದಲ್ಲಿ ಒಣಗಿಸಲು ಹಾಕಿದ್ದ ಗೋವಿನಜೋಳ ಮಳೆ ನೀರಿನ ಪಾಲಾಗಿದ್ದು ಹಾನಿಯುಂಟಾಗಿದೆ. ಗ್ರಾಮದ ಕಾಂಕ್ರೀಟು ರಸ್ತೆಯ ಮೇಲೆ ಒಣಗಲು ಹಾಕಿದ್ದ ಗೋವಿನಜೋಳದ ರಾಶಿಯಲ್ಲಿ ಮಳೆ ನೀರು ಹೊಕ್ಕು ನೆನೆದು ಹೋಗಿದೆ....
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ...
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಮುಂಡಗೋಡ ತಾಲೂಕಿನಾಧ್ಯಂತ ಸೋಮವಾರ ಸುರಿದ ಭಾರೀ ಮಳೆಗೆ ವಿಪರೀತ ಅವಾಂತರಗಳು ಸೃಷ್ಟಿಯಾಗಿವೆ. ಸೋಮವಾರದಿಂದ ತಾಲೂಕಿನ ಹಲವು ಕಡೆ ಕೆಲ ದುರಂತಗಳೂ ನಡೆದಿವೆ. ಅತ್ತಿವೇರಿ ಗೌಳಿ ದಡ್ಡಿ ಬಳಿ ಹಾಗೂ ಶಿರಸಿ ರಸ್ತೆಯ ಹಿರೇಹಳ್ಳಿ ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗೌಳಿಗರ ಹದಿನೈದಕ್ಕೂ ಹೆಚ್ಚು ಎಮ್ಮೆಗಳು ನೀರು ಪಾಲಾಗಿವೆ ಅನ್ನೋ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಕೆಲವು ಎಮ್ಮೆಗಳ ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಹಲವು ಎಮ್ಮೆಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿವೆ ಅಂತಾ ಹೇಳಲಾಗಿದೆ. ಅತ್ತಿವೇರಿ ಗೌಳಿದಡ್ಡಿಯಲ್ಲಿ..! ಅಂದಹಾಗೆ, ಸೋಮವಾರ...









