Home ಅಪಘಾತ

Category: ಅಪಘಾತ

Post
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!

ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!

Accident News; ಮುಂಡಗೋಡ ತಾಲೂಕಿನ ಹಳೂರು ಹಾಗೂ ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೊಇ ನಡುವೆ ಅಪಘಾತವಾಗಿದೆ. ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಹಳೂರಿನಿಂದ ಕ್ಯಾಸನಕೇರಿಗೆ ಹೋಗುವ ಮಾರ್ಗದಲ್ಲಿ ಓವರ್ ಟೇಕ್ ಮಾಡಲು ಹೋಗಿ ಇಂತಹದ್ದೊಂದು ಅಪಘಾತವಾಗಿದೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!

ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!

Yallapur Accident News; ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಸಮೀಪದ ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ KSRTC ಬಸ್‌ ಡಿಕ್ಕಿ ಹೊಡೆದ ಪರಿಣಾಮ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ನೀಲವ್ವಾ (38), ಗಿರಿಜವ್ವಾ (43) ಹಾಗೂ ಇನ್ನೋರ್ವ ಪುರುಷ ಎಂದು ಗುರುತಿಸಲಾಗಿದ್ದು, ಪುರುಷನ ಗುರುತು ಇನ್ನೂ ಪತ್ತೆಯಾಗಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಅಮ್ಮನಗುಡ್ಡದಿಂದ ಮಂಗಳೂರಿಗೆ ಹೊರಟಿತ್ತು ಎನ್ನಲಾಗಿದೆ. ಹೆದ್ದಾರಿ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಕೇರಳ ಮೂಲದ ಲಾರಿಗೆ ಬಸ್ ಡಿಕ್ಕಿಯಾಗಿದೆ....

Post
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ  ಗಾಯ..!

ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!

Accident News; ಮುಂಡಗೋಡ ತಾಲೂಕಿನ ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ದಂಪತಿ ಸೇರಿ ಮೂವರಿಗೆ ಗಾಯವಾಗಿದೆ. ಇಂದೂರು ಗ್ರಾಮದ ಶರಣು ನಿಂಗಯ್ಯ ಸುರಗಿಮಠ್ ಹಾಗೂ ಇವರ ಪತ್ನಿ ಸುಪ್ರೀತ ಸುರಗಿಮಠ ಎಂಬುವವರಿಗೆ ಗಾಯವಾಗಿದೆ. ಹುನಗುಂದದ ಪೊಸ್ಟಮೆನ್ ಸುನಿಲ್ ಹರಿಜನ್ ಎಂಬುವವರಿಗೂ ಗಾಯವಾಗಿದೆ.  ಗಾಯಾಳಯಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!

ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!

Soldier Dies News; ರಸ್ತೆ ಅಪಘಾತದಲ್ಲಿ ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪ್ರಭುನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 4(A)ನಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಸೂರಜ್ ದ್ರೌಪದ್ಕರ್ (29) ಎಂಬುವನೇ ಮೃತ ಯೋಧನಾಗಿದ್ದಾನೆ. ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗುದ್ದಿದ‌ ಪರಿಣಾಮ, ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವ ಹಿನ್ನೆಲೆ ಸ್ಥಳದಲ್ಲೇ ಯೋಧ ಸೂರಜ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾನಾಪುರ...

Post
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!

ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!

Death News; ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ ವ್ಯಕ್ತಿಯೊಬ್ಬ 20 ದಿನದ ನಂತ್ರ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕೊಪ್ಪ ಇಂದಿರಾನಗರದ ನಾಗಯ್ಯ ಈರಯ್ಯ ಹಿರೇಮಠ (42), ಎಂಬಾತನೇ ಸದ್ಯ ವಿಷಸೇವಿಸಿ ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಜುಲೈ 4 ರಂದು ಮನೆಯಲ್ಲೇ ಕಳೆನಾಶಕ ಸೇವಿಸಿದ್ದ, ಹೀಗಾಗಿ ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನಂತರ ಕೆಲ ದಿನಗಳ‌ ಹಿಂದೆ ಮನೆಗೆ ಕರೆ ತರಲಾಗಿತ್ತು. ಮನೆಗೆ...

Post
ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; ಓರ್ವ ಸ್ಥಳದಲ್ಲೇ ಸಾ*ವು, 18 ಜನರಿಗೆ ಗಾಯ..!

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; ಓರ್ವ ಸ್ಥಳದಲ್ಲೇ ಸಾ*ವು, 18 ಜನರಿಗೆ ಗಾಯ..!

Bus Accident; ಅಂಕೋಲಾ: ತಾಲೂಕಿನ ಅಗಸೂರಿನ ಬಳಿ ಖಾಸಗಿ ಬಸ್ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು 18 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಳಗಾವಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣಿಕರನ್ನು ಕರೆದುಕೊಂಡು ಸಾಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ಸೋಮವಾರ ನಸುಕಿನ 2 ಗಂಟೆಗೆ ಸುಮಾರಿಗ ದುರ್ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 18 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ....

Post
ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!

ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!

Father And Son Death; ಸವದತ್ತಿ; ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳಾಗಿದ್ದಾರೆ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿ. ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ್, ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ...

Post
ಕಾರವಾರದಲ್ಲಿ ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ, ಕಾರಲ್ಲಿ ಕೂತಿದ್ದ ಮಹಿಳೆ ಸಾ*ವು..!

ಕಾರವಾರದಲ್ಲಿ ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ, ಕಾರಲ್ಲಿ ಕೂತಿದ್ದ ಮಹಿಳೆ ಸಾ*ವು..!

 Karwar Women Death News; ಕಾರವಾರ : ನಗರದ ಡಿಸಿ ಕಚೇರಿ ಸಮೀಪ ದುರಂತ ಸಂಭವಿಸಿದೆ. ಪಿಕಳೆ ಆಸ್ಪತ್ರೆಯ ಮುಂಭಾಗದಲ್ಲಿದ್ದ ಬೃಹತ್ ಮರ, ಮಳೆ ಗಾಳಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಾರವಾರದಲ್ಲಿ ಇಂದು ಸಂತೆಯ ದಿ‌ನವಾದ ಕಾರಣ ಪಿಕಳೆ ರಸ್ತೆಯಲ್ಲಿ ಜನ ಸಂಚಾರ ಹೆಚ್ಚಾಗಿತ್ತು‌. ಈ ವೇಳೆ ಮರದ ಕೆಳಗಿದ್ದ ಕಾರ್ ಮೇಲೆ ಉರುಳಿಬಿದ್ದ ಬೃಹತ್ ಮರದ ಬೃಹತ್ ಟೊಂಗೆ ಅನಾಹುತ ಸೃಷ್ಟಿಸಿದೆ. ಕಾರ್ ಮೇಲೆ...

Post
ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!

ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!

Three Farmers Death; ಯಾದಗಿರಿ;ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಂತಿ ತಗುಲಿ‌ ಮೂವರು ರೈತರು ಸಾವು ಕಂಡಿರೋ ಘಟನೆ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಈರಪ್ಪ(40) ದೇವು(30) ಸುರೇಶ್(22) ಎಂಬುವ ರೈತರು, ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಗುಲಿ ಸಾವು ಕಂಡ ರೈತರಾಗಿದ್ದಾರೆ. ಮೂವರು ಸದಬ ಗ್ರಾಮದ ದುರ್ದೈವಿಗಳು ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನೆ ಮಾಡಲಾಗಿದೆ. ಕೆಂಭಾವಿ ಸಮುದಾಯ ಆಸ್ಪತ್ರೆ...

Post
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!

ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!

Accident News; ಹುಬ್ಬಳ್ಳಿ: ವೇಗವಾಗಿ ಬಂದ ಲಾರಿ ಚಾಲಕ ನಿಯಂತ್ರಣ ತಪ್ಪಿ, ನಿಂತ ಲಾರಿಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಚಾಲಕನ ಎರಡು ಕಾಲು ಕಟ್ ಆದ ಘಟನೆ ಹುಬ್ಬಳ್ಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಹೊನ್ನಾಪುರ ಬಳಿ ನಡೆದಿದೆ. ಬೆಂಗಳೂರಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಲಾರಿ ಚಾಲಕ ವೇಗವಾಗಿ ಬಂದಿದ್ದಾನೆ. ಆತನಿಗೆ ನಿಯಂತ್ರಣ ತಪ್ಪಿ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಗುದ್ದಿದ್ದಾನೆ. ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆತನ ಎರಡು ಕಾಲ ಕಟ್ ಆಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...

error: Content is protected !!