ಮುಂಡಗೋಡ; ಕರಡಿ ದಾಳಿಯಿಂದ ಯುವಕನೋರ್ವನಿಗೆ ಗಂಭೀರ ಗಾಯವಾದ ಘಟನೆ, ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ್ ವ್ಯಾಪ್ತಿಯ ಸಿಂಗನಹಳ್ಳಿ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ವಿಪರ್ಯಾಸ ಅಂದ್ರೆ ಐದು ದಿನಗಳ ಹಿಂದೆ ನಡೆದಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮು ಜಾನು ಕೋಕರೆ(31) ಕರಡಿ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಕಳೆದ ಐದು ದಿನಗಳ ಹಿಂದೆ ಕರಡಿ ದಾಳಿಯಾಗಿತ್ತು. ಈ ವೇಳೆ ವ್ಯಕ್ತಿಯ ತಲೆಗೆ ಕಚ್ಚಿ ತೀವ್ರ ಗಾಯಗೊಳಿಸಿತ್ತು. ದುರಂತ ಅಂದ್ರೆ ಇಷ್ಟೊಂದು ಗಾಯವಾಗಿದ್ರೂ ಈ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗಲೇ...
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Category: ಅಪಘಾತ
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡಸಿ ಗಾಯಗೊಳಿಸಿದ ಘಟನೆ ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ನಡೆದಿದೆ. ರಾಮಕೃಷ್ಣ ದುರ್ಗಪ್ಪ ಲಕ್ಮಾಪುರ (45)ಎಂಬವನೆ ಗಾಯಗೊಂಡ ರೈತನಾಗಿದ್ದಾನೆ. ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ಹಿಂದಿನಿಂದ ಬಂದ ಕರಡಿಯೊಂದು ದಾಳಿ ನಡೆಸಿ ಹಿಂಬದಿ ಕಚ್ಚಿ ಗಾಯಗೊಳಿಸಿದೆ. ಈ ವೇಳೆ ರೈತ ತೀವ್ರ ಚೀರಾಟ ನಡೆಸಿದಾಗ ಕರಡಿ ಅಲ್ಲಿಂದ ಓಡಿ ಹೋಗಿದೆ. ಗಾಯಗೊಂಡ ರೈತನನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಧಾರವಾಡದ ವಿವಿಧೆಡೆ ಭಾರೀ ಮಳೆ: ಸಿಡಿಲಿಗೆ ಓರ್ವ ರೈತ ಬಲಿ..!
ಧಾರವಾಡ ತಾಲೂಕಿನ ಹಲವೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಸಿಡಿಲಿಗೆ ಓರ್ವ ರೈತ ಬಲಿಯಾಗಿರುವ ಘಟನೆ ಧಾರವಾಡ ತಾಲೂಕಿನ ಹನುಮನಹಾಳ ಗ್ರಾಮದಲ್ಲಿ ನಡೆದಿದೆ. ಭೀಮನಗೌಡ ಮಲ್ಲನಗೌಡ ಪಾಟೀಲ (65) ಎಂಬುವವರೇ ಸಿಡಿಲಿಗೆ ಬಲಿಯಾದವರು. ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ತಮ್ಮ ಹೊಲಕ್ಕೆ ಹೋಗಿ ಶೇಂಗಾ ಸೋಸುವ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ವಿಪರೀತ ಮಳೆಯಾಗಲು ಆರಂಭಿಸಿದ್ದರಿಂದ ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ಮರಳಿ ಮನೆ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಅವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಗರಗ...
ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು
ಹಾವೇರಿ; ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ರೋಡ್ ರೂಲರ್ ಹರಿದು ಇಬ್ಬರು ಕಾರ್ಮಿಕರ ಸಾವು ಕಂಡ ದಾರುಣ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ನಡೆದಿದೆ. ಸಿದ್ದು(24), ಪ್ರೀತಮ್ ( 25) ರೂಲರ್ ಅಡಿಗೆ ಸಿಲುಕಿ ಸಾವು ಕಂಡ ದುರ್ಧೈವಿಗಳು. ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು, ಮಾಧ್ಯಾಹ್ನದ ವೇಳೆ ಊಟ ಮಾಡಿ ರೂಲರ್ ಪಕ್ಕದಲ್ಲಿ ಮಲಗಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಬೇಟಿ ನೀಡಿ,...
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ತಾಲೂಕಿನ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.. ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದ ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ನಿರಂತರ ಮಳೆಯ ಕಾರಣಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಪಕ್ಕದ ಮನೆಯ ಸಾತವ್ವ ಭೀಮಣ್ಣ ಬೆಂಗಳೂರ (50) ಎಂಬುವ ಮಹಿಳೆಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ...
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ಹುಬ್ಬಳ್ಳಿ,: ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ಸಾಬ್ (60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ ದುರ್ದೈವಿಗಳು. ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಜಾಪರಸಾಬ್ ಓಮಿನ್ ಕಾರ್ನಲ್ಲಿ ಕುಟುಂಬದವರ ಜೊತೆ ಪಾರ್ಶವಾಯು ಔಷಧಿ ತರಲು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಳಗಾ ಗ್ರಾಮದಲ್ಲಿನ ಸೇಂಟ್ ಮೇರಿ ಆಸ್ಪತ್ರೆಗೆ ಹೋಗಿದ್ದರು. ಔಷಧಿ ಪಡೆದು...
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಗದಗ: ಸಾರಿಗೆ ಬಸ್ ಮತ್ತು ಕಾರ್ ನಡುವೆ ಭಿಕರ ಅಪಘಾತ ನಡೆದಿದೆ. ಪರಿಣಾಮ ಕಾರನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಸಾವು ಕಂಡಿದ್ದಾರೆ. ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರು...
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಮಹಾಲೆ ಮಿಲ್ ಹತ್ತಿರ ಭೀಕರ ಅಪಘಾತವಾಗಿದೆ. PWD ಇಲಾಖೆಯ ಬೇಜವಾಬ್ದಾರಿ ಹಾಗೂ ಸರ್ಕಾರದ ಖಬರಗೇಡಿತನಕ್ಕೆ ಈ ರಸ್ತೆ ಅನ್ನೋದು ಯಮರೂಪಿಯಾಗಿದೆ. ನಿತ್ಯವೂ ಹಲವರು ಇಲ್ಲಿ ಎದ್ದು, ಬಿದ್ದು ಓಡಾಡುವಂತಾಗಿದೆ. ಅಂತದ್ದರಲ್ಲಿ ಇವಾಗ ಮತ್ತೊಂದು ಅಪಘಾತಕ್ಕೆ ಇದೇ ರಸ್ತೆಯ ಗುಂಡಿಗಳು ಕಾರಣವಾಗಿವೆ. ಅಂದಹಾಗೆ, ಮುಂಡಗೋಡ ಪಟ್ಟಣದ ಹೊರ ವಲಯದ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬೈಕ್ ಸವಾರನೊಬ್ಬ ಬಿದ್ದಿದ್ದಾನೆ. ಹೀಗಾಗಿ, ಗಂಭೀರ ಗಾಯಗೊಂಡಿರೋ ಬೈಕ್ ಸವಾರನನ್ನು ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ...
ಮುಂಡಗೋಡ ಬಸವನ ಹೊಂಡದಲ್ಲಿ ವ್ಯಕ್ತಿಯ ಶವ ಪತ್ತೆ, ಆತ್ಮಹತ್ಯೆ ಮಾಡಿಕೊಂಡನಾ ಕಂಬಾರಗಟ್ಟಿಯ ಶಿವಾಜಿ..?
ಮುಂಡಗೋಡ ಪಟ್ಟಣದ ಬಸವನ ಹೊಂಡದಲ್ಲಿ ವ್ಯಕ್ತಿಯೋರ್ವನ ಶವ ದೊರೆತಿದೆ. ಬೆಳ್ಳಂ ಬೆಳಿಗ್ಗೆ ಹೊಂಡದಲ್ಲಿ ಶವ ತೇಲುತ್ತಿರುವುದನ್ನು ಕಂಡ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪಿಎಸ್ಐ ಪರಶುರಾಮ್ ಟೀಂ ಸ್ಥಳಕ್ಕೆ ಧಾವಿಸಿ ಶವ ಹೊರತೆಗೆದಿದ್ದಾರೆ. ಇನ್ನು ಹೊಂಡದಲ್ಲಿ ಪತ್ತೆಯಾಗಿರೋ ಶವ ಮುಂಡಗೋಡ ಪಟ್ಟಣದ ಕಂಬಾರಗಟ್ಟಿಯ ಶಿವಾಜಿ ಬಿಸೆಟ್ಟಿ (60) ಅಂತಾ ಗುರುತಿಸಲಾಗಿದೆ. ಯಾವುದೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತಾ ಶಂಕಿಸಲಾಗಿದೆ. ಸದ್ಯ ಶವ ಹೊರತೆಗೆಯಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟ್ರ್ಯಾಕ್ಟರ್ ಹಾಗೂ ಇಂಜೀನ್ ನಡುವೆ ಸಿಲುಕಿ ದಾರುಣ ಸಾವು ಕಂಡ ಚಾಲಕ, ಗುಡ್ಡ ಹತ್ತಿಸುವಾಗ ದುರಂತ..!
ಹಾನಗಲ್: ಟ್ಯ್ರಾಕ್ಟರ್ ಇಂಜಿನ್ ಮತ್ತು ಟ್ರೆಲರ್ ಮಧ್ಯ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಹಾನಗಲ್ ತಾಲೂಕಿನ ಆಡೂರ ಗ್ರಾಮದಲ್ಲಿ ನಡೆದಿದೆ. ಬಂಕಾಪೂರ ಗ್ರಾಮದ ಯಲ್ಲಪ್ಪ ಉಳಿವೆಪ್ಪ ವಳಗೇರಿ (40) ಮೃತ ದುರ್ದೈವಿಯಾಗಿದ್ದಾನೆ. ಈತ ಬಂಕಾಪೂರ ಗ್ರಾಮದಿಂದ ಆಡೂರ ಗ್ರಾಮಕ್ಕೆ ಟ್ರ್ಯಾಕ್ಟರ್ ನಲ್ಲಿ ಎಂ.ಸ್ಯಾಂಡ್ ಉಸುಕು ತಂದಿದ್ದ. ಗ್ರಾಮದಲ್ಲಿರುವ ಗುಡ್ಡವನ್ನ ಹತ್ತಿಸುವ ವೇಳೆ ಅವಘಡ ನಡೆದಿದೆ. ಏಕಾಏಕಿ ಟ್ರ್ಯಾಕ್ಟರ್ ಇಂಜಿನ್ ಮೆಲಕ್ಕೆ ಹಾರಿದ ಪರಿಣಾಮ ಇಂಜಿನ್ ಮತ್ತು ಟ್ರೆಲರ್ ನಡುವೆ ಟ್ರ್ಯಾಕ್ಟರ್ ಚಾಲಕ ಸಿಲುಕಿಕೊಂಡು ಸಾವನ್ನಪ್ಪಿದ್ದಾನೆ. ಆಡೂರ ಪೊಲೀಸ್...









