ಮುಂಡಗೋಡ ತಾಲೂಕಿನ ಕಾತೂರು ಬಳಿ ಹಿಟ್ ಆಂಡ್ ರನ್ ಕೇಸ್ ಆಗಿದೆ. ಬೊಲೆರೋ ವಾಹನ ಬೈಕ್ ಗೆ ಗುದ್ದಿ ಪರಾರಿಯಾಗುತ್ತಿದ್ದ ವೇಳೆ ಸಾರ್ವಜನಿಕರೇ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಬೈಕ್ ಸವಾರರಿಗೆ ಗಾಯವಾಗಿದೆ. ಅದ್ರಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಅಂದಹಾಗೆ, ಕಾತೂರು ಬಳಿಯ ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು. ಗಾಯಗೊಂಡಿರೋ ಬೈಕ್ ಸವಾರರನ್ನು ಚಳಗೇರಿಯ ರವಿ ರಾಮಲಿಂಗ್ ಸಾಳುಂಕೆ(26) ಖಾನು ಗೌಳಿ ಅಂತಾ ಗುರುತಿಸಲಾಗಿದೆ. ಇದ್ರಲ್ಲಿ ರವಿ ಸಾಳುಂಕೆ ಗಂಭೀರ...
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Category: ಅಪಘಾತ
ಶಿಗ್ಗಾವಿ ಬಳಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ
ಶಿಗ್ಗಾವಿ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಐದು ಜನರು ತೀವ್ರ ಗಾಯಗೊಂಡ ಘಟನೆ ಶಿಗ್ಗಾವಿ- ಹನುಮರಹಳ್ಳಿ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ ಮರಕ್ಕೆ ಡಿಕ್ಕಿ ಹೊಡೆದ ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮೃತರು ಸವಣೂರ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (19) ಮೃತ ದುರ್ದೈವಿಗಳಾಗಿದ್ದಾರೆ, ಐದು ಜನ ತೀವ್ರ ಗಾಯಗೊಂಡಿದ್ದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇವನಹಳ್ಳಿ...
ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!
ವಿಜಯಪುರ: ಅಂದರ್ ಬಾಹರ್ ಇಸ್ಪೀಟ್ ಆಡುವಾಗ ಪೊಲೀಸರ ದಾಳಿ ಹಿನ್ನೆಲೆಯಲ್ಲಿ, ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗುವಾಗ ತೆಪ್ಪ ಮುಗುಚಿಬಿದ್ದ ಪರಿಣಾಮ 8 ಜನರು ನೀರುಪಾಲಾಗಿದ್ದರು, ಆ ಎಂಟು ಜನರ ಪೈಕಿ ಇಬ್ಬರು ಪಾರಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದೆ. ಇದ್ರೊಂದಿಗೆ ಐವರು ನೀರು ಪಾಲಾಗಿದ್ದಾರೆ. ಪುಂಡಲಿಕ್ ಮಲ್ಲಪ್ಪ ಯಂಕಂಚಿ (36) ಮೃತದೇಹ ನಿನ್ನೆ ಪತ್ತೆಯಾಗಿದೆ. ದಶರಥ( 58), ಮೈಬೂಬ್ ವಾಲಿಕಾರ(35), ತೈಯುಬ್ ಚೌಧರಿ ( 45), ರಫೀಕ್ ಬಾಂಬೆ (40), ರಫೀಕ ಜಾಲಗಾರ (48)...
ನ್ಯಾಸರ್ಗಿ ಗೌಳಿ ದಡ್ಡಿ ಬಳಿ ಬೈಕ್ ಅಪಘಾತ ಹೊಸೂರಿನ ವ್ಯಕ್ತಿ ಸ್ಥಳದಲ್ಲೇ ಸಾವು..!
ಮುಂಡಗೋಡ ತಾಲೂಕಿನ ನ್ಯಾಸರ್ಗಿಯ ಗೌಳಿದಡ್ಡಿ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಮೃತನು ಶಿಗ್ಗಾವಿ ತಾಲೂಕಿನ ಹೊಸುರು ಗ್ರಾಮದವನು ಅಂತಾ ತಿಳಿದು ಬಂದಿದೆ. ಹೊಸೂರಿನ ವೀರಭದ್ರಪ್ಪ ಶೇಖರಯ್ಯ ಹಿರೇಮಠ(48), ಎಂಬುವವರೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಈತ ಮುಂಡಗೋಡಿನಿಂದ ನ್ಯಾಸರ್ಗಿ ಮಾರ್ಗವಾಗಿ ಹೊಸೂರಿಗೆ ಬೈಕ್ ಮೂಲಕ ಹೊರಟಿದ್ದ. ಈ ವೇಳೆ ನ್ಯಾಸರ್ಗಿ ಸಮೀಪದ ಗೌಳಿದಡ್ಡಿಯ ರಸ್ತೆ ತಿರುವಿನಲ್ಲಿ ಅಪಘಾತವಾಗಿದೆ ಅನ್ನೊ ಮಾಹಿತಿ ತಿಳಿದುಬಂದಿದೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡದಿದೆ.
ಹಾವೇರಿ ಸಮೀಪ ಭೀಕರ ಅಪಘಾತ ಮಕ್ಕಳೂ ಸೇರಿ 13 ಜನರ ದುರ್ಮರಣ..!
ಹಾವೇರಿ: ಇಲ್ಲಿಗೆ ಸಮೀಪದ ಗುಂಡನಹಳ್ಳಿ ಕ್ರಾಸ್ ಬಳಿರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶುಕ್ರವಾರ ಬೆಳಗಿನ ಜಾವ 3.40ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳೂ ಸೇರಿ13 ಜನರು ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳುಜನ ಮಹಿಳೆಯರು, ಮಗು, ಓರ್ವ ಅಜ್ಜಿ, ಓರ್ವ ವಿಕಲಚೇತನ ಯುವತಿ ಸೇರಿದ್ದು, ಶವಗಳನ್ನು ಇಲ್ಲಿ ನ ಜಿಲ್ಲಾ ಆಸ್ಪತ್ರೆ ಗೆ ಸಾಗಿಸಲಾಗಿದೆ. ಅಪಘಾತ...
ಪಾಳಾ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ, ಮಗು ಸೇರಿ ದಂಪತಿಗೆ ಗಂಭೀರ ಗಾಯ..!
ಪಾಳಾ ಕ್ರಾಸ್ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಮಾವಿನ ಮರ ಬಿದ್ದ ಪರಿಣಾಮ ಒಂದು ಮಗು ಸೇರಿ ಮೂವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಪಾಳಾದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ರಸ್ತೆ ಬದಿಯ ಹಳೆಯ ಮರ ಬಿದ್ದು ಘಟನೆ ಸಂಭವಿಸಿದೆ. ಮುಂಡಗೋಡ ತಾಲೂಕಿನ ಚಿಟಗೇರಿಯ ಪರಶುರಾಮ್ ಸಿದ್ದಪ್ಪ ನಾಯ್ಕರ್, ಮಧು ಪರಶುರಾಮ್ ನಾಯ್ಕರ್ ಹಾಗೂ ಒಂದೂವರೆ ವರ್ಷದ ಮಗು ಧನವೀರ್ ಪರಶುರಾಮ್ ನಾಯ್ಕರ್ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಾಗೆ...
ಪಾಳಾ ಬಳಿ ಬೈಕ್ ಸವಾರನ ಮೇಲೆ ಉರುಳಿ ಬಿದ್ದ ಮರ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಬಳಿ ರಸ್ತೆ ಮೇಲೆ ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮರ ಉರುಳಿಬಿದ್ದು ಗಂಭೀರ ಗಾಯವಾದ ಘಟನೆ ನಡೆದಿದೆ. ಪಾಳಾದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ರಸ್ತೆ ಬದಿಯ ಹಳೆಯ ಮರ ಬಿದ್ದು ಘಟನೆ ಸಂಭವಿಸಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಗಾಯಾಳುವನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮುಂಡಗೋಡ ಪಿಎಸ್ ಐ ಪರಶುರಾಮ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಾರ್ ಪಲ್ಟಿ ನಾಲ್ವರು ಸ್ಥಳದಲ್ಲೇ ಸಾವು, 6 ಜನರಿಗೆ ಗಾಯ..!
ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವಾಗಿದೆ, ಕಾರು ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದು ಬಿದ್ದ ಪರಿಣಾಮ, 4 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 6 ಜನರಿಗೆ ಗಾಯವಾಗಿದೆ. ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ಘಟನೆ ನಡೆದಿದ್ದು, ಎನ್ ಎಚ್ 4 ಪಿಬಿ ರಸ್ತೆಯಿಂದ ಕೆಳಗೆ ಸರ್ವಿಸ್ ರಸ್ತೆಗೆ ಕಾರ್ ಬಿದ್ದಿದೆ. ಘಟನೆಯಲ್ಲಿ, ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ...
ಅಗಡಿ ಪೆಟ್ರೊಲ್ ಬಂಕ್ ಬಳಿ ಬೈಕ್ ಅಪಘಾತ, ಇಬ್ಬರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಬೈಕ್ ಅಪಘಾತವಾಗಿದೆ. ಅಗಡಿ ಸಮೀಪದ ಪೆಟ್ರೊಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಅನ್ನೊ ಮಾಹಿತಿ ಇದೆ. ಬಸಾಪುರ ಗ್ರಾಮದ ತಿಪ್ಪಯ್ಯ ಹಾಗೂ ಹುಲಿಹೊಂಡ ಗ್ರಾಮದ ಕುಮಾರ್ ಎಂಬುವವರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರ ಅಂತಾ ಹೇಳಲಾಗ್ತಿದೆ. ಸದ್ಯ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಸಮೀಪ ಭೀಕರ ಅಪಘಾತ, ಗಾಯಗೊಂಡಿದ್ದ ಇಂದೂರಿನ ಮತ್ತೋರ್ವ ವ್ಯಕ್ತಿ ಸಾವು..! ಮೃತರ ಸಂಖ್ಯೆ ಎರಡಕ್ಕೆ ಏರಿಕೆ..!
ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇಂದೂರಿನ ಕುಮಾರ್ ಇಳಿಗೇರ್(44) ಸಾವನ್ನಪ್ಪಿದ ಮತ್ತೋರ್ವ ಬೈಕ್ ಸವಾರನಾಗಿದ್ದಾನೆ. ಇನ್ನು ಘಟನೆಯಲ್ಲಿ ಮುಂಡಗೋಡಿನ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ...









