ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೌಲಾಸಾಬ್ ಮಹ್ಮದಸಾಬ್ ಗೋರಿ (42) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಸಮೀಪ ಸಂಭವಿಸಿರೋ ಬೈಕ್ ಅಪಘಾತದಲ್ಲಿ ರವಿವಾರ ನಿಧನರಾಗಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಮೌಲಾಸಾಬ್ ತಮ್ಮ ಅವಧಿಯಲ್ಲಿ ಜನಮನ್ನಣೆ ಗಳಿಸಿಕೊಂಡಿದ್ರು. ಹೀಗಾಗಿ, ಮೌಲಾಸಾಬರ ನಿಧನಕ್ಕೆ ಗ್ರಾಮಸ್ಥರು, ವಿವಿಧ ಸಮಾಜದ ಮುಖಂಡರು ಕಂಬನಿ ಮಿಡಿದಿದ್ದಾರೆ.
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Category: ಅಪಘಾತ
ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ, ಸಿಡಿಲು ಬಡಿದು 5 ಹಸುಗಳು ದಾರುಣ ಸಾವು..!
ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಮೊದಲ ದಿನದ ಮಳೆಯಲ್ಲೇ ಐದು ಹಸುಗಳು ದಾರುಣ ಸಾವು ಕಂಡಿವೆ. ಸಿಡಿಲು ಬಡಿದು ಗದ್ದೆಯಲ್ಲಿದ್ದ 5 ಹಸುಗಳು ಮೃತಪಟ್ಟಿವೆ. ಪಾಳಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲಕೊಪ್ಪ ಗ್ರಾಮದ ಪಕ್ಕೀರ ಗೌಡ ಕಡಬಗೇರಿ ಎಂಬುವವರ ಐದು ಹಸುಗಳು ಗದ್ದೆಯಲ್ಲಿ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿವೆ. ಇಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಲ್ಲಿ ಸಿಡಿಲ ಅರ್ಭಟದಿಂದ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊಪ್ಪ ಕೆರೆಯ ಬಳಿ ಬೆಳ್ಳಂ ಬೆಳಿಗ್ಗೆ ಬೈಕ್ ಅಫಘಾತ, ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಕೊಪ್ಪದ ಕೆರೆ ಬಳಿ ಬೆಳ್ಳಂ ಬೆಳಿಗ್ಗೆ ಬೈಕ್ ಅಪಘಾತವಾಗಿದೆ. ಪರಿಣಾಮ ಮೂವರಿಗೆ ಗಂಭೀರ ಗಾಯವಾಗಿದೆ. ರಸ್ತೆ ಬದಿಯ ಕಲ್ಲಿಗೆ ಬೈಕ್ ಡಿಕ್ಕಿ ಹೊಡೆದು ಅಪಘಾತವಾಗಿದೆ. ಕೊಪ್ಪ ಇಂದಿರಾನಗರದ ಲಕ್ಷ್ಮಣ ರಾಮಣ್ಣ ಬೋವಿವಡ್ಡರ (36), ಬಸವರಾಜ್ ಹನ್ಮಂತಪ್ಪ ಕುಂಕೂರ್ (36), ಮುಂಡಗೋಡಿನ ಸಾದಿಕ್ ಜಲಾಲ್ ಸಾಬ್ ಹುಬ್ಬಳ್ಳಿ(36) ಗಂಭೀರ ಗಾಯಗೊಂಡಿದ್ದಾರೆ. ಅಪಘಾತವಾದ ತಕ್ಷಣವೇ ಗ್ರಾಮಸ್ಥರು ಗಾಯಗೊಂಡವರನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡಿನಲ್ಲಿ ನೆಲಕ್ಕುರುಳಿದ ಬೃಹತ್ ಆಲದ ಮರ, ಅಪಾರ ಹಾನಿ..!
ಮುಂಡಗೋಡ ಪಟ್ಟಣದ ಬಂಕಾಪುರ ರಸ್ತೆಯಲ್ಲಿನ ಅಯ್ಯಪ್ಪಸ್ವಾಮಿ ದೇವಸ್ಥಾನದ ಹಿಂದೆ ಬೃಹತ್ ಆಲದ ಮರ ಏಕಾಏಕಿ ನೆಲಕ್ಕುರುಳಿದೆ. ಪರಿಣಾಮ ಮರದ ಕೆಳಗಡೆ ನಿರ್ಮಿಸಿಕೊಂಡಿದ್ದ ಗ್ಯಾರೇಜ್ ಹಾಗೂ ವೆಲ್ಡಿಂಗ್ ವರ್ಕ್ ಶಾಪ್ ಗೆ ಹಾನಿಯಾಗಿದೆ. ನಾಲ್ಕೈದು ಬೈಕ್ ಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದುಗಡೆ ಇರೋ ಪುರಾತನ ಆಲದ ಮರ ಮೂರು ಭಾಗಗಳಾಗಿ ನೆಲಕ್ಕುರಿಳಿದ್ದು. ಪ್ರಮೋದ್ ಎಂಬುವವರಿಗೆ ಸೇರಿದ ಗ್ಯಾರೇಜು ಸಂಪೂರ್ಣ ಜಖಂ ಗೊಂಡಿದೆ. ಇದ್ರಿಂದ ಗ್ಯಾರೇಜಿನಲ್ಲಿ ರಿಪೇರಿಗೆಂದು ಬಂದಿದ್ದ ಬೈಕ್...
ಮುಂಡಗೋಡಿನಿಂದ ಹಜ್ ಯಾತ್ರೆಗೆ ತೆರಳಿದ್ದ ಮೂವರು ಕಾರ್ ಅಪಘಾತದಲ್ಲಿ ಸಾವು..! ಮತ್ತೆ ಮೂವರಿಗೆ ಗಾಯ..!
ಮುಂಡಗೋಡಿನಿಂದ ಮೆಕ್ಕಾ( ಹಜ್ ಯಾತ್ರೆಗೆ) ತೆರಳಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡಿನ ರೋಣ್ಸ್ ಮೆಡಿಕಲ್ ಮಾಲೀಕ ಫಯಾಜ್ ಅಹ್ಮದ್ ರೋಣ್, ಅವ್ರ ಧರ್ಮಪತ್ನಿ ಆಫೀನಾ ಬಾನು ಹಾಗೂ ಅಣ್ಣನ ಮಗ ಆಯಾನ್ ರೋಣ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮೆಕ್ಕಾದ ದರ್ಶನ ಮುಗಿಸಿಕೊಂಡು ಕಾರಿನಲ್ಲಿ ಮದಿನಾಕ್ಕೆ ಹೊರಟಿದ್ದ ವೇಳೆ, ಕಾರಿನ ಟೈಯರ್ ಸ್ಪೋಟಗೊಂಡ ಪರಿಣಾಮ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನುಳಿದಂತೆ ಹೆಚ್ಚಿನ...
ಅಯ್ಯೋ ವಿಧಿಯೇ, ಮತ್ತೊಂದು ಭೀಕರ ಬೈಕ್ ಅಪಘಾತ..! ನಂದಿಕಟ್ಟಾದ ಮತ್ತೋರ್ವ ಯುವಕ ಸಾವು..!
ಮುಂಡಗೋಡ- ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಭಯಾನಕ ಅಪಘಾತವಾಗಿದೆ. ಕಲಘಟಗಿ ತಾಲೂಕಿನ ಬೆಲವಂತರ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕ ಮೃತಪಟ್ಟಿದ್ದಾನೆ. ಮತ್ತಿಬ್ಬರಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ತುಕಾರಾಮ್ ಅರ್ಜುನ್ ಕಮ್ಮಾರ್ (26) ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಇನ್ನು ಮತ್ತೀರ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಅಂದಹಾಗೆ, ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಕ್ಕೆ ಬಹುಶಃ ಇವತ್ತು ಕರಾಳ ದಿನ. ಯಾಕಂದ್ರೆ ಒಂದೇ ದಿನ ಪ್ರತ್ಯೇಕ ಎರಡು ಅಪಘಾತದಲ್ಲಿ...
ಹುನಗುಂದ ಬಳಿ ಭೀಕರ ಅಪಘಾತ, ಬೈಕ್ ಓಮಿನಿ ನಡುವೆ ಡಿಕ್ಕಿ, ನಂದಿಕಟ್ಟಾದ ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!
ಮುಂಡಗೋಡ: ತಾಲೂಕಿನ ಹುನಗುಂದ ಹಾಗೂ ಟಿಬೇಟಿಯನ್ ಕ್ಯಾಂಪ್ ನಂ. 8 ರ ರಸ್ತೆ ಮದ್ಯೆ ಭೀಕರ ಅಪಘಾತವಾಗಿದೆ. ಓಮಿನಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ಕೃಷ್ಣ ಸೋಮಣ್ಣ ಕಟಾವಕರ್ (54) ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನು ಪ್ರಭು(36) ಎಂಬುವ ಬೈಕ್ ಹಿಂಬದಿಯ ಸವಾರ ಗಾಯಗೊಂಡಿದ್ದಾನೆ. ಬೈಕ್ ಸವಾರರು ಹುನಗುಂದ ಗ್ರಾಮಕ್ಕೆ ತೆರಳುತ್ತಿದ್ದರು. ಹಾಗೇನೆ ಹುನಗುಂದ ಕಡೆಯಿಂದ ವರುತ್ತಿದ್ದ ಓಮಿನಿ ನಡುವೆ ಡಿಕ್ಕಿಯಾಗಿದೆ. ಹೀಗಾಗಿ, ಗಂಭೀರವಾಗಿ ಗಾಯಗೊಂಡಿದ್ದ...
ಬಾಚಣಕಿ ಬಳಿ ಅಪಘಾತ, ಅರಷಿಣಗೇರಿಯ ವ್ಯಕ್ತಿ ಸ್ಥಳದಲ್ಲೇ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಲಾರಿ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಅರಷಿಣಗೇರಿಯ ಸ್ಕೂಟಿ ಸವಾರ ಸ್ಥಳದಲ್ಲೇ ಸಾಚನ್ನಪ್ಪಿದ್ದಾನೆ. ಬಸವರಾಜ್ ಶಿವನಗೌಡರ್ (50) ಎಂಬುವ ಸ್ಲೂಟಿ ಸವಾರನೇ ಅಪಘಾತದಲ್ಲಿ ಮೃತಪಟ್ಟಿದ್ದು, ಸಂಜೆ ಮುಂಡಗೋಡಿನಿಂದ ಸ್ಕೂಟಿ ಮೇಲೆ ಅರಷಿಣಗೇರಿಗೆ ಬರುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಅಮ್ಮಾಜಿ ಕೆರೆ ಸಮೀಪ ವಿಷ ಕುಡಿದು ನಿತ್ರಾಣಗೊಂಡಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!
ಮುಂಡಗೋಡ ಪಟ್ಟಣದ ಅಮ್ಮಾಜಿ ಕೆರೆ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ, ನಿತ್ರಾಣಗೊಂಡ ಯುವಕನೋರ್ವನ ರಕ್ಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ಮೂಲದವನು ಅಂತಾ ಅಂದಾಜಿಸಲಾಗಿರೋ ಯುವಕನಿಗೆ ಸದ್ಯ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ನೋಂದಣಿ ಸಂಖ್ಯೆ ಹೊಂದಿರುವ ಸ್ಕೂಟಿ ಮೇಲೆ ಬಂದಿರೋ ಯುವಕ, ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಪಕ್ಕ ಬಿದ್ದು ನರಳಾಡುತ್ತಿದ್ದ. ಬಾಯಲ್ಲಿ ನೊರೆ ಬಂದು ಕೋಮಾ ಸ್ಥಿತಿಗೆ ತಲುಪಿದ್ದ ಯುವಕ ವಿಷ ಸೇವಿಸಿರಬಹುದು ಅಂತಾ ಅಂದಾಜಿಸಲಾಗಿದೆ. ಸಾರ್ವಜನಿಕರು...
ಹಾರವಳ್ಳಿ ಬಳಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಹಾರವಳ್ಳಿ ಗ್ರಾಮದ ಹತ್ತಿರ ಮಾಜಿ ಶಾಸಕ ವಿ ಎಸ್ ಪಾಟೀಲ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಬನವಾಸಿಯಿಂದ ಪಾಳಾ- ರಾಮಪೂರ ಮಾರ್ಗವಾಗಿ ತಮ್ಮ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಚಾಲಕ ಆನಂದ ಆಲೂರನಿಗೆ ಕಣ್ಣಿಗೆ ಹಾಗೂ ಮಾಜಿ ಶಾಸಕ ವಿ ಎಸ್ ಪಾಟೀಲರಿಗೆ ಎದಗೆ ಪೆಟ್ಟು ಬಿದ್ದಿದೆ. ಅದೃಷ್ಟವಾಶತ್ ಕಾರಿನ ಏರ್ ಬ್ಯಾಗ್ ಓಪನ್...









