ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದುಕೊಂಡು ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ. ಶನಿವಾರ ತಡರಾತ್ರಿ ನಡೆದಿರೋ ಘಟನೆಯಲ್ಲಿ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ದಿನ ರಾತ್ರಿ ಪತ್ನಿಯ ಮನೆಗೆ ಆಗಮಿಸಿದ್ದ ಅರವಿಂದ್, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ...
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Category: ಅಪಘಾತ
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ತಾಲೂಕಿನ ಚಿಗಳ್ಳಿಯ ಹೋರಿಹಬ್ಬದಲ್ಲಿ ಭಯಾನಕ ದುರ್ಘಟನೆ ಸಂಭವಿಸಿದೆ. ಹೋರಿ ಹಬ್ಬ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಭಯಾನಕ ಸಾವು ಕಂಡಿದ್ದಾನೆ. ಪರಮೇಶ್ ಸಿದ್ದಪ್ಪ ಹರಿಜನ್ (21) ಎಂಬುವ ಯುವಕನೇ ಹೋರಿ ಹಬ್ಬದಲ್ಲಿ ಹೋರಿ ತಿವಿದು ಮೃತಪಟ್ಟ ಯುವಕನಾಗಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ನಿಮಿತ್ತ ಚಿಗಳ್ಳಿಯ ಕಲ್ಮೇಶ್ವರ ಮಠದ ಹತ್ತಿರ ಹೋರಿಹಬ್ಬದಲ್ಲಿ ಏರ್ಪಡಿಸಲಾಗಿತ್ತು. ಈ ಹಬ್ಬದಲ್ಲಿ ವಿವಿದೆಡೆಯಿಂದ ಬಲಿತ ಸ್ಪರ್ಧಾ ಹೋರಿಗಳು ಬಂದಿದ್ದವು. ಹೀಗಾಗಿ, ಹೋರಿಗಳ ಹಬ್ಬ ನೋಡಲು ಹೋಗಿದ್ದ ಹುಡುಗನ ಮೇಲೆ ಹೋರಿ...
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಾಂಡುರಂಗ ಹೊಟೇಲ್ ಬಳಿ, ಬೈಕ್ ಹಾಗೂ ಟಾಟಾ ಎಸ್ ವಾಹನಕ್ಕೆ ಅಪಘಾತವಾಗಿದೆ. ಪರಿಣಾಮ ಹಳೂರಿನ ಯುವಕ ಗಂಭೀರ ಗಾಯಗೊಂಡಿದ್ದಾನೆ. ಇವತ್ತಷ್ಟೇ ಹಬ್ಬಕ್ಕಾಗಿ ಬೆಂಗಳೂರಿನಿಂದ ಬಂದಿದ್ದ, ಮುಂಡಗೋಡ ಹಳೂರಿನ ಮಣಿಕಂಠ(20) ಎಂಬುವ ಯುವಕನೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಕಾಲಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಅಂದಲಗಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ನಿನ್ನೆ ಸಂಜೆ ಸುಮಾರು ಏಳು ಗಂಟೆಯ ಹೊತ್ತಿಗೆ ಗದ್ದೆಯಲ್ಲಿ ಕರಡಿ ದಾಳಿ ಮಾಡಿದ್ದು, ಕಾಲು ಹಾಗೂ ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯವಿಲ್ಲ ಎನ್ನಲಾಗಿದೆ. ದ್ಯಾಮಣ್ಣ ನಾಗಪ್ಪ ಬೆಂಡಿಗೇರಿ (35) ಎಂಬುವವನ ಮೇಲೆ ಕರಡಿ ದಾಳಿ ಮಾಡಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಗಾಯಾಳುಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಮುಂಡಗೋಡ ತಾಲೂಕಿನಾಧ್ಯಂತ ಸೋಮವಾರ ಸುರಿದ ಭಾರೀ ಮಳೆಗೆ ವಿಪರೀತ ಅವಾಂತರಗಳು ಸೃಷ್ಟಿಯಾಗಿವೆ. ಸೋಮವಾರದಿಂದ ತಾಲೂಕಿನ ಹಲವು ಕಡೆ ಕೆಲ ದುರಂತಗಳೂ ನಡೆದಿವೆ. ಅತ್ತಿವೇರಿ ಗೌಳಿ ದಡ್ಡಿ ಬಳಿ ಹಾಗೂ ಶಿರಸಿ ರಸ್ತೆಯ ಹಿರೇಹಳ್ಳಿ ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗೌಳಿಗರ ಹದಿನೈದಕ್ಕೂ ಹೆಚ್ಚು ಎಮ್ಮೆಗಳು ನೀರು ಪಾಲಾಗಿವೆ ಅನ್ನೋ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಕೆಲವು ಎಮ್ಮೆಗಳ ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಹಲವು ಎಮ್ಮೆಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿವೆ ಅಂತಾ ಹೇಳಲಾಗಿದೆ. ಅತ್ತಿವೇರಿ ಗೌಳಿದಡ್ಡಿಯಲ್ಲಿ..! ಅಂದಹಾಗೆ, ಸೋಮವಾರ...
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಮುಂಡಗೋಡ ತಾಲೂಕಿನ ಸಾಲಗಾವಿಯಲ್ಲಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಸಾಲಗಾವಿಯ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾಲಕನ ಶವ ಹೊರ ತೆಗೆದಿದ್ದಾರೆ. ಅಂದಹಾಗೆ, ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ...
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಮುಂಡಗೋಡ: ಮಳೆಯ ಅರ್ಭಟ ನೋಡಲು ಹೋದ ಒಂಬತ್ತನೇ ತರಗತಿಯ ಬಾಲಕನೋರ್ವ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಸಾಲಗಾಂವ್ ಸಮೀಪದ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ ರಾತ್ರಿ ಮುಂಡಗೋಡ ಠಾಣೆಗೆ ಬಂದು...
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಹಾವೇರಿ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹಾವೇರಿ ನಗರದಲ್ಲಿ ಇರುವ ಹತ್ತಾರು ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಾಲಕನೋರ್ವ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಘಟನೆ ನಡೆದಿದೆ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿಯೇ ಘಟನೆ ನಡೆದಿದ್ದು, ನೀವೆದನ್ ಬಸವರಾಜ್ ಗುಡಗೇರಿ (12) ಕೊಚ್ಚಿ ಹೋದ ಬಾಲಕನಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಾಲಕನ ಸಂಬಂಧಿಗಳಿಂದ...
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ಶಿಗ್ಗಾವಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಶಿಗ್ಗಾವಿ ಪಟ್ಟಣದ ಹಿರೇಕೆರೆಯಲ್ಲಿ ಮಂಗಳವಾರ ಸಂಜೆ ಜರುಗಿದೆ. ಮೃತ ವ್ಯಕ್ತಿಗಳನ್ನ ಶಿಗ್ಗಾವಿ ಪಟ್ಟಣದ ಸಾಲಗೇರಿ ಓಣಿಯ ಹಜರತ ಅಲಿ ಇಬ್ರಾಹಿಂ ಮುಕ್ಕೇರಿ (27), ಅಕ್ಸರ್ ಹಿಮಾಮ್ ಖಾಸೀಮ್ ಸುಲ್ತಾನಖಾನವರ (35) ಎಂದು ಗುರುತಿಸಲಾಗಿದೆ. ಮೀನು ಹಿಡಿಯುವಾಗ ಆಯತಪ್ಪಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಗಳ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮೃತ ವ್ಯಕ್ತಿಗಳ...









