ಬೆಳಗಾವಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಚಾಕು ಇರಿತವಾಗಿದೆ. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಪೃಥ್ವಿ ಸಿಂಗ್ (55) ಮೇಲೆ ಚಾಕು ಇರಿತವಾಗಿದೆ. ಬೆಳಗಾವಿ ಜಯ ನಗರದ ನಿವಾಸದ ಬಳಿಯಲ್ಲಿ ಘಟನೆ ನಡೆದಿದೆ. ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗದಲ್ಲಿ ತೀವ್ರ ಗಾಯವಾಗಿದೆ. ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಪೃಥ್ವಿ ಸಿಂಗ್ ರನ್ನು ದಾಖಲಿಸಲಾಗಿದೆ. ಇನ್ನು ಕೆಎಲ್ಇ ಆಸ್ಪತ್ರೆಗೆ ಎಂಎಲ್‌ಸಿ ಚೆಲುವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಭೇಟಿ ನೀಡಿದ್ದಾರೆ. ಪೃಥ್ವಿ ಸಿಂಗ್ ಮಾಜಿ ಸಚಿವ ರಮೇಶ್ ಜಾರಕೀಹೊಳಿ ಅತ್ಯಾಪ್ತರಾಗಿದ್ದಾರೆ....
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಸನವಳ್ಳಿಯಲ್ಲಿ ನೇಣಿಗೆ ಶರಣಾದ ಪಿಡಿಓ, ತನ್ನ ತೋಟದಲ್ಲೇ ಆತ್ಮಹತ್ಯೆ ಮಾಡಿಕೊಂಡ ನೌಕರ..!
ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ಗ್ರಾಮ ಪಂಚಾಯತಿ ನೌಕರ (ಪ್ರಭಾರ ಪಿಡಿಓ) ನೇಣಿಗೆ ಶರಣಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರ ಬೆಳ್ಳಂ ಬೆಳಿಗ್ಗೆ ತಮ್ಮದೇ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ. ಸನವಳ್ಳಿ ಗ್ರಾಮದ ರಾಮಲಿಂಗ ಶಿವಲಿಂಗಪ್ಪ ಕಳಸಗೇರಿ(39) ಎಂಬುವವರೇ ನೇಣಿಗೆ ಶರಣಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೊನ್ನತ್ತಿ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ರವಿವಾರ ರಜೆ ಇದ್ದ ಕಾರಣ ಸ್ವಗ್ರಾಮಕ್ಕೆ ಬಂದಿದ್ದರು. ಆದ್ರೆ, ಇಂದು ಏಕಾಏಕಿ ತೋಟದಲ್ಲೇ...
ಗೋಂಜ್ಯಾಳ ಬೆಳೆದ ರೈತನಿಗೆ ಮಹಾಮೋಸ, ಅರಶಿಣಗೇರಿಯಲ್ಲಿ ರೆಡ್ ಹ್ಯಾಂಡಾಗೇ ಹಿಡಿದ್ರು ರೈತರು..!
ಮುಂಡಗೋಡ ತಾಲೂಕಿನ ಅರಶಿಣಗೇರಿಯ ಗೋವಿನಜೋಳ ಬೆಳೆದ ರೈತರು ಭಾರೀ ಮೋಸಕ್ಕೆ ಬಲಿಯಾಗ್ತಿದಾರಾ..? ತೀವ್ರ ಬರದ ಮದ್ಯೆಯೂ ಸಾಲಸೋಲ ಮಾಡಿ ಗೋವಿನಜೋಳ ಬೆಳೆದ ರೈತನಿಗೆ ಸದ್ಯ ವ್ಯಾಪಾರದ ಹೆಸ್ರಲ್ಲಿ ಮೋಸ ಮಾಡ್ತಿದಾರೆ ಜನ. ಅರಶಿಣಗೇರಿಯಲ್ಲಿ ಇವತ್ತು ಅಂತಹ ಹಲಾಲುಕೋರ ವ್ಯಾಪಾರಿಗಳ ಏಜೆಂಟರುಗಳನ್ನು ರೈತರೇ ಹಿಡಿದು ಜಾಡಿಸಿದ್ದಾರೆ. ಅಂದಹಾಗೆ, ಬರೋಬ್ಬರಿ ಒಂಬತ್ತು ಜನ ದಂಧೆಕೋರರು ರೆಡ್ ಹ್ಯಾಂಡಾಗೇ ರೈತರಿಗೆ ಸಿಕ್ಕು, ಮೋಸ ಬಯಲಿಗೆ ಬರುತ್ತಿದ್ದಂತೆ ಪರಾರಿಯಾಗಿದ್ದಾರೆ. ಅಸಲು, ಇವ್ರೇಲ್ಲ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದವರಂತೆ…! ಅಂದಹಾಗೆ, ಭಾರಿ ವ್ಯವಸ್ಥಿತವಾಗಿ...
ಟಿಬೇಟಿಯನ್ ಕ್ಯಾಂಪ್ ನಂ.1 ಕ್ರಾಸ್ ಬಳಿ ಮೊಬೈಲ್ ಶಾಪ್ ಕಳ್ಳತನ, ಬೆಲೆ ಬಾಳುವ ಮೊಬೈಲ್ ಎಗರಿಸಿದ ಕಳ್ಳರು..!
ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಕ್ರಾಸ್ ಬಳಿ ಮೊಬೈಲ್ ಅಂಗಡಿ ಕಳ್ಳತನವಾಗಿದೆ. ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ಮೊಬೈಲ್ ಅಂಗಡಿ ಮೇಲಿನ ಸೀಟ್ ಕೊರೆದು ಕಳ್ಳರು ಒಳ ನುಗ್ಗಿದ್ದು ಬೆಲೆಬಾಳುವ ಮೊಬೈಲ್ ಗಳನ್ನು ಎಗರಿಸಿಕೊಂಡು ಹೋಗಿದ್ದಾರೆ. ಸುರೇಶ್ ಶೇಟ್ ಎಂಬುವವರಿಗೆ ಸೇರಿದ ಮೊಬೈಲ್ ಶಾಪ್ ನಲ್ಲಿ ಹತ್ತಕ್ಕೂ ಹೆಚ್ಚು ಬೆಲೆಬಾಳುವ ಮೊಬೈಲ್ ಗಳನ್ನು ಕಳ್ಳರು ಎಗರಿಸಿದ್ದಾರೆ ಎನ್ನಲಾಗಿದೆ. ಏನಿಲ್ಲವೆಂದರೂ ಈ ಮೊಬೈಲ್ ಗಳ ಮೌಲ್ಯ ಒಂದು ಲಕ್ಷ ರೂ. ಗೂ...
ಬಂಧಿಸಲು ಹೋದ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ, ರೌಡಿ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ ಹುಬ್ಬಳ್ಳಿ ಪೊಲೀಸರು..!
ಹುಬ್ಬಳ್ಳಿ: ಕೊಲೆ ಯತ್ನ, ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡ ರೌಡಿಯೊಬ್ಬ ಹಿಡಿಯಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಪ್ರತಿಯಾಗಿ ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಗೆ ಯತ್ನ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ಎಂಬಾತನ ಕಾಲಿಗೆ ಗುಂಡೇಟು ಬಿದ್ದಿದೆ. ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ ಗೋನಾ ತಲೆಮರೆಸಿಕೊಂಡು ತಿರುಗಾಡುತ್ತಿದ್ದ. ಶನಿವಾರ ಗದಗ ರಸ್ತೆಯಲ್ಲಿ ಈತ ಇದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ...
ಬಗಡಗೇರಿ ಗ್ರಾ. ಪಂಚಾಯತಿ ಸದಸ್ಯನ ಕೊಲೆ- ಇಬ್ಬರ ಬಂಧನ, ಆಸ್ತಿ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!
ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣವನ್ನು ಕಲಘಟಗಿ ಪೊಲೀಸರು ಬೇಧಿಸಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಕೊಲೆಯಾದ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ನಿಂಗಪ್ಪನ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದರು. ಈ...
ವಾಹನ ಬಿಡುಗಡೆಗೆ ಹಣದ ಬೇಡಿಕೆ, ಶಿಗ್ಗಾವಿ ಠಾಣೆ ಪೊಲೀಸಪ್ಪ ಸಸ್ಪೆಂಡ್..!
ಶಿಗ್ಗಾವಿ: ವಾಹನ ಬಿಡುಗಡೆಗೆ ಹಣದ ಬೇಡಿಕೆ ಇಟ್ಟ ಪೊಲೀಸಪ್ಪನೊಬ್ಬ ಅಮಾನತು ಗೊಂಡಿದ್ದಾನೆ. ವಾಹನ ಬಿಡುಗಡೆಗೆ ಸಾರ್ವಜನಕರಿಂದ ಹಣದ ಬೇಡಿಕೆಯನ್ನು ಇಟ್ಟ ರಮೇಶ್ ಭಜಂತ್ರಿ ಎಂಬುವವರನ್ನು ಅಮಾನತು ಮಾಡಿ ಹಾವೇರಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ರಮೇಶ ಭಜಂತ್ರಿಯನ್ನು ಅಮಾನತು ಗೊಳಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾತಿ ಅಂಶುಕುಮಾರ್, ಗುರುವಾರ ರಾತ್ರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ರಮೇಶ ಭಜಂತ್ರಿ ಪ್ರಕರಣವೊಂದರಲ್ಲಿ ವಾಹನವನ್ನು ಬಿಡುಗಡೆ ಮಾಡಲು ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಟ್ಟಿರುವ...
ಮಂಜೂರಾದ ಮನೆ GPS ಮಾಡಲು ಲಂಚ, ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಸದಸ್ಯ..!
ಸವಣೂರು: ಸರ್ಕಾರದಿಂದ ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿಕೊಡಲು ಲಂಚ ಸ್ವೀಕರಿಸಿದ ಗ್ರಾಮ ಪಂಚಾಯತಿ ಸದಸ್ಯ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಸವಣೂರು ತಾಲ್ಲೂಕಿನ ಕಾರಡಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರಡಗಿ ಗ್ರಾಮದ ದಾದಾಪೀರ ಮಹ್ಮದಗೌಸ್ ಲೋಹಾರ ಎಂಬುವವರಿಗೆ ಮನೆ ಕಟ್ಟಿಸಿಕೊಳ್ಳಲು ಸರ್ಕಾರದಿಂದ 5 ಲಕ್ಷ ಹಣ ಮಂಜೂರಾಗಿತ್ತು. ಹೀಗಾಗಿ, ಕಾರಡಗಿ ಗ್ರಾಮ ಪಂಚಾಯಿತಿ ಸದಸ್ಯ ಮಹ್ಮದ್ ಜಾಫರ್ ಸಂಶಿ, ಫಲಾನುಭವಿ ದಾದಪೀರನ ಮನೆಯ ಜಿಪಿಎಸ್ ಮಾಡಿಸಿಕೊಡಲು ರೂ 40 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟಿದ್ದ. ಮುಂಗಡವಾಗಿ 20 ಸಾವಿರ...
ಬಗಡಗೇರಿಯಲ್ಲಿ ಗ್ರಾಪಂ ಸದಸ್ಯನ ಭೀಕರ ಹತ್ಯೆ, ಗ್ರಾಮದ ನಡುಬೀದಿಯಲ್ಲೇ ಕೊಂದು ಬೀಸಾಕಿದ ದುಷ್ಕರ್ಮಿಗಳು..!
ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಭೀಕರ ಹತ್ಯೆಯಾಗಿದೆ. ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ದುಷ್ಕರ್ಮಿಗಳು. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಆಸ್ತಿ ವಿಚಾರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಇನ್ನು ನಡುಬೀದಿಯಲ್ಲೇ ಕೊಲೆ ಮಾಡಿ ಪರಾರಿಯಾಗಿದ್ದಾರೆ ದುಷ್ಕರ್ಮಿಗಳು. ಇನ್ನು ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮ ಗೋಮಾಂಸ ದಂಧೆ, ಇಬ್ಬರು ಆರೆಸ್ಟ್..!
ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಗೋಮಾಂಸ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಓರ್ವ ಟಿಬೇಟಿಗನೂ ಸೇರಿದಂತೆ ಇಬ್ಬರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಟಿಬೇಟಿಯನ್ ಕಾಲೋನಿ ನಂಬರ್ 3 ರಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಈ ಕುರಿತು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.








