Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಮುಂಡಗೋಡ ತಾಲೂಕಿನಲ್ಲಿ ಎಲ್ಲೆಂದರಲ್ಲಿ ಮಟ್ಕಾ ದಂಧೆ..! “ಕ್ರಮ ಕೈಗೊಳ್ಳಿ ಸಾಹೇಬ್ರೇ” ಅಂತಾ ಎಸ್ಪಿಗೆ ದೂರು..!!

ಮುಂಡಗೋಡ ತಾಲೂಕಿನಲ್ಲಿ ಎಲ್ಲೆಂದರಲ್ಲಿ ಮಟ್ಕಾ ದಂಧೆ..! “ಕ್ರಮ ಕೈಗೊಳ್ಳಿ ಸಾಹೇಬ್ರೇ” ಅಂತಾ ಎಸ್ಪಿಗೆ ದೂರು..!!

ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಮನೆ ಮಾತಾಗಿದೆ. ಹಳ್ಳಿ, ಹಳ್ಳಿಗಳಲ್ಲಿ ಹೆಜ್ಜೆಗೊಬ್ರು ಮಟ್ಕಾ ಬುಕ್ಕಿಗಳು ತಲೆ ಎತ್ತಿದ್ದಾರೆ, ಆದ್ರೆ ಇದನ್ನೇಲ್ಲ ಕಂಟ್ರೋಲ್ ಮಾಡಬೇಕಿದ್ದ ಪೊಲೀಸರು ಮಾತ್ರ ಏನೂ ಮಾಡದ ಸ್ಥಿತಿಯಲ್ಲಿದ್ದಾರೆ.. ಹಾಗಂತ, ನಾವು ಹೇಳ್ತಿಲ್ಲ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಂಡಗೋಡಿನ ಯುವ ಪಡೆ ಲಿಖಿತವಾಗಿ ದೂರು ನೀಡಿ, ಕ್ರಮಕ್ಕೆ ಆಗ್ರಹಿಸಿದೆ. ಯಸ್, ಮುಂಡಗೋಡ ಭಜರಂಗದಳದ ಕಾರ್ಯಕರ್ತ ಮಂಜುನಾಥ್ ಪವಾರ್ ಇಂತಹದ್ದೊಂದು ದೂರನ್ನು ಎಸ್ಪಿ ಸಾಹೇಬ್ರಿಗೆ ಸಲ್ಲಿಸಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಅನ್ನೋದು ಬಡ ಜನರ ಜೀವ...

Post
ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನ, ಹಾರ್ಡವೇರ್ ಅಂಗಡಿ ದೋಚಿದ ಖದೀಮರು..!

ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನ, ಹಾರ್ಡವೇರ್ ಅಂಗಡಿ ದೋಚಿದ ಖದೀಮರು..!

ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನವಾಗಿದೆ‌. ಹಾರ್ಡವೇರ್ ಅಂಗಡಿಯ ಸೆಟರ್ಸ್ ಮುರಿದು ಕಳ್ಳರು ಕೈಚಳಕ ತೋರಿದ್ದಾರೆ. ಅಂಗಡಿಯಲ್ಲಿದ್ದ 15 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶಿರಸಿ ರಸ್ತೆಯ ಪೆಟ್ರೊಲ್ ಬಂಕ್ ಪಕ್ಕದಲ್ಲೇ ಇರುವ ಹಾರ್ಡವೇರ್ ಅಂಗಡಿಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಹಾರ್ಡವೇರ್ ಅಂಗಡಿಯ ಕೌಂಟರಿನಲ್ಲಿದ್ದ 15 ಸಾವಿರ ರೂ. ನಗದು ದೋಚಿಕೊಂಡು ಹೋಗಿದ್ದಾರೆ. ಮುಂಡಗೋಡ ಪೊಲೀಸರು ಯಥಾರೀತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿನ್ನೆಯಷ್ಟೇ ತಾಲೂಕಿನ ಮಳಗಿಯಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳ್ಳತನಕ್ಕೆ...

Post
ಅಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ..? ಇದು ನಿಜವಾ..?

ಅಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ..? ಇದು ನಿಜವಾ..?

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ ಅಂತಾ ತಿಳಿದು ಬಂದಿದೆ‌. ಇವತ್ತು ಗಾಂಧಿ ಜಯಂತಿ ಎಲ್ಲಿಯೂ ಮದ್ಯದ ಅಂಗಡಿಗಳನ್ನು ತೆರೆಯುವ ಹಾಗಿಲ್ಲ‌. ಆದ್ರೆ, ಅಗಡಿಯಲ್ಲಿ ಮಾತ್ರ ರಾಜಾರೋಶವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಹೀಗಾಗಿ, ಬಾತ್ಮಿ ತಿಳಿದು ಸ್ಥಳಕ್ಕೆ ಹೋಗಿದ್ದ ಪೊಲೀಸರಿಗೆ ಖಾತ್ರಿಯಾಗಿದೆ. ಮಾಲು ಸಮೇತ ಎಳೆದು ತಂದಿದ್ದಾರಂತೆ ಪೊಲೀಸ್ರು. ಹಾಗಂತ, ಮಾಹಿತಿಯಿದೆ, ಆದ್ರೆ, ಅಸಲು ಏನು ಅಂತಾ ಪೊಲೀಸರೇ ಹೇಳಬೇಕಿದೆ‌. ಅಷ್ಟಕ್ಕೂ ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಇರೋ ಈ...

Post
ಮಳಗಿಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ..! ಆತಂಕದಲ್ಲಿದ್ದಾರೆ ಜನ..!!

ಮಳಗಿಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ..! ಆತಂಕದಲ್ಲಿದ್ದಾರೆ ಜನ..!!

ಮುಂಡಗೋಡ: ಮಳಗಿಯಲ್ಲಿ ಕಳ್ಳರು ಮತ್ತೆ ಕೈಚಳಕ ತೋರಿದ್ದಾರೆ‌. ಇಲ್ಲಿ‌ನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು, ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ‌. ತಿಂಗಳಲ್ಲೇ ಇದು ಮಳಗಿಯಲ್ಲಿ ಮೂರನೇ ಕಳ್ಳತನದ ಪ್ರಕರಣವಾಗಿದೆ‌. ಹೀಗಾಗಿ, ಮಳಗಿಯಲ್ಲೇ ಠಾಣೆ ಇದ್ದರೂ ಅಲ್ಲಿನ ಪೊಲೀಸರು ಅದೇನು ಮಾಡ್ತಿದಾರೆ..? ಅನ್ನೋ ಪ್ರಶ್ನೆ ಎದುರಾಗಿದೆ‌. ನಿನ್ನೆ ತಡರಾತ್ರಿ, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಹಿಂಬದಿಯ ಸೆಟರ್ಸ್ ಮುರಿದು ಒಳ ನುಗ್ಗಿರೋ ಕಳ್ಳರು, ಎಲ್ಲೆಂದರಲ್ಲಿ ತಡಕಾಡಿದ್ದಾರೆ. ಆದ್ರೆ, ಅದೃಷ್ಟವಶಾತ್...

Post

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ..!

ಭಟ್ಕಳ- ಸಿಇಎನ್ ಪೊಲೀಸರು ಕಾರ್ಯಚರಣೆ‌ ನಡೆಸಿ, ಭಟ್ಕಳದ ರೈಲ್ವೇ ನಿಲ್ದಾಣದ ಬಳಿ, ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಗಾಂಜಾ ಸಮೇತ ಬಂಧಿಸಿದ್ದಾರೆ. ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ ಬಂಧಿತರು. ಬಂಧಿತ ಆರೋಪಿತರಿಂದ 560 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Post
ಅತ್ತಿವೇರಿ ಬಳಿ, ಬೈಕ್ ಸವಾರನ ಮೇಲೆ ಜಿಗಿದ ಜಿಂಕೆ, ಬೈಕ್ ನಿಂದ ಕೆಳಗೆ ಬಿದ್ದ ಸವಾರ ಗಂಭೀರ ಗಾಯ..!

ಅತ್ತಿವೇರಿ ಬಳಿ, ಬೈಕ್ ಸವಾರನ ಮೇಲೆ ಜಿಗಿದ ಜಿಂಕೆ, ಬೈಕ್ ನಿಂದ ಕೆಳಗೆ ಬಿದ್ದ ಸವಾರ ಗಂಭೀರ ಗಾಯ..!

ಮುಂಡಗೋಡ: ಜಿಂಕೆಯೊಂದು ಬೈಕ್ ಗೆ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಅತ್ತಿವೇರಿ ಪಕ್ಷಿಧಾಮದ ಹತ್ತಿರ ನಡೆದಿದೆ. ಮಾರುತಿ ರಾಮಣ್ಣ ಹುಲಿಹೊಂಡ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರ. ಈತ ಅತ್ತಿವೇರಿ ಪಕ್ಷಿಧಾಮದಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಇಂದು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬರುವ ವೇಳೆ, ಏಕಾಏಕಿ ಜಿಂಕೆ ಬೈಕ್ ಮೇಲೆಯೇ ಜಿಗಿದಿದೆ. ಪರಿಣಾಮ, ಬೈಕ್ ಸವಾರ ಮಾರುತಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾನೆ. ತಲೆಗೆ ಹಾಗೂ ಕೈಗೆ ಗಾಯವಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ...

Post
ಸಿದ್ದಾಪುರದಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ; ಒಂದು ಲಾರಿ ವಶಕ್ಕೆ, ಮೂವರ ಮೇಲೆ ಕೇಸ್..!

ಸಿದ್ದಾಪುರದಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ; ಒಂದು ಲಾರಿ ವಶಕ್ಕೆ, ಮೂವರ ಮೇಲೆ ಕೇಸ್..!

ಸಿದ್ದಾಪುರ: ಸಿದ್ದಾಪುರದಲ್ಲಿ ಅನ್ನಭಾಗ್ಯದ ಅಕ್ಕಿಗೆ ಕನ್ನ ಹಾಕಿದ್ದ ಮೂವರು ಲಾರಿ ಸಮೇತ ಸಿಕ್ಕಿಬಿದ್ದಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ತುಂಬಿ ಸಾಗಣೆ ಮಾಡುತ್ತಿದ್ದ ಲಾರಿ ವಶಕ್ಕೆ ಪಡೆಯಲಾಗಿದೆ‌. ಸಿದ್ದಾಪುರದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಅನ್ನಭಾಗ್ಯದ ಅಕ್ಕಿಯನ್ನು ಸಿದ್ದಾಪುರ ಪಟ್ಟಣದ ಭಗತ್ ಸಿಂಗ್ ವೃತ್ತದ ಬಳಿ, ತಹಶೀಲ್ದಾರ್ ನೇತೃತ್ವದ ತಂಡದಿಂದ ದಾಳಿ ಮಾಡಲಾಗಿದೆ. ಪರಿಣಾಮ, ಅಂದಾಜು 1,73,952 ರೂಪಾಯಿ ಮೌಲ್ಯದ, 50 ಕೆಜಿ ತೂಕದ 163 ಚೀಲದ, 81.40 ಕ್ವಿಂಟಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ‌. ಜೊತೆಗೆ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನೂ...

Post
ಮುಂಡಗೋಡಿನಲ್ಲಿ ಪೋಟೋ ಸ್ಟುಡಿಯೋ, ಮೊಬೈಲ್ ಅಂಗಡಿ ದೋಚಿದ್ದ ಕಳ್ಳ ಅಂದರ್..!

ಮುಂಡಗೋಡಿನಲ್ಲಿ ಪೋಟೋ ಸ್ಟುಡಿಯೋ, ಮೊಬೈಲ್ ಅಂಗಡಿ ದೋಚಿದ್ದ ಕಳ್ಳ ಅಂದರ್..!

ಮುಂಡಗೋಡ: ಪಟ್ಟಣದಲ್ಲಿ ಸೆಪ್ಟೆಂಬರ್ 3 ರ ರಾತ್ರಿ ನಡೆದಿದ್ದ , ಪೋಟೊ ಸ್ಟುಡಿಯೋ ಹಾಗೂ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣದ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಹಾಳಬಾವಿಕೇರಿಯ ಇಮಾಮಸಾಬ ದಾವಲಸಾಬ ಅಲ್ಲಿಬಾಯಿ (21) ಎಂಬುವವನೇ ಕಳ್ಳತನದ ಆರೋಪಿಯಾಗಿದ್ದಾನೆ. ಬಂಧಿತ ಅಂತರ್ ಜಿಲ್ಲಾ ಕಳ್ಳನಿಂದ ಪೇನಾಸಾನಿಕ್ ಎ.ಜಿ.ಎಸ್.ಸಿ-90 ವಿಡಿಯೋ ಕ್ಯಾಮರಾ, ನಿಕಾನ್ ಡಿ- 3500 ಡಿ.ಎಸ್.ಎಲ್.ಆರ್ ಫೋಟೋ ಕ್ಯಾಮರಾ, 20 ಮೊಬೈಲ್ ಗಳು ಹಾಗೂ ಮೊಬೈಲ್ ನ ಬಿಡಿ ಭಾಗಗಳು ಸೇರಿ, ಸುಮಾರು...

Post
ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ದಾವಣಗೇರೆಯಲ್ಲಿ ಮನಕಲುಕುವ ದೃಷ್ಯ..!

ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ದಾವಣಗೇರೆಯಲ್ಲಿ ಮನಕಲುಕುವ ದೃಷ್ಯ..!

ಬೆಂಗಳೂರು ಆತ್ಮಹತ್ಯೆ ಘಟನೆ ಮಾಸುವ ಮುನ್ನವೆ ದಾವಣಗೆರೆಯಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿದ್ದಾರೆ. ದಾವಣಗೆರೆಯ ಭಾರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ ಘಟನೆ ನಡೆದಿದ್ದು ಕೃಷ್ಣಾನಾಯ್ಕ್ (35)ಆತನ ಪತ್ನಿ ಸರಸ್ವತಿ ಬಾಯಿ, ಎಂಟು ವರ್ಷದ ಮಗು ಧ್ರುವ ಮೃತಪಟ್ಟವರು. ಭಾರತ್ ಕಾಲೋನಿ ಶೇಖರಪ್ಪ ಬಿ ಬ್ಲಾಕ್ ನಲ್ಲಿ ವಾಸವಾಗಿದ್ದ ಕೃಷ್ಣನಾಯ್ಕ್ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸರಸ್ವತಿ ಬಾಯಿ ಮೂಲವ್ಯಾಧಿಯಿಂದ ಬಳಲುತ್ತಿದ್ದರು. ಕೃಷ್ಣಾನಾಯ್ಕ್ ರಿಗೆ ಸಹ...

Post
ಸಿನಿಮೀಯ ರೀತಿಯಲ್ಲಿ ಕಳ್ಳನ ಕೈಚಳಕ, ಜ್ಯುವೇಲ್ಲರಿ ಮಾಲೀಕನಿಂದ ಚಿನ್ನದ ಸರ ಕಸಿದು ಪರಾರಿ..!

ಸಿನಿಮೀಯ ರೀತಿಯಲ್ಲಿ ಕಳ್ಳನ ಕೈಚಳಕ, ಜ್ಯುವೇಲ್ಲರಿ ಮಾಲೀಕನಿಂದ ಚಿನ್ನದ ಸರ ಕಸಿದು ಪರಾರಿ..!

ಶಿರಸಿ: ಸಿನಿಮೀಯ ರೀತಿಯಲ್ಲಿ ಚಿನ್ನದ ಸರ ಅಪಹರಣ ಮಾಡಿದ ಘಟನೆ, ಶಿರಸಿಯ ರತ್ನದೀಪ ಜ್ಯುವೆಲರ್ಸ್ ನಲ್ಲಿ ನಡೆದಿದೆ. ಚಿನ್ನದ ಸರ ಖರೀದಿಯ ನೆಪದಲ್ಲಿ ಅಂಗಡಿಗೆ ಗ್ರಾಹಕನ ಸೋಗಿನಲ್ಲಿ ಬಂದಿದ್ದ ವ್ಯಕ್ತಿ, ಚಿನ್ನದ ಸರ ತೋರಿಸುವಂತೆ ಕೇಳಿದ್ದಾನೆ. ಅಂಗಡಿಯಾತ ಚಿನ್ನದ ಸರ ತೋರಿಸುತ್ತಿದ್ದಾಗಲೇ ಸರ ಕಸಿದುಕೊಂಡ ಕಳ್ಳ ಕಾಲ್ಕಿತ್ತಿದ್ದಾನೆ. ಚಿನ್ನದ ಸರದೊಂದಿಗೆ ಕಾರಿನಲ್ಲಿ ಪರಾರಿಯಾಗಿದ್ದಾನೆ. ಕಳ್ಳನ ಸಂಪೂರ್ಣ ಕೃತ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಚಾಲಾಕಿ ಕಳ್ಳನಿಗಾಗಿ ಬಲೆ ಬೀಸಿದ್ದಾರೆ.

error: Content is protected !!