Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಪೊಲೀಸರ ವಶಕ್ಕೆ..!

ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಪೊಲೀಸರ ವಶಕ್ಕೆ..!

ಭಟ್ಕಳ: ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಪೊಲೀಸರಿಂದ ಮಹಿಳೆ ಬಂಧನವಾಗಿದೆ. ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆಯಾಗಿದ್ದು ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್‌ ಎಂಬುವನನ್ನು 8 ವರ್ಷದ ಹಿಂದೆ ದುಬೈನಲ್ಲಿವಿವಾಹವಾಗಿದ್ದ ಮಹಿಳೆ, 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಆನಂತರ, 2015ರಲ್ಲಿ ಕಳ್ಳಮಾರ್ಗದ ಮೂಲಕ ಯಾವುದೇ ದಾಖಲೆ ನೀಡದೇ ಅಕ್ರಮವಾಗಿ ಭಾರತದೊಳಕ್ಕೆ ಪ್ರವೇಶ ಮಾಡಿದ್ದಳು. ಭಟ್ಕಳದ ನವಾಯತ...

Post
ಉದಾಸಿ ಅಂತಿಮ ದರ್ಶನದ ವೇಳೆ ಮೊಬೈಲ್ ಕಳ್ಳರ ಕೈಚಳಕ: ಸಿಕ್ಕಿಬಿದ್ದು ಒದೆ ತಿಂದ ಯುವಕ.‌!

ಉದಾಸಿ ಅಂತಿಮ ದರ್ಶನದ ವೇಳೆ ಮೊಬೈಲ್ ಕಳ್ಳರ ಕೈಚಳಕ: ಸಿಕ್ಕಿಬಿದ್ದು ಒದೆ ತಿಂದ ಯುವಕ.‌!

ಹಾನಗಲ್: ಬಿಜೆಪಿ ಹಿರಿಯ ಶಾಸಕ ಸಿ.ಎಂ. ಉದಾಸಿ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ. ಈ ವೇಳೆ ಜೇಬುಗಳ್ಳರು ಕೈ ಚಳಕ ತೋರಿದ್ದಾರೆ. ಎಷ್ಟೊ ಜನರ ಮೊಬೈಲ್ ಎಗರಿಸಿದ್ದಾರೆ. ಇನ್ನು ಹೀಗೆ ಜೇಬಿಗೆ ಕತ್ತರಿ ಹಾಕುತ್ತಿರುವಾಗಲೇ, ರೆಡ್ ಹ್ಯಾಂಡ್ ಆಗಿ ಓರ್ವ ಖತರ್ನಾಕ ಜೇಬುಗಳ್ಳ ತಗಲಾಕ್ಕೊಂಡಿದ್ದ‌. ಜೇಬು ಕತ್ತರಿಸುವಾಗಲೆ ಕಳ್ಳನನ್ನು ಹಿಡಿದು ಸಾರ್ವಜನಿಕರು ಛಳಿ ಬಿಡಿಸಿದ್ದಾರೆ. ನಂತರ ಪೊಲೀಸರಿಗೆ ಕಳ್ಳನನ್ನು ಒಪ್ಪಿಸಿದ್ದಾರೆ. ಹಾನಗಲ್ ಪೊಲೀಸ್ರು ಕಳ್ಳನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಜನಸಂದಣಿಯಲ್ಲಿ ಜೇಬಿಗೆ ಕತ್ತರಿ ಹಾಕಿಸಿಕೊಂಡವರ ಗೋಳು...

Post

ಮಳಗಿ: ಮೀನು ಹಿಡಿಯಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವು..!

ಮುಂಡಗೋಡ: ತಾಲೂಕಿನ ಮಳಗಿಯಲ್ಲಿ, ಮೀನು ಹಿಡಿಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟ‌ನೆ ನಡೆದಿದೆ. ಉಮೇಶ್ ಶಿವಪ್ಪ ಬೋವಿ(25) ಮೃತಪಟ್ಟ ಯುವಕನಾಗಿದ್ದಾನೆ. ಮಳಗಿ ಗ್ರಾಮದ ಸಿದ್ದಾಪುರ ಓಣಿಯ ನಿವಾಸಿಯಾಗಿರೊ ಯುವಕ ಶನಿವಾರ ಮದ್ಯಾನ ಮೀನು ಹಿಡಿಯಲೆಂದು ಕೆರೆಗೆ ಹೋಗಿದ್ದ. ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಅಂತಾ ಸಂಬಂಧಿ ಜಯಮ್ಮ ಹನ್ಮಂತ ಬೋವಿ ಎಂಬುವವರು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Post

ಯಲ್ಲಾಪುರ: ಬಾವಿಗೆ ಹಾರಿದ ಮಾನಸಿಕ ಅಸ್ವಸ್ಥೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ..!

ಯಲ್ಲಾಪುರ: ಬಾವಿಗೆ ಬಿದ್ದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳನ್ನು ರಕ್ಷಣೆ ಮಾಡಿದ ಘಟನೆ ಯಲ್ಲಾಪುರ ಪಟ್ಟಣದ ಉದ್ಯಮನಗರದಲ್ಲಿ ನಡೆದಿದೆ. ಸುನಂದ ಪಟಗಾರ್(34) ಅನ್ನೋ ಮಹಿಳೆಯೇ ರಕ್ಷಣೆಗೊಳಗಾದವಳಾಗಿದ್ದಾಳೆ. ಇಂದು ಬೆಳಗ್ಗೆ ಮನೆಯಿಂದ ಹೊರಬಂದ ಮಹಿಳೆ ಏಕಾ ಏಕಿ ಸಾರ್ವಜನಿಕ ಬಾವಿಗೆ ಹಾರಿದ್ದಾಳೆ. ಈ ಸಂದರ್ಭದಲ್ಲಿ ಅದೃಷ್ಟವಶಾತ್ ಬಾವಿಯಲ್ಲಿ ಆಳವಿಲ್ಲದೇ ಇದ್ದಿದ್ದರಿಂದ ಆಕೆ ಬದುಕುಳಿದಿದ್ದು ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಬಾವಿಯಲ್ಲೇ ಚೀರಾಡಿದ್ದಾಳೆ. ಈ ವೇಳೆ ಮನೆಯಲ್ಲಿ ಈಕೆ ಇರದುದ್ದನ್ನು ಗಮನಿಸಿ ಹೊರಬಂದು ನೋಡಿದಾಗ, ಈಕೆ ಚೀರಾಡುವ ಧ್ವನಿ...

Post
ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!

ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!

ಹುಬ್ಬಳ್ಳಿ: ನಗರದ ಗದಗ ರಿಂಗ್ ರೋಡಲ್ಲಿ ಎರಡು ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ, ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಹುಬ್ಬಳ್ಳಿ ಸೆಟ್ಲಮೆಂಟ್ ಗಂಗಾಧರನಗರದ ವಿಶಾಲ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದ್ದು, ಪಲ್ಸರ್ ಬೈಕಿನಲ್ಲಿ ಹೋಗಿ ವಾಹನ ಚಾಲಕರನ್ನು ಬೆದರಿಕೆ ಹಾಕಿ ಹಣ ದೋಚುತ್ತಿದ್ದರು ಎನ್ನಲಾಗಿದೆ. ರಿಂಗ್ ರೋಡಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ ಎಂಬುವವರ ಟಾಟಾ ಏಸ್ ವಾಹನಗಳನ್ನ ನಿಲ್ಲಿಸಿ,...

Post

ಅಸಲಿ ನೋಟಿಗೆ ಕೋಟಾನೋಟು ಮಾರಾಟ ಜಾಲ: 6 ಜನ ದಂಧೆಕೋರರ ಬಂಧನ..!

ದಾಂಡೇಲಿ: ಅಸಲಿ ನೋಟು ಪಡೆದು ನಕಲಿ ನೋಟುಗಳನ್ನು ಮಾರಾಟ ಮಾಡುತ್ತಿದ್ದ ಖತರ್ನಾಕ ಕೋಟಾ ನೋಟು ಖದೀಮರ ಜಾಲವನ್ನು ದಾಂಡೇಲಿ ಪೊಲೀಸ್ರು ಹೆಡೆಮುರಿ ಕಟ್ಟಿದ್ದಾರೆ. ಅಸಲಿ ನೋಟು ಪಡೆದು , ನಕಲಿ ನೋಟು ನೀಡುತ್ತಿದ್ದ ವೇಳೆಯೇ ದಾಂಡೇಲಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.‌ ದಾಳಿ ವೇಳೆ ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಮಹಾರಾಷ್ಟ್ರದ...

Post
ಮುಂಡಗೋಡ: ಹೊಟ್ಟೆನೋವು ತಾಳದೆ ಕಾಡಿನಲ್ಲಿ ವ್ಯಕ್ತಿ ನೇಣಿಗೆ ಶರಣು..!

ಮುಂಡಗೋಡ: ಹೊಟ್ಟೆನೋವು ತಾಳದೆ ಕಾಡಿನಲ್ಲಿ ವ್ಯಕ್ತಿ ನೇಣಿಗೆ ಶರಣು..!

ಮುಂಡಗೋಡ: ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೋರ್ವ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮುಂಡಗೋಡ-ಹುಬ್ಬಳ್ಳಿ ರಸ್ತೆಯಲ್ಲಿ ನಡೆದಿದೆ. ಮುಂಡಗೋಡ ಗಣೇಶ ನಗರದ, ಬಸವರಾಜ್ ಬಾಲಪ್ಪ ಗೌಳಿ(36) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಹೈನುಗಾರಿಕೆ ಮಾಡುತ್ತಿದ್ದ ವ್ಯಕ್ತಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ, ಹೀಗಾಗಿ ಸಾಕಷ್ಟು ಚಿಕಿತ್ಸೆ ನೀಡಿದರೂ ನೋವು ಕಡಿಮೆಯಾಗಿರಲಿಲ್ಲ. ಹೀಗಾಗಿ, ಅದನ್ನೇ ಮನಸಿಗೆ ಹಚ್ಚಿಕೊಂಡು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಮೃತನ ಸಹೋದರ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Post
ಅಕ್ರಮ ಮದ್ಯ ಕುಡಿಯಲು ಅವಕಾಶ, ಚಹಾ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ..!

ಅಕ್ರಮ ಮದ್ಯ ಕುಡಿಯಲು ಅವಕಾಶ, ಚಹಾ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ..!

ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ನ್ಯಾಸರ್ಗಿ ಕ್ರಾಸ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿ, ತನ್ನ ಅಂಗಡಿಯಲ್ಲೆ ಮದ್ಯ ಕುಡಿಯಲು ಅನುವು ಮಾಡಿಕೊಟ್ಟು ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಚಣಕಿ ಗ್ರಾಮದ ನಾಗರಾಜ್ ದೊಡ್ಡ ಹನ್ಮಂತಪ್ಪ ವಡ್ಡರ ಎಂಬುವವನೇ ಆರೋಪಿಯಾಗಿದ್ದಾನೆ.. ಈತ ತನ್ನ ಚಹಾ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ, ಅಲ್ಲದೇ ಅಲ್ಲಿಯೇ ಮಧ್ಯ ಕುಡಿಯಲು ಜನರಿಗೆ ಅವಕಾಶ ನೀಡುತ್ತಿದ್ದ. ಹೀಗಾಗಿ ಮುಂಡಗೋಡ ಕ್ರೈಂ ಪಿಎಸ್...

Post
ಇಂದೂರು ಪ್ರಾಥಮಿಕ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ: CCTV ಕ್ಯಾಮೆರಾ ಕದ್ದೊಯ್ದ ಕಳ್ಳರು..!

ಇಂದೂರು ಪ್ರಾಥಮಿಕ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ: CCTV ಕ್ಯಾಮೆರಾ ಕದ್ದೊಯ್ದ ಕಳ್ಳರು..!

ಮುಂಡಗೋಡ: ತಾಲೂಕಿನ ಇಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಇಂದೂರು ಗ್ರಾಮವನ್ನು ವಿಶೇಷ ಕಂಟೈನ್ ಮೆಂಟ್ ವಲಯವನ್ನಾಗಿ ಮಾಡಿ, ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಹೀಗಾಗಿ ಇದೇ ಸಮಯವನ್ನೇ ಉಪಯೋಗಿಸಿಕೊಂಡಿರೋ ಕಳ್ಳರು, ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ.. ಅಂದಹಾಗೆ, ಶಾಲೆಯ ವರಾಂಡದಲ್ಲಿ ಹಾಕಲಾಗಿದ್ದ ಎರಡು CCTV ಕ್ಯಾಮೆರಾಗಳನ್ನು ಕಿತ್ತೊಯ್ದಿರೋ ಕಳ್ಳರು, ಶಾಲೆಯ 5 ಕೊಠಡಿಗಳ ಬಾಗಿಲಿಗೆ ಹಾಕಿದ್ದ ಬೀಗ ಮುರಿದಿದ್ದಾರೆ, ಅಲ್ದೆ ಬಾತ್ ರೂಮಿನ ಬೀಗವನ್ನೂ ಮುರಿದಿದ್ದಾರೆ. ಆದ್ರೆ...

Post
ಮುಂಡಗೋಡಿನಲ್ಲಿ ಆನ್ಲೈನ್ ವಂಚನೆ: RFO ಗೆ 72 ಸಾವಿರ ರೂ. ಪಂಗನಾಮ..!!

ಮುಂಡಗೋಡಿನಲ್ಲಿ ಆನ್ಲೈನ್ ವಂಚನೆ: RFO ಗೆ 72 ಸಾವಿರ ರೂ. ಪಂಗನಾಮ..!!

ಮುಂಡಗೋಡ: ಪಟ್ಟಣದ ವಲಯ ಅರಣ್ಯಾಧಿಕಾರಿ ಪರಮೇಶ್ವರ ದಾಸಪ್ಪ ಎಂಬುವವರಿಗೆ BSNL ಸಿಮ್ ಬ್ಲಾಕ್ ಆಗತ್ತೆ ಅಂತಾ ಸಂದೇಶ ಕಳುಹಿಸಿ, ಆನ್ಲೈನ್ ಖದೀಮರು ಬರೋಬ್ಬರಿ 72 ಸಾವಿರ ರೂಪಾಯಿ ವಂಚಿಸಿರೋ ಘಟನೆ ನಡೆದಿದೆ. ಗುರುವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಈ ಕುರಿತು ವಲಯ ಅರಣ್ಯಾಧಿಕಾರಿ, ಪರಮೇಶ್ವರ ದಾಸಪ್ಪ ದೂರು ದಾಖಲಿಸಿದ್ದಾರೆ.. ಹಿಂದಿ ಭಾಷೆಯಲ್ಲಿ ಸಂದೇಶ ಕಳುಹಿಸಿದ್ದ ವ್ಯಕ್ತಿ ಸದ್ಯದಲ್ಲಿಯೇ ನಿಮ್ಮ ಸಿಮ್ ಬ್ಲಾಕ್ ಆಗತ್ತೆ ಹೀಗಾಗಿ ಅಪಡೇಟ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ನಂತ್ರ ಕ್ವಿಕ್ ಆ್ಯಪ್ ಡೌನ್ ಲೋಡ್ ಮಾಡಿಸಿ...

error: Content is protected !!