ಕಾರವಾರ ಜಿಲ್ಲೆಯಲ್ಲಿ ಡಿಸೆಂಬರ್ 31 ರಂದು ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ರೀತಿಯಲ್ಲಿ ಹೊಸ ವರ್ಷದ ಆಚರಣೆಯನ್ನು ಮಾಡುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಡಿಸೆಂಬರ್ 31 ರಂದು ಸಂಜೆ 6 ಗಂಟೆಯ ನಂತರ ಯಾರೂ ಕೂಡಾ ಸಮುದ್ರಕ್ಕೆ ಇಳಿಯಬಾರದು, ಬೀಚ್ಗಳಲ್ಲಿ ಯಾವುದೇ ರೀತಿಯ ಸಮಾರಂಭಗಳನ್ನು ಆಯೋಜಿಸಲು ಯಾರಿಗೂ ಅನುಮತಿಯನ್ನು ನೀಡಿರುವುದಿಲ್ಲ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ರಾತ್ರಿ 12.30 ರ ನಂತರ ಬೀಚ್ ಗಳಲ್ಲಿ ಯಾರೂ...
Top Stories
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
Category: ಉತ್ತರ ಕನ್ನಡ
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭಾರೀ ಬೆಂಕಿ ಅವಘಡವಾಗಿದೆ. ಮನೆ ಮುಂದೆ ನಿಲ್ಲಿಸಿಟ್ಟಿದ್ದ ಆಟೋದ ಸಿಲಿಂಡರ್ ಸ್ಪೋಟವಾಗಿ ಬೆಂಕಿಯಿಂದ ಹೊತ್ತಿಉರಿದಿದೆ. ಮನೆಗೂ ಬೆಂಕಿ ತಗುಲಿ ಹಾನಿಯಾಗಿದೆ. ವೀರಭದ್ರಪ್ಪ ಹಡಪದ್ ಎಂಬುವವರಿಗೆ ಸೇರಿದ ಆಟೋ ರಿಕ್ಷಾಗೆ ಮಂಗಳವಾರ ಬೆಳಿಗ್ಗೆ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ತಗುಲಿದೆ. ಬೆಂಕಿಯ ರಭಸಕ್ಕೆ ಧಗ ಧಗನೇ ಹೊತ್ತಿ ಉರಿದಿದೆ, ಮನೆಗೂ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಣಾಪಾಯಗಳು ಸಂಭವಿಸಿಲ್ಲ.
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ರಾದ್ಧಾಂತಗಳು ಸದ್ಯಕ್ಕೆ ನಿಲ್ಲುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಇನ್ನೇನು ನಾಡಿದ್ದು ಡಿಸೆಂಬರ್ 26 ರಂದು ದಲಿತ ಹಾಗೂ ರೈತ ಮುಖಂಡ ಚಿದಾನಂದ ಹರಿಜನ ಧರಣಿ ಸತ್ಯಾಗ್ರಹ ನಡೆಸುವ ಘೋಷಣೆ ಮಾಡಿದ್ದಾರೆ. ಇತ್ತಿಚೆಗಷ್ಟೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಅಮಾನತ್ತುಗೊಂಡಿರೋ ಶಿಕ್ಷಕ ದಾಸಪ್ಪ ಎಂಬುವವರ ಪರವಾಗಿ ಸತ್ಯಾಗ್ರಹ ಮಾಡಲು ಚಿದಾನಂದ ಹರಿಜನ್ ಮುಂದಾಗಿದ್ದು ಚಿಗಳ್ಳಿ ಕೆಲ ಗ್ರಾಮಸ್ಥರು ಹಾಗೂ SDMC ಅಧ್ಯಕ್ಷರು, ಸದಸ್ಯರಿಗೆ ಫೋಷಕರಿಗೆ ಬೇಸರ ತರಿಸಿದೆ. ಹೀಗಾಗಿ, ನಿನ್ನೆ ಅವ್ರೇಲ್ಲ ಸೇರಿಕೊಂಡು...
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಮುಂಡಗೋಡ ತಾಲೂಕಿನ ಇಂದೂರ ವಿವಿದ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನಡೆಯಿತು. ಶಾಸಕ ಶಿವರಾಮ್ ಹೆಬ್ಬಾರ್ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ್ರು. ಈ ವೇಳೆ ಈ ಹಿಂದಿನ ಅವಧಿಯಲ್ಲಿ ಸಹಕಾರ ಸಂಘದ ಅಧ್ಯಕ್ಷರುಗಳಾಗಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನಿಸಲಾಯಿತು. ಅಲ್ದೆ, ಆಡಳಿತ ಸಮಿತಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ರವರಿಗೆ ಸನ್ಮಾನಿಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಇಂದೂರ ಸೊಸೈಟಿಯ ಅಧ್ಯಕ್ಷ ಯಮನಪ್ಪ ಮಾರಂಬೀಡ, ಕೆಡಿಸಿಸಿ ನಿರ್ದೇಶಕ ಎಚ್.ಎಂ ನಾಯ್ಕ, ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ...
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Car Accident; ಮುಂಡಗೋಡ ತಾಲೂಕಿನ ಗಡಿಭಾಗ ತಡಸ ತಾಯವ್ವನ ದೇವಸ್ಥಾನದ ಸಮೀಪ ಭೀಕರ ಕಾರು ಅಪಘಾತವಾಗಿದೆ. ಪರಿಣಾಮ ಮುಂಡಗೋಡ ತಹಶೀಲ್ದಾರ ಕಚೇರಿ ಓರ್ವ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಹಶೀಲ್ದಾರ ಕಚೇರಿ ಮೂವರು ಗ್ರಾಮ ಲೆಕ್ಕಾಧಿಕಾರಿಗಳಾದ ಗೋಪಾಲ್ ಎಂ, ಗೋವಿಂದ್ ರಾಠೋಡ್ ಹಾಗೂ ಮಂಜುನಾಥ್ ಎಂಬುವವರು ಪ್ರಯಾಣಿಸುತ್ತಿದ್ದ ಕಾರು, ನಿನ್ನೆ ಸಂಜೆ ಹುಬ್ಬಳ್ಳಿಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ ನಿನ್ನೆ ರಾತ್ರಿ ನಡೆದಿರೋ ದುರಂತ ಇದಾಗಿದ್ದು,...
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಮುಂಡಗೋಡ ತಾಲೂಕಿನ ಗಡಿಭಾಗ, ತಡಸ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ಚಿರತೆ ಪ್ರತ್ಯಕ್ಷವಾಗಿದೆ. ರಾಜಾರೋಷವಾಗಿ ರಸ್ತೆಯ ಬದಿಯ ಕಾಡಲ್ಲಿ ಕುಳಿತಿರೋ ಚಿರತೆ ಕಂಡು ಜನ ಅಚ್ಚರಿಗೊಂಡಿದ್ದಾರೆ. ಚಿರತೆ ಕಾಣಿಸುತ್ತಿದ್ದಂತೆ ತಮ್ಮ ಮೊಬೈಲ್ ನಲ್ಲಿ ಚಿರತೆಯ ದೃಷ್ಯ ಸೆರೆಹಿಡಿದಿದ್ದಾರೆ. ಅಂದಹಾಗೆ, ಮುಂಡಗೋಡ ಹಾಗೂ ಹಾವೇರಿ ಜಿಲ್ಲೆಯ ಗಡಿಭಾಗ ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷವಾಗಿದ್ದು, ಮುಂಡಗೋಡಿನ ವಿಠ್ಠಲ್ ಬಾಳಂಬೀಡ ಹಾಗೂ ಗುಡ್ಡಪ್ಪ ಕಾತೂರ್ ಚಿರತೆ ಕಣ್ಣಿಗೆ ಬೀಳುತ್ತಿದ್ದಂತೆ, ತಮ್ಮ ಮೊಬೈಲ್ ನಲ್ಲಿ ದೃಷ್ಯ ಸೆರೆ ಹಿಡಿದಿದ್ದಾರೆ. ಅಲ್ಲದೆ...
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
Forest Smugglers; ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬಾಳೆಕೊಪ್ಪ (ಕರ್ಕಲ ಜಡ್ಡಿ) ಹತ್ತಿರ ಎರಡು ಬೈಕ್ ನಲ್ಲಿ ಜಿಂಕೆ ಚರ್ಮ ಹಾಗೂ ಕಾಡು ಹಂದಿಯ ಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಹೆಡೆಮುರಿಕಟ್ಟಿದ್ದಾರೆ. ಬಾಳೆಕೊಪ್ಪದ ಕನಕಪ್ಪ ದುರ್ಗಪ್ಪ ಮಾದರ್, ಪರಶುರಾಮ್ ಕನಕಪ್ಪ ಮಾದರ್, ಸೊರಬ ತಾಲೂಕು ಕೋಡಿಕೊಪ್ಪದ ಸುರೇಶ ಬಿನ್ ದೇವಪ್ಪ, ಉಮೇಶ್ ಬಿನ್ ಗುಡ್ಡಪ್ಪ, ಶಿವಪುತ್ರಪ್ಪ ಬಿನ್ ಹನುಮಂತಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಎರಡು ಬೈಕ್, ಒಂದು ಜಿಂಕೆ ಚರ್ಮ,...
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
FIRE ACCIDENT; ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಖಾದರಲಿಂಗ ದೇವಸ್ಥಾನದ ಸಮೀಪ ಪರ್ನಿಚರ್ ತಯಾರಿಸುವ ಅಡ್ಡೆಗೆ ಬೆಂಕಿ ತಗುಲಿ ಭಾರೀ ಅನಾಹುತವಾಗಿದೆ. ಬೆಳಿಗ್ಗೆ ಸುಮಾರು 4 ಗಂಟೆಯಷ್ಟೊತ್ತಿಗೆ ಬೆಂಕಿ ತಗುಲಿದ್ದು ಇಡೀ ಕಟ್ಟಿಗೆಯ ಅಡ್ಡೆಯೇ ಸುಟ್ಟು ಕರಕಲಾಗಿದೆ. ಮಹ್ಮದ್ ಯೂನುಸ್ ಹೊಸಕೊಪ್ಪ ಎಂಬುವವರಿಗೆ ಸೇರಿದ ಪರ್ನಿಚರ್ ಅಡ್ಡೆ ಇದಾಗಿದ್ದು, ಬೆಂಕಿ ಅನಾಹುತದಲ್ಲಿ ಏನಿಲ್ಲವೆಂದರೂ ಅಂದಾಜು 50 ಲಕ್ಷ ಮೌಲ್ಯದ ಬೆಲೆಬಾಳುವ ಪರ್ನಿಚರಗಳು, ಕಟ್ಟಿಗೆಗಳು, ಮಷಿನ್ ಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಬೆಂಕಿ ಹೇಗೆ ತಗುಲಿದೆ ಅನ್ನೋದು...
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
Transfer of Sirsi AC; ಶಿರಸಿ ಉಪವಿಭಾಗಾಧಿಕಾರಿ ಕಾವ್ಯಾರಾಣಿಯವರನ್ಜು ಸರ್ಕಾರ ವಾರ್ಗಾವಣೆ ಮಾಡಿದೆ. ಅಸಲು, ಕಾವ್ಯಾರಾಣಿಯವರು ಬಂದು ಇನ್ನೂ ಎರಡು ವರ್ಷವಾಗಿಲ್ಲ, ಅವಧಿಗೂ ಮುಂಚೆಯ ಏಕಾಏಕಿ ವರ್ಗಾವಣೆ ಮಾಡಿರೋದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಡಗೋಡಿನ ಬಂಜಾರಾ ಸಮಾಜದ ಮುಖಂಡ ಹಾಗೂ ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ ಎಸಿಯವರ ವರ್ಗಾವಣೆಯನ್ನು ಖಂಡಿಸಿದ್ದಾರೆ. ಶಿರಸಿ ವಿಭಾಗದಲ್ಲಿ ಎಸಿ ಕಾವ್ಯಾರಾಣಿಯವರು ಒಳ್ಳೆಯ ಕೆಲಸ ಮಾಡುತ್ತಿದ್ದರು. ಹಿಂದುಳಿದವರ, ಬಡವರ ಪರವಾಗಿ ಸಾಲಷ್ಟು ಕೆಲಸ ಮಾಡುತ್ತಿದ್ದರು. ಅದೇಷ್ಟೇ ಹೊತ್ತಿನಲ್ಲಿ ಸಮಸ್ಯೆ ಹೊತ್ತು ಹೋದ್ರೂ...
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Accused Escaped; ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅದೇನಾಗಿದೆಯೋ ಒಂದೂ ಅರ್ಥ ಆಗ್ತಿಲ್ಲ. ಶ್ರೀಗಂಧ ಸಿಕ್ಕ ಪ್ರಕರಣದಲ್ಲಿ ಆರೋಪಿಯಾಗಿದ್ದವ ಖುದ್ದಾಗಿ ಕಚೇರಿಗೆ ಬಂದರೂ ಆತನನ್ನು ವಶಕ್ಕೆ ಪಡೆಯದೇ ಉಧಾರತೆ ತೋರಿದ್ದಾರೆ. ಹೀಗಾಗಿ, ಆತ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇದೇಲ್ಲ ಖುದ್ದು ಮುಂಡಗೋಡ RFO ಸಾಹೇಬರ ಕಣ್ಗಾವಲಿನಲ್ಲೇ ನಡೆದು ಹೋಗಿದೆ ಅನ್ನೋದು ಕಂಡವರ ಆರೋಪ. ಹೀಗಾಗಿ, ಈ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನ ಜನ ಅಡಿಕೆ ಎಲೆ ತಿಂದು.. ಛೀ.. ಅಂತಿದಾರೆ…! ಅಗಡಿಯಲ್ಲಿ ನಡೆದದ್ದು..! ಅಸಲಿಗೆ, ಮುಂಡಗೋಡ ತಾಲೂಕಿನ ಅಗಡಿಯಲ್ಲಿ...









