ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಪಾಳಾ ಸಮೀಪದ ರಾಮಾಪುರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 50 ಸಾವಿರ ಮೌಲ್ಯದ್ದು..!ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಯಲ್ಲಾಪುರ ರಸ್ತೆಯ ಮಹಮ್ಮದಅನಿಸ ಎಜಾಜ್ ಅಹ್ಮದ್ ಬೇಗ್ (20) ಎಂಬುವವ.. ಈತ ತನ್ನ ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಖಚಿತ ಮಾಹಿತಿ ಆಧಾರದಲ್ಲಿ...
Top Stories
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
Category: ಮುಂಡಗೋಡ ಸುದ್ದಿ
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಷ್ಟರು ನೀಚ ಕೃತ್ಯ ಮಾಡಿದ್ದಾರೆ. ಮೀನು ಸಾಕಾಣಿಕೆ ಮಾಡಿದ್ದ ಕೆರೆಗೆ ವಿಷ ಬೆರೆಸಿ ಮೀನುಗಳ ಸಾವಿಗೆ ಕಾರಣರಾಗಿದ್ದಾರೆ. ನೂರಾರು ಮೀನುಗಳು ಹಂತಹಂತವಾಗಿ ಸಾವನ್ನಪ್ಪುತ್ತಿವೆ ಅನ್ನೊ ಮಾಹಿತಿ ಲಭ್ಯವಾಗಿದೆ. ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ ಸರ್ವೇ ನಂಬರ್ 49 ರಲ್ಲಿ ಘಟನೆ ನಡೆದಿದ್ದು, ಮೌಲಾಲಿ ಮಕಾಂದಾರ ಎನ್ನುವವರು ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪಡೆದಿದ್ದರು. ಆದ್ರೆ, ಈಗಾಗಲೇ ಮೀನುಗಳು ಒಂದು ಹಂತಕ್ಕೆ ಬೆಳೆದಿದ್ದಾಗಲೇ ದುರುಳರು ಕೆರೆಗೆ ವಿಷ ಹಾಕಿರೋ ಅನುಮಾನ...
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಮುಂಡಗೋಡ ತಾಲೂಕಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಾಳೆ ಮಂಗಳವಾರ ದಿ. 22 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಅಂತಾ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ ಮಾಹಿತಿ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ ಮುಂಡಗೋಡಿನ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಅಂತಾ ಅವ್ರು ಮಾಹಿತಿ ನೀಡಿದ್ದಾರೆ.
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ...
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ಮುಂಡಗೋಡ ತಾಲೂಕಿನ ಕೆಲವು ಕಡೆ ಸಂಜೆ ಭಾರಿ ಮಳೆ ಗಾಳಿಗೆ ಅವಾಂತರಗಳು ಸೃಷ್ಠಿಯಾಗಿವೆ. ಭಾರೀ ಮಳೆ ಗಾಳಿಗೆ ಶಿರಸಿ ರಸ್ತೆಯ ಸಾಲಗಾಂವ್ ಸಮೀಪ ಬೃಹತ್ ಮಾವಿನ ಮರ ರಸ್ತೆ ಮೇಲೆ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕಳೆದ ಒಂದು ಗಂಟೆಯಿಂದ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಮಳೆ ಗಾಳಿಗೆ ರಸ್ತೆ ಮೇಲೆಯೇ ಧರೆಗುರುಳಿರೋ ಮರದ ತೆರವು ಮಾಡಬೇಕಿದೆ. ರಸ್ತೆ ಸಂಚಾರ ಸುಗಮಗೊಳಿಸವೇಕಿದೆ ಅಂತಾ ವಾಹನ ಸವಾರರು ಪರದಾಡುತ್ತಿದ್ದಾರೆ.
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೊಂದು ವಿದ್ಯುತ್ ದುರಂತ ಸಂಭವಿಸಿದೆ. ಅನಧೀಕೃತವಾಗಿ ವಿದ್ಯುತ್ ಕಂಬಕ್ಕೆ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32)...
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು, ರಾಮನವಮಿ ಅಂಗವಾಗಿ ಸಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಹುಬ್ಬಳ್ಳಿಯ ಪ್ರತಿಷ್ಠಿತ ಸೆಕ್ಯೂರ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣಾ ಶಿಬಿರ ಏರ್ಪಡಿಸಿದ್ದರು. ಶ್ರೀರಾಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ಸನ್ಮಾನ ಮಾಡಲಾಯಿತು. ನಂತರ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಉಚಿತ ಆರೋಗ್ಯ, ಹೃದಯ ತಪಾಸಣೆ ನಡೆಸಲಾಯಿತು. ನೂರಾರು ಜನರ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ವೇಳೆ ನಂದಿಕಟ್ಟಾ ಗ್ರಾಮ...
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಮುಂಡಗೋಡ: ಪಟ್ಟಣದ ಗಾಂಧಿನಗರ ಸ್ಲಂ ಬೋರ್ಡ್ ಘೋಷಣೆಗೆ ಸಂಬಂಧಿಸಿದಂತೆ ಶನಿವಾರ ಜಂಟಿ ತನಿಖಾ ತಂಡಕ್ಕೆ ಗಾಂಧಿನಗರದ ನಿವಾಸಿಗಳು ಪರ-ವಿರೋಧ ಪ್ರತ್ಯೇಕ ವಾಗಿ ದಾಖಲೆ ಸಮೇತ ಮನವಿ ಸಲ್ಲಿಸಿದ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರದ ಇಪ್ಪತೈದು ಎಕರೆ ಪ್ರದೇಶದಲ್ಲಿ ಎಲ್ಲಾ ಮೂಲಸೌಕರ್ಯ ಇದ್ದರು ಸುಳ್ಳು ದಾಖಲೆ ನೀಡಿ ಸ್ಲಂ ಬೋರ್ಡ್ ಘೋಷಣೆ ಮಾಡಲಾಗಿದೆ. ಎಂದು ವೇಕಟೇಶ ಶಿರಾಲಿ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು ಈ ದೂರಿನ ಅನ್ವಯ ಜಿಲ್ಲಾ ಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ಸತ್ಯ ಶೋಧನಾ ವರದಿ ನೀಡುವಂತೆ...
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಮುಂಡಗೋಡ: ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಹೆಚ್ಚು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಅರಣ್ಯ ಬೆಳಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಖಾಂದೂ ಶನಿವಾರ ಹೇಳಿದ್ರು.. ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಕೂಲತೆಯಿದೆ ಆದರೆ ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳುತ್ತಿಲ್ಲ ಮುಂದಿನ...









