Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಭಾರೀ ಮಳೆ, ಹುಬ್ಬಳ್ಳಿ ರಸ್ತೆಯ ವಡಗಟ್ಟಾ, ಬಾಚಣಕಿ ಬಳಿ ರಸ್ತೆ ಮೇಲೆ ಹರಿದ ಮಳೆ ನೀರು, ಸಂಚಾರ ಅಸ್ತವ್ಯಸ್ತ!

ಭಾರೀ ಮಳೆ, ಹುಬ್ಬಳ್ಳಿ ರಸ್ತೆಯ ವಡಗಟ್ಟಾ, ಬಾಚಣಕಿ ಬಳಿ ರಸ್ತೆ ಮೇಲೆ ಹರಿದ ಮಳೆ ನೀರು, ಸಂಚಾರ ಅಸ್ತವ್ಯಸ್ತ!

ಮುಂಡಗೋಡ ತಾಲೂಕಿನ ಬಾಚಣಕಿ, ಅರಶಿಣಗೇರಿ, ಹುನಗುಂದ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಮಳೆಗೆ ರಸ್ತೆ ಮೇಲೆ ಮಳೆ ನೀರು ಹರಿದಿದೆ. ಕೆಲವು ಕಡೆ ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಶಿರಸಿ- ಹುಬ್ಬಳ್ಳಿ ರಸ್ತೆಯ ಬಾಚಣಕಿ ಡ್ಯಾಂ ಬಳಿ ರಸ್ತೆಯ ಮೇಲೆ ನೀರು ತುಂಬಿ ಜಲಾವೃತವಾಗಿದೆ. ಅಲ್ಲದೇ ವಡಗಟ್ಟಾ ಬಳಿಯೂ ರಸ್ತೆಯ ಮೇಲೆ ನೀರಿ ಹರಿದು ಸಂಚಾರಕ್ಕೆ ಅಡಚಣೆಯಾಗಿದೆ.  

Post
ಮುಂಡಗೋಡ ಬಸವನ ಹೊಂಡದಲ್ಲಿ ವ್ಯಕ್ತಿಯ ಶವ ಪತ್ತೆ, ಆತ್ಮಹತ್ಯೆ ಮಾಡಿಕೊಂಡನಾ ಕಂಬಾರಗಟ್ಟಿಯ ಶಿವಾಜಿ..?

ಮುಂಡಗೋಡ ಬಸವನ ಹೊಂಡದಲ್ಲಿ ವ್ಯಕ್ತಿಯ ಶವ ಪತ್ತೆ, ಆತ್ಮಹತ್ಯೆ ಮಾಡಿಕೊಂಡನಾ ಕಂಬಾರಗಟ್ಟಿಯ ಶಿವಾಜಿ..?

ಮುಂಡಗೋಡ ಪಟ್ಟಣದ ಬಸವನ ಹೊಂಡದಲ್ಲಿ ವ್ಯಕ್ತಿಯೋರ್ವನ ಶವ ದೊರೆತಿದೆ. ಬೆಳ್ಳಂ ಬೆಳಿಗ್ಗೆ ಹೊಂಡದಲ್ಲಿ ಶವ ತೇಲುತ್ತಿರುವುದನ್ನು ಕಂಡ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪಿಎಸ್ಐ ಪರಶುರಾಮ್ ಟೀಂ ಸ್ಥಳಕ್ಕೆ ಧಾವಿಸಿ ಶವ ಹೊರತೆಗೆದಿದ್ದಾರೆ‌. ಇನ್ನು ಹೊಂಡದಲ್ಲಿ ಪತ್ತೆಯಾಗಿರೋ ಶವ ಮುಂಡಗೋಡ ಪಟ್ಟಣದ ಕಂಬಾರಗಟ್ಟಿಯ ಶಿವಾಜಿ ಬಿಸೆಟ್ಟಿ (60) ಅಂತಾ ಗುರುತಿಸಲಾಗಿದೆ. ಯಾವುದೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತಾ ಶಂಕಿಸಲಾಗಿದೆ. ಸದ್ಯ ಶವ ಹೊರತೆಗೆಯಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.  

Post
ಶಿರಸಿ ಸಮೀಪ ಸ್ಕೂಟಿ, ಕಾರು ಅಪಘಾತ, ನಂದಿಗಟ್ಟಾ ಮೂಲದ ಗ್ರಾಪಂ ಕಾರ್ಯದರ್ಶಿ ದಾರುಣ ಸಾವು..!

ಶಿರಸಿ ಸಮೀಪ ಸ್ಕೂಟಿ, ಕಾರು ಅಪಘಾತ, ನಂದಿಗಟ್ಟಾ ಮೂಲದ ಗ್ರಾಪಂ ಕಾರ್ಯದರ್ಶಿ ದಾರುಣ ಸಾವು..!

ಮುಂಡಗೋಡ: ತಾಲೂಕಿನ ನಂದಿಗಟ್ಟಾದ ಮಾರುತಿ ರಾಧಾಪುರ ಅಪಘಾತದಲ್ಲಿ ಮೃತಪಟ್ಟಿದ್ದಾರೆ‌. ಶಿರಸಿ ಸಮೀಪದ ಕೋಳಿಗಾರ್ ಬಳಿ ನಡೆದ ಸ್ಕೂಟಿ ಹಾಗೂ ಕಾರ್ ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಶಿರಸಿ ತಾಲೂಕಿನ ಸಾಲ್ಕಣಿ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಾರುತಿ ರಾದಾಪುರ, ಗುರುವಾರ ಬೆಳಿಗ್ಗೆ ಕರ್ತವ್ಯಕ್ಕಾಗಿ ಆಫೀಸಿಗೆ ತೆರಳುತ್ತಿದ್ದ ವೇಳೆ, ಕೋಳಿಗಾರ ಸಮೀಪ ಸ್ಕೂಟಿ ಹಾಗು ಕಾರು ಮುಖಾಮುಕಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲು ರವಾನಿಸುವ ಸಂದರ್ಭದಲ್ಲೇ ದಾರಿ...

Post
ಗ್ರಾಮಕ್ಕೆ ಬಾರದ ಬಸ್, ಹುನಗುಂದ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ..!

ಗ್ರಾಮಕ್ಕೆ ಬಾರದ ಬಸ್, ಹುನಗುಂದ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ..!

ಕಳೆದ ಒಂದು ವಾರದಿಂದ ಮುಂಡಗೋಡ ತಾಲೂಕಿನ ಹುನಗುಂದಕ್ಕೆ ಸಾರಿಗೆ ಬಸ್ ಸಂಚಾರ ಬಹುತೇಕ ಸ್ಥಗಿತವಾಗಿದೆ. KSRTC ಬಸ್ ಚಾಲಕ ಹಾಗೂ ನಿರ್ವಾಹಕರ ಬೇಜವಾಬ್ದಾರಿಗಳಿಂದ ನಿತ್ಯವೂ ವಿದ್ಯಾಭ್ಯಾಸಕ್ಕಾಗಿ ಮುಂಡಗೋಡ ಸೇರಿದಂತೆ ವಿವಿದೆಡೆ ಪ್ರಯಾಣಿಸುವ ನೂರಾರು ವಿದ್ಯಾರ್ಥಿಗಳ ಜೀವನ ಅತಂತ್ರವಾಗಿದೆ. ಹೀಗಾಗಿ, ಗುರುವಾರ ಬೆಳಿಗ್ಗೆ ವಿದ್ಯಾರ್ಥಿಗಳು ಬಸ್ ಗಾಗಿ ಪ್ರತಿಭಟನೆ ನಡೆಸಿದ್ರು. ಹುನಗುಂದ ಬಸ್ ನಿಲ್ದಾಣದ ಬಳಿ ಬಸ್ ಗಾಗಿ ವಿದ್ಯಾರ್ಥಿಗಳು ಬೆಳಗ್ಗಿನಿಂದಲೂ ಕಾಯ್ದು ಕುಳಿತಿದ್ದರು. ಆದ್ರೆ, ಬಸ್ ಬರಲೇ ಇಲ್ಲ. ಹೀಗಾಗಿ, ವಿದ್ಯಾರ್ಥಿಗಳಿಗೆ ಬಸ್ ಬರದೇ ಇರುವ ಕಾರಣಕ್ಕೆ...

Post
ಯರೇಬೈಲಿನ ಬೇಡ್ತಿ ಹಳ್ಳದಲ್ಲಿ ಹೆಚ್ಚಾದ ನೀರಿನ ಪ್ರಮಾಣ, ತಹಶೀಲ್ದಾರ್ ಹಾಗೂ ಜಿಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ..!

ಯರೇಬೈಲಿನ ಬೇಡ್ತಿ ಹಳ್ಳದಲ್ಲಿ ಹೆಚ್ಚಾದ ನೀರಿನ ಪ್ರಮಾಣ, ತಹಶೀಲ್ದಾರ್ ಹಾಗೂ ಜಿಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ..!

ನಿರಂತರ ಮಳೆ ಹಿನ್ನೆಲೆಯಲ್ಲಿ, ಮುಂಡಗೋಡ ತಾಲೂಕಿನ ಯರೆಬೈಲು ಬೇಡ್ತಿ ಹಳ್ಳದಲ್ಲಿ ನೀರಿನ ಪ್ರಮಾಣ ಕೊಂಚ ಜಾಸ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಡಗೋಡ ತಹಶಿಲ್ದಾರ ಶಂಕರ್ ಗೌಡಿ ಹಾಗೂ ಜಿಪಂ ಇಂಜಿನಿಯರ್ ಪ್ರದೀಪ್ ಭಟ್ಟ ಯರೆಬೈಲಿನ ಹಳ್ಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡ್ರು. ಇನ್ನು, ಸ್ಥಳೀಯರಿಗೆ ಈ ಬಗ್ಗೆ ಸೂಚನೆ ನೀಡಿದ ತಹಶೀಲ್ದಾರರು, ನೀರಿನ ಪ್ರಮಾಣ ಹೆಚ್ಚಾದರೆ ತಾಲೂಕಾಡಳಿತಕ್ಕೆ ಮಾಹಿತಿ ನೀಡುವಂತೆ ತಿಳಿಸಿದ್ರು. ದನಕರುಗಳನ್ನು ಹಳ್ಳದ ನೀರಲ್ಲಿ ಬಿಡದಂತೆ ಹಾಗೂ ಜನರು ಹಳ್ಳದಲ್ಲಿ ಇಳಿಯದಂತೆ ಸೂಚಿಸಿದ್ರು. ಸ್ಥಳೀಯ ಪಿಡಿಓ ಸೇರಿದಂತೆ...

Post
ಚಿಗಳ್ಳಿಯ ಸಂಗೂರಮಠರ ಮನೆಗೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಆರೋಗ್ಯ ವಿಚಾರಣೆ..!

ಚಿಗಳ್ಳಿಯ ಸಂಗೂರಮಠರ ಮನೆಗೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಆರೋಗ್ಯ ವಿಚಾರಣೆ..!

ಮುಂಡಗೋಡ ತಾಲೂಕಿನ ಚಿಗಳ್ಳಿಗೆ ಇಂದು ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ ನೀಡಿದ್ರು. ಹಿರಿಯ ರಾಜಕೀಯ ಧುರೀಣ ಪಿ.ಎಸ್.ಸಂಗೂರ್ ಮಠ್ ಅವರ ನಿವಾಸಕ್ಕೆ ಭೇಟಿ ನೀಡಿದ ಹೆಬ್ಬಾರ್, ಸಂಗೂರಮಠರ ಆರೋಗ್ಯ ವಿಚಾರಿಸಿದ್ರು. ಈ ವೇಳೆ ಎಚ್.ಎಂ.ನಾಯ್ಕ್, ಸಿದ್ದಪ್ಪ ಹಡಪದ, ಫಣಿರಾಜ್ ಹದಳಗಿ, ಗುಡ್ಡಪ್ಪ ಕಾತೂರು ಸೇರಿದಂತೆ ತಾಲೂಕಿನ ಹಲವು ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ರು‌.

Post
“ಅಣಬೆ ಪಲ್ಯ, ಬಿಸಿ ರೊಟ್ಟಿ ಮಾಡಿ ಇಡ್ರಿ, ಬಂದು ಉಣ್ತಿನಿ” ಅಂತ ಹೇಳಿ ಹೋದ ಹುಡುಗ ಹೆಣವಾಗಿ ಬಿಟ್ಟ..!  ಪಾಳಾ ಯುವಕನ ಆತ್ಮಹತ್ಯೆ ಹಿಂದೆ ಹಲವು ಅನುಮಾನ..?

“ಅಣಬೆ ಪಲ್ಯ, ಬಿಸಿ ರೊಟ್ಟಿ ಮಾಡಿ ಇಡ್ರಿ, ಬಂದು ಉಣ್ತಿನಿ” ಅಂತ ಹೇಳಿ ಹೋದ ಹುಡುಗ ಹೆಣವಾಗಿ ಬಿಟ್ಟ..! ಪಾಳಾ ಯುವಕನ ಆತ್ಮಹತ್ಯೆ ಹಿಂದೆ ಹಲವು ಅನುಮಾನ..?

ಮುಂಡಗೋಡ ತಾಲೂಕಿನ ಪಾಳಾದ ಹುಡುಗ ರವಿ ಅಕ್ಕಸಾಲಿ ಸಾವಿನ ಹಿಂದೆ ಅನುಮಾನ ಇದೆಯಾ..? ಹುಡೇಲಕೊಪ್ಪದ ಮಾವಿನ ಗಿಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ರವಿಯ ಸಾವಿನ ಸುತ್ತ ಹತ್ತಾರು ಪ್ರಶ್ನೆಗಳು ಎದ್ದಿವೆ. ವಯಸ್ಸಲ್ಲದ ವಯಸ್ಸಲ್ಲಿ ಆತನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ದರ್ದಾದ್ರೂ ಏನಿತ್ತು ಅನ್ನೋದು ಕೆಲವರ ಪ್ರಶ್ನೆ..! ಅಣಬೆ ತಂದಿದ್ದ..! ಅಸಲು, ನಿನ್ನೆ ಇಡೀ ದಿನವೂ ಲವಲವಿಕೆಯಿಂದಲೇ ಇದ್ದ ರವಿ, ಮದ್ಯಾನ ಮನೆಗೆ ಕಾಡಿನಿಂದ ತಾಜಾ ಮಶರೂಮ್ (ಅಣಬೆ) ತಂದಿದ್ದ. ನಿಮಗೆ ಗೊತ್ತಿರಲಿ, ಉತ್ತರ ಕನ್ನಡದ ಕಾಡಲ್ಲಿ ಈ...

Post
ಪಾಳಾ ಹುಡೇಲಕೊಪ್ಪದ ಮಾವಿನ ತೋಪಿನಲ್ಲಿ ಯುವಕನ ಶವ, ನೇಣಿಗೆ ಶರಣಾದ ಯುವಕ..!

ಪಾಳಾ ಹುಡೇಲಕೊಪ್ಪದ ಮಾವಿನ ತೋಪಿನಲ್ಲಿ ಯುವಕನ ಶವ, ನೇಣಿಗೆ ಶರಣಾದ ಯುವಕ..!

ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಹುಡೇಲಕೊಪ್ಪದ ಮಾವಿನ ತೋಪಿನಲ್ಲಿ ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಡಗೋಡ ತಾಲೂಕಿನ ಬದ್ರಾಪುರದ ರವಿ ಮಾರುತಿ ಅಕ್ಕಸಾಲಿ(25) ಎಂಬುವವನೇ ನೇಣಿಗೆ ಶರಣಾದ ಯುವಕನಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Post
ಮಳಗಿ ಧರ್ಮಾ ಜಲಾಶಯ ಭರ್ತಿ: ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತ..! ಸಂಚಾರ ಬಂದ್..!!

ಮಳಗಿ ಧರ್ಮಾ ಜಲಾಶಯ ಭರ್ತಿ: ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತ..! ಸಂಚಾರ ಬಂದ್..!!

 ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ಭರ್ತಿಯಾಗಿದೆ. ಹೀಗಾಗಿ, ಜಲಾಶಯ ಉಬ್ಬು ಬಿದ್ದು, ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತವಾಗಿದೆ. ಮಿನಿ ಬ್ರಿಡ್ಜ್ ಮೇಲೆ ಮೂರು ಅಡಿಗಳಷ್ಟು ನೀರು ಹರಿಯುತ್ತಿರೊ ಕಾರಣ ರಸ್ತೆ ಸಂಚಾರ ಸ್ಥಗಿತವಾದಂತಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಧರ್ಮಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಹೀಗಾಗಿ, ಮಳಗಿ ಬನವಾಸಿ ರಸ್ತೆಯ ದಾಸನಕೊಪ್ಪ ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ, ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದೆ.  

Post
ಮಳಗಿ ಧರ್ಮಾ ಡ್ಯಾಂ ನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ..!

ಮಳಗಿ ಧರ್ಮಾ ಡ್ಯಾಂ ನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ..!

ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿ ಹೋಗಿದ್ದ ಮೂಡಸಾಲಿಯ ಯುವಕನ ಶವ ಪತ್ತೆಯಾಗಿದೆ. ಮಾರಿಕಾಂಬಾ ಲೈಫ್ ಗಾರ್ಡ್ ಹಿರೇಕಲ್ ನ ಗೋಪಾಲ್ ನಾರಾಯಣ್ ಗೌಡಾರವರು ಶವ ಪತ್ತೆ ಹಚ್ಚಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರ ಜಂಟೀ ಕಾರ್ಯಾಚರಣೆಯಲ್ಲಿ ಶವ ಹೊರ ತೆಗೆಯಲಾಗಿದೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಶ್ರೀನಾಥ್ ಸೋಮಶೇಖರ್ ಹರಿಜನ್ (20) ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದ. ಹೀಗಾಗಿ, ನಿನ್ನೆಯಿಂದಲೂ ರಕ್ಷಣಾ ಕಾರ್ಯಾಚರಣೆ ನಡೆದಿದತ್ತು. ಇಂದು ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಮುಂಡಗೋಡ ಪಿಎಸ್ಐ ಪರಶುರಾಮ್ ಹಾಗೂ...

error: Content is protected !!