ಮುಂಡಗೋಡ ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ. ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು ಸಾರ್ವಜನಿಕರು ತಮ್ಮ ಸಂಕಷ್ಟಗಳನ್ನು, ದುಃಖ ದುಮ್ಮಾನಗಳನ್ನು ಹೇಳಿಕೊಳ್ಳಬಹುದಾಗಿದೆ. ಇತ್ತಿಚೆಗೆ ಪಟ್ಟಣದಲ್ಲಿ ನಡೆದ ಕೆಲ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಆತಂಕದಲ್ಲಿದ್ದ ಮುಂಡಗೋಡಿಗರಿಗೆ “ನಿಮ್ಮೊಂದಿಗೆ ನಾವಿದ್ದೇವೆ” ಎನ್ನುವ ಅಭಯದ ಸಂದೇಶ ನೀಡುವಲ್ಲಿ ಎಸ್ಪಿ ನಾರಾಯಣ್ ಮಹತ್ತರ ಹೆಜ್ಜೆ ಇರಿಸಿದ್ದಾರೆ ಎನ್ನಲಾಗ್ತಿದೆ. ಅಸಲು, ಎಸ್ಪಿ ಸಾಹೇಬರ...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Category: ಮುಂಡಗೋಡ ಸುದ್ದಿ
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮುಂಡಗೋಡಿನಲ್ಲಿ ಅದ್ಯಾಕೋ ಏನೋ ನಡೆಯಬಾರದ ಘಟನೆಗಳು ನಡೆದು ಹೋಗ್ತಿವೆ. ಹಾಡಹಗಲೇ ಜನನೀ ಬೀಡ ಪ್ರದೇಶಗಳಲ್ಲಿ ಭಯಾನಕ ವೆಂಬಂತ ಘಟನೆಗಳೂ ಜಾರಿಯಲ್ಲಿವೆ. ಇಲ್ಲಿ, ಯಾವ ಹೊತ್ತಿನಲ್ಲಿ ಯಾರ ಮಾಂಗಲ್ಯ ಸರ ಅದ್ಯಾರ ಕಿತ್ತುಕೊಳ್ತಾರೋ ಯಾರಿಗೂ ಅರ್ಥವಾಗದ ಹಾಗಾಗಿದೆ. ನಿಜ ಅಂದ್ರೆ ಒಡವೆಗಳನ್ನು ಹಾಕೊಂಡು ಹೊರಗಡೆ ತಿರುಗಾಡಲೂ ಮಹಿಳೆಯರು ಹೆದರುವಂತಾಗಿದೆ. ಕಳ್ಳಕಾಕರಿಗೆ ಸೇಫಿಯಸ್ಟ್ ಜಾಗ..? ಸರಗಳ್ಳತನ, ಬೈಕ್ ಕಳ್ಳತನ, ಮನೆಗಳ್ಳತನಗಳು ನಿತ್ಯದ ಭಯವಾಗಿದೆ. ಇದೇಲ್ಲ ಯಾಕೆ ಆಗ್ತಿದೆಯೋ ಯಾರಿಗೂ ಗೊತ್ತಿಲ್ಲ. ಘಟನೆ ನಡೆದು ಎರಡು ದಿನ ಚರ್ಚೆ ಆಗತ್ತೆ...
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಟಾಟಾ ಎಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಇಂದೂರು ಸಮೀಪದ 6 ನಂಬರ್ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ನಡೆದ ಕಾರ್ಯಾಚರಣೆಯಲ್ಲಿ ಒಂದು ಪುಟ್ಟ ಕರು ಸೇರಿದಂತೆ, ನಾಲ್ಕು ಜಾನುವಾರುಗಳನ್ನು ರಕ್ಷಿಸಲಾಗಿದೆ. ಇಂದೂರಿನಿಂದ ಕಲಘಟಗಿಗೆ ಸಾಗಿಸಲಾಗುತ್ತಿತ್ತು ಎನ್ನಲಾದ ಜಾನುವಾರುಗಳನ್ನು ಖಚಿತ ಮಾಹಿತಿ ಆಧಾರದಲ್ಲಿ ಪೊಲೀಸರು ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಸಧ್ಯ ಆರೋಪಿ ಹಾಗೂ ಜಾನುವಾರು ಸಮೇತ ವಾಹನ ಮುಂಡಗೋಡ ಪೊಲೀಸ್ ಠಾಣೆಯ...
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಹಳಿಯಾಳ; ಇಲ್ಲಿನ ತಹಶೀಲ್ದಾರ್ ರವರ ಕಚೇರಿಯ ಸಭಾ ಭವನದಲ್ಲಿ ನ.9 ರಂದು ನಡೆದ ಈ ವರ್ಷದ ಕಬ್ಬು ಅರೆಯುವ ಹಂಗಾಮು ಪ್ರಾರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಲೆ ನಿರ್ಧರಣೆ ಮಾಡುವ ಬಗ್ಗೆ EID Parry ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರ ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯಲ್ಲಿ ಈ ಮುಂದಿನಂತೆ ತೀರ್ಮಾನಿಸಲಾಯಿತು. 2023-24ನೇ ಸಾಲಿನಲ್ಲಿ ಸರ್ಕಾರವು ನಿಗಧಿ ಪಡಿಸಿದ ಎಫ್.ಆರ್.ಪಿ ದರವು ಪ್ರತಿ ಟನ್ ಕಬ್ಬಿಗೆ 3678/- ರೂ.ಗಳಿದ್ದು ಪ್ಯಾರಿ ಸಕ್ಕರೆ...
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ,ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ 15 ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ. ನವೆಂಬರ್ 6 ರಂದು ಅಂದ್ರೆ ಬುಧವಾರ, ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನ. 12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ, ನ.13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15 ಉಮೇದುವಾರಿಕೆಗಳನ್ನು...
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ಸಲುವಾಗಿ ಬೆಂಗಳೂರಿನಿಂದ ಊರಿಗೆ ಬಂದಿದ್ದ ಹುಡುಗ, ಶನಿವಾರ ರಾತ್ರಿಯೇ ಪತ್ನಿಯ ಮನೆಗೆ ಆಗಮಿಸಿದ್ದ, ಅದ್ಯಾವ ಕಾರಣಕ್ಕೋ ಏನೋ, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ. ಆ ವೇಳೆ ದೀಪಾವಳಿ ನಿಮಿತ್ತ...
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದುಕೊಂಡು ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ. ಶನಿವಾರ ತಡರಾತ್ರಿ ನಡೆದಿರೋ ಘಟನೆಯಲ್ಲಿ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ದಿನ ರಾತ್ರಿ ಪತ್ನಿಯ ಮನೆಗೆ ಆಗಮಿಸಿದ್ದ ಅರವಿಂದ್, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ...
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಹೋರಿಹಬ್ಬದಲ್ಲಿ ಯುವಕನಿಗೆ ಹೋರಿ ತಿವಿದು ದಾರುಣ ಸಾವು ಕಂಡ ಹಿನ್ನೆಲೆಯಲ್ಲಿ, ಮುಂಡಗೋಡಿನ ಹಳೂರಿನಲ್ಲಿ ನಡೆಯುತ್ತಿದ್ದ ಹೋರಿ ಹಬ್ಬವನ್ನು ಆಯೋಜಕರು ಅರ್ಧಕ್ಕೆ ಬಂದ್ ಮಾಡಿಸಿದ್ದಾರೆ. ಬೆಳಗಿನಿಂದಲೂ ಮುಂಡಗೋಡಿನ ಹಳೂರಿನಲ್ಲಿ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಹೋರಿ ಅಭಿಮಾನಿಗಳು, ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ಬಂದಿದ್ರು. ಆದ್ರೆ ,ಯಾವಾಗ ಚಿಗಳ್ಳಿಯಲ್ಲಿ ದುರಂತ ಸಂಭವಿಸಿದ ಕಾರಣಕ್ಕಾಗಿ ಹೋರಿ ಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ.
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ತಾಲೂಕಿನ ಚಿಗಳ್ಳಿಯ ಹೋರಿಹಬ್ಬದಲ್ಲಿ ಭಯಾನಕ ದುರ್ಘಟನೆ ಸಂಭವಿಸಿದೆ. ಹೋರಿ ಹಬ್ಬ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಭಯಾನಕ ಸಾವು ಕಂಡಿದ್ದಾನೆ. ಪರಮೇಶ್ ಸಿದ್ದಪ್ಪ ಹರಿಜನ್ (21) ಎಂಬುವ ಯುವಕನೇ ಹೋರಿ ಹಬ್ಬದಲ್ಲಿ ಹೋರಿ ತಿವಿದು ಮೃತಪಟ್ಟ ಯುವಕನಾಗಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ನಿಮಿತ್ತ ಚಿಗಳ್ಳಿಯ ಕಲ್ಮೇಶ್ವರ ಮಠದ ಹತ್ತಿರ ಹೋರಿಹಬ್ಬದಲ್ಲಿ ಏರ್ಪಡಿಸಲಾಗಿತ್ತು. ಈ ಹಬ್ಬದಲ್ಲಿ ವಿವಿದೆಡೆಯಿಂದ ಬಲಿತ ಸ್ಪರ್ಧಾ ಹೋರಿಗಳು ಬಂದಿದ್ದವು. ಹೀಗಾಗಿ, ಹೋರಿಗಳ ಹಬ್ಬ ನೋಡಲು ಹೋಗಿದ್ದ ಹುಡುಗನ ಮೇಲೆ ಹೋರಿ...
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಾಂಡುರಂಗ ಹೊಟೇಲ್ ಬಳಿ, ಬೈಕ್ ಹಾಗೂ ಟಾಟಾ ಎಸ್ ವಾಹನಕ್ಕೆ ಅಪಘಾತವಾಗಿದೆ. ಪರಿಣಾಮ ಹಳೂರಿನ ಯುವಕ ಗಂಭೀರ ಗಾಯಗೊಂಡಿದ್ದಾನೆ. ಇವತ್ತಷ್ಟೇ ಹಬ್ಬಕ್ಕಾಗಿ ಬೆಂಗಳೂರಿನಿಂದ ಬಂದಿದ್ದ, ಮುಂಡಗೋಡ ಹಳೂರಿನ ಮಣಿಕಂಠ(20) ಎಂಬುವ ಯುವಕನೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಕಾಲಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









