ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ.. ಅಂದಹಾಗೆ, ಇಂದು ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ನೂರಾರು ವಾಹನಗಳು..! ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಮುಂಡಗೋಡ ಸುದ್ದಿ
ಯಲ್ಲಾಪುರದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್..!
ಯಲ್ಲಾಪುರ: ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಇಂದು ಸಾವಿರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಸೇರಿ ನಾಮಪತ್ರ ಸಲ್ಲಿಸಿದ್ರು. ಪತ್ನಿ ಸಮೇತ ಆಗಮಿಸಿದ್ದ ವಿ.ಎಸ್.ಪಾಟೀಲ್ ಯಲ್ಲಾಪುರದ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ರು. ಯಲ್ಲಾಪುರದ ಗ್ರಾಮದೇವತೆಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಮಿನಿವಿಧಾನಸೌಧಕ್ಕೆ ಬಂದ ಪಾಟೀಲರು, ಅಲ್ಲಿ 12 ಗಂಟೆಯ ನಂತರ ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಸಿದ ನಂತರ ಮತ್ತೆ ಮೆರವಣಿಗ ಮೂಲಕ ಕಾಂಗ್ರೆಸ್ ಕಾರ್ಯಾಲಯಕ್ಕೆ ಆಗಮಿಸಿದ ವಿ.ಎಸ್.ಪಾಟೀಲ್, ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು....
ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!
ಮುಂಡಗೋಡ ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಜಿ. ತಂಗಚ್ಚನ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾದರು. ಸಚಿವ ಶಿವರಾಮ ಹೆಬ್ಬಾರ್, ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಂಗಚ್ಚನ್ ಅವರು, ಕಾಂಗ್ರೆಸ್ನಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ಹಿರಿಯರನ್ನು ಕಡೆಗಣಿಸಿ ಅಗೌರವದಿಂದ ಕಾಣಲಾಗುತ್ತಿದೆ. ಆದ್ದರಿಂದ ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಶಿವರಾಮ ಹೆಬ್ಬಾರ್ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್...
ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ....
ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!
ಮುಂಡಗೋಡ: ತಾಲೂಕಿನ ಶಿರಗೇರಿ ಗ್ರಾಮದ ಯುವಕರು, ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥ ಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಾಲೂಕಿನ ಶಿರಗೇರಿ ಗ್ರಾಮದ ರಾಮಚಂದ್ರ ಜೋರೆ ಎಂಬುವನೆ ಸಾವನ್ನಪ್ಪಿದ ಮತ್ತೋರ್ವ ಯುವಕನಾಗಿದ್ದು, ನಿನ್ನೆ ಶುಕ್ರವಾರ ದುಪದಾಳ ಗ್ರಾಮದ ಸನಿಹ ಘಟಪ್ರಭಾ ನದಿಯಲ್ಲಿ 6ಜನ ಸ್ನೇಹಿತರು ಈಜಲು ಇಳಿದಿದ್ದರು ಈ ವೇಳೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತಿಬ್ಬರು...
ಯಲ್ಲಾಪುರ ವಿಧಾನಸಭಾ ಕ್ಷೇತ್ರ; ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಪ್ರೊ. ನಾಗೇಶ್ ನಾಯ್ಕ್ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ, ಜೆಡಿಎಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ಅಸಂತೋಷಗೊಂಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ.. ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ತೀವ್ರ ಅಸಮಾಧಾನ ಗೊಂಡಿದ್ದಾರೆ. ಹೀಗಾಗಿ, ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಂಡಾಯದ ಬಾವುಟ ಹಾರಿಸಿದ್ದಾರೆ....
ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!
ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ಭಾರೀ ಅನಾಹುತ ಸಂಭವಿಸಿದೆ.. ಘಟಪ್ರಭಾ ನದಿಯಲ್ಲಿ ಮುಳುಗಿ ಮುಂಡಗೋಡ ತಾಲೂಕಿನ ನಾಲ್ವರು ಯುವಕರು ದಾರುಣ ಸಾವು ಕಂಡಿದ್ದಾರೆ. ಇಬ್ಬರು ಗಂಭೀರವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮುಂಡಗೋಡ ತಾಲೂಕಿನ ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ(19), ಅಜಯ್ ಬಾಬು ಜೋರೆ (19), ಕೃಷ್ಣ ಬಾಬು ಜೋರೆ (19), ಆನಂದ್ ವಿಷ್ಣು ಕೋಕರೆ (20) ನೀರಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನು ಘಟನೆಯಲ್ಲಿ ರಾಮಚಂದ್ರ ವಿಷ್ಣು ಕೋಕರೆ, ವಿಠ್ಠಲ್ ಜಾನು ಕೋಕರೆ ನೀರಲ್ಲಿ ಮುಳುಗಿ...
ಅಗಡಿಯ 10 ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ, ಕಮಲ ಮುಡಿದ ಕಾಂಗ್ರೆಸ್ ಮುಖಂಡನ ಸಹೋದರ..!
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸುಮಾರು ಹತ್ತಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ಯಲ್ಲಾಪುರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್.ಟಿ. ಪಾಟೀಲ್ ಸೇರಿದಂತೆ ಸಿದ್ದಪ್ಪ ಹಡಪದ್, ವಿವೇಕ್ ಹೆಬ್ಬಾರ್ ಕಾರ್ಯಕರ್ತರಿಗೆ ಬಿಜೆಪಿ ಶಾಲು ಹಾಕಿ ಬರಮಾಡಿಕೊಂಡರು. ಅಗಡಿ ಗ್ರಾಮದ ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್ ರ ಸಹೋದರ ಸುನೀಲ್ ನಾಯ್ಕ್ ಸೇರಿದಂತೆ ಸುಮಾರು ಹತ್ತು ಜನ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ಇನ್ನು ಸಂಜು ನಾಯ್ಕ್, ಪ್ರಸನ್ನ ನಾಯ್ಕ್, ಮಾರುತಿ ವಾಲ್ಮೀಕಿ, ಶೇಖಪ್ಪ ಗಳಗಿ, ಗದಗಯ್ಯ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಳೆದು ತಂದಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ ಗಾಂಜಾ ಹಾಗೂ ಸ್ಕೂಟಿ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಮುಂಡಗೋಡ ಯಲ್ಲಾಪುರ ರಸ್ತೆಯ ಬ್ಲ್ಯೂ ಹಿಲ್ ಹೊಟೇಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್...
ನಂದಿಗಟ್ಟಾದಲ್ಲೂ ಶೃದ್ಧಾ ಭಕ್ತಿಯ ಹನುಮ ಜಯಂತಿ, ಅನ್ನ ಸಂತರ್ಪಣೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ಹನುಮಭಕ್ತರಿಂದ ಹನುಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಹನುಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಸಲಾಯಿತು. ಬೆಳಗಿನಿಂದಲೂ ಹನುಮನಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ವೇಳೆ ರಾಘು ಕಾಂಬಳೆ, ನವೀನ ಸವಣೂರು, ಸೋಮಶೇಖರ್, ದಿಲಿಪ್, ಕಿರಣ್ ಖಾರದ್, ಮಹದೇವ್ ಕಾಂಬ್ಳೆ, ಸುನಿಲ್ ಕೊಟಗುಣಸಿ, ಅರವಿಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.









